Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಹುಳುಕ ಹೂರಣದ ಹೋಳಿಗೆ ತೋರಣ ‘ರಾಯಕೊಂಡ’ ಕರಣಂ ಪವನ ಪ್ರಸಾದರ ಬಹುನಿರೀಕ್ಷಿತ ಕಾದಂಬರಿ. ಕಾನ್ಕೇವ್ ಪ್ರಕಾಶನ ಇದನ್ನು ಪ್ರಕಟಿಸಿದೆ. ನನ್ನಿ, ಗ್ರಸ್ತ, ಕರ್ಮ ಕಾದಂಬರಿಗಳನ್ನು, ಕರಣಂ ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದವರು. ಅವರೇ ಹೇಳಿಕೊಂಡಂತೆ ಇದು ಡಾರ್ಕ್ ಹ್ಯೂಮರ್ ಪ್ರಕಾರಕ್ಕೆ ಸೇರುವ ಕಾದಂಬರಿ. ಈ ವಿಭಾಗವು ಸಾಮಾನ್ಯವಾಗಿ ನಿಷೇಧವೆಂದು ಭಾವಿಲ್ಪಡುವ ವಿಷಯದ ಬೆಳಕನ್ನು ಚೆಲ್ಲುತ್ತದೆ. ವಿಶೇಷವಾಗಿ ಗಂಭೀರ ಅಥವಾ ವಿಷಾದದಿಂದ ಕೂಡಿದ ವಿಷಯಗಳನ್ನು ಕಪ್ಪು ಹಾಸ್ಯದ ಮಾದರಿಯಲ್ಲಿ ಚರ್ಚಿಸುತ್ತದೆ. ಎಂ. ವ್ಯಾಸರ ಕಪ್ಪು ದರ್ಶನದ ಕಥೆಗಳೇ ಬೇರೆ, […]

ಪುಸ್ತಕ ಸಂಗಾತಿ

Anyone but the Spouse ವಾಸ್ತವ ಸಂಗತಿಗಳ ಯಥಾವತ್ ನಿರೂಪಣೆ ಪುಸ್ತಕ:Anyone but the Spouse ಸಣ್ಣ ಕಥೆಗಳು ಲೇಖಕಿ:ಪೂರ್ಣಿಮಾ ಮಾಳಗಿಮನಿ Anyone but the Spouse ಪೂರ್ಣಿಮಾ ಮಳಗಿಮನಿಯವರು ಇಂಗ್ಲಿಷ್ ನಲ್ಲಿ ಬರೆದು ಪ್ರಕಟಿಸಿರುವ ಸಣ್ಣ ಕಥಾ ಸಂಕಲನ. ಪಾಶ್ಚಾತ್ಯ ಸಂಸ್ಕೃತಿಯ ನೇರ ಪ್ರಭಾವಕ್ಕೊಳಗಾಗಿರುವ ಆಧುನಿಕ ಭಾರತೀಯ ಸಮಾಜದಲ್ಲಿ ಗಂಡು- ಹೆಣ್ಣುಗಳ ನಡುವಣ ಸಂಬಂಧ, ವೈವಾಹಿಕ ವ್ಯವಸ್ಥೆ ಮತ್ತು ಕೌಟುಂಬಿಕ ಬದುಕುಗಳಲ್ಲಿ ಆಗಿರುವ ಬದಲಾವಣೆಯ ಯುಕ್ತಾಯುಕ್ತತೆಯ ಕುರಿತು ಈ ಕಥೆಗಳು ತಣ್ಣಗೆ ಸಂಶೋಧನೆ ನಡೆಸುವಂತಿವೆ.   […]

ಕೂರಿಗಿ ತಾಳು

ಪುಸ್ತಕ ಪರಿಚಯ ಕವಿತೆ ಭಾಷೆಯ ಉಪಯೋಗದ ಒಂದು ಕಲೆ. ಭಾಷೆಯ ಉಪಯೋಗದಲ್ಲಿ ಭಾಷೆಯ ಅರ್ಥದೊಂದಿಗೆ ಅಥವಾ ಅರ್ಥದ ಬದಲು ಸೌಂದರ್ಯ ಮತ್ತು ಭಾವನಾತ್ಮಕತೆಯನ್ನು ಹೊರತರುವ ಪ್ರಕಾರ ಇದು.ಕಾವ್ಯವೆನ್ನುವುದು ಹುಡುಕಾಟವಲ್ಲ, ಅದೊಂದು ಮಿಡುಕಾಟ. ಕಾವ್ಯದಲ್ಲಿ ಮನರಂಜನೆ, ಶ್ರೀಮಂತಿಕೆ ಮತ್ತು ಉದಾತ್ತತೆ ಇರಬೇಕು. ಅದನ್ನು ಓದಿದವರು ಮೊದಲಿಗಿಂತ ಬೇರೆಯದ್ದೇ ವ್ಯಕ್ತಿತ್ವ ಹೊಂದಿದವರಾಗಿರಬೇಕು. ಅಂತಹ   ಕಾವ್ಯ ಶ್ರೇಷ್ಠ ಕಾವ್ಯ ಎನಿಸಿಕೊಳ್ಳುತ್ತದೆ .  ಕಾವ್ಯದಲ್ಲಿ ಭಾವದ ಅತೀ ಸಾಮಾನ್ಯತೆ ಇದ್ದರೆ ಅದು ಕಾವ್ಯದ ದೋಷ. ಇದರ ಸೀಮೋಲ್ಲಂಘನ ಮಾಡಬೇಕು. ಅಂತೆಯೇ ಕಾವ್ಯದಲ್ಲಿ ಅಲಂಕಾರ […]

ಮೌನಯುದ್ಧ

ಪುಸ್ತಕ ಪರಿಚಯ ಮೌನ ಯುದ್ದ(ಕವನಸಂಕಲನ) ಕವಿ: ಸುರೇಶ್ ಎಲ್. ರಾಜಮಾನೆ ಪ್ರಕಾಶನ: ವಿಶ್ವ ಖುಷಿ ಪ್ರಕಾಶನ, ನವನಗರ ಬಾಗಲಕೋಟ. ಪುಟಗಳು: 92  ಬೆಲೆ: 120/- ಪ್ರಕಟಿತ ವರ್ಷ: 2018 ಕವಿಯ ಸಂಪರ್ಕ ಸಂಖ್ಯೆ: 8105631055          ಗಂಭೀರ ಕಾವ್ಯಾಧ್ಯಯನ ಮೂಲಕ ನಿರಂತರ ಅನುಸಂಧಾನದಲ್ಲಿ ತೊಡಗಿ ಕಾವ್ಯ ರಚನೆ ಕೃಷಿಗೆ ಮುಂದಾಗಿರುವ ರನ್ನಬೆಳಗಲಿಯ ಯುವಕವಿ ಸುರೇಶ್ ರಾಜಮಾನೆಯವರು “ಸುಡುವ ಬೆಂಕಿಯ ನಗು” ಎನ್ನುವ ಕೃತಿಯನ್ನು ಪ್ರಕಟಿಸುವ ಮೂಲಕ ಸಾಹಿತ್ಯ ಲೋಕವನ್ನು ಪ್ರವೇಶಿಸಿದರು. ಈಗ “ಮೌನಯುದ್ಧ”ದ ಮೂಲಕ ನಮ್ಮೊಂದಿಗೆ ಮಾತಿಗಿಳಿದಿದ್ದಾರೆ. […]

ಕಣ್ಣ ಮುಂದಿನ ಎರಡು ಮೌಲ್ಯಗಳು -ಎರಡು ದಾರಿಗಳು

ಪುಸ್ತಕ ವಿಮರ್ಶೆ ನಾಗರಾಜಹರಪನಹಳ್ಳಿ ಬಹಳ ದಿನಗಳಿಂದ ನನ್ನ ಕಾಡುತ್ತಿರುವ ವಿಷಯವನ್ನು ಇಲ್ಲಿ ಪ್ರಸ್ತಾಪಿಸುವೆ. ಒಂದು ದೇವನೂರು ಮಹಾದೇವ ಅವರ `ಎದೆಗೆ ಬಿದ್ದ ಅಕ್ಷರ’ ಕೃತಿ ಹಾಗೂ ಇನ್ನೊಂದು ಸಾರ್ವಜನಿಕರ ಕವಿ ಎಂದೇ ಹೆಸರಾಗಿದ್ದ ಡಾ.ಸಿದ್ದಲಿಂಗಯ್ಯ ಅವರ `ನನ್ನ ಜನಗಳು ಮತ್ತು ಇತರೆ ಕವಿತೆಗಳು’. ಕನ್ನಡದಲ್ಲಿ ಬಹಳ ಮಹತ್ವದ ಎರಡು ಕೃತಿಗಳ ಹೆಸರು ಹೇಳಿ ಅಂತ ಯಾರಾದರೂ ನನ್ನ ಪ್ರಶ್ನಿಸಿದರೆ ನಾನು ಮೊದಲು ಹೇಳುವ ಕೃತಿಗಳ ಹೆಸರು `ಎದೆಗೆ ಬಿದ್ದ ಅಕ್ಷರ’, `ನನ್ನ ಜನಗಳು’ ಕವಿತಾ ಸಂಕಲನ. ಯಾಕೆ […]

ನಾಡಿ ಮಿಡಿತದ ದಾರಿ

ಪುಸ್ತಕಪರಿಚಯ ಪುಸ್ತಕ : ನಾಡಿ ಮಿಡಿತದ ದಾರಿ 🩺(ವೈದ್ಯಲೋಕದ ಅನುಭವ ಕಥನಗಳು) ಲೇಖಕರು: ಡಾ|| ಶಿವಾನಂದ ಕುಬಸದಪ್ರಕಾಶನ: ನೀಲಿಮಾ ಪ್ರಕಾಶನಬೆಂಗಳೂರುಪುಟಗಳು: 160ಬೆಲೆ: ರೂ. 130/-ಪ್ರಕಟಿತ ವರ್ಷ: 2019ಲೇಖಕರ ದೂರವಾಣಿ: 9448012767 ವೃತ್ತಿಯಿಂದ ಪರಿಣತ ಶಸ್ತ್ರ ಚಿಕಿತ್ಸಕರಾಗಿ, ಜನಾನುರಾಗಿ ವೈದ್ಯರಾಗಿ, ವಿವಿಧ ವ್ಯಾಧಿಗಳ ಕುರಿತು ಜನತೆಗೆ ಮಾಹಿತಿ ನೀಡುವ ವಕ್ತಾರರಾಗಿ, ಗ್ರಾಮೀಣರ ಮೂಡನಂಬಿಕೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ಮನೋಭಾವ ಮೂಡಿಸುವ ಆಪ್ತ ಬಂಧುವಾಗಿ, ರೋಗಿಗಳ ಸೇವೆಯಲ್ಲಿ ದೇವರನ್ನು ಕಾಣುವ ಕಾಯಕ ಯೋಗಿಯಾಗಿ, ಸೃಜನಶೀಲ ಕವಿ, ಲೇಖಕರಾಗಿ ಒಂದು ಪ್ರದೇಶದ ಒಂದು […]

ಪ್ರೀತಿ ಮತ್ತು ಪ್ರೀತಿ ಮಾತ್ರ

ಪ್ರೀತಿ ಮತ್ತು ಪ್ರೀತಿ ಮಾತ್ರಲೇಖಕರು – ಜ್ಯೋತಿ ಗುರು ಪ್ರಸಾದ್ ಆರಂಭದ ಲೇಖನದಲ್ಲಿ ಪರಿಸರ ಹೋರಾಟಗಾತಿಯಾದ ದಿವಂಗತ ಕುಸುಮಾ ಸೊರಬ ಅವರ ಬಗ್ಗೆ ತಿಳಿಸುತ್ತಾ ಲೇಖಕಿಯು ಅವರ ಈ ಮಾತುಗಳನ್ನುಉಲ್ಲೇಖಿಸುತ್ತಾರೆ ಗಮನಿಸಿ – ” ಗಿಡ ಬೆಳೆಸಿದೆವನಿಗೆ ನರಕವಿಲ್ಲ” ಎಂಬ ಅಂಶ ಗರುಡ ಪುರಾಣದಿಂದಲೇ ಆರಂಭವಾಗಿ ಅಂದಿನ ಜನಜೀವನದ ದಿನನಿತ್ಯ ಕಾರ್ಯಕ್ರಮವಾಗಿತ್ತು. ಪರಿಸರ ರಕ್ಷಣೆ ಹಾಗೆಂದು ತಿಳಿದುಕೊಳ್ಳದೆಯೇ ಜೀವನದ ಆಂಗ ಆಗಿತ್ತು. ಈಗ ಮಾತ್ರ ಇದು ಫ್ಯಾಶನ್. ಮಳೆ – ಇಳೆ ಎಂಬ ಪೃಥ್ವಿಯನ್ನು ರಕ್ಷಣೆ ಮಾಡುವುದೇ […]

ಒಂದು ಮರ ನೂರು ಸ್ವರ

ಪುಸ್ತಕಸಂಗಾತಿ ಒಂದು ಮರ ನೂರು ಸ್ವರಭಾರತೀಯ ಸಣ್ಣಕಥೆಗಳುಎನ್ ಎಸ್ ಶಾರದಾಪ್ರಸಾದ್ಸಂಚಯ ಪ್ರಕಾಶನ ಈ ಪುಸ್ತಕ ಮುದ್ರಣದ ಹಂತದಲ್ಲಿದ್ದಾಗ ಶಾರದಾಪ್ರಸಾದರು ತೀರಿಕೊಂಡಿದ್ದು ದುಃಖದ ವಿಷಯ. ಅವರು ತಮ್ಮ ಬರವಣಿಗೆಯ ಬದುಕಿನುದ್ದಕ್ಕೂ ಆಯ್ದು ಪೋಣಿಸಿದ ಕಥೆಗಳಿವು. 1981 ರಿಂದ 2014 ರ ತನಕದ ಅವರ ಎಲ್ಲಾ ಅನುವಾದಿತ ಚೆಂದದ ಕತೆಗಳು ಇಲ್ಲಿವೆ. ರಾಜಾಜಿ (ಚಕ್ರವರ್ತಿ ರಾಜಗೋಪಾಲಾಚಾರಿ) ಅವರ, ಲೋಕನಾಯಕ ಜಯಪ್ರಕಾಶ ನಾರಾಯಣ್ ಅವರ ಅಪರೂಪದ ಕತೆಗಳೂ ಇಲ್ಲಿವೆ. ಒಟ್ಟೂ 51 ಕತೆಗಳು ಇಲ್ಲಿ ಕನ್ನಡಿಸಿವೆ‌.ಅಷ್ಟೇನೂ ಪರಿಚಿತರಲ್ಲದವರ ಕತೆಗಳೂ ಇಲ್ಲಿವೆ. ಕಳೆದ […]

ಅವ್ವ ಮತ್ತು ಅಬ್ಬಲಿಗೆ

ನನಗೆ  ಅವ್ವ ಮತ್ತು ಅಬ್ಬಲಿಗೆ  ಇಡೀ ಕವನ ಸಂಕಲನದಲ್ಲಿ ಲಂಕೇಶರ ಅವ್ವ ಆಧುನಿಕ, ನಗರವಾಸಿ ಅವ್ವನಾಗಿ  ಕಾಣುತ್ತಿದ್ದಾಳೆ.   ಅಬ್ಬಲಿಗೆಯಲ್ಲಿನ ಆಧುನಿಕ ಅವ್ವ  ನೌಕರಿ ಮಾಡುತ್ತಾ, ಗಂಡನ ಸಂಭಾಳಿಸುತ್ತಾ , ತವರು ಮನೆಯ ನೆನಪ ಮೆಲುಕು ಹಾಕುತ್ತಾ ,  ಆಧುನಿಕ ವೈರುದ್ಧ್ಯಗಳಿಗೆ ಮುಖಾಮುಖಿಯಾಗುತ್ತಾ ನಡೆಯುತ್ತಾಳೆ.  ಅನ್ಯಾಯಕ್ಕೆ ಕವಿತೆಯ ಮೂಲಕ ಸಣ್ಣ ಧ್ವನಿಯಲ್ಲಿ ಅತ್ಯಂತ ಖಚಿತವಾಗಿ ವ್ಯವಸ್ಥೆಯನ್ನು ಟೀಕಿಸುತ್ತಾಳೆ. ದೇವರು, ದೇವಾಲಯ,ಯುದ್ಧ ಗಳ ನಿರರ್ಥಕತೆಯನ್ನು  ಬಿಡಿಸಿಡುತ್ತಾಳೆ. ಹೆಣ್ಣಿನ ಅಂತರಂಗದ ತಳಮಳಕ್ಕೆ ಭಾಷ್ಯ ಬರೆಯುತ್ತಾಳೆ. ಆಧುನಿಕ ಯಶೋಧರೆಯ ಅಂತರಂಗವನ್ನು ಇವತ್ತಿನ ಅಕ್ಷರಸ್ಥ […]

ಪುಸ್ತಕ ಸಂಗಾತಿ

ಆಲದ ನೆರಳು ಈ ಕಥಾ ಸಂಕಲನದಲ್ಲಿ ಒಟ್ಟು ಹನ್ನೆರಡು ಕಥೆಗಳಿವೆ. ಕತೆಗೆ ಬೇಕಾದ ವಸ್ತು, ಅದರಲ್ಲಿ ತುಂಬಿಕೊಳ್ಳುವ ಪಾತ್ರಗಳು, ಪ್ರಾದೇಶಿಕ ಭಾಷೆಯ ಸೊಗಡು,ಅದರ ನಿರ್ವಹಣೆ, ಅನಿರೀಕ್ಷಿತ ತಿರುವುಗಳು, ಕಾಡುವ ಪಾತ್ರಗಳ ಹೆಣಿಗೆ, ಕೃತಕತೆಯಲ್ಲೂ ಮೈಮರೆಯದ ವಾಸ್ತವೀಕತೆ… ಇವುಗಳಿಂದ ಮಧುರಾ ಅವರು ಕತೆಗಳ ಮೂಲಕ ನಮ್ಮನ್ನು ಬಂಧಿಸಿಡುವಲ್ಲಿ ಯಶಸ್ವಿ ಆಗಿದ್ದಾರೆ. ಆಲದ ನೆರಳು – ಪುರುಷ ಪ್ರಧಾನ ಸಮಾಜದಲ್ಲಿ ಎರಡು ಹೆಣ್ಣು ಜೀವಗಳು ಸಾಂಸ್ಕೃತಿಕವಾಗಿ ನಲುಗಿ,ಕೊರಗಿ ಹೋಗುವ ಕಥಾ ಹಂದರ ಹೊಂದಿದೆ. ‘ ಬರೀ ನೆರಳಿದ್ರೆ ಉಳಕಿ ಗಿಡಗೋಳು […]

Back To Top