ಪುಸ್ತಕ ಸಂಗಾತಿ
ಬಣ್ಣದ ಜೋಳಿಗೆ ಬಣ್ಣದ ಜೋಳಿಗೆ ಸ್ನೇಹಾ ಪಬ್ಲಿಕೇಶನ್ಸ್ ಗಾಯಿತ್ರಿ ರಾಜ್ “”ಬಣ್ಣದ ಜೋಳಿಗೆ “” ಗಾಯತ್ರಿ ರಾಜ್ ಅವರ ಮೊದಲ ಕಥಾ ಸಂಕಲನ, ಚೊಚ್ಚಲ ಪುಸ್ತಕ,ಒಂದೇ ದಿನದಲ್ಲಿ ಬರೆಯಬಹುದುದಾದ ಅನಿಸಿಕೆಗೆ ಮೂರು ದಿನಾ ತಗೊಂಡೆ ಅಂದ್ರೆ ನಾನು ಬರೆಯೋದು “ಆರು ಹೆತ್ತೋಳಿಗೆ ಮೂರು ಹೆತ್ತೋಳು ಹದ ಹೇಳಿದಂತೆ”” ಆಗತ್ತೇನೋ ಅನ್ನಿಸಿ, ತಡ ಮಾಡಿದೆ, ನನ್ನ ತಿಳಿವಿನ ಮಟ್ಟಕ್ಕೆ, ಯಾವ ಅತಿಶಯೋಕ್ತಿ ಪೂರ್ವಗ್ರಹ ಇಲ್ಲದೇ ಬರೆದಿರುವೆ, ಗುಣಕ್ಕೆ ಮತ್ಸರ ಏಕೆ?? ಅಲ್ವಾ..ಪೂರ್ಣ ಪ್ರಮಾಣದಲ್ಲಿ ಬರಹಕ್ಕೆ ಕುಳಿತರೆ ಒಳ್ಳೇ ಸಾಹಿತಿ […]
ಪುಸ್ತಕ ಸಂಗಾತಿ
ದೃಷ್ಟಾಂತದ ಮೂಲಕ ನೀತಿಯ ಬೋಧನೆ. ಸೋಮೇಶ್ವರ ಶತಕ ಕೃತಿ : ಸೋಮೇಶ್ವರ ಶತಕಪುಲಿಗೆರೆ ಸೋಮನಾಥ.ಕನ್ನಡ ಸಾಹಿತ್ಯ ಪರಿಷತ್ತು.ಚಾಮರಾಜಪೇಟೆ.ಬೆಂ.ಮರು ಮುದ್ರಣ:೨೦೨೦.ಬೆಲೆ :೬೦. ಪುಸ್ತಕ ಪರಿಚಯ: ಕೃತಿ: *ಸೋಮೇಶ್ವರ ಶತಕಪುಲಿಗೆರೆಯಸೋಮನಾಥ ನಾವೆಲ್ಲಾ ಶಾಲೆಯಲ್ಲಿ ಕಲಿಯುವಾಗ ಕನ್ನಡ ಪಠ್ಯಪುಸ್ತಕದಲ್ಲಿ ‘ ಹರಹರಾ ಶ್ರೀಚೆನ್ನ ಸೋಮೇಶ್ವರ ‘ ಎಂದು ಕೊನೆಗೆ,ಮತ್ತೆ ಮತ್ತೆ ರಾಗವಾಗಿ ಹಾಡುವ ಪದ್ಯಗಳನ್ನು ಓದಿಯೇ ಇದ್ದೇವೆ.ಈಗಲೂ ಒಂದರಿಂದ ಹನ್ನೆರಡನೆ ತರಗತಿಯ ವರೆಗಿನ ಕನ್ನಡ ಪಠ್ಯದಲ್ಲಿ, ಎರಡು ಮೂರು ಪಠ್ಯಗಳಲ್ಲಾದರೂ ಈ ಬಗೆಯ ಪದ್ಯಗಳಿವೆ.ಇವು ಪುಲಿಗೆರೆ ಸೋಮೇಶ್ವರನ ಶತಕದಿಂದ ಆರಸಿ ಇಡುತ್ತಿದ್ದ […]
ಪುಸ್ತಕ ಸಂಗಾತಿ
ಎದೆಯ ಕದ ತೆರೆದಾಗ. “ಎದೆಯ ಕದವ ತೆರೆಯುತಿರೆ| ಒಳಗೆ ಬೆಳಕು ಹರಿಯಿತು|ಹೂಗಳೆಸಳು ಬಿರಿಯುತಿರೆ |ತುಂಬಿ ಹಾಡು ಮೊರೆಯಿತು”——ಕವಿ ಕಯ್ಯಾರರ ‘ಯುಗಾದಿ’ ಕವನದ ಸಾಲುಗಳಿವು.ಯುಗಾದಿ ಸಮೃದ್ಧಿಯ ಸಂಕೇತ.ಪ್ರಕೃತಿ-ಮಾನವ ಅನುಸಂಧಾನದ ಪ್ರತೀಕ.ಕವಿಗಳು ಪರಿಸರ ಪ್ರೇಮಿಗಳು.ಮಣ್ಣಿನಲ್ಲಿ ಸ್ವರ್ಣವನ್ನು, ಶಿಲೆಯಲ್ಲಿ ಶಿಲ್ಪವನ್ನು ಕಾಣುವವರು.ಎದೆಯ ಕದ ತೆರೆದು ಆತ್ಮದ ಮಿಂಚನ್ನು ಹೊಳೆಯಿಸುವವರು.ಅಂತರಂಗದ ಬೆಳಕಲ್ಲಿ ಬಹಿರಂಗವನ್ನು ಬೆಳಗಿಸುವವರು.ಮೊಗ್ಗು ಹೂವಾಗಿ ದಳ ಬಿರಿದು ನಿಂತಾಗ ಒಂದು ರೀತಿಯ ನಿಸ್ವನ.ಹೂವಿನ ಮಕರಂದ ಹೀರುವ ದುಂಬಿಗಳು,ಝೇಂಕಾರದ ನಾದಮಯತೆ,ನವನವೋನ್ಮೇಷ, ಮಾಧುರ್ಯದ ಮೊರೆತಕ್ಕೆ ಮನವರಳುವುದು ಸಹಜ.ಹೀಗೆ ರವಿ ಕಾಣದ್ದನ್ನು ಕವಿ ಕಂಡೇ ಕಾಣುತ್ತಾನೆ […]
ಪುಸ್ತಕ ಸಂಗಾತಿ
ನಾನು ಮತ್ತು ಆಕಾಶ ಡಾ.ಧನಂಜಯ ಕುಂಬ್ಳೆ ಕವಿಮಿತ್ರ ಡಾ.ಧನಂಜಯ ಕುಂಬ್ಳೆಯವರ ‘ನಾನು ಮತ್ತು ಆಕಾಶ’ ವಿಮರ್ಶಾ ಸಂಕಲನದ ಬರಹಗಳನ್ನು ಮರುಓದುವ ಅವಕಾಶ ಲಭಿಸಿದೆ. ಹದಿನಾರು ವರ್ಷಗಳ ಹಿಂದೆ ಪುಟ ತಿರುವಿ ದೃಷ್ಟಿ ಹಾಯಿಸಿದ್ದೆ ಅಷ್ಟೆ. ಈಗ ಅನುಭವಿಸಿದ ಸಾರ್ಥಕ ಭಾವ. ೨೦೦೩ರಲ್ಲಿ ಮೂಡಬಿದಿರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪುಸ್ತಕ ಪ್ರಕಾಶನ ಧನಸಹಾಯ ಯೋಜನೆಯಲ್ಲಿ ಆಯ್ಕೆಯಾದ ಈ ಕೃತಿಯನ್ನು ಪುತ್ತೂರಿನ ಅನನ್ಯ ಪ್ರಕಾಶನ ಹೊರ ತಂದಿದೆ. ಧನಂಜಯ ಅವರ ಭಾವಗಳು, ಸಂವೇದನೆಗಳು, […]
ಪುಸ್ತಕ ಸಂಗಾತಿ
ಹಾಲಕ್ಕಿ ಕೋಗಿಲೆ ಮಾರ್ಚ್ ತಿಂಗಳಿನಲ್ಲಿ ಬರಹ ಓಡಾಟ ಎಂದುಕೊಂಡು ಸದಾ ಕೆಲಸದ ಒತ್ತಡದಲ್ಲಿದ್ದ ನನಗೆ ಒಮ್ಮೆಲೆ ಅನಿರೀಕ್ಷಿತವಾಗಿ ಕೋವಿಡ- 19 ನಿಂದಾಗಿ ಲಾಕ್ಡೌನ ಆದಾಗಿನಿಂದ ಮಾನಸಿಕ ಗೊಂದಲ.ಭಯದಿಂದ ಮನೆಯ ನಾಲ್ಕು ಗೋಡೆಗಳ ನಡುವೆ ಸುಧಾರಿಸಿಕೊಳ್ಳಲು ಕೆಲವು ದಿನಗಳು ಬೇಕಾದವು.ಬಳಿಕ ನಾವೆಲ್ಲ ನಮ್ಮ ಆಸಕ್ತಿಗೆ ತಕ್ಕಂತೆ ಮನಸ್ಸು ಪ್ರಪುಲ್ಲಗೊಳಿಸಿಕೊಳ್ಳಲು ಮಾರ್ಗ ಹುಡುಕುತ್ತಿದ್ದಾಗ ಕಣ್ಣಿಗೆ ಬಿದ್ದದ್ದು ಅಕ್ಷತಾಕೃಷ್ಣಮೂರ್ತಿ ಅವರ ಹಾಲಕ್ಕಿ ಕೋಗಿಲೆ. ಮುಖಪುಟದಲ್ಲಿದ್ದ ಮುಗ್ಧ ನಗುವಿನ ಸುಕ್ರಜ್ಜಿಯನ್ನು ಕಂಡ ಮೇಲಂತೂ ಒಂಥರಾ ಖುಷಿ. ಇದಕ್ಕೆ ಒಂದು ತಿಂಗಳ ಮೊದಲಷ್ಟೆ ಬಡಗೇರಿಯ […]
ಪುಸ್ತಕ ಸಂಗಾತಿ
“ಪಮ್ಮಿ” ಹನಿಗವಿತೆಗಳು ಕನ್ನಡದಲ್ಲಿ ಚುಟುಕು ಸಾಹಿತ್ಯಕ್ಕೆ ಮಹತ್ವದ ಸ್ಥಾನವಿದೆ.ನಮ್ಮಜನಪದ ತ್ರಿಪದಿಗಳು ಮೂರೆ ಸಾಲಿನಲ್ಲಿ ಥಟ್ ಅಂತ ಒಂದು ವಸ್ತುವಿಷಯದ ಮೇಲೆ ಬೆಳಕು ಚೆಲ್ಲಿ ಬೆಳಗಿಸಿಬಿಡುವ ಮಿಣುಕು ಹುಳುಗಳಂತಹವು.ಜೀವನಾನುಭವದಿಂದ ಮೂಡಿದ ನುಡಿಮುತ್ತುಗಳು.ಹೊಸಗನ್ನಡದಲ್ಲಿ ಚುಟುಕುಗಳ ಬ್ರಹ್ಮನೆಂದೆ ಖ್ಯಾತರಾದ ದಿನಕರ ದೇಸಾಯಿ ಅವರ ದ್ವಿಪದಿ, ಬೀಚಿ ಅವರ ಹಾಸ್ಯದ ಚುಟುಕುಗಳು,ದುಂಡೀರಾಜ್ ಅವರ ಪಂಚ್ ಗಳು ಪ್ರಸಿದ್ದಿಯಾದವು.ಡಿ.ವಿ.ಜಿ ಅವರ ಮಂಕುತಿಮ್ಮನ ಕಗ್ಗದ ಕಂದ ಪದ್ಯಗಳು ತಾತ್ವಿಕ ವಿಚಾರಗಳನ್ನು ತುಂಬಿಕೊಂಡೆ ತೆನೆಗಳು.ಚುಟುಕುಗಳ ಮುಖ್ಯ ಲಕ್ಷಣವೇ ಯಾವ ವಿಷಯವನ್ನಾದರೂ ಪರಿಣಾಮಕಾರಿಯಾಗಿ ಚಿಕ್ಕದಾಗಿ ಚೊಕ್ಕಾವಾಗಿ ಭಾವ ಸ್ಪುರಿಸುವಂತೆ […]
ಪುಸ್ತಕ ಸಂಗಾತಿ
ಕಾನನದ ಸುಮ ಶ್ರೀ ಉಮೇಶ ಮುನವಳ್ಳಿಯವರ‘ಕಾನನದ ಸುಮ’ ಕವನ ಸಂಕಲನ. ಸಾಹಿತ್ಯ ನಿರ್ಮಾಣದ ಪರಮ ಉದ್ದೇಶ ಒಳ್ಳೆಯದನ್ನು ಹೇಳುವುದು, ಒಳ್ಳೆಯದನ್ನು ಮಾಡಲು ಪ್ರೇರೇಪಿಸುವುದು ಮತ್ತು ಮುಂದಿನವರಿಗೆ ಸಾಗಿಸಿ ಸಾಗುವುದು. ಸಾಹಿತ್ಯ ವಸ್ತು ಯಾವುದೇ ಇರಲಿ, ಅದರ ಹಿಂದೆ ನಿಸರ್ಗವಿರುತ್ತದೆ ಮತ್ತು ಜಗತ್ತು ಇರುತ್ತದೆಯೆಂಬುದನ್ನು ಮರೆತು ಬರೆದರೆ ಅಂಥ ಸಾಹಿತ್ಯಕ್ಕೆ ಭವಿಷ್ಯವಿರುವುದಿಲ್ಲ. ಕವಿತೆಯಲ್ಲಿ ಉತ್ತಮ ಕವಿತೆ, ಕೆಟ್ಟ ಕವಿತೆ ಎಂಬುದಿರುವುದಿಲ್ಲ, ಅದು ಕವಿತೆ ಹೌದೋ ಅಲ್ಲವೋ? ಎಂಬುದಷ್ಟೇ ಗಣನೆಗೆ ಬರುತ್ತದೆ. ಅದು ಹೌದಾದರೆ ಉತ್ತಮವಾಗಿಯೇ ಇರುತ್ತದೆ. ಯಾವುದಕ್ಕೂ ಕಮಿಟೆಡ್ […]
ಪುಸ್ತಕ ಸಂಗಾತಿ
ಬಾಗಿಲು ತೆರೆಯೇ ಸೇಸಮ್ಮ ಬಾಗಿಲು ತೆರೆಯೇ ಸೇಸಮ್ಮವೈಚಾರಿಕ ಲಲಿತ ಪ್ರಬಂಧಗಳುಲೇಖಕರು- ಶರತ್ ಭಟ್ ಸೇರಾಜೆಅಂಕಿತ ಪುಸ್ತಕ ಅಂಕಿತ ಪ್ರತಿಭೆ ಮಾಲಿಕೆ-5 ಅಡಿಯಲ್ಲಿ ಅದರ ಸಂಪಾದಕರಾದ ಜೋಗಿಯವರು ಶರತ್ ಭಟ್ಟರನ್ನು ಗುರುತಿಸಿ ಈ ಕೃತಿಯನ್ನು ಪ್ರಕಟಿಸಲು ಅನುವು ಮಾಡಿಕೊಟ್ಟಿದ್ದಾರೆ.ಶರತರ ಈ ಎಲ್ಲಾ ಹದಿನೈದು ಪ್ರಬಂಧಗಳು ಈ ಗೌರವಕ್ಕೆ ಅರ್ಹವಾಗಿವೆ. ಈ ಲೇಖನಗಳನ್ನು ಓದಿದಾಗ ಅವರು ಅಪಾರವಾಗಿ ಓದಿಕೊಂಡವರು ಎಂಬುದೂ ಗೊತ್ತಾಗುತ್ತದೆ.ಬಳಸಿದ ಭಾಷೆ ಬಹಳ ಚೆನ್ನಾಗಿದೆ.ಅವರ ತರ್ಕ, ತಮಾಷೆ ಮತ್ತು ವಿಷಯವನ್ನು ವಿವರಿಸಲು ಕೊಡುವ ಉದಾಹರಣೆಗಳು ವಿಶಿಷ್ಟವಾಗಿವೆ. ಗುರುತ್ವದ ಅಲೆ […]
ಪುಸ್ತಕ ಸಂಗಾತಿ
ಪುಸ್ತಕ: ಫೂ ಮತ್ತು ಇತರ ಕಥೆಗಳು ಲೇಖಕರು: ಮಂಜುನಾಯಕ ಚಳ್ಳೂರು ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಳ್ಳೂರಿನವರಾದ ಮಂಜುನಾಯಕ ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಲಿತು ಕೆಲಕಾಲ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಕಲರ್ಸ್ ಸೂಪರ್ ಕನ್ನಡ ವಾಹಿನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಸೃಜನಶೀಲ ಲೇಖಕರಾದ ಮಂಜುನಾಯಕ ಅವರ ಮೊದಲ ಕಥಾ ಸಂಕಲನ ಇದು. ಇಲ್ಲಿನ ಫೂ, ಖತಲ್ ರಾತ್ರಿ ಹಾಗೂ ತೇರು ಸಾಗಿತಮ್ಮ ನೋಡಿರೆ ಎಂಬ ಮೂರು ಕಥೆಗಳಿಗೆ ೨೦೧೮ರ ಟೊಟೊ ಯುವ ಪುರಸ್ಕಾರ ಲಭಿಸಿದೆ. ಅಹರ್ನಿಶಿ ಪ್ರಕಾಶನದಿಂದ […]
ಪುಸ್ತಕ ಸಂಗಾತಿ
ವಿಮುಕ್ತೆ ಪುಸ್ತಕ: ವಿಮುಕ್ತೆ ಲೇಖಕರು: ಓಲ್ಗಾ ಅನುವಾದಕರು: ಅಜಯ್ ವರ್ಮ ಅಲ್ಲೂರಿ ‘ವಿಮುಕ್ತ’ ತೆಲುಗಿನ ಖ್ಯಾತ ಸ್ತ್ರೀವಾದಿ ಲೇಖಕಿ ಓಲ್ಗಾ ಅವರ ಬಹುಚರ್ಚಿತ ಕೃತಿಗಳಲ್ಲಿ ಒಂದು. ಓಲ್ಗಾ ಎಂಬ ಹೆಸರಿನಿಂದಲೇ ದೇಶದಾದ್ಯಂತ ಗುರುತಿಸಿಕೊಂಡಿರುವ ಪೋಪೂರಿ ಲಲಿತ ಕುಮಾರಿಯವರು ಮೂಲತಃ ಆಂಧ್ರಪ್ರದೇಶದ ಗುಂಟೂರಿನವರು. ತೆಲುಗಿನ ಖ್ಯಾತ ಸ್ತ್ರೀವಾದಿ ಲೇಖಕಿ, ಚಿಂತಕಿ, ಅನುವಾದಕಿ, ಹಾಗೂ ಮಹಿಳಾ ಹಕ್ಕುಗಳ ಹೋರಾಟಗರ್ತಿಯಾಗಿರುವ ಇವರು ಪ್ರಸ್ತುತ ತೆಲುಂಗಾಣದ ಸಿಕಂದ್ರಾಬಾದಿನಲ್ಲಿ ನೆಲೆಸಿದ್ದಾರೆ. ಸ್ವೇಚ್ಛ, ನೀಲಿ ಮೇಘಾಲು, ರಾಜಕೀಯ ಕಥಲು, ಮಾಕು ಗೋಡಲು ಲೇವು, ಪ್ರಯೋಗಂ, […]