ಪರಿಣಾಮ
ಲೇಖನ ಪರಿಣಾಮ ಡಾ. ಅರಕಲಗೂಡು ನೀಲಕಂಠ ಮೂರ್ತಿ ಮನುಷ್ಯ ಸಾಮಾನ್ಯವಾಗಿ ಯಾವುದೇ ಕೆಲಸ ಮಾಡಬೇಕಾದರೆ, ಅಥವ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮೊದಲು, ಅದರ ಪರಿಣಾಮದ ಬಗ್ಗೆ ಖಂಡಿತ ಕೂಲಂಕುಷವಾಗಿ ಚಿಂತಿಸುತ್ತಾನೆ. ಆದರೆ ಎಂಥ ಸಂದರ್ಭಗಳಲ್ಲೂ ಸಹ ಕೆಲವರು, ಉಡಾಫೆ ಬದುಕಿನವರು, ಪ್ರಪ್ರಥಮವಾಗಿ ಆಳವನ್ನೂ ಅಂದಾಜಿಸದೆ, ನೇರ ಭಾವಿಗೇ ದಿಢೀರಂತ ಧುಮಿಕಿಬಿಡುತ್ತಾರೆ. ನಂತರ ಪರಿಣಾಮದತ್ತ ಗಮನ ಹರಿಸಿದ ಹಾಗೆ, ಕೈಕಾಲುಗಳನ್ನು ಆತುರಾತುರವಾಗಿ ಬಡಿಯತೊಡಗುತ್ತಾರೆ. ಆಗ ತುಂಬ ತಡವಾಗಿ ಪಶ್ಚಾತ್ತಾಪ ಪಟ್ಟು ಸಂಕಟದ ಕೆಸರೊಳಗೆ ಒದ್ದಾಡುತ್ತಾರೆ. ಬಹಳ ಒಳ್ಳೆಯ, ಆದರೆ […]
ದಾರಾವಾಹಿ- ಅದ್ಯಾಯ-12 ತನ್ನ ಕುತಂತ್ರಕ್ಕೆ ಬಲಿಯಾಗಿ ಬೀದಿ ಬಿಕಾರಿಯಾದ ಸಂತಾನಪ್ಪ, ಇಂದಲ್ಲ ನಾಳೆ ರಾತ್ರೋರಾತ್ರಿ ಊರು ಬಿಟ್ಟೇ ಓಡಿ ಹೋಗುತ್ತಾನೆ ಅಥವಾ ಮುಂಚಿನಂತೆಯೇ ಬಾಲ ಮುದುರಿ ಕೂಲಿನಾಲಿ ಮಾಡಿಕೊಂಡು ಬದುಕುತ್ತಾನೆ ಎಂದು ಭಾವಿಸಿದ್ದ ಶಂಕರನ ಯೋಚನೆಯು ಪರಮೇಶನ ಬಿಸಿಬಿಸಿ ಸುದ್ದಿಯಿಂದ ಪೂರ್ತಿ ತಲೆಕೆಳಗಾಗಿಬಿಟ್ಟಿತು. ಬಯಲುಸೀಮೆಯ ಒಣಹವೆಯನ್ನೂ ಖಡಕ್ ಜೋಳದ ರೊಟ್ಟಿಯೊಂದಿಗೆ ಈರುಳ್ಳಿ ಮತ್ತು ಹಸಿ ಮೆಣಸಿನಕಾಯಿಯಂಥ ವ್ಯಂಜನವನ್ನು ಜಜ್ಜಿ ಜಗಿದುಣ್ಣುತ್ತ ಒರಟು ಮಂದಿಯ ನಡುವೆ ಹುಟ್ಟಿ ಬೆಳೆದ, ಆರಡಿ ಎತ್ತರದ ಆಜಾನುಬಾಹು ಸಂತಾನಪ್ಪ ಬಡತನದ ಬೇಗೆಯಿಂದ ಮುಗ್ಧ […]
ಮಕ್ಕಳಿಗಾಗಿ ಅನುಭವ ಕಥನ ಕಾಡಂಚಿನಊರಿನಲ್ಲಿ….. ವಿಜಯಶ್ರೀ ಹಾಲಾಡಿ ವಿಜಿ ಸಣ್ಣವಳಿರುವಾಗ, ಅಜ್ಜಿ ಅಂದಿಗೆ ಸುಮಾರು ಐವತ್ತೈದು-ಅರವತ್ತು ವರ್ಷಗಳ ಹಿಂದೆ (ಅಂದರೆ ಇವತ್ತಿಗೆ ತೊಂಬತ್ತು-ತೊಂಬತ್ತೈದು ವರ್ಷಗಳ ಹಿಂದೆ) ನಡೆದ ಘಟನೆಯನ್ನು ಹೇಳುತ್ತಿದ್ದರು. ಅಜ್ಜಿಯ ಮಾವ ಮುಂತಾದ ಹಿರಿಯರಿದ್ದ ಸಮಯವದು. ಆಗ ನಮ್ಮೂರು `ಮುದೂರಿ’ಯ ಸುತ್ತಲಿನ ಕಾಡುಗಳಲ್ಲಿ ಹುಲಿಯಿತ್ತಂತೆ! ಎಷ್ಟು ಹುಲಿಗಳಿದ್ದವೋ, ತಿಳಿಯದು, ಆದರೆ ಊರಿಗೆ ಬಂದು ದನಗಳನ್ನು ಕೊಂಡೊಯ್ದ ಅನೇಕ ಪ್ರಸಂಗಗಳಿದ್ದವು. ಹಟ್ಟಿಯ ಗೋಡೆಯನ್ನು ಮಣ್ಣಿನಿಂದ ಗಟ್ಟಿಯಾಗಿ ನಿರ್ಮಿಸಿ ಬಂದೋಬಸ್ತು ಮಾಡಿದ್ದರೂ ಬಾಗಿಲು ಸ್ವಲ್ಪ ಸದರ ಇದ್ದರೆ ಅದರ […]
ಅಂಬೇಡ್ಕರ್ ವಿಶೇಷ ಬರಹ ಭಾರತದ ಸಂವಿಧಾನದ ಪೀಠಿಕೆಯೂ..! ಭಾರತದ ಸಂವಿಧಾನದ ಪೀಠಿಕೆಯೂ..! ಭಾರತ ವಾಸಿಗಳಾದ ನಾವು, ಭಾರತವನ್ನು ಸಾರ್ವಭೌಮ ಸಮಾಜವಾದಿ ಜಾತ್ಯಾತೀತ (೧೯೭೬ರಲ್ಲಿ ಇಂದಿರಾಗಾಂಧಿಯವರಿಂದ ಸೇರಿಸಲ್ಪಟ್ಟದ್ದು). ಲೋಕತಂತ್ರಿಕ ಗಣತಂತ್ರವನ್ನಾಗಿ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ ಪ್ರಜೆಗಳಿಗೆ ಈ ಕೆಳಗಿನ ಹಕ್ಕುಗಳಾದ– ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ; ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ; ಗಳನ್ನು ದೊರಕಿಸಿ, ವೈಯುಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ ಎಲ್ಲರಲ್ಲೂ […]
ಅಂಬೇಡ್ಕರ್ ಜಯಂತಿ ವಿಶೇಷ ಬರಹ ಅಸ್ಪೃಶ್ಯತೆಯ ವಿರುದ್ದ ಅಂಬೇಡ್ಕರ್ ರವರ ಹೋರಾಟ ೧೯೨೭ರಿಂದ ೧೯೩೨ರವರೆಗೆ, ಅಹಿಂಸಾತ್ಮಕ ಆಂದೋಲನಗಳ ಮುಂದಾಳತ್ವ ವಹಿಸಿ ಅಸ್ಪೃಶ್ಯರಿಗೆ ದೇವಾಲಯ ಪ್ರವೇಶದ ಹಕ್ಕು, ಸಾರ್ವಜನಿಕ ಕೆರೆ, ಬಾವಿಗಳಿಂದ ನೀರು ಸೇದುವ ಹಕ್ಕು ಇತ್ಯಾದಿಗಳಿಗಾಗಿ ಹೋರಾಡಿದರು. ಇವುಗಳಲ್ಲಿ ನಾಸಿಕದಲ್ಲಿಯ ಕಾಳ ರಾಮನ ದೇವಸ್ಥಾನ ಮತ್ತು ಮಹಾಡದ ಚೌಡಾರ್ ಕೆರೆಯ ವಿಷಯವಾಗಿ ಅಸ್ಪೃಶ್ಯರನ್ನು ಹೊರಗಿಟ್ಟಿರುವರ ವಿರುದ್ಧ ಮಾಡಿದ ಆಂದೋಲನಗಳು ಗಮನಾರ್ಹವಾಗಿವೆ. ಸಹಸ್ರಾರು ಅಸ್ಪೃಶ್ಯ ಸತ್ಯಾಗ್ರಹಿಗಳು ಭಾಗವಹಿಸಿದ ಈ ಅಹಿಂಸಾತ್ಮಕ ಚಳುವಳಿಗಳಿಗೆ ಸವರ್ಣೀಯರು ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದರು. ನ್ಯಾಯಾಲಯದ ಕಟ್ಟೆ […]
ಯುಗ ಯುಗಾದಿ ಕಳೆದರೂ..!
ಯುಗಾದಿ ವಿಶೇಷ ಬರಹ ಯುಗ ಯುಗಾದಿ ಕಳೆದರೂ..! ಯುಗ ಯುಗಾದಿ ಕಳೆದರೂ ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ. ಹೊಂಗೆ ಹೂವ ತೊಂಗಳಲಿ, ಭೃಂಗದ ಸಂಗೀತ ಕೇಳಿ ಮತ್ತೆ ಕೇಳ ಬರುತಿದೆ. ಬೇವಿನ ಕಹಿ ಬಾಳಿನಲಿ ಹೂವಿನ ನಸುಗಂಪು ಸೂಸಿ ಜೀವಕಳೆಯ ತರುತಿದೆ. ವರುಷಕೊಂದು ಹೊಸತು ಜನ್ಮ, ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ. ಒಂದೇ ಒಂದು […]
ಯುಗಾದಿ ವಿಶೇಷ ಬರಹ ಯುಗಾದಿಯೆಂಬ ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ ಎಂದು ಹೇಳುವುದು ಪ್ರಮುಖವಾಗಿ ಭಾಷೆ, ಆಚರಣೆ-ಸಂಪ್ರದಾಯಗಳು, ಉಡುಗೆ-ತೊಡುಗೆ, ಆಹಾರ ಮೊದಲಾದವುಗಳಿಗೆ ಸಂಬಂಧಿಸಿದಂತೆ . ಇಲ್ಲಿನ ವೈವಿಧ್ಯತೆ ಎಷ್ಟೆಂದರೆ ರಾಜ್ಯ ರಾಜ್ಯಗಳ ನಡುವಿನ ಮಾತಿರಲಿ, ಅಕ್ಕಪಕ್ಕದ ತಾಲೂಕುಗಳಲ್ಲಿ, ಊರುಗಳಲ್ಲೇ ಭಿನ್ನತೆಯನ್ನು ಕಾಣಬಹುದು. ಆದರೆ ಕಳೆದ 2 ದಶಕಗಳಿಂದ ಇಂಥ ಪ್ರಾದೇಶಿಕ ಭಿನ್ನತೆಗಳು ಬದಲಾಗುತ್ತಿವೆ ಅಥವಾ ಕೆಲವು ಇಲ್ಲವಾಗಿವೆ. ಇದಕ್ಕೆ ಬಹುಮುಖ್ಯ ಕಾರಣ ದೊಡ್ಡ ಪಟ್ಟಣ ಹಾಗೂ ಶಹರಗಳಿಗೆ ಉದ್ಯೋಗ ಹಾಗೂ ಜೀವನ ನಿರ್ವಹಣೆಯ ದಾರಿಗಳನ್ನು ಅರಸುತ್ತ […]
ಯುಗಾದಿ ವಿಶೇಷ ಬರಹ ಕೊನೆಗೂ ಸಿಕ್ಕ ಸದ್ಗುರು 1993 – 94 ರ ಮಾತದು. ನಾವಾಗ ಖಾಸಗಿ ಪ್ರೌಢಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದಾಗ ವಿಜ್ಞಾನ ವಿಷಯ ಬೋಧಿಸಲು ಹೊಸ ಶಿಕ್ಷಕರೊಬ್ಬರ ಆಗಮನವಾಯಿತು. ಹಳ್ಳಿ ಶಾಲೆ. ಹಳ್ಳಿ ಹುಡುಗರಾಗಿದ್ದ ನಮಗೆ ಅವರ ಮಾತು – ಕತೆ, ರೀತಿ – ನೀತಿ & ಎಲ್ಲಕ್ಕೂ ಮಿಗಿಲಾಗಿ ಅವರ ಸ್ಟೈಲ್ ಅತ್ಯಾಕರ್ಷಿಸಿತು. ಮೊದಲ ನೋಟದಲ್ಲೇ ವಿದ್ಯಾರ್ಥಿಗಳ ಮನ ಗೆದ್ದ ಅವರು ನಮ್ಮ ಪಾಲಿಗೆ ಸ್ಟೂಡೆಂಟ್ ಐಕಾನ್ ಎನಿಸಿದರು. ಅವರು ಪಾಠ ಹೇಳುತ್ತಿದ್ದ […]
ಯುಗಾದಿ ವಿಶೇಷ ಬರಹ ಯುಗಾದಿ ಯುಗಾದಿ ಭಾರತೀಯ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ತನ್ನದೇ ಆದ ಒಂದು ಅತ್ಯುನ್ನತ ಸಾಂಸ್ಕೃತಿಕ ಮಹತ್ವವಿದೆ. ಆದುದರಿಂದಲೇ ಭಾರತೀಯರು ತಮ್ಮ ಹೊಸವರುಷದ ದಿನವೂ ಯುಗಾದಿಯ ದಿನದಿಂದಲೇ ಆರಂಭವಾಗುತ್ತದೆ ಎಂದು ನಂಬುತ್ತಾರೆ. ಗ್ರಾಮೀಣರ ಆಡುಮಾತಿನ ಲ್ಲಿ ಹೇಳುವುದಾದರೆ ಯುಗಾದಿಯು ‘ಉಗಾದಿ’ ಎನಿಸಿಕೊಳ್ಳುತ್ತದೆ. ಯುಗಾದಿ ಹಬ್ಬ ಶಿಶಿರ ಋತು ಕಳೆದು ವಸಂತನಾಗಮನದ ಮೊದಲ ಹಬ್ಬ. ಇದು ಭಾರತೀಯರ ಪಾಲಿಗೆ ನವಮನ್ವಂತರ, ಅಲ್ಲದೆ ಇದು ಭಾರತೀಯರಾದ ನಮ್ಮ ಪಾಲಿಗೆ ಹೊಸ ವರುಷದ ಮೊದಲ ದಿನ. […]
ಯುಗಾದಿ ವಿಶೇಷ ಬರಹ ಯುಗಾದಿಯ ಸವಿ ಅಲ್ರಿ..ನನಗೊಂದು ಹೊಸ ಸೀರಿಬೇಕು.ಯಾಕಂದ್ರ ಹೊಸ ವರ್ಷದ ಸಂಭ್ರಮಕ ಎಲ್ಲವೂ ಹೊಸದಾಗಿರಬೇಕು ಅನ್ನು ತ್ತಿದ್ದರು ಅವನೇನು ತಲಿ ಕೆಡಸಿಕೊಂಡಿರಲಿಲ್ಲ. ಅಲ್ಲೆ ಕಪಾ ಟ ತುಂಬ ಇರೋ ಸಾರಿ ಮೊದಲ ಉಟ್ಟ ಹರಿ,ಆ ಮ್ಯಾಲೆ ಹೊಸಾದು ತಗೊಳಾಕಂತ. ಸುಮ್ಮನ ಯಾಕ ಖರ್ಚು ಎಷ್ಟ ರ ಜಿಪುಣ ಅದಿರಿ ನೀವು? ನಾ ಎನಾರ ಬಂಗಾರ ಕೇಳಿನೇ ನು? ಅದನಂತೂ ಹಾಕ್ಕೊಂಡು ಅಡ್ಡಾಡೋ ಯೋಗ ಇಲ್ಲ ನನಗ.ಬರಿ ಸೀರಿವಳಗಾದ್ರೂ ಖುಷಿ ಪಡೋಣ ಅಂದ್ರ ಅದಕೂ ಹಿಂಗ […]