Category: ಇತರೆ

ಇತರೆ

ಬುದ್ಧ ಪೂರ್ಣಿಮಾ ವಿಶೇಷ

  ‘ಮುಟ್ಟಿದರೆ ಕೆಡುಕಿಲ್ಲ ಮುಟ್ಟದಿರೆ ಒಳಿತು’  ವಸುಂಧರಾ ಕದಲೂರು   ‘ಮುಟ್ಟಿದರೆ ಕೆಡುಕಿಲ್ಲ ಮುಟ್ಟದಿರೆ ಒಳಿತು’              ಈ ಸಾಲುಗಳು ಮಾಸ್ತಿಯವರ ‘ಯಶೋಧರ’ ನಾಟಕದಲ್ಲಿದೆ ಎಂಬ ನೆನಪು.            ರಾಜಕುಮಾರನಾಗಿದ್ದ ಸಿದ್ಧಾರ್ಥನು ಬುದ್ಧನಾಗಿ, ಜೀವನದ ಪರಮಸತ್ಯವನ್ನು ಕಂಡು, ಅದನ್ನು ಜಗತ್ತಿಗೆ ಬೋಧಿಸಿದ. ತನ್ನ ಉಪದೇಶ ಮಾತ್ರದಿಂದಲೇ ಲೋಕದ ಕಣ್ತೆರೆಸಿದವನು, ಜನರ ದುಃಖ ಮರೆಸಿದವನು, ಕಣ್ಣೀರನು ಒರೆಸಿದವನು ಹೀಗೆಲ್ಲಾ ಹೇಳುತ್ತಾರೆೆ. ಬುದ್ಧನ ವಿಚಾರದಲ್ಲಿ ಇದೆಲ್ಲಾ ನಿಜವಿರಬಹುದು.      […]

ಬುದ್ಧ ಪೂರ್ಣಿಮಾ ವಿಶೇಷ

ಜ್ಞಾನದ ದಿವ್ಯ ಬೆಳಕು ಚೆಲ್ಲುವ ‘ಬುದ್ಧ ಪೌರ್ಣಿಮೆ’ ಜ್ಞಾನದ ದಿವ್ಯ ಬೆಳಕು ಚೆಲ್ಲುವ ‘ಬುದ್ಧ ಪೌರ್ಣಿಮೆ’..! ಬುದ್ಧ ಪೌರ್ಣಿಮೆಯ ದಿನ ಇದೇ ದಿನಾಂಕ 7 ರಂದು ಇದೆ. ಆ ನೆಪದಲ್ಲಿ ಈ ಬುದ್ಧನ ನೆನೆದು ಈ ಲೇಖನ… ಬೆಳದಿಂಗಳ ತಂಪು, ಆಹ್ಲಾದ, ನಿರ್ಲಿಪ್ತತೆ, ಶಾಂತಿ, ಏಕಾಂತ, ಪ್ರೇಮ, ಪ್ರಶಾಂತತೆ, ತೇಜಸ್ಸು- ಇವೆಲ್ಲಕ್ಕೂ ಸಂಕೇತವಾಗಿದೆ ಬುದ್ಧ ಪೌರ್ಣಿಮೆ. ತನ್ನ ಅಂಗಳದಲ್ಲಿ ಚೆಲ್ಲಿರುವ ಬೆಳದಿಂಗಳು ತನ್ನದೆಂಬಂತೆ ಕಂಡರೂ ಅದು ತನ್ನದಲ್ಲ ಎಂಬುದು ಮನುಷ್ಯರಲ್ಲಿ ಅಂತರ್ಗತವಾದ ಎಚ್ಚರ. ಬದುಕಿನ ಪ್ರತಿ ಹೆಜ್ಜೆಯಲ್ಲೂ […]

ನಿತ್ಯೋತ್ಸವ ಕವಿ

ಬದುಕು-ಬರಹ ನಿತ್ಯೋತ್ಸವ ಕವಿ ಹಾಗೂ ವಿಮರ್ಶಕ ಮತ್ತು ವೈಚಾರಿಕ ಬರಹಗಾರ ಪ್ರೊ.ಕೆ.ಎಸ್. ನಿಸಾರ್ ಮಹಮದ್..! ಕರ್ನಾಟಕದಾದ್ಯಂತ ಕವಿಗಳಾಗಿ, ವಿಮರ್ಶಕರಾಗಿ ಮತ್ತು ವೈಚಾರಿಕ ಬರಹಗಾರರಾಗಿ ಪ್ರಸಿದ್ಧರಾದ ಪ್ರೊ. ಕೆ. ಎಸ್. ನಿಸಾರ್ ಅಹಮದ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನ ಹಳ್ಳಿಯಲ್ಲಿ 05-02-1936ರಂದು ಕೆ. ಎಸ್. ಹೈದರ್ ಮತ್ತು ಹಮೀದಾ ಬೇಗಂ ಅವರ ಪುತ್ರರಾಗಿ ಜನಿಸಿದರು… ತಂದೆ ಸರಕಾರಿ ನೌಕರಿಯಲ್ಲಿದ್ದು ಕನ್ನಡ, ಇಂಗ್ಲಿಷ್, ಸಂಸ್ಕೃತ ಬಲ್ಲ ಸುಸಂಸ್ಕೃತರು. ನಿಸಾರರು ಪ್ರಾಥಮಿಕ, ಮಾಧ್ಯಮಿಕ ಶಾಲೆ ಓದಿದ್ದು ದೇವನಹಳ್ಳಿಯಲ್ಲಾದರೆ, ಪ್ರೌಢಶಾಲೆಗೆ ಹೊಸಕೋಟೆ […]

ಗುರುವಂದನೆ

ಗುರುವಂದನೆ ಪೂರ್ಣಿಮ ಸುರೇಶ್ ಗೃಹಬಂಧಿಯಾಗಿ ಕರೋನ ಪೊಸಿಟಿವ್,ನೆಗಟಿವ್,ಹಸಿರು,ಹಳದಿ,ಕೆಂಪು ಅನ್ನುವ ಸುದ್ದಿಮಾಯೆಯ ಸೆಳೆತಕ್ಕೆ ಹೊಂದಿಸಿಕೊಂಡು.ಮೌನ ಹೊದ್ದ ದಿನಗಳು ತೆವಳುತ್ತಿದೆ. ಇಂತಹ ಸಮಯದಲ್ಲೇ ಬೆಂಗಳೂರಿನ ಗೆಳೆಯರೊಬ್ಬರು ಕರೆ ಮಾಡಿ ‘ನಿಸಾರ್ ಹೋಗಿಬಿಟ್ರಲ್ವಾ’..ಮನಸ್ಸು ಒಪ್ಪಲಾರದ,ಬುದ್ದಿ ಗ್ರಹಿಸಲಾರದ ಏನನ್ನೋ ಆಡುತ್ತಿದ್ದಾರೆ. ಉತ್ತರಿಸಲಾಗದ ಮಂಕು ಕವಿಯಿತು. ವಾಟ್ಸಫ್ ತೆರೆದರೆ ಆಗಲೇ ಹಲವಾರು ಸ್ನೇಹಿತರು ಸಂದೇಶ ಕಳುಹಿಸಿದ್ರು. ಒಳಹೊರಗೆಲ್ಲ ಸೂತಕ. ಸಾರ್..ಹೋಗಿಬಿಟ್ರೇ..ಸಾಧ್ಯವೇ ಇದು..ಟಿ.ವಿಯಲ್ಲೂ ಅದೇ ಸುದ್ದಿ..ಬಂಧು,ಗುರು,ಮಾರ್ಗದರ್ಶಿ..ಇನ್ನಿಲ್ಲ. ಹೇಗೆ ನಂಬಲಿದನ್ನು..ಸುಳ್ಳಾಗಬಾರದೇ.. ಅಂತರಂಗದಲ್ಲಿ ಕಚ್ಚಿಕೊಂಡ ನೆನಪುಗಳು,ಬರಹಗಳು ಮಾತ್ರ ನಮ್ಮ ಜೊತೆ. ನಿಸಾರ್ ಸಾರ್ ಗೆ ನಮ್ಮ ಉಡುಪಿಯ ಜೊತೆ […]

ನಿತ್ಯೋತ್ಸವವಿನ್ನು ನೆನಪು

ನಿಂತು ಹೋದ ನಿತ್ಯೋತ್ಸವ ಕೆ.ಎಸ್.ನಿಸಾರ್ ಅಹಮದ್ ನಿತ್ಯೋತ್ಸವ ಕವನ’ ನಿಲ್ಲಿಸಿದ ಕವಿ ಪ್ರೊ.ಕೆ.ಎಸ್.ನಿಸಾರ್ ಅಹಮದ್..! ನಿತ್ಯೋತ್ಸವದ ಕವಿ ಎಂದೇ ಖ್ಯಾತರಾದ ಕನ್ನಡ ಹಿರಿಯ ಕವಿ ಪ್ರೊ. ಕೆ.ಎಸ್‌ ನಿಸಾರ್ ಅಹಮದ್ ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು… ಪ್ರೊ. ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ 1936ರ ಫೆಬ್ರುವರಿ 5ರಂದು ಜನಿಸಿದವರು. 1959ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1994ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗೂ ಪ್ರಾಧ್ಯಾಪಕರಾಗಿ ಕೆಲಸ […]

ನುಡಿ ನಮನ

ನುಡಿ ನಮನ ಹೊರಗಣ್ಣ ಮುಚ್ಚಿದರೆ ಒಳಗಣ್ಣು ತೆರೆಯುವುದು ಕಾಣುವುದು ಎಲ್ಲೆಲ್ಲು ವಿಶ್ವರೂಪ_ _ಕೆ.ಎಸ್.ನಿಸ್ಸಾರ ಒಬ್ಬ ಕವಿಯಾಗಿ,ಭಾವ ಜೀವಿಯಾಗಿ,ನಾನೆಂಬ ಪರಕೀಯರೊಳು ಒಂದಾಗಿ,ಪ್ರೇಮ ಕವಿಯಾಗಿ, ನಿತ್ಯೋತ್ಸವದ ಜೀವವಾದ ಕವಿ,ಲೇಖಕನ ಸೇವೆ ಅಗಣಿತವಾದ ಪರಿಧಿಯೋಳು ನೆಲೆನಿಲ್ಲಲು ಇವರ ಕವಿತೆಗಳೇ ಸಾಕ್ಷಿ..! ನಾಡು ನುಡಿಗೆ ಕಹಳೆಯುದಿದ ನಿಷ್ಠಾವಂತ ಯೋಧ… ** “ಕನ್ನಡವೆಂದರೆ ಬರಿ ನುಡಿಯಲ್ಲ ಹಿರಿದಿದೆ ಅದರರ್ಥ ನೀರೆಂದರೆ ಬರಿ ಜಲವಲ್ಲ ಅದು ಪಾವನತೀರ್ಥ”…. ಇಡೀ ಕರುನಾಡ ಸೊಗಡನ್ನು ಕನ್ನಡಿಗರಿಗೆ ಎಳೆಎಳೆಯಾಗಿ ಕಟ್ಟಿಕೊಟ್ಟಿದ್ದಾರೆ.ಕನ್ನಡ ನಾಡಲ್ಲಿ ಹುಟ್ಟುವುದೇ ಪುಣ್ಯ.ಇದು ಬರಿ ಗಡಿನಾಡಲ್ಲಿ ಗುರುತಿಸಿದ ನಾಡಲ್ಲ..ಕನ್ನಡಿಗರ […]

ನಿತ್ಯೋತ್ಸವದ ಕವಿಗೆ ನಮನ

ನಿತ್ಯೋತ್ಸವದ ಕವಿಗೆ ನಮನ ಜೋಗದ ಸಿರಿ ಬೆಳಕಿನಲ್ಲಿ, ತುಂಗೆಯ ತೆನೆ ಬಳುಕಿನಲ್ಲಿ ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ ನಿತ್ಯಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ ನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ…. ಈ ಹಾಡು ಕೇಳದವರಾರು, ಈ ಹಾಡು ಹಾಡದವರಾರು.ಕನ್ನಡಮ್ಮನಿಗೆ ನಿತ್ಯೋತ್ಸವದ ಹಾಡು ಬರೆದು ಕನ್ನಡದ ಹಿರಿಮೆ ಹೆಚ್ಚಿಸಿದ ಕವಿ ನಿಸಾರ್ ಅಹಮದ್ ಅವರು ನಮ್ಮನ್ನು ಅಗಲಿದ್ದು ಸಾರಸ್ವತ ಲೋಕಕ್ಕೆ ಅಪಾರ ನಷ್ಟವಾಗಿದೆ. ಪ್ರೊ. ನಿಸಾರ್ ಅಹಮದ್ ಎಂದೇ ಖ್ಯಾತರಾದ ಕೊಕ್ಕೆರೆ ಹೊಸಳ್ಳಿ ಹೈದರ ನಿಸಾರ್ […]

ಹೆಣ್ಣು ಬದುಕಿನ ಘನತೆ

  ಹೆಣ್ಣು ಬದುಕಿನ ಘನತೆ ವಸುಂಧರಾ ಕದಲೂರು. ವಸುಂಧರಾ ಕದಲೂರು. ಒಪ್ಪಿಗೆ ಇಲ್ಲದೇ ಮಹಿಳೆ ಮೈ ಮುಟ್ಟುವಂತಿಲ್ಲ ( ದೆಹಲಿ ನ್ಯಾಯಾಲಯ ತೀರ್ಪು 22-1-2018) ‘ಅರೆ.., ಹೆಣ್ಣಿನ ಮೈ ಮುಟ್ಟಲು, ಆಕೆಯ ಒಪ್ಪಿಗೆಯ ಅಗತ್ಯವಿದೆಯಾ’ ಎಂದು ಕುಹಕವಾಡುವ ಮಂದಿಯ ನಡುವಲ್ಲೇ ‘ಇದನ್ನೂ ಸಹ ನ್ಯಾಯಾಲಯವೇ ಹೇಳಿಕೊಡಬೇಕೆ ಅಷ್ಟೂ ಸೂಕ್ಷ್ಮ ಅರ್ಥವಾಗದೇ’ ಎಂದು ನೊಂದುಕೊಳ್ಳುವ ಮನಸ್ಸುಗಳು ಎಷ್ಟಿವೆಯೋ..      ಏನೆಲ್ಲಾ ಸಾಧಸಿ ಸೈ ಎನಿಸಿಕೊಂಡರೂ ಈ ಕ್ಷಣಕ್ಕೂ  ಹೆಣ್ಣುಮಗುವಾಗಿ  ಹುಟ್ಟುವ ಹಕ್ಕಿನಿಂದ ವಂಚಿತವಾಗಿ ಗರ್ಭ ಸೀಳಿಸಿಕೊಂಡು ಹೊರಬಂದು […]

ಕಾರ್ಮಿಕ ದಿನದ ವಿಶೇಷ-ಬರಹ

ಮೇ 1 ಚಿಂತನೆ- ಚಿಂತೆಗಳು ಪೂರ್ಣಿಮಾ ಸುರೇಶ್ ಮೇ 1 ಚಿಂತನೆ- ಚಿಂತೆಗಳು ಮೇ ದಿನ ಅಂದರೆ ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ, (ಅಂತರರಾಷ್ಟ್ರೀಯ ಶೃಮಿಕ ದಿನಾಚರಣೆಯೂ ಹೌದು )ವರ್ಗ ಹೋರಾಟಗಳ ವಾರ್ಷಿಕ ದಿನಾಚರಣೆಯಾಗಿ ಕಾರ್ಮಿಕ ವರ್ಗ ಆಚರಿಸುತ್ತಿದ್ದಾರೆ. ಕಾರ್ಮಿಕರ ಸಭೆ, ವಿಚಾರಗೋಷ್ಠಿ,ಪ್ರದರ್ಶನ, ಹಕ್ಕುಗಳನ್ನು ಸಾಧಿಸಲು ಮೆರವಣಿಗೆ ಮುಂತಾದವುಗಳನ್ನು ಹಮ್ಮಿಕೊಳ್ಳುವ ಕಾರ್ಮಿಕರ ಉತ್ಸವದ ದಿನ . ಸಾರ್ವಜನಿಕ ರಜಾ ದಿನವಾಗಿಯೂ ಘೋಷಿತವಾಗಿದೆ .ದೇಶವೊಂದರ ಜೀವನಾಡಿಯಂತಿರುವ ಕಾರ್ಮಿಕರ ಬದುಕಿನ ಸಮಾನತೆಗಾಗಿ ಅವರ ಹೋರಾಟದ ಬದುಕನ್ನು ನೆನಪಿಸುವ ದಿನದ ಆಚರಣೆಯ ಹಿಂದೆ […]

Back To Top