ಯುಗಾದಿ ವಿಶೇಷ ಬರಹ ಕಹಿ ಜಾಸ್ತಿ ತಿಂದ್ರೆ ವರ್ಷ ಪೂರ್ತಿ ಸಿಹಿಯಂತೆ ನಮ್ಮ ಹಿಂದೂ ಸಂಸ್ಕೃತಿಯ ಪ್ರಕಾರ ವರ್ಷದ ಆರಂಭ ಯುಗಾದಿ. ಸಂವತ್ಸರವೊಂದು ಮುಗಿದು ಮತ್ತೊಂದು ಸಂವತ್ಸರಕ್ಕೆ ಕಾಲಿಡುವ ಸಮಯ ಅರವತ್ತು ಸಂವತ್ಸರಗಳ ಈ ಚಕ್ರದಲ್ಲಿ ಈಗ ನಾವು ೩೫ ರ ಪ್ಲವ ನಾಮ ಸಂವತ್ಸರದಲ್ಲಿ ಇದ್ದೇವೆ. ಪಾಶ್ಚಾತ್ಯ ಸಂಸ್ಕೃತಿಯ ಆಚರಣೆ ಬಂದಮೇಲೆ ತಿಥಿ ನಕ್ಷತ್ರ ಸಂವತ್ಸರಗಳ ಲೆಕ್ಕಾಚಾರ ಅಷ್ಟಾಗಿ ನಮ್ಮ ದೈನಂದಿನ ಬದುಕಿನಲ್ಲಿ ಉಳಿದುಕೊಂಡಿಲ್ಲ. ಅದರಲ್ಲಿ ಯುಗಾದಿಯ ಆಚರಣೆ ಸ್ವಲ್ಪ ಮುಂಚೂಣಿಯಲ್ಲಿದೆ ಅನ್ನಬಹುದೇನೋ. ಯಾಕೆಂದರೆ ನಾವು […]
ಯುಗಾದಿ ವಿಶೇಷ ಬರಹ ಹೊಸ ವರುಷವು ಬರಲಿ, ಸುಖ ಸಾವಿರ ತರಲಿ… ಅದೇನೋ ಬೇರೆ ಎಲ್ಲಾ ಹಬ್ಬಗಳಿಗಿರುವ ಒಂದು ಆಕರ್ಷಣೆ, ಆಚರಣೆ ಯುಗಾದಿ ಹಬ್ಬಕ್ಕಿಲ್ಲ. ಹಿಂದೂ ಚಾಂದ್ರಮಾನ ಪಂಚಾಗದ ಪ್ರಕಾರ ಚೈತ್ರ ಶುದ್ಧ ಪಾಡ್ಯಮಿಯನ್ನು ಯುಗಾದಿ ಹಬ್ಬವೆಂದು, ವರ್ಷದ ಮೊದಲ ದಿನವೆಂದು ಆಚರಿಸುತ್ತೇವೆ. ಸೌರಮಾನದವರು ಪ್ರತಿವರ್ಷ ಏಪ್ರಿಲ್ 14ರಂದು ಯುಗಾದಿಯನ್ನು ಆಚರಿಸುತ್ತಾರೆ. ಒಟ್ಟಿನಲ್ಲಿ ಮಾರ್ಚ್ ತಿಂಗಳ ಕೊನೆಯಿಂದ ಏಪ್ರಿಲ್ ನಡುವಿನೊಳಗೆ ಹೊಸವರ್ಷದ ಆರಂಭವಾಗುವುದು ಆಚರಣೆಯಲ್ಲಿದೆ. ಚಿಕ್ಕಂದಿನಿಂದಲೂ ಈ ಹಬ್ಬದ ಬಗ್ಗೆ ವಿಶೇಷವಾದ ಆಸಕ್ತಿಯೇನೂ ಇರಲಿಲ್ಲ. ಮನೆಯ ಬಾಗಿಲಿಗೆ […]
ಯುಗಾದಿ ವಿಶೇಷ ಬರಹ ಚಿಗುರಿದಚೈತ್ರ ನಾಳೆ ಚೈತ್ರಮಾಸದ ಮೊದಲನೆ ದಿನ, ನಮಗೆ ಹೊಸ ವರುಷ. ತೊರಣ ಕಟ್ಟಬೇಕು, ಮಾವಿನ ಎಲೆ, ಬೇವಿನ ಸೊಪ್ಪು ತರಬೇಕಾಗಿದೆ, ಮಗನಿಗೆ ಹೇಳಲೇ! ಪ್ರತಿವರ್ಷವೂ ಇದೇ ಗೊಳು, ಮಗನು ಪ್ರಾಯಕ್ಕೆ ಬಂದಾಗಿಂದಾ ಹಬ್ಬದ ದಿನಗಳಲ್ಲಿ ಮಗನಾಗಲಿ, ಗಂಡನಾಗಲೀ ಸ್ವಲ್ಪವೂ ಆಸಕ್ತಿಯನ್ನು ತೋರುವುದೇ ಇಲ್ಲ. ನಾನೊಬ್ಬಳೇ ಎಲ್ಲಾ ಹಬ್ಬದ ಕೆಲಸಗಳನ್ನು ಮಾಡಬೇಕು. ಎಲ್ಲರೂ ಆಸಕ್ತಿಯಿಂದ ಜೊತೆಗೂಡಿ ಹಬ್ಬಗಳನ್ನು ಆಚರಿಸಿದರೆ ಬಲು ಚೆಂದ. ಏನು ಮಾಡುವುದಕೂ ಬೆಸರ, ಮನಸಿಗೆ ಉಲ್ಲಾಸವೇ ಇಲ್ಲವಾಗುತ್ತಿದೆಯಲ್ಲ! ಜೀವನದಲ್ಲಿ ಸಾರವೇ ಇಲ್ಲ. […]
ಯುಗಾದಿ ವಿಶೇಷ ಲೇಖನ ನವಚೈತನ್ಯಕ್ಕೆ ಮುನ್ನುಡಿ ಯುಗಾದಿ ಸಂಗಾತಿ ಸಾಹಿತ್ಯ ಪತ್ರಿಕೆ: ಯುಗಾದಿ ಬಂತೆಂದರೆ ಸಾಕು ಪ್ರಕೃತಿಯಲ್ಲೊಂದು ಸಂಚಲನ ಮೂಡುತ್ತದೆ ಎಲ್ಲಾ ಕಡೆಗೂ ಹಸಿರುತೋರಣ ಹೂವಿನ ಶೃಂಗಾರ ಮಾಡಿದಂತೆ ಗಿಡದ ತುಂಬಾ ಹೂಗಳು ಅರಳಿ ಚಿಗುರು ಮೂಡಿ ಸಂಭ್ರಮದ ವಾತಾವರಣ ಏರ್ಪಡಿಸುತ್ತವೆ.ಇದು ನಾವು ಹೊಸವರ್ಷದ ಎಂದು ಸಂಭ್ರಮಪಡುವ ಯುಗದ ಆದಿ ಯುಗಾದಿಯ ವಿಶೇಷತೆ. ಹೊಸವರ್ಷವೆಂದರೆ ಇದುವೇ ಎಂದು ಸಾಧಿಸುವಂತೆ ಎಲ್ಲಾ ಕಡೆಗೂ ಹಸಿರು ಉಸಿರಾಡುವುದು. ಬಣ್ಣ ಬಣ್ಣದ ಹೂವುಗಳು ಗಿಡದ ತುಂಬೆಲ್ಲಾ ಅರಳಿ ಪರಿಸರವೆಲ್ಲಾ ಶೃಂಗಾರ. […]
ಸಾಮಾಜಿಕಕ್ರಾಂತಿಸೂರ್ಯಜ್ಯೋತಿಬಾ_ಪುಲೆ
ಜನ್ಮದಿನಾಚರಣೆ 11/04/2021 ಸಾಮಾಜಿಕಕ್ರಾಂತಿಸೂರ್ಯಜ್ಯೋತಿಬಾ_ಪುಲೆ [01:48, 11/04/2021] +91 95382 66593: ಭಾರತದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು ಜ್ಯೋತಿಬಾ ಪುಲೆ.ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು. ಇವರು ಧರ್ಮ, ಪಂಥ, ಸಂಪ್ರದಾಯ ಈ ರೀತಿಯ ಕಟ್ಟುಪಾಡುಗಳಿಗೆ ಜೋತುಬೀಳದೆ,ಮಾನವ ಧರ್ಮವನ್ನು ಆಧರಿಸಿ ನಡೆಯಬೇಕೆಂದು ಅಪೇಕ್ಷೆ ಪಟ್ಟವರು. ಜ್ಯೋತಿಬಾ ಪುಲೆ ಅವರು 11/04/1827 ರಂದು ಮಹಾರಾಷ್ಟ್ರದ ‘ಕಟಗುಣ’ ಎಂಬ ಹಳ್ಳಿಯಲ್ಲಿ ಜನಿಸಿದರು. ತಂದೆ ಗೋವಿಂದರಾವ್,ತಾಯಿ ಚಿಮಣಾಬಾಯಿ. ಜ್ಯೋತಿಬಾ ಅವರು ಇನ್ನೂ ಚಿಕ್ಕವರಿದಾಗಲೇ […]
ನುಡಿ ಕಾರಣ
ಧನ ಸಂಪತ್ತು ಕೆಲವರಿಗೆ ಇರಬಹುದು,ಕೆಲವರಿಗೆ ಇರಲಿಕ್ಕಿಲ್ಲ.ಒಬ್ಬನು ಸಿರಿವಂತ ನಾಗಬೇಕಾದರೆ ಒಬ್ಬ ಬಡವನಾಗುತ್ತಾನೆ.( ರಾಜಕಾರಣಿ ಶ್ರೀಮಂತನಾದಾಗ,ಆದಾಯ ಕರ ಸಲ್ಲಿಸುವವನು ಬಡವನಾಗುವುದು
ಬೆರಳಿಗೆ ಶಾಯಿ ಬಳಿಸಿಕೊಳ್ಳುವ ಸೋಜಿಗ
ಲೇಖನ ಬೆರಳಿಗೆ ಶಾಯಿ ಬಳಿಸಿಕೊಳ್ಳುವ ಸೋಜಿಗ ಅಂಜಲಿ ರಾಮಣ್ಣ ಅವತ್ತು ನನಗೆ 18 ತುಂಬಿದ ಮಾರನೆಯ ದಿನವೇ ಮತದಾರ ಗುರುತಿನ ಚೀಟಿ ಮಾಡಿಸಿಕೊಟ್ಟರು ನನ್ನ ತಂದೆ. ಇದೊಂದೇ ಗುರುತಿಗಾಗಿ 18 ಆಗುವುದನ್ನೇ ಕಾಯುತ್ತಿದ್ದೆ. ಆಗ ತಿಳಿದೇ ಇರಲಿಲ್ಲ ಕಾಲ ಮತ್ತು ಹರೆಯ ಇಬ್ಬರದ್ದೂ ಗಳಸ್ಯ ಕಂಠಸ್ಯ ಜೋಡಿ ಎಂದು ಮತ್ತು ಅವರುಗಳ ಬಂಡಿಗೆ ರಿವರ್ಸ ಗೇರ್ ಇರುವುದಿಲ್ಲ ಎಂದು. ಕೈಯಲ್ಲಿ ವೋಟರ್ಸ್ ಐಡಿ ಇತ್ತು, ಮತ ಹಾಕಲೇ ಬೇಕು ಎನ್ನುವ ಹಠವೂ ಜೊತೆಯಾಗಿತ್ತು. ಆದರೇನು ಮಾಡುವುದು ಆಗ […]
ದಾರಾವಾಹಿ- ಅದ್ಯಾಯ-11 ಅದೃಷ್ಟದಿಂದಲೋ, ದೈವಕೃಪೆಯಿಂದಲೋ ಮನುಷ್ಯನಿಗೆ ದೊರಕುವ ಸುಖ ಸಂಪತ್ತು ಕೆಲವೊಮ್ಮೆ ಅವನನ್ನು ಎಂಥ ಕಾರ್ಯಕ್ಕಾದರೂ ಪ್ರೇರೇಪಿಸಬಲ್ಲದು ಎಂಬುದಕ್ಕೆ ಸಂತಾನಪ್ಪ ಕಿಲ್ಲೆಯೇ ಸಾಕ್ಷಿಯಾಗುತ್ತಾನೆ. ಅವನು ತನ್ನ ದಿಢೀರ್ ಶ್ರೀಮಂತಿಕೆಯಿಂದಲೂ, ಗಂಡಸುತನದ ಕೊಬ್ಬಿನಿಂದಲೂ ಮಸಣದ ಗುಡ್ಡೆಯ, ತನಗಿಂತ ಇಪ್ಪತ್ತು ವರ್ಷ ಕಿರಿಯಳಾದ ದ್ಯಾವಮ್ಮ ಎಂಬ ಹುಡುಗಿಯನ್ನು ಒಲಿಸಿ ತನ್ನವಳನ್ನಾಗಿಸಿಕೊಂಡ ವಿಷಯವು ಅವಳ ಪ್ರಿಯಕರ ಪರಮೇಶನಿಗೆ ತಿಳಿದುಬಿಟ್ಟಿತು. ಪರಮೇಶ ದ್ಯಾವಮ್ಮಳನ್ನು ಪ್ರಾಣಕ್ಕಿಂತ ಮಿಗಿಲಾಗಿ ಪ್ರೀತಿಸುತ್ತಿದ್ದವನು ಕಂಗಾಲಾಗಿಬಿಟ್ಟ. ಸಂತಾನಪ್ಪ ತನ್ನ ಹುಡುಗಿಯನ್ನು ಯಾವತ್ತು ಮರುಳು ಮಾಡಿ ಬಗಲಿಗೆಳೆದುಕೊಂಡನೋ ಆವತ್ತಿನಿಂದ ಪರಮೇಶನಿಗೆ ಜೀವನದಲ್ಲಿ […]
ಬಿಸಿಲ ನೆಲ ಕಂಡ ಬೆಳದಿಂಗಳ ಚೇತನ
ನೀ ಹೋದ ಮರುದಿನ ಮತ್ತ ನಂ ಬದುಕು ಮದಲಿನಂಗ ಆಗ್ಯಾದೋ ಬಾಬಾಸಾಹೇಬ!
ನಿನ್ನಂಗ ನುಡಿವಾಂವಾ,ಕಳ ಕಳಿಯ
ಪಡುವಂವ ಬರಲಿಲ್ಲೋ ಒಬ್ಬ!!
ಚನ್ನಣ್ಣ ವಾಲೀಕಾರ
ನೆನೆವುದೆನ್ನ ಮನಂ : ಕೆಲವು ಮಾತುಗಳು
ವಿಶೇಷ ಲೇಖನ ಪಂಪನ ಕುರಿತಾದ ವಿಶೇಷ ಲೇಖನ ಆರ್.ದಿಲೀಪ್ ಕುಮಾರ್ ನೆನೆವುದೆನ್ನ ಮನಂ : ಕೆಲವು ಮಾತುಗಳು ವಿಕ್ರಮಾರ್ಜುನ ವಿಜಯ (ಪಂಪಭಾರತ) ಕೃತಿಯ ನಾಲ್ಕನೇ ಆಶ್ವಾಸದ ಮೂವತ್ತನೇ ಪ್ರಖ್ಯಾತ ಪದ್ಯವು ಇದಾಗಿದೆ. ಈ ಪದ್ಯದ ಬಗೆಗೆ ಬೆಳ್ಳಾವೆ ವೆಂಕಟನಾರಾಯಣಪ್ಪನವರಿಂದ ಇತ್ತೀಚಿನವರವರೆಗೂ ಮಾಡಿರುವ ವಿಮರ್ಶೆ ಮತ್ತು ವ್ಯಾಖ್ಯಾನಗಳ ಅಧ್ಯಯನವೇ ಬಹಳ ವಿಸ್ತಾರವಾದದ್ದಾಗಿದೆ. ಕನ್ನಡನಾಡಿನ ಬನವಾಸಿಯ ನೆಲವು ಆಂಧ್ರನಾಡಿನಲ್ಲಿ ಕುಳಿತಿರುವ ಕವಿಯ ನೆನಪಿನಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿರುವ ಕಾರಣದಿಂದ ಅವನ ಮೇಲೆ ಬೀರಿರುವ ಪರಿಣಾಮದ ಪ್ರತಿಫಲವೇ ಈ ಪದ್ಯದ ಆವಿರ್ಭಾವಕ್ಕೆ […]