Category: ಇತರೆ

ಇತರೆ

ಕಾದಂಬರಿ ಕುರಿತು ಮಲೆಗಳಲ್ಲಿ ಮದುಮಗಳು ಕುವೆಂಪು ಚಂದ್ರಿಕಾ ನಾಗರಾಜ್ ಹಿರಿಯಡಕ ಮಲೆಯ ಝೇಂಕಾರಗಳಿಗೆ ಕಿವಿಯಾಗುತ್ತಾ… ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅನೇಕ ಕಾದಂಬರಿಗಳು ಜೀವಂತಿಕೆ ಪಡಕೊಂಡಿವೆ. ಅನೇಕ ಸಾಹಿತಿಗಳು ತಮ್ಮ ಕೃತಿಗಳ ಮೂಲಕಾನೇ ಉಸಿರಾಡುತ್ತಿದ್ದಾರೆ. ಅಂತಹ ಮೇರು ಸಾಹಿತಿಗಳಲ್ಲಿ ಪ್ರಮುಖರು ಕುವೆಂಪು. ಪ್ರಕೃತಿಯೊಂದಿಗಿನ ನಂಟಿನಲ್ಲೇ ಸಂಬಂಧಗಳನ್ನು ಅರಳಿಸುತ್ತಾ ಸಾಗಿಸುವ ಶ್ರೇಷ್ಠ ಕವಿ ಕುವೆಂಪು. ಅವರ ಕೃತಿಗಳಲ್ಲಿ ನನ್ನನ್ನು ಬಹುವಾಗಿ ಕಾಡಿದ್ದು “ಮಲೆಗಳಲ್ಲಿ ಮದುಮಗಳು”. ಕಣ್ಣಿಗೆ ದಣಿವೇ ನೀಡದೆ ಓದಿಸಿಕೊಂಡು ಹೋಗುವ ಕಾದಂಬರಿ. ಮಲೆಗಳಲ್ಲಿ ಕಾಡುವ ಮದುಮಗಳ ಬರಹ ಕಾವ್ಯವಿದು.ಕಾದಂಬರಿಯ […]

ಕಾದಂಬರಿ ಕುರಿತು ಕರ್ವಾಲೊ ಪೂರ್ಣಚಂದ್ರ ತೇಜಸ್ವಿ ಅರುಣಾ ರಾವ್ [10:21 AM, 11/7/2020] ARUNA RAO: ಪೂರ್ಣ ಚಂದ್ರ ತೇಜಸ್ವಿ ನನ್ನ ಯಾವತ್ತಿನ ಫೇವರೇಟ್ ರೈಟರ್. ಅವರ ಎಲ್ಲ ಕಾದಂಬರಿಗಳೂ ನನ್ನ ಬಳಿ ಇವೆ ಎಂದು ಹೇಳಿಕೊಳ್ಳಲು ನನಗೆ ಖುಷಿ. ಪ್ಯಾಪಿಲಾನ್, ಚಿದಂಬರ ರಹಸ್ಯ, ಅಬಚೂರಿನ ಫೋಸ್ಟ ಆಫೀಸ್, ತಬರನ ಕತೆ, ಅಡ್ವೆಂಚರ್ ಸೀರೀಸ್, ಅಲೆಮಾರಿ ಅಂಡಮಾನ್ ಎಲ್ಲವೂ ನನ್ನ ಪುಸ್ತಕ ಖಜಾನೆಯನ್ನು ಶ್ರೀಮಂತಗೊಳಿಸಿವೆ.ತೇಜಸ್ವಿಯವರ ಕಾದಂಬರಿಗಳು ಕೇವಲ ಮನರಂಜನಾ ಸಾಧನವಾಗಿರದೆ ಬುದ್ದಿಗೆ, ಮಂಥನಕ್ಕೆ ಆಹಾರವನ್ನು ಒದಗಿಸುತ್ತದೆ.ತೀರ ಇತ್ತೀಚೆಗಷ್ಟೇ […]

ಲಹರಿ ಅಕ್ಕ , ನೀನು ಯಾರಿಗೆ ಮಗಳಾಗಿದ್ದೆ ? ವೀಣಾ ದೇವರಾಜ್   ಮಗಳೇ ನೀನು ಯಾರಿಗೆ ಮಗಳಾಗಿದ್ದೆ. ಮಗಳ ಪ್ರೀತಿ ನಿನಗೆ ಗೊತ್ತೇ. ಅದನ್ನು ಎಂದಾದರೂ ಅನುಭವಿಸಿದ್ದೀಯಾ. ಹೇಗಿರಬಹುದೆಂದು ಯೋಚಿಸಿದ್ದೀಯ ಅಥವಾ ಬಯಸಿದ್ದೆಯ? ಒಮ್ಮೆ ಯೋಚಿಸಿ ನೋಡೋಣ… ಹಾಂ,ಸಿನೆಮಾದಲ್ಲಿ,, ಪುಟಾಣಿ ಪಾಪು , ಅದೇನು ಚೆಂದ,ಅಪ್ಪ ಅಮ್ಮನ ಮುದ್ದು ಮಗು ತಮ್ಮಿಷ್ಟದಂತೆ  ಅದನ್ನು ಸಿಂಗರಿಸಿದ್ದಾರೆ ನೋಡಿದವರೆಲ್ಲಿ ಕಣ್ಣುಬಿಟ್ಟು ದೃಷ್ಟಿ ತಾಗುವುದೋ ಎಂದು ದೃಷ್ಟಿಬೊಟ್ಟನ್ನೂ  ಇಟ್ಟಿದ್ದಾರೆ. ಒಂದು ನಿಮಿಷವೂ ಒಂಟಿಯಾಗಿ ಬಿಟ್ಟಿಲ್ಲ. ಇನ್ನೇನು ಶಾಲೆಗೆ ಸೇರಿಸುವ ವಯಸ್ಸು […]

ಕಾದಂಬರಿ ಕುರಿತು` ಬೆಟ್ಟದ ಜೀವ ಡಾ.ಶಿವರಾಮ ಕಾರಂತ ಶಾಂತಲಾ ಮಧು ನನ್ನ ನೆಚ್ಚಿನ “ಬೆಟ್ಟದ ಜೀವ”ಕಾದಂಬರಿಯ ಒಂದು ನೋಟ” “”ಬಾನಿನಲ್ಲಿ ಸೂರ‍್ಯನು ತುಸುವಾಗಿ ಮೇಲಕ್ಕೇರುತ್ತಾನೆ- ಎಂದಂತೆ ಒಮ್ಮೆಗೇ ಅವನ ರಶ್ಮಿಗಳು ಬೆಟ್ಟದ ತೆಂಕು ಮಗ್ಗುಲಿನ ಹಸುರನ್ನೆಲ್ಲ ಬೆಳಕಿಂದ ತೊಯ್ಯಿಸಿಬಿಟ್ಟವು! ಆ ಅಪೂರ್ವದ ನೋಟವು ಎಂದೂ ಮರೆಯುವಂಥದಲ್ಲ. ಆ ತನಕ- ಕಠಿಣವೂ ನಿರ‍್ದಾಕ್ಷಿಣ್ಯವೂ ಆಗಿ ನಿಂತ ಬೆಟ್ಟಕ್ಕೆ ಒಂದು ಬದಿಯಲ್ಲಿ ಮೃದುವಾದ ಹೃದಯವಿದ್ದಂತೆ ಕಂಡಿತು. ನೋಡುತ್ತಾ ನಿಂತಂತೆ, ಕೆಂಪಡರಿದ ಬಾನಿನ ಕಣ್ಣು ಕ್ರೂರವಾಗುತ್ತ ಬೆಂದ ಕಬ್ಬಿಣವನ್ನು ಕರಗಿಸಲು ಬಂದಂತೆ […]

ಕಾದಂಬರಿ ಕುರಿತು ಕರ್ವಾಲೊ ಪೂರ್ಣಚಂದ್ರ ತೇಜಸ್ವಿ ಚೈತ್ರಾ ಶಿವಯೋಗಿಮಠ “ಜೀವ ವಿಕಾಸಕ್ಕೆ ಎಲ್ಲಿದೆ ಕೊನೆ!” ಬರವಣಿಗೆ ಕೊಡುವ ಆನಂದಕ್ಕಿಂತ ಓದು ಕೊಡುವ ಸುಖವೇ ಆಪ್ಯಾಯಮಾನ. ಅಗಾಧವಾದ ಪ್ರಕಾರಗಳನ್ನು ಹೊಂದಿರುವಂತಹ ಸಾಹಿತ್ಯ, ಕನ್ನಡ ಸಾಹಿತ್ಯ. ಜನರಿಂದ ಹೆಚ್ಚು ಓದಲ್ಪಡುವ ಪ್ರಕಾರವೆಂದರೆ ಅದು ಕಾದಂಬರಿಗಳು. ಸಮಯ ಸವೆಸುವುದಕ್ಕೊ, ಜ್ಞಾನಾರ್ಜನೆಗೊ, ಮನೊರಂಜನೆಗೋ ಹೀಗೇ ವಿವಿಧ ಕಾರಣಕ್ಕಾಗಿ ಜನ ಕಾದಂಬರಿಗಳನ್ನು ಓದುತ್ತಾರೆ. ತೇಜಸ್ವಿಯವರ ಕಾದಂಬರಿಗಳ ವೈಶಿಷ್ಟ್ಯವೆಂದರೆ ಮನೋರಂಜನೆಯ ಜೊತೆಗೆ ವಿಜ್ಞಾನವನ್ನು, ಪ್ರಪಂಚ ಜ್ಞಾನವನ್ನು ವಿಫುಲವಾಗಿ ನೀಡುತ್ತವೆ. ತೇಜಸ್ವಿಯವರ ಕಾದಂಬರಿಗಳಲ್ಲಿ ಎಲ್ಲರೂ ಸಾಮಾನ್ಯವಾಗಿ ಮೊದಲು […]

ಕಾದಂಬರಿ ಕುರಿತು ಬಂಡಾಯ ವ್ಯಾಸರಾಯ ಬಲ್ಲಾಳ ಒಳ್ಳೆಯ ಓದುಗ ವಿಮರ್ಶಕನಾಗುತ್ತಾನೆ ನಿನ್ನೆ ಮೊನ್ನೆ  ಎಲ್ಲಿಯೋ ಓದಿದ ನೆನಪು. ಬಹುಶಹ ಗಂಗಾಧರ್ ಸರ್ ‘ನನ್ನ ಪುಟ’ದಲ್ಲಿ?  ನಾನೋ ವಿಮರ್ಶೆ ನನಗೆ ಒಗ್ಗಲ್ಲ ಎನ್ನುತ್ತಲೇ ಹಾಗೆ ಓದಿ ಹೀಗೆ ತಲೆ ಕೊಡವಿಕೊಳ್ಳುವ ಜಾತಿ. ಆದರೆ ಓದಿ ಬದಿಗಿಟ್ಟಮೇಲೂ ಬಿಡದಲೇ  ಬೆನ್ನಿಗೆ ಬಿದ್ದು ದನಿಯಾಗಿ ಕಾಡಿದ ಕ್ರತಿಗಳ ಕಾರಣದಿಂದಲೇ ಒಮ್ಮೊಮ್ಮೆ ನೋಡೋಣವೆಂತಲೇ ಕಚ್ಚಿ ಕೂತಿದ್ದಿದೆ. ಅಂಥ ಕ್ರತಿಗಳಲ್ಲೊಂದು ಇತ್ತೀಚೆಗೆ ಕೈಗೆ ಬಂದ ಪುಸ್ತಕ ಬಲ್ಲಾಳರ ‘ಬಂಡಾಯ’.  ತಮ್ಮ ಕೊನೆಯ ದಿನಗಳಲ್ಲಿ ಬೆಂಗಳೂರಿನಲ್ಲಿದ್ದು […]

ಕಾದಂಬರಿ ಕುರಿತು ಮಲೆಗಳಲ್ಲಿ ಮದುಮಗಳು ಕುವೆಂಪು ಶತಮಾನದ ಶ್ರೇಷ್ಠ ಸಾಹಿತಿ ಎಂದು ಕುವೆಂಪು ಅವರನ್ನು ಕರೆದರೂ ಯಾಕೋ ಅವರ  ಬಗ್ಗೆ ತೀರ ಕಡಿಮೆಯಾಯ್ತು ಅನ್ನಿಸುತ್ತದೆ . ಯಾಕಂದ್ರೆ ಅವರ ಮಹದ್ ಬೃಹತ್ ಗ್ರಂಥ “ಮಲೆಗಳಲ್ಲಿ ಮದುಮಗಳು” ಇಂದು ನನ್ನ ಕೈಯಲ್ಲಿದ್ದು ತನ್ನನ್ನು ತಾನೇ ಓದಿಸಿಕೊಳ್ಳುತ್ತಿದೆ. ಹೆಸರಾಂತ ಸಾಹಿತಿ ದೇವನೂರು ಮಹಾದೇವ ಅವರ ಎದೆಯಾಳದ ಪ್ರಶ್ನೆಯೊಂದನ್ನು ಇಲ್ಲಿ ಇಡುವ ಮನಸ್ಸಾಗುತ್ತದೆ “ಕನ್ನಡದಲ್ಲಿ ಅತ್ಯುತ್ತಮ ಎನ್ನಿಸಿಕೊಂಡ ನಾಲ್ಕಾರು ಕೃತಿಗಳನ್ನು ತಕ್ಕಡಿಯ ಒಂದು ತಟ್ಟೆಯಲ್ಲಿಟ್ಟು ಕುವೆಂಪುರವರ  ಮದುಮಗಳನ್ನು ಇನ್ನೊಂದರಲ್ಲಿಟ್ಟರೆ ಗುಣದಲ್ಲೂ ಗಾತ್ರದಲ್ಲೂ […]

ಕಾದಂಬರಿ ಕುರಿತು ಮರಳಿಮಣ್ಣಿಗೆ ಡಾ.ಶಿವರಾಮ ಕಾರಂತ ಸುಮಾವೀಣಾ ಮರಳಿಮಣ್ಣಿಗೆ’ಯ ರಾಮನನ್ನು ನೆನಪಿಸಿದ ಕೊರೊನಾ ಕಾಲಾಳುಗಳು   ‘ಮರಳಿ ಊರಿಗೆ”, “ಮರಳಿ ಗೂಡಿಗೆ’, ‘ಮರಳಿ ಮನೆಗೆ’, ‘ಮರಳಿ ನಾಡಿಗೆ’ ಇವೆ ಪದಗಳು ಕೊರೊನಾ ಎಮರ್ಜನ್ಸಿಯಾದಾಗಿನಿಂದ ಕೇಳುತ್ತಿರುವ ಪದಗಳು.ಆದರೆ ಇವುಗಳ ಕಲ್ಪನೆ, ಯೋಚನೆ ನಮ್ಮ ‘ಕಡಲ ತಡಿಯ ಭಾರ್ಗವ’ನಿಗೆ ಅಂದೇ ಹೊಳೆದಿತ್ತು  ಹಾಗಾಗಿ ಕನ್ನಡದ ಶ್ರೇಷ್ಠ ಕಾದಂಬರಿಗಳಲ್ಲಿ ಒಂದಾದ ‘ಮರಳಿ ಮಣ್ಣಿಗೆ’ ಕಾದಂಬರಿಯನ್ನು ನಮ್ಮ  ಕೈಗಿತ್ತಿದ್ದಾರೆ. ಹ್ಯಾಟ್ಸ ಆಫ್ ಟು ಕಾರಂತಜ್ಜ  ಎನ್ನಬೇಕು. ‘ಮರಳಿ ಮಣ್ಣಿಗೆ’ ಕಾದಂಬರಿಯಲ್ಲಿ ರಾಮ, ಐತಾಳರು, […]

ನಮ್ಮೂರ ಕೆರೆಯ ವೃತ್ತಾಂತ

ಪದ್ಯ/ಗದ್ಯ ನಮ್ಮೂರ ಕೆರೆಯ ವೃತ್ತಾಂತ ಡಾ. ಅರಕಲಗೂಡು ನೀಲಕಂಠ ಮೂರ್ತಿ ನಮ್ಮೂರ ವಿಶಾಲ ತಬ್ಬಿಅಲೆಯಲೆಯಾಗಿ ಹಬ್ಬಿಹರಿದಿದ್ದ ಸಾಗರದಂಥ ಕೆರೆಈಗ ಬಸ್ ನಿಲ್ದಾಣ! ಹೇಮಾವತಿಯ ಚಿತ್ತಹರಿಯುವ ಮುನ್ನನಮ್ಮೂರಿನತ್ತಆ ‘ದೊಡ್ಡ ಕೆರೆ’ಯೇಕೋಟೆ ಪೇಟೆಯಬಂಗಾರ ಜೀವಜಲ!ಅದೀಗ ನಮ್ಮೂರ ‘ಹೆಮ್ಮ’ಯಬಸ್ ಸ್ಟ್ಯಾಂಡ್! ಒಂದೊಮ್ಮೆ ಮೊಗೆಮೊಗೆದಷ್ಟೂಉಗ್ಗಿದ್ದ ನೀರು…ಎಂದೆಂದೂ ಬತ್ತಿ ಬರಡಾಗದೆನಿತ್ಯ ಹರಿದಿದ್ದ ತೇರು!ಶತಮಾನಗಳ ತಲೆಮಾರುಗಳಮೈ-ಮನ ತೊಳೆದಿದ್ದನೀರಡಿಕೆ ನಿರಂತರ ನೀಗಿದ್ದವರುಷ ವರುಷ ಗಜಗಾತ್ರಗಣೇಶ ಮೂರ್ತಿಗಳನೆಆಪೋಶಿಸಿದ್ದಆ ನೀರ ಮಹಾರಾಶಿಈಗಸೆಲೆಯೂ ಇಲ್ಲದ ಅಪರಂಜಿ –ಬರಡು!ಯಾರ ಚಿಂತನೆಯಅದೆಂಥ ಬೆರಗು!ಆ ನೀರ ಜೊತೆಜೊತೆಗೆಪ್ರತಿಫಲಿಸಿದ್ದಇನ್ನುಳಿದ ಕೆರೆಗಳೂ ಕೂಡಈಗ ನೆಲಸಮ…ಬರೀ ನೆನಪು! ಅಂದಿನ ಆ […]

ಮಹಾತ್ಮಾ ಗಾಂಧೀಜಿಯವರ ಅಸಹಕಾರ ಚಳುವಳಿ ಉತ್ತರ ಕರ್ನಾಟಕ ಭೇಟಿಗೆ ಶತಮಾನ

ಲೇಖನ ಮಹಾತ್ಮಾ ಗಾಂಧೀಜಿಯವರ ಅಸಹಕಾರ ಚಳುವಳಿ ಉತ್ತರ ಕರ್ನಾಟಕ ಭೇಟಿಗೆ ಶತಮಾನ ಡಾ. ಎಸ್.ಬಿ. ಬಸೆಟ್ಟಿ ಒಂದು ಶತಮಾನದ ಹಿಂದಿನ ಕಾಲ ಬ್ರಿಟಿಷ್ ಆಳ್ವಿಕೆಯ ಅತಿರೇಕಗಳಿಂದ ಇಡೀ ಭಾರತವೇ ರೋಸಿಹೋಗಿತ್ತು. ಕಳೆದ ಶತಮಾನದ ಪೂರ್ವಾರ್ಧದಲ್ಲಿ ಪ್ಲೇಗ್, ಕಾಲರಾ, ಸಿಡುಬು, ಸ್ಪಾನಿಶ್ ಪ್ಲೂ ಇತ್ಯಾದಿ ಸಾಂಕ್ರಾಮಿಕ ಸೋಂಕುಗಳು ಜಗತ್ತನ್ನು ಕಂಗೆಡಿಸಿದ್ದವು. ಪ್ಲೇಗ್, ಕಾಲರಾ, ಸಿಡುಬು ಆಗಾಗ ಬರುತ್ತಲೇ ಇದ್ದರೂ ಸ್ಪಾನಿಶ್ ಪ್ಲೂ ಮಾತ್ರ ೧೯೧೮-೧೯ ರ ವೇಳೆ ಒಮ್ಮೆಲೆ ವ್ಯಾಪಕವಾಗಿ ಹರಡಿತು. ಇದು ಹರಡಿದ್ದು ಒಂದನೇ ಮಹಾಯುದ್ಧದಲ್ಲಿ ಪಾಲ್ಗೊಂಡ […]

Back To Top