ಮಹಿಳಾ ಅಧ್ಯಕ್ಷರು ಯಾಕಿಲ್ಲ… !
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ 1915 ರಲ್ಲಿ ಸ್ಥಾಪನೆಯಾದ ‘ಕರ್ನಾಟಕ ಸಾಹಿತ್ಯ ಪರಿಷತ್ತು’ ಆಗಿನ ಮೈಸೂರಿನ ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ ಚಲನೆಗೊಂಡಿತು. ನಂತರ 1938 ರಲ್ಲಿ ‘ಕನ್ನಡ ಸಾಹಿತ್ಯ ಪರಿಷತ್ತು’ ಎಂದು ಬದಲಾಯಿತು. ಉದ್ದೇಶ : ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು -ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಇದು ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುವುದರ ಮೂಲಕ ಕನ್ನಡ ಸಾಹಿತ್ಯವನ್ನು ನಾಡಿನ ಮೂಲೆ ಮೂಲೆಗಳಲ್ಲಿ ಹರಡಲು […]
ಕಸಾಪಗೆಮಹಿಳಾ ಅಧ್ಯಕ್ಷರು
ತೊಟ್ಟಿಲ ತೂಗುವ ಕೈ ಜಗತ್ತನ್ನೇ ತೂಗಬಲ್ಲದು ಎಂಬ ಮಾತನ್ನು ನಾವೆಲ್ಲ ನೆನಪಿಸಿಕೊಳ್ಳಬೇಕು. ಸಾಹಿತ್ಯ, ಸಂಗೀತ ಕಲೆ ಇತ್ಯಾದಿಗಳು ಹೆಣ್ಣಿನ ಮನದಲ್ಲಿ ನೈಜವಾಗಿ ಹಾಸು ಹೊಕ್ಕಾಗಿರುತ್ತೆ. ಆದರೆ ಎಷ್ಷ್ಟೊ ಸಲ ಮಹಿಳೆ ತನ್ನ ಸಂಸಾರದ ಜವಾಬ್ದ್ದಾರಿ, ಇತರೆ ಕರ್ತವ್ಯಗಳಲ್ಲಿ ತನ್ನ ಪ್ರತಿಭೆಗೆ ಬೆನ್ನು ತೋರಿಸಿದ್ದೂ ಕಾಣುತ್ತೆವೆ. ಕಣ್ಣಿಗೆ ಕಾಣಿಸುವ ತನ್ಮ ಕೆಲಸ, ಮನೆಯವರನ್ನೆಲ್ಲ ತನ್ನ ಕರ್ತವ್ಯ ದಲ್ಲಿ ಚ್ಯುತಿ ಬರದಂತೆ, ಸಹನೆಯಿಂದ ದುಡಿಯುವದೊಂದೆ ತನ್ನ ಕಾಯಕ ಎಂದು ಕೊಂಡ ಮಹಿಳೆ ಈಗ ತನ್ನತನವನ್ನು ಅರಿತು ಕಪ್ಪೆಚಿಪ್ಪಿನಿಂದ ಹೊರಬಂದು ಸಾಧನೆ […]
ಕಸಾಪಗೆ ಮಹಿಳಾ ಅಧ್ಯಕ್ಷರು ಬೇಕು
ತೊಟ್ಟಿಲು ತೂಗುವ ಕೈ ಜಗತ್ತನ್ನೂ ತೂಗಿದೆ. ದೇಶವನ್ನೂ ಆಳಿದೆ.ಸೌಟು ಹಿಡಿದ ಕೈ ಲೇಖನಿಯನ್ನೂ ಸಮರ್ಥವಾಗಿ ಬಳಸಿದೆ . ಅಡುಗೆ ಮನೆಯನ್ನು ಸಂಭಾಳಿಸುವ ಮಹಿಳೆ ಕನ್ನಡ ಸಾಹಿತ್ಯ ಪರಿಷತ್ತನ್ನು ನಿಭಾಯಿಸಲಾರಳೇ? ನಾನಿಲ್ಲಿ ಪುರುಷರು ಸರ್ವಾಧಿಕಾರಿಯಾಗಿದ್ದಾರೆ ಎಂದಾಗಲಿ, ಮಹಿಳೆಯರನ್ನು ತುಳಿದಿದ್ದಾರೆಂದಾಗಲಿ ಹೇಳುತ್ತಿಲ್ಲ. ಅಸಲಿಗೆ, ಮಹಿಳೆಯರೇ ಮನಸ್ಸು ಮಾಡಿರಲಿಕ್ಕಿಲ್ಲ ಎಂದು ಅನಿಸುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಿ ನೂರರ ಮೇಲೆ ಆರು ವರುಷಗಳಾದರೂ ಇದುವರೆಗೆ ಅಧ್ಯಕ್ಷ ಸ್ಥಾನವನ್ನು ಒಬ್ಬ ಮಹಿಳೆ ವಹಿಸಿಲ್ಲ ಎನ್ನುವುದರ ಹಿಂದೆ ಪುರುಷರಿಗಿಂತ ಮಹಿಳೆಯರದೇ ಹೆಚ್ಚಿನ ಪಾಲಿದೆ. ಬೆಂಗಳೂರಿನ ಶ್ರೀ […]
ವೃತ್ತಿಯಷ್ಟೇ ಹವ್ಯಾಸ ಮುಖ್ಯ
ಲೇಖನ ಚಂದಕಚರ್ಲ ರಮೇಶ ಬಾಬು ವೃತ್ತಿ ಅಂದರೆ ನಾವು ಜೀವನಕ್ಕಾಗಿ ಆರಿಸಿಕೊಂಡ ಕೆಲಸ. ಆ ಕೆಲಸದಲ್ಲಿ ನಮಗಿಷ್ಟವಿಲ್ಲದಿದ್ದರೂ ಹೊಟ್ಟೆ ಹೊರೆಯುವುದಕ್ಕಾಗಿ ಮಾಡಲೇಬೇಕಾದ ಅನಿವಾರ್ಯತೆ ಇರುತ್ತದೆ. ಮೇಲಧಿಕಾರಿಯ ದಬ್ಬಾಳಿಕೆ, ಅಲ್ಲಲ್ಲಿ ವರ್ಗಾವಣೆ, ಗ್ರಾಹಕರ ಜೊತೆ ಘರ್ಷಣೆ, ಸಹೋದ್ಯೋಗಿಗಳ ಕಿರುಕುಳ ಇವೆಲ್ಲ ವೃತ್ತಿಯ ಜೊತೆಯಿದ್ದು, ನಾವು ಗಳಿಸುವ ಸಂಬಳದ ಜೊತೆ ಬಂದು ಬೀಳುವ ಅಡ್ಡ ಒತ್ತಡಗಳು. ಇವನ್ನೆಲ್ಲ ತೂಗಿಸಿಕೊಂಡು ಹೋಗಲೇಬೇಕಾದ ಅನಿವಾರ್ಯತೆ. ಆಗ ನಮಗೆ ಗೊತ್ತಿಲ್ಲದೆಯೇ ನಮ್ಮಲ್ಲಿ ಒತ್ತಡ ಜಾಸ್ತಿಯಾಗುತ್ತದೆ. ಮನೆ, ಮಡದಿ, ಮಕ್ಕಳು ಮನೆಯಲ್ಲಿಯ ನೆಮ್ಮದಿ ಸ್ವಲ್ಪ ಮಟ್ಟಿಗೆ […]
ಜೀವನ ಪೂರ್ತಿ ಜೀವದ ಗೆಳೆಯ
ಜಯಶ್ರೀ ಜೆ.ಅಬ್ಬಿಗೇರಿ ಅದೆಷ್ಟೋ ದಿನಗಳಿಂದ ಹಗಲು ರಾತ್ರಿ ಪ್ರಯತ್ನಿಸಿದರೂ ನಿನ್ನನ್ನು ಮರೆಯಲಾಗುತ್ತಿಲ್ಲ. ನಿನ್ನ ನೆನಪುಗಳು ತಲೆಯಿಂದ ಆಚೀಚೆ ಕದಲದೇ ಕರಗದ ಗುಡ್ಡದಂತೆ ಕುಳಿತುಕೊಂಡು ಬಿಟ್ಟಿವೆ. ಅದ್ಯಾಕೋ ಮರೆಯಲಾಗುತ್ತಿಲ್ಲ. ಮರೆಯಬೇಕೆಂದಷ್ಟು ಹಟ ಹಿಡಿದರೂ ನಾ ಮುಂದು ತಾ ಮುಂದು ಎಂದು ಮನಃಪಟಲದ ಮೇಲೆ ನೆನಪಿಗೆ ಬಂದು ಕಾಡುತ್ತವೆ. ಹೀಗೇಕೆ? ಅಂತ ಹೃದಯ ನೂರಾರು ಬಾರಿ ಪ್ರಶ್ನಿಸಿದರೂ ಮನಸ್ಸು ತನ್ನ ಮಾತುಗಳನ್ನು ಹೇಳಲಾಗದೇ ತನ್ನ ನಾಲಿಗೆಗೆ ದೊಡ್ಡದೊಂದು ಬೀಗ ಹಾಕಿಕೊಂಡು ತನ್ನೊಳಗೆ ಮಾತುಗಳನ್ನು ಬಂಧಿಸಿಟ್ಟು ಮೌನದಲ್ಲೇ ಕ್ಷಣ ಕ್ಷಣವೂ ನನ್ನನ್ನು […]
ಕಸಾಪಗೆ ಮಹಿಳಾ ಅಧ್ಯಕ್ಷರು
ಮಹಿಳಾ ಅಧ್ಯಕ್ಷರು ಸಾಹಿತ್ಯ ಪರಿಷತ್ ಅಧ್ಯಕ್ಷರಾಗುವದು ಗೌರವದ ಸಂಕೇತ ಕನ್ನಡ ಸಾಹಿತ್ಯ ಸೇವೆಯ ದ್ಯೇಯದಡಿ ಕನ್ನಡ ಸಾಹಿತ್ಯ ಪರಿಷತ್ ನೂರು ವರ್ಷದ ಸಂಭ್ರಮದಲ್ಲಿರುವದು ಅತ್ಯಂತ ಸಂತಸದ ಸಂಗತಿ. ಈಗಾಗಲೇ ಅನೇಕ ಸಾರಥಿಗಳು ಸಾಹಿತ್ಯ ಪರಿಷತ್ ಆಳಿದ್ದು ತಮಗೆಲ್ಲ ಗೊತ್ತಿರುವ ಸಂಗತಿ ಪ್ರಸ್ತುತ ಶ್ರೀ ಮನು ಬಳಿಗಾರ ಸೇರಿದಂತೆ ಅನೇಕರು ಇಲ್ಲಿ ಅಧ್ಯಕ್ಷೀಯ ಸೇವೆ ಸಲ್ಲಿಸಿದ್ದನ್ನು ಸ್ಮರಿಸಬಹುದು. ಜೊತೆಗೆ ಈ ನಡುವೆ ಗಮನಿಸಬೇಕಾದದ್ದು ಮಹಿಳೆಯರೊಬ್ಬರು ಇನ್ನು ಅಧ್ಯಕ್ಷರಾಗದೆ ಇತಿಹಾಸ ಸ್ರಷ್ಟಿಸದ ವಿಚಾರ. ಈ ದೇಶವನ್ನೇ ಆಳಿದ ಮಹಿಳಾ ಪ್ರಧಾನಿಗಳು […]
ಕಸಾಪಗೆ ಮಹಿಳಾ ಅಧ್ಯಕ್ಷರು???
ಹತ್ತಿರ ಬರುತ್ತಿರುವ ಕ.ಸಾ.ಪ. ಚುನಾವಣೆಗಳು ಆಕಾಶಕ್ಕೆ ಸಣ್ಣ, ಸಣ್ಣ ತೂತುಗಳು ಬಿದ್ದು, ಅವುಗಳಿಂದ ಸಣ್ಣ ಸಣ್ಣದಾಗಿ ತೊಟ್ಟಿಕ್ಕುವ ಸೋರುಮಳೆ. ಸೂರ್ಯನ ನಿಚ್ಚಳ ಬಿಸಿಲ ಬೆಳಕಿಲ್ಲದೇ ಸುಂಯ್ಯಂತ ಸಣ್ಣಗೆ ಸೂಸಿ ಬರುವ ತಂಗಾಳಿ ತುಂಬಿದ ಮಳೆ ಮೋಡಗಳು. ಉಣ್ಣೆಕಂಬಳಿ ಹೊದ್ದು ಮನೆಯೊಳಗೆ ಬೆಚ್ಚಗೆ ಮಲಗಬೇಕೆನ್ನುವ ಆಶ್ಲೇಷ ಮಳೆಯ ಸುಡುರುಗಾಳಿ. ಮುಗಿಲು ತುಂಬಾ ತುಂಬಿ ತುಳುಕುವ ಹೊಗೆಮಂಜು ಭರಿತ ಶೀತದ ವಾತಾವರಣ. ಇಂತಹ ಬರ್ಫಿನ ಶೀತಗಾಳಿಗಳ ನಡುವೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗಳ ಸಿದ್ದತೆಯ ಸುದ್ಧಿಗಳು ಸಣ್ಣಗೆ ಕೇಳಿ ಬರುತ್ತಿವೆ. […]
ಕಸಾಪಗೆ ಮಹಿಳಾ ಅಧ್ಯಕ್ಷರು
ಕನ್ನಡ ಸಾರಸ್ವತ ಲೋಕಕ್ಕೆ ವಿದ್ಯಾ ದೇವಿ ಸರಸ್ವತಿಯ ಪಾತ್ರ ಬಹುಮುಖ್ಯವಾದುದು.ಧನ ಕನಕಗಳಿಗೆ ಲಕ್ಷ್ಮಿ ಅಧಿದೇವತೆಯಾದಂತೆ ಎಲ್ಲ ದೇವತಾ ಕಾರ್ಯಗಳು ಸಮಾನತೆಯಲಿ ಬೇಧ ಭಾವವಿಲ್ಲದೆ ನಡೆಯುವುದು. ಪೂಜೆಗಷ್ಟೇ ಸಿಮೀತ. ಅದು ದೇವರ ರೂಪದಲ್ಲಿರುವ ಸ್ತ್ರೀ ಮೂರ್ತಿಗಳಿಗೆ ಮಾತ್ರ.ಆದರೆ ವಾಸ್ತವದಲ್ಲಿ ಅವೆಲ್ಲ ಸ್ಥಾನ ಗಳು ನಿಲುಕಲು ಸಾಧ್ಯವೇ. ಅವು ಶೋಕಿಸಿನಲ್ಲಿಡುವ ಮೂರ್ತಿಗಳು.ಇವೇ ನಮಗೆ ಉತ್ತರ ನೀಡಬಲ್ಲ ಮಾನ ದಂಡಗಳು. ಮಹಿಳಾ ಸಂಘಟನೆಗಳಿಗೇನು ಬರವಿಲ್ಲ.ಆದರೆ ಮುಂದೆ ನಿಂತು ನಿಭಾಯಿಸುವ ಜವಾಬ್ದಾರಿ ಬೇಕಲ್ಲ.ಪುರುಷರಂತೆ ಮೂರು ಹೊತ್ತು ಆ ಕೆಲಸ ಮಾಡಲು ಆತ್ಮ ನಿರ್ಭರತೆಯಿ […]
ಕಸಾಪಗೆ ಮಹಿಳಾ ಅಧ್ಯಕ್ಷರು
ಕರ್ನಾಟಕ ಸಾಹಿತ್ಯ ಪರಿಷತ್ ಎಂಬ ಹೆಸರಿನೊಂದಿಗೆ 1915 ರಲ್ಲೇ ಕನ್ನಡ ನಾಡು ನುಡಿಯ ರಕ್ಷಣೆ ಹಾಗೂ ಕನ್ನಡ ಲೇಖಕ ಲೇಖಕಿಯರನ್ನು ಪ್ರೋತ್ಸಾಹಿಸಲೆಂದೇ ಹುಟ್ಟಿಕೊಂಡ ಸಂಸ್ಥೆ, ನಂತರದಲ್ಲಿ 1935ರಲ್ಲಿ ಅರ್ಥಪೂರ್ಣವಾಗಿ ಕನ್ನಡ ಸಾಹಿತ್ಯ ಪರಿಷತ್ ಎಂದು ಮರು ನಾಮಕರಣಗೊಂಡಿದ್ದು ಕನ್ನಡ ಭಾಷೆಯ ಗರಿಮೆಗೆ ಸಾಕ್ಷಿ. ಇಲ್ಲಿಯವರೆಗೂ ಅನೇಕ ಕನ್ನಡ ಸಾಹಿತ್ಯ ಸಮ್ಮೇಳನಗಳು , ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ಜರುಗುವುದರೊಂದಿಗೆ ಎಲ್ಲೆಡೆ ಕನ್ನಡ ಸಾಹಿತ್ಯದ ಘಮ ಪಸರಿಸಿದ ಹಿರಿಮೆ ಕನ್ನಡ ಸಾಹಿತ್ಯ ಪರಿಷತ್ ಗೆ ಸೇರಿದೆ ಎಂದರೆ […]
ಕಸಾಪಗೆ ಮಹಿಳಾ ಅಧ್ಯಕ್ಷರು ಬೇಕು
‘ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲದು’ ಇದು ಸಾಬೀತಾಗಿ ಶತಮಾನಗಳೇ ಕಳೆದರೂ ನಮ್ಮ ಕಸಾಪ ಗೆ ಒಮ್ಮೆಯೂ ಮಹಿಳಾ ಅಧ್ಯಕ್ಷರ ಆಯ್ಕೆ ಆಗಿಲ್ಲ, ಯಾರೂ ಸಹ ಸ್ಪರ್ಧಿಸಲಾಗಿಲ್ಲ. ಭಾರತವೆಂಬ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರವನ್ನ ಇಂದಿರಾ ಗಾಂಧಿಯವರು ಆಳಿದರು. ಅಂತೆಯೇ ನಮ್ಮ ಕಸಾಪ ಗೂ ಮಹಿಳಾ ಅಧ್ಯಕ್ಷೆಯ ಆಯ್ಕೆ ಆಗಬೇಕು. ಮನೆಯಲ್ಲಿ ಅಡುಗೆ ಮಾಡುವುದರಿಂದ ಹಿಡಿದು ಆಕಾಶದಲ್ಲಿ ವಿಮಾನ ಚಾಲನೆ, ಅಷ್ಟೇ ಏಕೆ ಅಂತರಿಕ್ಷದವರೆಗೂ ಮಹಿಳೆ ತಲುಪಿಯಾಗಿದೆ. ಪ್ರತಿ ಕ್ಷೇತ್ರದಲ್ಲೂ ಮಹಿಳೆ ತನ್ನ ಪ್ರತಿಭೆ ಮೆರೆದಾಗಿದೆ. ಇಲ್ಲಿ ಮಹಿಳೆ […]