ಕಸಾಪಗೆ ಮಹಿಳಾ ಅಧ್ಯಕ್ಷರು ಯಾಕಿಲ್ಲ?
ಚರ್ಚೆ . ಕನ್ನಡ ಸಾಹಿತ್ಯ ಪರಿಷತ್ತು ನೂರು ವರ್ಷದ ಹಾದಿ ಸವೆಸಿ ಮೇಲೆ ನಾಲ್ಕು ವರ್ಷಗಳಾಗಿವೆ. ಮತ್ತೊಂದು ಚುನಾವಣೆ ಎದುರಿಸಿ, ಕಸಾಪ ಅಧ್ಯಕ್ಷ ಗದ್ದುಗೆ ಏರಲು ಹಲವಾರು ಕಸರತ್ತುಗಳು ನಡೆದಿವೆ. ಕಸಾಪ ಅಧ್ಯಕ್ಷರ ಅವಧಿ ಐದು ವರ್ಷ ಎಂದೂ ಬೈ ಲಾದಲ್ಲಿ (ಠರಾವು)ತಿದ್ದುಪಡಿಯಾಗಿ, ಅದಕ್ಕೆ ಕಸಾಪ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮುದ್ರೆ ಸಹ ಬಿದ್ದಿದೆ. ಚಾಮರಾಜನಗರದಲ್ಲಿ ೨೦೧೯ ರಲ್ಲಿ ನಡೆದ ರಾಜ್ಯ ಕಸಾಪ ಸರ್ವಸದಸ್ಯರ ಸಭೆಯಲ್ಲಿ ಅಧ್ಯಕ್ಷರ ಅವಧಿ ಐದು ವರ್ಷ ಎಂದು ಅನುಮೋದನೆ ಸಹ […]
ಕಾಡುವ ನೆನಪು
ನೆನಪು ವೀಣಾ ನಿರಂಜನ್ ಭೂತದ ಹುತ್ತದಲ್ಲಿ ಅಡಗಿ ಕುಳಿತಿರುವ ನೆನಪುಗಳನ್ನು ಮೆಲುಕು ಹಾಕುತ್ತಾ ಮೊದಲ ಕವಿತೆಯ ರೋಮಾಂಚನವನ್ನು ಅನುಭವಿಸುತ್ತಿದ್ದೇನೆ. ನಾನು ಯಾವ ಗಳಿಗೆಯಲ್ಲಿ, ಯಾಕೆ ಕವಿತೆಯನ್ನು ಹಚ್ಚಿಕೊಂಡೆ ಎನ್ನುವುದೇ ಮೊದಲ ಕವಿತೆಯ ಹುಟ್ಟಿಗೂ ಕಾರಣವಾಯಿತೇನೊ. ನನ್ನಪ್ಪ ನನಗೊಂದು ಅಚ್ಚರಿಯಾಗಿದ್ದ. ಮೇಷ್ಟ್ರಾಗಿದ್ದ ಅಪ್ಪ ಯಾವುದೇ ವಿಷಯದ ಕುರಿತು ತುಂಬ ಸೊಗಸಾಗಿ, ವಿಸ್ತಾರವಾಗಿ, ಪ್ರಭುತ್ವದಿಂದ ಪಾಠ ಮಾಡುತ್ತಿದ್ದ. ಭಾಷಣ ಮಾಡುತ್ತಿದ್ದ. ಮನೆ ತುಂಬ ಪುಸ್ತಕಗಳು. ಅಪ್ಪನ ಭೇಟಿಗೆಂದು ಮನೆಗೆ ಬರುತ್ತಿದ್ದವರು ಕೂಡ ಅಂಥವರೇ. ಸದಾ ಸಾಹಿತ್ಯ, ಕಲೆಯ ಕುರಿತು ಚರ್ಚೆ, […]
ನೂತನ ನೋಡಿದ ಸಿನೆಮಾ
ವಿದ್ಯಾ ಕಸಂ ಶಕುಂತಲಾ ದೇವಿ ನೂತನ ದೋಶೆಟ್ಟಿ ವಿದ್ಯಾ ಕಸಂ ಈ ಶಬ್ದಗಳು , ಇತ್ತೀಚೆಗೆ ಬಿಡುಗಡೆಯಾದ, ಖ್ಯಾತ ಗಣಿತಜ್ಞೆ , ಸಂಖ್ಯಾ ನಿಪುಣೆ, ಮಾನವ ಕಂಪ್ಯೂಟರ್ ಎಂದೇ ಹೆಸರಾಗಿದ್ದ ಶಕುಂತಲಾ ದೇವಿ ಅವರ ಜೀವನಾಧಾರಿತ ಹಿಂದಿ ಚಲನಚಿತ್ರದಲ್ಲಿ ಬಹಳ ವಿಶೇಷವಾಗಿ ಉಪಯೋಗಿಸಲ್ಪಡುತ್ತವೆ. ಈ ವಿದ್ಯಾ ಕಸಂ ಎಂಬ ಆಣೆ- ಪ್ರಮಾಣ ಚಿತ್ರದುದ್ದಕ್ಕೂ ಬೇರೆ ಬೇರೆ ಸಂದರ್ಭಗಳಲ್ಲಿ ಹೊಸ ತಿರುವನ್ನು ಕೊಡುತ್ತ ಹೋಗುತ್ತದೆ. ಅಮೇಜಾನ್ ಪ್ರೈಂನಲ್ಲಿ ಜುಲೈ 31 ರಂದು ಬಿಡುಗಡೆಯಾದ ಈ ಚಿತ್ರವನ್ನು ನಾನು ನೋಡಿದ್ದು ವಿದ್ಯಾ […]
ಯಡ್ರಾಮಿಯ ಉಡುಪಿ ಹೋಟೆಲ್
ಪ್ರಬಂಧ ಮಲ್ಲಿಕಾರ್ಜುನ ಕಡಕೋಳ ಹಾಗೆ ನೋಡಿದರೆ ನಮ್ಮ ಯಡ್ರಾಮಿಗೆ ಬೆಳ್ಮಣ್ಣು ಶಂಕರಭಟ್ಟರ ಉಡುಪಿ ಹೋಟೆಲ್ ಬರುವ ಪೂರ್ವದಲ್ಲೇ ನಿಯತ್ತಿನ ನಾಯಿಗುರುತು ಬ್ಯಾಂಕ್ ಬಂದಿತ್ತು. ಸುಂಬಡ ಹಾದಿಬದಿಯ ಬಹುಪಾಲು ಬೆಳಕಿಲ್ಲದ ಬ್ಯಾಂಕಿಗೂ ಭಟ್ಟರ ಹೋಟೆಲಿಗೂ ಕೂಗಳತೆ ದೂರ. ಅಜಮಾಸು ಮುವತ್ತು ವರ್ಷಗಳ ಹಿಂದಿನ ಮಜಕೂರವಿದು. ಹಣಮಂದೇವರ ಗುಡಿ ಬಳಿಯ ಹಳೆಯ ಬಸ್ ನಿಲ್ದಾಣದಲ್ಲಿ ಉಡುಪಿ ಹೋಟೆಲ್. ಆಗೆಲ್ಲ ರುದ್ರಯ್ಯ ಮುತ್ಯಾನ ಹೋಟೆಲ್ ಹಾಗೂ ಹಲಕರ್ಟಿ ಶಿವಣ್ಣನವರ ಹೋಟೆಲಗಳದ್ದೇ ಸ್ಟಾರ್ ಹೋಟೆಲ್ ಹವಾ. ಯಥೇಚ್ಛ ಹೊಗೆಯುಂಡು ಮಸಿಬಟ್ಟೆ ಬಣ್ಣಕ್ಕಿಳಿದ […]
ಬೆಕ್ಕು -ನಾಯಿಗಳ ಹುಲ್ಲಿನೌಷಧ!
ಅನುಭವ ಕಥನ(ಮಕ್ಕಳಿಗಾಗಿ) ವಿಜಯಶ್ರೀ ಹಾಲಾಡಿ ‘ಮುದೂರಿ’ ಒಂದು ಸಣ್ಣ ಹಳ್ಳಿ. ಅಲ್ಲಿ ವಿಜಿಯ ಮನೆ . ಅವರ ಊರಿನಲ್ಲಿ ಫರ್ಲಾಂಗು ದೂರಕ್ಕೊಂದೊಂದು ಮನೆಗಳು. ಆ ಊರು ಕಾಡು-ಗುಡ್ಡಗಳ ನಡುವೆ ಅವಿತುಕೊಂಡಿತ್ತು. ಜನರ ಸಂಖ್ಯೆಯೂ ಕಡಿಮೆ. ಅಲ್ಲಿಂದ ವಾಹನ ಓಡಾಡುವ ರಸ್ತೆ ತಲುಪಲು ಎರಡೂವರೆ ಮೈಲು ನಡೆದುಹೋಗಬೇಕಿತ್ತು. ಹಾಗೆ ಹೋದಾಗ ಸಿಗುವುದೇ ಹಾಲಾಡಿ. ಅಲ್ಲಿ ಕೆಲವು ಅಂಗಡಿಗಳು, ಪೋಸ್ಟ್ ಆಫೀಸ್, ಶಾಲೆ, ಹಾಲಿನ ಡೈರಿ, ಬ್ಯಾಂಕು ಇದ್ದವು . ಬಸ್ಸುಗಳು ಓಡಾಡುತ್ತಿದ್ದವು. ಡಾಕ್ಟರರನ್ನು ಕಾಣಬೇಕಾದರೆ ಅಲ್ಲಿಂದ ಬಸ್ಸು […]
ವೃದ್ಧಾಶ್ರಮಗಳ ಸುತ್ತ
ಚಿಂತನೆ ಅರುಣ ರಾವ್ ನನ್ನ ಶಾಲಾ ದಿನಗಳಲ್ಲಿ ಬ್ರಹ್ಮಚರ್ಯ, ಗೃಹಸ್ಥ, ವಾನಪ್ರಸ್ಥ, ಸನ್ಯಾಸ ಈ ನಾಲ್ಕು ಆಶ್ರಮಗಳನ್ನು ಕೇಳಿದ್ದ ನನಗೆ, ವೃದ್ಧಾಶ್ರಮ ಎಂಬ ಹೊಸ ಆಶ್ರಮ ನವ ಪ್ರಪಂಚವೊಂದನ್ನು ಪರಿಚಯಿಸಿತು. ನನ್ನ ಚಿಕ್ಕಂದಿನಲ್ಲಿ ವೃದ್ಧಾಶ್ರಮ ಎನ್ನುವ ಪದವನ್ನು ನಾನೆಂದೂ ಕೇಳಿಯೇ ಇರಲಿಲ್ಲ. ಆಗೆಲ್ಲಾ ಒಂದು ಕುಟುಂಬದಲ್ಲಿ ತಂದೆ-ತಾಯಿ, ಅಜ್ಜ-ಅಜ್ಜಿ, ಮಕ್ಕಳು ಬಹಳ ಆನಂದದಿಂದ ಸಮರಸದಿಂದ ಕೂಡಿ ಬಾಳುವೆ ನಡೆಸುತ್ತಿದ್ದರು. ಇವರೆಲ್ಲರೂ ಇದ್ದಾಗ ಮಾತ್ರ ನಮ್ಮದೊಂದು ಸಂಸಾರವಾಗುತ್ತದೆ ಎಂದು ಎಲ್ಲರೂ ಬಲವಾಗಿ ನಂಬಿದ್ದರು. ವಯಸ್ಸಾದ ತಂದೆ ತಾಯಿಗಳು ನಮಗೊಂದು […]
ಯಕ್ಷಿಣಿ ಗಾನ
ಮೊದಲ ಕವಿತೆಯ ರೋಮಾಂಚನ-ಸರಣಿಯ ಕೊನೆಯ ಬರಹ ಪೂರ್ಣಿಮಾ ಸುರೇಶ್ ಬಾಲ್ಯ, ಚಂದಮಾಮ ಪುಸ್ತಕಗಳ ಪುಟಗಳೊಳಗೆ, ಅವಿತು ಚಿತ್ರಗಳಿಗೆ ಬಣ್ಣ ತುಂಬುತ್ತಿತ್ತು. ಭೂತದ ಭೂತ, ಭವಿಷ್ಯ-ಪಿಷಾಚಿ! ಯಾವುದರ ಕಾಟವೂ ಇರದ ಮುಕ್ತವಾಗಿ ಅರಳಿದ ಸುರುಳಿ ಮೊಗ್ಗು ಮೂಡಿದಾಗ, ‘ ಇಂದು’ ವಿಗೆ ಲಂಗದಾವಣಿ. ಯಾರ ಮನೆಯಲ್ಲಿ, ಯಾವ ಅಂಗಡಿಗಳಲ್ಲಿ ಹಳೆಯ ಕಥೆ ಪುಸ್ತಕ ಸಿಗಬಹುದು. ರಾತ್ರಿ ಹತ್ತಿರದಲ್ಲಿ ಬಯಲಾಟ ಇರಬಹುದೇ?.. ಅಮ್ಮನ ಕಣ್ಣು ಬೆದರಿಸಬಹುದೇ?.ಅಜ್ಜಿಯನ್ನು ಹೇಗೆ ಒಪ್ಪಿಸಬೇಕು..ಇವಿಷ್ಟು ಬದುಕಿನ ಬಗ್ಗೆ ಮೂಡಿಕೊಳ್ಳುತ್ತಿದ್ದ ಪ್ರಶ್ನೆ ಮೊಗ್ಗುಗಳು. ರಾತ್ರಿ ನೋಡಿದ […]
ಬಸವಣ್ಣನಿಗೊಂದು ಪತ್ರ
ಲೇಖನ ನೂತನ ದೋಶೆಟ್ಟಿ ಶರಣು ಶರಣಾರ್ಥಿಗಳು.ದಿನವೂ ಬೆಳಿಗ್ಗೆಇವನಾರವ ಇವನಾರವ ಎನ್ನದಿರಯ್ಯ,ಇವ ನಮ್ಮವ ಇವ ನಮ್ಮವ ಎಂದೆನಿಸಯ್ಯಾ ಎಂಬ ನಿನ್ನ ವಚನವನ್ನು ಹೇಳಿಕೊಳ್ಳುವಾಗ ನಾಲಿಗೆ ತೊದಲುತ್ತದೆ. ಎಲ್ಲರನ್ನೂ ನನ್ನವರು ಎಂದು ಅಪ್ಪಿಕೊಂಡ ನಿನ್ನ ನಾಡಿನಲ್ಲೇ ಇವ ನಮ್ಮವನಲ್ಲ ; ನಾವೇ ಬೇರೆ ಅವನೇ ಬೇರೆ ಎಂದು ಪ್ರತಿಪಾದಿಸಲು, ತಮ್ಮ ಈ ಪ್ರತಿಪಾದನೆಯನ್ನು ಸ್ಥಾಪಿಸಲು ಜನ ಸಂಚು ಮಾಡುತ್ತಿದ್ದಾರೆ ! ನಿನ್ನ ಕಾಲದ ಇತಿಹಾಸ ಮರುಕಳಿಸಿಬಿಟ್ಟಿದೆ ಅಣ್ಣಾ.ಜಾತಿ ವಿಜಾತಿ ಎನಬೇಡ ಎಂದು ಕಳಕಳಿಸಿದ ನೀನು ಜಾತಿ ಆಧಾರದ ಮೇಲೆ ಒಡೆದು […]
ಮೊದಲ ಕವಿತೆ
ಮೊದಲ ಕವಿತೆಯ ರೋಮಾಂಚನ ನಾಗರೇಖಾ ಗಾಂವಕರ್ ಬರವಣಿಗೆ ಎಂಬುದು ಒಂದು ತುರ್ತಾಗಿ ಬದಲಾಗುವುದು ಯಾವಾಗ? ಎಂಬ ಪ್ರಶ್ನೆಗೆ ಉತ್ತರ ಸಿಗಬಹುದು ನನ್ನಲ್ಲಿ. ಆದರೆ ಮೊದಲ ಕವಿತೆ ಬರೆದ ಕ್ಷಣದ ಅನುಭವ ಹೇಗೇ ಹೇಳಲಿ? ಬಹುಶಃ ಇದಕ್ಕೆ ಅಭಿಪ್ರಾಯ ವ್ಯಕ್ತ ಪಡಿಸುವುದು ಕಷ್ಟದ ಕೆಲಸ. ಹೌದು ನಾನೂ ಕೂಡ ಆ ಕವಿತೆ ಬರೆದೆ. ಅದು ನನ್ನ ಜೀವನದ ಮೊದಲ ಕವಿತೆ. ಕವನದ ಶೀರ್ಷಿಕೆ ವಿಶ್ವಕರ್ತನ ಗುಡಿ. ನನ್ನ ಇಪ್ಪತ್ತೆರಡನೇ ವಯಸ್ಸಿಗೆ ಬರೆದ ಕವಿತೆ. ಅದಕ್ಕೂ ಮುಂಚೆ ನಾನೊಂದು ಓದುವ […]
ಆನು ಒಲಿದಂತೆ ಹಾಡುವೆನು ನಿನಗೆ ಕೇಡಿಲ್ಲವಾಗಿ
ಒಳನೋಟಿ ನಾಗರಾಜ ಹರಪನಹಳ್ಳಿ ಆನು ಒಲಿದಂತೆ ಹಾಡುವೆನು ನಿನಗೆ ಕೇಡಿಲ್ಲವಾಗಿ ಎಂಬುದು ಕವಿ ಬಸವಣ್ಣನ ಪ್ರಸಿದ್ಧ ಸಾಲು. ಸಂಸ್ಕೃತ ಭೂಯಿಷ್ಟವಾಗಿದ್ದ ಕನ್ನಡ ಕಾವ್ಯ, ಅರಮನೆಗೆ,ಪಂಡಿತರಿಗೆ ಮೀಸಲಾಗಿದ್ದ ಕನ್ನಡ ಕಾವ್ಯವನ್ನು ಜನ ಸಾಮಾನ್ಯನ ನೋವು ನಲಿಗೆ, ಮನಸಿನ ಸೂಕ್ಷ್ಮತೆ ಮತ್ತು ಬದುಕಿಗೆ ಒಗ್ಗಿಸಿದ್ದು ವಚನ ಸಾಹಿತ್ಯ. ಜನ ಸಾಮಾನ್ಯನ ಕುರಿತಾಗಿ ಅಷ್ಟೇ ಅಲ್ಲ, ಜನ ಸಾಮಾನ್ಯನೂ ಬರೆಯುವಂತೆ ಮಾಡಿದ ಕಾಲ ಅದು. 12ನೇ ಶತಮಾನದ 25 ವರ್ಷಗಳ ಕಾಲ ಕರ್ನಾಟಕವನ್ನು ಅದರಲ್ಲೂ ಕಲ್ಯಾಣ ಕರ್ನಾಟಕವನ್ನು ಹರಡಿಕೊಂಡಿದ್ದ ವಚನ ಚಳುವಳಿ […]