Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಬಿತ್ತಿದ ಬೆಂಕಿ

ಬಿತ್ತಿದ ಬೆಂಕಿ ಇಲ್ಲಿ ಬಿತ್ತಿದ ಬೆಂಕಿ ಸುಡುವುದಿಲ್ಲ, ಪರಿವರ್ತಿಸಿ ಬೆಳೆಸುತ್ತದೆ. ಇತ್ತೀಚೆಗೆ ಕಾದಂಬರಿಕಾರರು ಮತ್ತು ಹಿರಿಯ ಲೇಖಕರು, ಕವಿತೆಗಳನ್ನು ರಚಿಸುವುದರಲ್ಲಿ ತೊಡಗಿರುವುದು ಆಸಕ್ತಿಕರ ಸಂಗತಿ. ನಾನು ಗಮನಿಸಿದಂತೆ ಅವರಲ್ಲಿ ಎಸ್. ದಿವಾಕರ, ಇಂದ್ರಕುಮಾರ್ ಎಚ್.ಬಿ ಜೊತೆಗೆ ಶ್ರೀಧರ ಬನವಾಸಿ ಅವರು ಪ್ರಮುಖರು. ಏಕೆ ಹೀಗೆ ಎಂಬುದು ಕೂಡಾ ಚರ್ಚಾರ್ಹ ಸಂಗತಿಯೇ! ಫಕೀರ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಶ್ರೀಧರ ಬನವಾಸಿ ಅವರು ಬೇರು (2017) ಕಾದಂಬರಿಯ ಮೂಲಕ ಮನೆಮಾತಾದವರು. ಬೇರು ಒಟ್ಟು ಒಂಬತ್ತು ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅವರು […]

ಪುಸ್ತಕ ಸಂಗಾತಿ

ಅಲೆಮಾರಿಯ ದಿನದ ಮಾತುಗಳು ಅನುದಿನದ ಅನುಭಾದ ನುಡಿಗಳು(ಗಂಗಾಧರ ಅವಟೇರ ಅವರ “ಅಲೆಮಾರಿಯ ದಿನದ ಮಾತುಗಳು”) ಪ್ರೊ.ಗಂಗಾಧರ ಆವಟೇರ ಬಹುಕಾಲದ ಗೆಳೆಯ.ಬೊಗಸೆ ತುಂಬ ಪ್ರೀತಿ ತುಂಬಿಕೊಂಡೇ ಮಾತನಾಡುವಾತ. ಮನದಲ್ಲಿ, ಮಾತಲ್ಲಿ ಎರಡಿಲ್ಲದ ನೇರ ನುಡಿಯ ತುಂಬ ಹೋರಾಟದ ಬದುಕನ್ನು ಬದುಕುತ್ತ ಬಂದಾತ.ಅದಕ್ಕೆ ಹಿನ್ನೆಲೆಯಾಗಿಯೇ ಬದುಕಿದಾತಸದ್ಯಕ್ಕೆ ಇತಿಹಾಸ ಪ್ರಸಿದ್ಧ ಕುಕನೂರ ತಾಲೂಕಿನ‌ ಮಹಾದೇವ ದೇವಾಲಯ ನೆಲೆಸಿರುವ ಇಟಗಿಯ ಶ್ರೀ ಮಹೇಶ್ವರ ಪಿ.ಯು.ಕಾಲೆಜಿನಲ್ಲಿ ಕನ್ನಡ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಮಹಾಲಿಂಗಪೂರದಲ್ಲಿ ಉಪನ್ಯಾಸಕನಾಗಿದ್ದಾಗಿನಿಂದಲೂ ಅವರ ಆತ್ಮೀಯ ಸ್ನೇಹದ ಸವಿ ನನಗೆ ದೊರಕಿದುದುಂಟು.ಅದನ್ನೆಲ್ಲ ಬರೆಯಲು ಇದು […]

ಪುಸ್ತಕ ಸಂಗಾತಿ

ಲೋಕಪ್ರಸಿದ್ದ ಸಚಿತ್ರ ಮಕ್ಕಳ ಕತೆಗಳು ಮಕ್ಕಳ ಸಾಹಿತ್ಯ ಕೃತಿ ಪರಿಚಯ ಪುಸ್ತಕದ ಹೆಸರು- ಲೋಕಪ್ರಸಿದ್ದ ಸಚಿತ್ರ ಮಕ್ಕಳ ಕತೆಗಳು ಲೇಖಕರು – ಪ್ರೊ. ಎಚ್. ಜಿ. ಸಣ್ಣಗುಡ್ಡಯ್ಯ ಪ್ರಕಾಶಕರು – ಅಕ್ಷಯ ಪ್ರಕಾಶನ – ತುಮಕೂರು ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಮಕ್ಕಳಿಗೆ ಹೆಚ್ಚು ಕುತೂಹಲ ಕೆರಳಿಸಿ ಅವರಿಗೆ ನೀತಿಯನ್ನು ತಿಳಿಸುವ ಬಹುಮುಖ್ಯ ಪ್ರಕಾರವೆಂದರೆ ಈ ಕಥಾಪ್ರಕಾರ. ಇದು ಮಕ್ಕಳಲ್ಲಿ ಕಲ್ಪನಾ ಕೌಶಲ್ಯವನ್ನು ಬೆಳೆಸುವುದಲ್ಲದೆ ಆಲಿಸುವ ಸಾಮರ್ಥ್ಯವನ್ನು ಕೂಡ ಹೆಚ್ಚಿಸುತ್ತದೆ. ಮಕ್ಕಳ ಅಚ್ಚುಮೆಚ್ಚಿನ ಪ್ರಕಾರವಾದ ಕತೆಗಳು ಮಕ್ಕಳಲ್ಲಿ […]

ಪುಸ್ತಕ ಸಂಗಾತಿ

ಬರ್ಫದ ಬೆಂಕಿ ಬರ್ಫದ ಬೆಂಕಿ ಕವನ ಸಂಕಲನ ಲೇಖಕರು- ನಾಗರೇಖಾ ಗಾಂವ್ಕರ್ ಸಾಧನ ಪಬ್ಲಿಕೇಷನ್ ದಾಂಡೇಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕಿಯಾಗಿರುವ ನಾಗರೇಖಾ ಗಾಂವ್ಕರ್ ಅವರ ಮೂರನೇ ಕವನ ಸಂಕಲನವಿದು. ಏಣಿ ಎಂಬ ಪ್ರಥಮ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ದೊರೆತಿದೆ. ಇನ್ನೊಂದು ಪದಗಳೊಂದಿಗೆ ನಾನು ಎಂಬ ಕವನ ಸಂಕಲನ. ಪಾಶ್ಚಿಮಾತ್ಯ ಸಾಹಿತ್ಯ ಲೋಕ ಭಾಗ-೧ ಮತ್ತು ಆಂಗ್ಲ ಸಾಹಿತ್ಯ ಲೋಕ ಭಾಗ -೨ ಎಂಬ ಎರಡು ವಿಮರ್ಶಾತ್ಮಕ ಕೃತಿಗಳನ್ನು ಇವರು […]

ಪುಸ್ತಕ ಸಂಗಾತಿ

ನಿನ್ನ ಪ್ರೀತಿಯ ನೆರಳಿನಲ್ಲಿ… ನೋವು ನಲಿವಿನ ಸ್ಪಂದನ ನಿನ್ನ ಪ್ರೀತಿಯ ನೆರಳಿನಲ್ಲಿ… ನೋವು ನಲಿವಿನ ಸ್ಪಂದನ ಲೇಖನಗಳ ಸಂಕಲನ ಎನ್. ಆರ್ ರೂಪಶ್ರೀ ಬೆನಕ ಬುಕ್ಸ್ ಬ್ಯಾಂಕ್ ಮೈಸೂರಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕಿಯಾಗಿರುವ ರೂಪಶ್ರೀ ಅವರ ಜ್ಞಾನ ಜ್ಯೋತಿ – ಆಧ್ಯಾತ್ಮಿಕ ಲೇಖನಗಳ ಸಂಕಲನ, ಮೌನ ಕಾಲ ಮತ್ತು ಕನಸ ತುಂಬಿದ ಕವಿತೆ ಎಂಬ ಕವನ ಸಂಕಲನಗಳು, ನೆನಪಿನ ನವಿಲುಗರಿ ನೆಲಕ್ಕೆ ಬಿದ್ದಿತ್ತು, ಹೆಜ್ಜೆಯಲ್ಲಿ ಗೆಜ್ಜೆನಾದ ಕಥಾಸಂಕಲನಗಳು ಈ ಹಿಂದೆ ಪ್ರಕಟಗೊಂಡಿವೆ. ಮೂಲತಃ ಶಿರಸಿಯವರಾದ ಇವರು ಕವಿ ಕಾವ್ಯ […]

ಪ್ರಶಸ್ತಿ-ಪುರಸ್ಕಾರ

ಡಾ. ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿ -2019 ಡಾ. ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿ -2019 ಕನ್ನಡದ ಸಣ್ಣ ಕತೆಗಾರರಿಗೆ ಉತ್ತೇಜನ ನೀಡಲು ಪ್ರತಿ ವರ್ಷ ನೀಡುತ್ತಿರುವ ಡಾ . ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ 2019 ರ ಪ್ರಶಸ್ತಿ ಚನ್ನಪ್ಪ ಕಟ್ಟಿ ಅವರ ” ಏಕತಾರಿ ” ಕಥಾ ಸಂಕಲನಕ್ಕೆ ಸಂದಿದೆ . ಡಾ. ಎಸ್ ಜಿ ಸಿದ್ದರಾಮಯ್ಯ , ಅರುಣ್ ಜೋಳದ ಕೂಡ್ಲಗಿ ಮತ್ತು ವಿನಯಾ ವಕ್ಕುಂದ ಅವರುಗಳಿದ್ದ ಸಮಿತಿ ಈ […]

ಪುಸ್ತಕ ಸಂಗಾತಿ

ಜಾಂಬ್ಳಿ ಟುವಾಲು ಜಾಂಬ್ಳಿ ಟುವಾಲು ಕಥಾಸಂಕಲನ ಲೇಖಕರು- ರಾಜು ಹೆಗಡೆ ಪ್ರಕಾಶನ – ಅಂಕಿತ ಪುಸ್ತಕ ಶಿರಸಿಯಲ್ಲಿ ಕನ್ನಡ ಉಪನ್ಯಾಸಕರಾಗಿರುವ ಪ್ರೊ.ರಾಜು ಹೆಗಡೆ ಉತ್ತರ ಕನ್ನಡದ ಪ್ರಮುಖ ಕವಿ ಮತ್ತು ಕಥೆಗಾರ.ಉ.ಕದ ಗಡಿರೇಖೆಯೊಳಗೆ ತಮ್ಮ ಕಥಾಲೋಕ ಸೃಷ್ಟಿಸಿಕೊಂಡು ಇಲ್ಲಿಯೇ ನೆಲೆಸಿರುವ ಬರಹಗಾರ. ಜಾಂಬ್ಳಿ ಟುವಾಲು ಎಂಬ ಹೆಸರಿನ ಯಾವುದೇ ಕಥೆ ಇಲ್ಲಿಲ್ಲ. ಆದರೆ ‘ಕುರುರಾಯ ಇದನೆಲ್ಲ ಕಂಡು..’ ಎಂಬ ಕಥೆಯಲ್ಲಿ ಟವೆಲ್ ಇಟ್ಟು ಹೋದವರ ಜಗಳದ ಪ್ರಸಂಗ ಬರುತ್ತದೆ. ಕಥೆಗಳನ್ನು ಜಾಂಬ್ಳಿ – ಇಲ್ಲಿ ಆರು ಕಥೆಗಳು […]

ಪುಸ್ತಕ ಸಂಗಾತಿ

ನಾನು ಅಘೋರಿಯಲ್ಲ “ನಾನು ಅಘೋರಿಯಲ್ಲ”” – Santoshkumar Mehandale 10 ವರ್ಷದ ಹಿಂದೆಯೇ ತರಂಗದಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿ, ರಾಜ್ಯಮಟ್ಟದ ಜನಪ್ರಿಯ ಕಾದಂಬರಿ ಎಂದೆನಿಸಿಕೊಂಡ, (ಬಹುಶ ಹಲವು ಪ್ರಶಸ್ತಿಯೂ ) ಪುಸ್ತಕ….    ನನ್ನ ಬಹುದೊಡ್ಡ ಹೊಟ್ಟೆಯುರಿ ಅಂದ್ರೆ ಈ ಲೇಖಕರು,  ಇವರ ಬರಹಗಳು ನಂಗೆ ಪರಿಚಯವಾದದ್ದು ತೀರ ಇತ್ತೀಚಿಗೆ, ಇಷ್ಟು ವರ್ಷ ನಾನೀ ಲೇಖಕರ ಪುಸ್ತಕ ಬರಹ ಎಲ್ಲಾ ಮಿಸ್  ಮಡ್ಕೊಂಡೇ ಅಂತನ್ನಿಸೋದು ಇವರ ಕೆಲವು ಪುಸ್ತಕಗಳು ಸಿಗದಿದ್ದಾಗ, ಅವನು ಗಂಧರ್ವ….  ಯಾವ ಪ್ರೀತಿಯೂ…. ಓದಿದ ನಂತರ […]

ಪುಸ್ತಕ ಸಂಗಾತಿ

ಕೃತಿ ಪರಿಚಯ ತಲ್ಲಣಗಳ ಪಲ್ಲವಿ ಪುಸ್ತಕ: ತಲ್ಲಣಗಳ ಪಲ್ಲವಿ (ಕಥಾ ಸಂಕಲನ) ಲೇಖಕರು: ಅನುಪಮಾ ರಾಘವೇಂದ್ರ ಉಡುಪುಮೂಲೆ ಪುಸ್ತಕ: ತಲ್ಲಣಗಳ ಪಲ್ಲವಿ (ಕಥಾ ಸಂಕಲನ) ಲೇಖಕರು: ಅನುಪಮಾ ರಾಘವೇಂದ್ರ ಉಡುಪುಮೂಲೆ ನೃತ್ಯ ಶಿಕ್ಷಕಿಯಾಗಿರುವ ಅನುಪಮಾ ರಾಘವೇಂದ್ರ ಉಡುಪುಮೂಲೆ ಅವರು ಕಾಸರಗೋಡಿನ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡವರು. ನಾಟ್ಯ ವಿದುಷಿಯೂ, ಎಡನೀರಿನ ಭೂಮಿಕಾ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷೆಯೂ ಆಗಿರುವ ಇವರು ಬಹುಮುಖ ಪ್ರತಿಭೆಯವರು. ಇತ್ತೀಚೆಗೆ ಯಕ್ಷಗಾನ ಕ್ಷೇತ್ರಕ್ಕೂ ಪ್ರವೇಶಿಸಿದ ಅನುಪಮಾ ಅವರು ಈಗಾಗಲೇ ‘ಕಲಾತರಂಗ ಕಲಾಂತರಂಗ’ ಎಂಬ ಲೇಖನ ಸಂಕಲನವನ್ನೂ, ‘ಹತ್ತಗುಳು’ […]

ಪುಸ್ತಕ ಸಂಗಾತಿ

ಆಡಾಡತ ಆಯುಷ್ಯ ಆಡಾಡತ ಆಯುಷ್ಯ ಆತ್ಮ – ಕತೆಗಳು ಗಿರೀಶ ಕಾರ್ನಾಡ ಮನೋಹರ ಗ್ರಂಥಮಾಲಾ ಆಡಾಡತ ಆಯುಷ್ಯ ಗಿರೀಶ್ ಕಾರ್ನಾಡರ ಆತ್ಮಕಥನ. ಈ ಕತೆಯನ್ನು ಅವರು ಹನ್ನೊಂದು ಅಧ್ಯಾಯಗಳಲ್ಲಿ ಹೇಳಿದ್ದಾರೆ. ಪ್ರಾಕ್ಕು – ತಾಯಿ ಕೃಷ್ಣಾಬಾಯಿ ಮಂಕೀಕರ ( ಕುಟ್ಟಾಬಾಯಿ) ಅವರ ಬದುಕಿನ ಕುರಿತು ಇದರಲ್ಲಿ ಅವರು ಹೇಳಿದ್ದಾರೆ. ಬಾಲಚಂದ್ರ ಎಂಬ ಮಗ ಹುಟ್ಟಿ ಒಂದು ವರ್ಷದೊಳಗೇ ಗಂಡ ತೀರಿಕೊಳ್ಳುತ್ತಾನೆ. ನಂತರ ಅವರ ಭಾವ ಅವಳನ್ನು ಡಾ. ಕಾರ್ನಾಡರ ಬಳಿ ನರ್ಸ್ ಕೋರ್ಸಿಗೆ ಸೇರಿಸುತ್ತಾರೆ.ಐದು ವರ್ಷಗಳ ಕಾಲ […]

Back To Top