Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ನಾನು ಓದಿದ ಪುಸ್ತಕ

ವಿರಹಿ ದಂಡೆ ಬಾನಿಗೂ ಭೂವಿಗೂ ಸಾಕ್ಷಿಯಾಗಲಿ ಕಡಲಂಚಿನಾ ವಿರಹಿ ದಂಡೆ….  ಯುಗಯುಗಗಳು ಜಾರಿದರೂಪ್ರೀತಿಯಭಾಷೆಯೆಂದಿಗೂ ಬದಲಾಗದಿರುವುದು‌ ಸರ್ವಕಾಲಿಕ ಸತ್ಯ. ಹಠಾತ್ ಸುರಿದ ಮಳೆಗೆ ದಂಡೆ ನಾಚಿದೆಎಂಬ ಕವಿ ನುಡಿಯಂತೆ                                            ಕಣ್ಣಂಚಿನಕುಡಿನೋಟಅರಿಯುವುದುಎದೆಯುಸಿರಬಡಿತಗಳು…..ಕಂಗಳಿಗೂ ಭಾರವಾದ ಮನ ಹೃದಯದಲ್ಲಿ ಮಿಡಿಯುವುದು..ಎಂಬಂತೆ.. ಬಹುತೇಕ ಮನಸುಗಳು ಮೀನಿನಂತೆ..! ಕಡಲಾಚೆ ದಂಡೆಯಲಿ ವಿಲವಿಲ ಒದ್ದಾಡಿ,ವಿರಹದಲಿ ಬೆಂದಂತೆ..!.. ಆತ್ಮೀಯ ಸಹೃದಯಿ ,ಇದ್ದುದನ್ನು ಇದ್ದ ಹಾಗೆ ವರದಿ ನೀಡಿ ಮನವನ್ನು ಹಗುರಮಾಡಿಕೊಳ್ಳುವ,ಅನ್ಯಾಯದ ವಿರುದ್ಧ ಒಂಟಿಯಾಗಿಯಾದರೂ ಹೋರಾಟಮಾಡುವ,ಮೃದುಸ್ವಭಾವದಮನೋಭಾವಹೊಂದಿರುವಕವಿಮಿತ್ರ,ಪತ್ರಕರ್ತ   ಶ್ರೀ ನಾಗರಾಜಹರಪನಹಳ್ಳಿಯವರ ಮುದ್ದಾದಕವನ ಸಂಕಲನ *ವಿರಹಿ ದಂಡೆ** ಕೈಸೇರಿದಾಗ ಕುತುಹಲ… ಎಲೆಗಳು ಉದುರುವ […]

ನಾನು ಓದಿದ ಪುಸ್ತಕ

ದುರಿತಕಾಲದ ದನಿ ವರ್ತಮಾನದ ಕಷ್ಟಕಾಲದ ಕವಿತೆಗಳು! ಕೃತಿ: ದುರಿತಕಾಲದ ದನಿ ಕವಿ: ಕು.ಸ.ಮಧುಸೂದನ, ರಂಗೇನಹಳ್ಳಿ ಪ್ರಕಾಶನ: ವಿಶ್ವಶಕ್ತಿ ಪ್ರಕಾಶನ ರಾಣೇ ಬೆನ್ನೂರು ಪುಟ: 72 ಬೆಲೆ: 100/-       ಕು.ಸ.ಮಧುಸೂದನ ರಂಗೇನಹಳ್ಳಿ ಯವರ ’ದುರಿತಕಾಲದ ದನಿ’ ಹೆಸರೇ ಹೇಳುವಂತೆ ವರ್ತಮಾನದ ವಾಸ್ತವವನ್ನೆಲ್ಲಾ ಸಾರಾಸಗಟಾಗಿ, ತುಸು ಕಟುವೇ ಎನಿಸುವ ಶೈಲಿಯಲ್ಲಿ ಬರೆಸಿಕೊಂಡ ಕವಿತೆಗಳ ಸಂಕಲನ.    ‘ನನ್ನ ಕವಿತೆ ಕುರಿತಂತೆ’ ಎ಼ಂದು ತಮ್ಮ ಕವಿತೆಗಳ ಬಗ್ಗೆ ತಮ್ಮದೇ ಶೈಲಿಯ ವಿವರಣೆಯೇ ಅದ್ಭುತವಾಗಿದೆ.. ಅವರ ಮಾತುಗಳಲ್ಲೇ ಹೇಳಬೇಕೆಂದರೆ “ಒಂದು ಕಡೆ […]

ನಾನು ಓದಿದ ಪುಸ್ತಕ

ಪ್ರೇಮ ತಪಸ್ವಿನಿ ಚಿತ್ರಾoಗದೆ. ಎಸ್.ಪಿ.ವಿಜಯಲಕ್ಷ್ಮಿ “”ಪ್ರೇಮ ತಪಸ್ವಿನಿ  ಚಿತ್ರಾoಗದೆ “”–ಲೇಖಕಿ  S P ವಿಜಯಲಕ್ಸ್ಮಿ, ಇವರ ಕೆಲವು ಕವಿತೆ ಓದಿರುವೆ, ಪ್ರವಾಸ ಕಥನದ ಲೇಖನಗಳೂ ನನಗೆ ತುಂಬಾ ಇಷ್ಟವಾದವು, ಇದೀಗ ಹೇಳಹೊರಟದ್ದು ಮನಸೂರೆಗೊಂಡ ಚಿತ್ರಾoಗದೆಯ ಬಗ್ಗೆ….        ನಂಗೆ ಪೌರಾಣಿಕ ಕಥನಗಳೆಂದರೆ ಮೊದಲಿಂದಲೂ ತೀರದ ಆಕರ್ಷಣೆ, ಮತ್ತೆ ಮತ್ತೆ  ಪ್ರತಿ ಬಾರಿಯೂ ಓದಿದಾಗಲೂ ಹೊಸ ಹೊಸ ಆಯಾಮಗಳೂ ಹೊಸಬೆಳಕ ಚೆಲ್ಲುತ್ತಲೇ ಇರುತ್ತವೆ, ಅದರಲ್ಲೂ ಹೆಣ್ಣು ಪಾತ್ರಗಳು ಒಂದೊಂದರ ಮೇಲೂ ನೂರೆಂಟು ರೀತಿಯ ಭಾವಗಳು ಮುಡುತ್ತವೆ, ನಂಗೆ ಈ  […]

ನಾನು ಓದಿದ ಪುಸ್ತಕ

ಶಬರಿ ಬರಗೂರು ರಾಮಚಂದ್ರಪ್ಪ                          ಜಗತ್ತಿನಾದ್ಯಂತ ಕರೋನಾ ತಂದ  ಬೀಕರ  ಆತಂಕ  ,ಸಾವು. ನೋವುಗಳ , ವಿಷಾದ , ಈ  ಭಯಗ್ರಸ್ಥ ಸನ್ನಿವೇಶದಿಂದ ಪಾರಾಗಲು  ದೇಶವಾಸಿಗಳಿಗೆ  ವಿಧಿಸಿದ  ಲಾಕ್ ಡೌನ್  ಎಂಬ ಬಂದ್  ನಿಂದಾಗಿ  ದೊರೆತ ಬಿಡುವಿನ ಸಮಯಕ್ಕೆ  ಜೊತೆಯಾದುದು ” ಶಬರಿ “_ ಎಂಬ  ಕಾದಂಬರಿ.         ಈ   ನಾಡು ಕಂಡ ಹೆಸರಾಂತ ಚಲನಚಿತ್ರ ನಿರ್ದೇಶಕರು , ನಟರೂ , ಸಾಹಿತಿಗಳೂ , ಬರಹಗಾರರೂ ಆಗಿ ಹೆಸರು ಮಾಡಿರುವ  ಹಿರಿಯರೂ ಆಗಿರುವ ಡಾ// ಬರಗೂರ್ ರಾಮಚಂದ್ರ […]

ಪುಸ್ತಕ ವಿಮರ್ಶೆ

ಮಾಯಾ ಕನ್ನಡಿ ಕಮಲಾ ಹೆಮ್ಮಿಗೆ ಕಮಲಾ ಹೆಮ್ಮಿಗೆಯವರ ‘ಹೊಸತಾದ ಸ್ತ್ರೀ‌ ಪ್ರಪಂಚ’ವೇ ಆಗಿದೆ ಈ‌ ‘ಮಾಯಾಕನ್ನಡಿ’ ಎಂಬ ಕಥೆಗಳ ಸಂಕಲನ..! ಸಾಹಿತ್ಯದ ವಿವಿಧ ಪ್ರಕಾರಗಳಿಗೆ ತಮನ್ನು ಒಡ್ಡಿಕೊಂಡಿರುವ ಲೇಖಕಿ ಕಮಲಾ ಹಮ್ಮಿಗೆಯವರು ಇದುವರೆಗೆ ಒಂಬತ್ತು ಅನುವಾದಿತ ಕೃತಿಗಳನ್ನು ಕೊಟ್ಟಿದ್ದಾರೆ. ನಾನಾ ಕಾರಣದಿಂದ ಕೇರಳದಲ್ಲಿ ನೆಲೆಸಿದ್ದರಿಂದ ಇವರು ಮಲೆಯಾಳೀ ಸ್ತ್ರೀ ಸಂಕಥನಗಳಿಗೆ ಕೈಹಚ್ಚಿದರು. ‘ಚಿರು ಕಥ’ ಎಂದು ಕರೆಸಿಕೊಳುವ ಸಣ್ಣ ಕಥೆಗಳ ಪ್ರಖರತೆ ಮನಗೊಂಡು ಅತ್ತಿ ಹಣ್ಣಿನಂಥ ಹೆಣ್ಣಿನ ಬದುಕನ್ನು — ಅಂದರೆ ಮೇಲೆ ಆಕರ್ಷಕವಾಗಿದ್ದು ಒಳಗೆ ಅರೆಕೊರೆಯಿದ್ದರೂ […]

ನಾನು ಓದಿದ ಪುಸ್ತಕ

ಒಡಲಾಳ ದೇವನೂರು ಮಹಾದೇವ ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಕೆಲವು ಕಥೆಗಳು ಸಾರ್ವಕಾಲಿಕ. ಈ ಕೊರೋನಾ ರಜೆಯಲ್ಲಿ ನಾನು ಓದಿದ ಈ ಕಥೆ ತನ್ನ ಒಡಲಾಳದ ಬದುಕನ್ನ ತುಂಬ ಅದ್ಭುತವಾಗಿ ಹೇಳುವ ‘ದೇವನೂರು ಮಹಾದೇವ’ ಅವರ ರಚಿತ ‘ಒಡಲಾಳ’. ನಾನು ಚಿಕ್ಕವಳಿದ್ದಾಗ ಅಜ್ಜಿ ಮನೆ ಮೂಡಿಗೆರೆಯ ಹತ್ತಿರದ ಹೊಸಮನೆಯಲ್ಲಿ ಕೆಲಕಾಲ ಇದ್ದೆ. ನಾವು ಅವರನ್ನು ‘ಹೊಸಮನೆ ಅಜ್ಜಿ’ ಎಂದೇ ಸಂಬೋಧಿಸುತ್ತಿದ್ದದ್ದು. ಆಗ ಅಜ್ಜಿ ಅವರ ಕಷ್ಟ ಕಾಲದ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದರು. ಒಂದೊತ್ತಿನ ಊಟಕ್ಕೂ ಕಷ್ಟಪಡುವಂತ ಕಾಲ ಅದು. ಅವ್ರ […]

ನಾನು ಓದಿದ ಪುಸ್ತಕ

ಹಾಣಾದಿ ಕಪಿಲ ಪಿ.ಹುಮನಾಬಾದ ಕೆಚ್ಚೆದೆಯ ಹೋರಾಟ “ಹಣಾದಿ”. ಹೌದು ಕೆಲವು ದಿನಗಳ ಹಿಂದೆ ಅಬ್ದುಲ್ ಹೈ (ಹೈ.ತೋ) ರವರ ಕಾವ್ಯಮನೆ  ಪ್ರಕಾಶನದಲ್ಲಿ ಮುದ್ರಿತವಾಗಿ ಲೇಖಕರು ಮಿತ್ರರಾದ “ಕಪಿಲ್ ಹುಮನಾಬಾದಿ” ರವರ “ಹಣಾದಿ” ಕಿರು ಕಾದಂಬರಿ ಲೋಕಾರ್ಪಣೆ ಗೊಂಡು ಓದುಗರನ್ನು ತನ್ನತ್ತ ಸೆಳೆದಿದೆ ಅದರಲ್ಲಿ ನಾನು ಒಬ್ಬ. ಅತಿ ಚಿಕ್ಕ ವಯಸ್ಸಿನಲ್ಲಿ ಅನುಭವಿ ಲೇಖಕನಂತೆ ಅದ್ಭುತವಾಗಿ ಹೆಣೆದಿದ್ದಾರೆ. ಬಾದಾಮು ಗಿಡದ  ಸುತ್ತ ಕತೆ ಹೆಣೆದ ರೀತಿ ವಿಶೇಷ ಎನ್ನವಂತಿದೆ. ಅಪ್ಪನನ್ನು ನೋಡಲು ಹಳ್ಳಿಗೆ ಮರಳಿದ ಮಗನಿಗೆ ಕಂಡಿದ್ದು ವಿಚಿತ್ರವಾದ […]

ನಾನು ಓದಿದ ಪುಸ್ತಕ

ನಕ್ಷತ್ರ ಸೂಕ್ತ  ಡಾಕ್ಟರ್ ಅನಸೂಯಾದೇವಿ  ನಕ್ಷತ್ರ ಸೂಕ್ತ  ಲೇಖಕಿ ಡಾಕ್ಟರ್ ಅನಸೂಯಾದೇವಿ  ಪ್ರಕಾಶಕರು ಶ್ರೀ ಅನ್ನಪೂರ್ಣ ಪ್ರಕಾಶನ ಅಗ್ರಹಾರ ದಾಸರಹಳ್ಳಿ ಬೆಂಗಳೂರು ೫೦೦೦೭೯  ಮೊದಲ ಮುದ್ರಣ ೨೦೧೪ ಬೆಲೆ ರೂ.೧೫೦/ ಮೂರು ಪ್ರಬುದ್ಧ ಮುಖ್ಯಪಾತ್ರಗಳ ಸುತ್ತ ತಿರುಗುವ ಕಥೆ .ಅಡಿ ಟಿಪ್ಪಣಿ ಹೇಳುತ್ತದೆ “ನನಗೊಂದು ಮಗು ಬೇಕು” ನಾಯಕಿ ಮಾರ್ದವಿ ಸಂಗೀತಗಾರಳು ವಿದ್ಯಾವಂತೆ ಹಾಗೂ ಸೌಮ್ಯ ಸ್ವಭಾವದ ರೂಪಸಿ .ಅವಳ ಪ್ರತಿ ಮಧುಕರ ಕಾಲೇಜು ಉಪನ್ಯಾಸಕನಾಗಿದ್ದವನು  ಹಾಗೂ ದೇವಾಲಯದ ಅರ್ಚಕ ಸಂಸ್ಕೃತ ವಿದ್ವಾಂಸ ಹಾಗೂ ಪಿ.ಎಚ್.ಡಿ. ಬರೆಯುತ್ತಿರುವ […]

ನಾನು ಓದಿದ ಪುಸ್ತಕ

ನೂರ್ ಇನಾಯತ್ ಖಾನ್ ಚಂದ್ರಶೇಖರ್ ಮಂಡೆಕೋಲು ಮೂರು ದಿನಗಳ ಕಾಲ ನನ್ನನು ಈ ಕೊರೋನಾ ರಜೆ ‘ನೂರ್ ಇನಾಯತ್ ಖಾನ್’ ನಾಝಿ ಹೋರಾಟದ ಆರ್ದ್ರ ಕಾವ್ಯವನ್ನು ಓದಲು ಹಚ್ಚಿತು. ನನ್ನ ಓದಿನ ಮಿತಿಯಲ್ಲಿ ನಾನು ಗ್ರಹಿಸಿದ ಕಿರು ಬರಹವಿದು.      ಧರ್ಮ ಹಾಗೂ ಜನಾಂಗ ಶ್ರೇಷ್ಠತೆಯ ಭ್ರಷ್ಠ ಸಿಂಡ್ರೋಮ್ ಇಂದು ನಿನ್ನೆಯದಲ್ಲ.ನಾಳೆ ಹೋಗುತ್ತದೆಂಬ ಖಾತ್ರಿಯೂ ಇಲ್ಲ;ಆ ಮಾತು ಬೇರೆ.ಎರಡನೇ ಜಾಗತಿಕ ಮಹಾಯುದ್ಧದಲ್ಲಿ ನಾಝಿಗಳ ನಡೆಸಿದ  ಮಾರಣ ಹೋಮಕ್ಕೆ ಯಾವತ್ತೂ ಕ್ಷಮೆ ಇಲ್ಲ.ಅತ್ಯಾಚಾರಕ್ಕೊಳಪಡಿಸಿ ಸಜೀವ ದಹಿಸುವ ಅವರ ಕ್ರೌರ್ಯವೊಂದು […]

ನಾ ಮೆಚ್ಚಿದ ಪುಸ್ತಕ

ಯಾದ್ ವಶೇಮ್ ನೇಮಿಚಂದ್ರ ನಾ ಮೆಚ್ಚಿದ ಪುಸ್ತಕ, ಶ್ರೀಮತಿ ನೇಮಿಚಂದ್ರ ಅವರು ಬರೆದ ಯಾದ ವಶೇಮ್’. ಈ ಪುಸ್ತಕ ಕನ್ನಡ ಸಾಪ್ತಾಹಿಕದಲ್ಲಿ ಧಾರಾವಾಹಿಯಾಗಿ ಬಂದಾಗ ಇದರ ಹೆಸರು ‘ನೂರು ಸಾವಿರ ಸಾವಿನ ನೆನಪು’ ಆಗಿತ್ತು. ಹಿಟ್ಲರನ ರಕ್ತದಾಹದ, ಅಶಾಂತಿಯ ನೆಲದಿಂದ ಗಾಂಧಿಯ ಅಹಿಂಸೆಯ ನೆಲಕ್ಕೆ ರಕ್ಷಣೆ ಮತ್ತು ಶಾಂತಿಯನ್ನು ಅರಸಿ ಬಂದ ಪುಟ್ಟ ಯಹೂದಿ ಬಾಲೆಯ ನೈಜ ಕತೆಯಿದು. ನಾನು ಈ ಪುಸ್ತಕವನ್ನು ಮೆಚ್ಚಿಕೊಳ್ಳಲು ಮೂಲ ಕಾರಣ ಕೆಳಗೆ ಬರೆದ ಐದು ಅಂಶಗಳು. ಇವು ಯಾವುದೇ ಶ್ರೇಷ್ಠ […]

Back To Top