Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಊದ್ಗಳಿ ಊದುತ್ತಾ.

ಪುಸ್ತಕ ಸಂಗಾತಿ ಊದ್ಗಳಿ ಊದುತ್ತಾ.   ಬದುಕಿನ ಜೀವಂತಿಕೆ ಇರುವುದು ಬದಲಾವಣೆಗಳಲ್ಲಿ. ಕಾಲದ ಜೊತೆ ಜೊತೆಗೆ ಹೆಜ್ಜೆ ಹಾಕಲೆ ಬೇಕು, ಇಲ್ಲದಿದ್ದರೆ ನಾವು ಹಿಂದುಳಿದು ಬಿಡುತ್ತವೆ, ಸ್ಮೃತಿ ಪಟಲದಿಂದ ಮರೆಯಾಗುತ್ತೇವೆ. ಹಳೆಯದು ಹೊಸದಕ್ಕೆ ಎಡೆಮಾಡಿಕೊಡುತ್ತದೆ. ಅತೃಪ್ತಿ ಬದುಕಿನಲ್ಲಿ ಹೊಸದನ್ನು ತರುತ್ತದೆ. ಇದು ಸಾರಸ್ವತ ಲೋಕಕ್ಕೂ ಅನ್ವಯಿಸುತ್ತದೆ. ಸಾಹಿತ್ಯದಲ್ಲೂ ಕಾಲಕಾಲಕ್ಕೆ ಬದಲಾವಣೆಗಳು ನಡೆಯುತ್ತಿರುತ್ತವೆ. ಆ ಪರಿಧಿಯಲ್ಲಿ ‘Those who create nothing now, destroy” ಎಂಬ ಮಾತನ್ನು ಇಲ್ಲಿ ಸ್ಮರಿಸಬಹುದು. ನಮ್ಮ ಕನ್ನಡ ವಾಙ್ಮಯ ಇತಿಹಾಸವನ್ನು ಗಮನಿಸಿದಾಗ ಚಂಪೂ, […]

ಸಂದಾಯಿಯೆಂಬ ರಾಜಕೀಯ ಬದುಕಿನ ಸಹಜ ಚಿತ್ರಣ

ಪುಸ್ತಕ ಸಂಗಾತಿ ಸಂದಾಯಿಯೆಂಬ ರಾಜಕೀಯ ಬದುಕಿನ ಸಹಜ ಚಿತ್ರಣ ಸದ್ದುಗದ್ದಲವಿಲ್ಲದೆ ಈಗಾಗಲೇ ಸಾಕಷ್ಟು ಕೃತಿಗಳನ್ನು ಬರೆದೂ ಸಾಹಿತ್ಯದ ಜನಜಂಗುಳಿಯಿಂದ ದೂರವೇ ಇದ್ದು, ತನ್ನ ಪಾಡಿಗೆ ತಾನು ಬರೆಯುವುದರಲ್ಲಿಯೇ ಸುಖ ಕಾಣುವ ಕಣಿವೆ ಭಾರದ್ವಾಜ ಕೊಡಗಿನ ಕುಶಾಲನಗರದವರು. ಅವರ ಬರೆಯುವ ಓಘ ನಿಜಕ್ಕೂ ನನ್ನನ್ನು ಚಕಿತಳನ್ನಾಗಿಸುತ್ತದೆ. ಈ ಕೊರೋನೋ ಲಾಕ್ ಡೌನ್ ಸಮಯದ ಕೆಲವೇ ತಿಂಗಳುಗಳಲ್ಲಿ ವಿಭಿನ್ನ ಕಥಾ ಹಂದರದ ಎರಡು ಕಾದಂಬರಿಗಳನ್ನು ನಮ್ಮ ಮುಂದೆ ತಂದು ಇಟ್ಟಿದ್ದಾರೆ. ಅವರ ಕಥನ ಕುಶಲತೆಗೆ ಶರಣೆನ್ನುತ್ತಾ, ಈಗಷ್ಟೇ ಓದಿ ಮುಗಿಸಿದ             […]

ಮೌನದಲ್ಲಿ ಮಾತುಗಳ ಮೆರವಣಿಗೆ…

ಪುಸ್ತಕ ಪರಿಚಯ ಮಾತು ಮೌನದ ನಡುವೆ ಸಾಹಿತ್ಯ ಎನ್ನುವುದು ಮಾನವನ ಪಾರದರ್ಶಕ ಅನುಭವಗಳ ಅನುಪಮ ಅಭಿವ್ಯಕ್ತಿ. ಈ ಅನುಭವ ಅನುಭೂತಿಯ ಮೂಲ ಆಕರವೇ ನಮ್ಮ ಸುಂದರ ಸಮಾಜ. ನಮ್ಮ ಸುತ್ತ ಮುತ್ತಲಿನ ಪರಿಸರ, ಪ್ರಕೃತಿ, ಸನ್ನಿವೇಶ, ಘಟನೆಗಳು ಹಾಗೂ ಮಾನವರ ವ್ಯಕ್ತಿತ್ವವು ಪರಸ್ಪರ ವ್ಯಕ್ತಿಗಳ ಅನುಭವವನ್ನು ರೂಪಿಸುತ್ತವೆ. ವ್ಯಕ್ತಿಯ ಈ ಅನನ್ಯ ಅನುಭವಕ್ಕೆ ರೂಪ ಕೊಡುವ ಸಾಧನವೇ ಭಾಷೆ. ಇದು ನಮ್ಮ ಸಾಮಾಜಿಕ ವ್ಯವಸ್ಥೆಯ ಕೂಸು. ಇದನ್ನು ಬಳಸಿಕೊಂಡೆ ಕವಿಯು ತನ್ನ ಅನುಭವಕ್ಕೆ ಚಿತ್ರ ಬಿಡಿಸುವುದು. ಈ […]

ಲೋಹದ ಹಕ್ಕಿಯೊಳು ತಣ್ಣನೆ ಪ್ರವೇಶ

ಪುಸ್ತಕ ಸಂಗಾತಿ ಲೋಹದ ಹಕ್ಕಿಯೊಳು ತಣ್ಣನೆ ಪ್ರವೇಶ             ಶಿವಪುತ್ರ ಅಜಮನಿಯವರು ಕಾವ್ಯ ಕ್ಷೇತ್ರದಲ್ಲಿ ಗುರುತಿಸಿ ಕೊಳ್ಳುತ್ತಲೇ ಸಮಾಜ ಚಿಂತಕರಾಗಿ ಹೊರಹೊಮ್ಮಿದವರು. ಕ್ರಿಯಾಶೀಲ ಬರಹಗಾರರು. ಸಿಂಗಾಪುರ,ಅಬುದಾಬಿಗಳಂತಹ  ವಿಶ್ವಕನ್ನಡ ಸಮ್ಮೇಳನ ಕವಿಗೋಷ್ಠಿಯಲ್ಲಿ ಭಾಗವಹಿಸಿ ಕವನವನ್ನು ವಾಚನ ಮಾಡಿದ ಹೆಗ್ಗಳಿಕೆ ಇವರದ್ದಾಗಿದೆ. ಯಾವುದೇ ಕೀರ್ತಿ.  ಸನ್ಮಾನಕ್ಕೆ ಎಂದು ಆಸೆ ಪಟ್ಟವರಲ್ಲ ತುಂಬ ಸರಳ ಜೀವಿ. ಬಡತನದಲ್ಲೆ ಬೆಳೆದರೂ ಅವರ ಸಾಧನೆಗೆ ಅವರ ವಿದ್ವತ್ತಿಗೆ ಬಡತನ ಎಂದು ಅಡ್ಡಿಯಾಗಿಲ್ಲದಂತೆ ಸಾಹಿತ್ಯ ಲೋಕಕ್ಕೆ ತಮ್ಮ ಕೊಡುಗೆಯನ್ನು ನೀಡಿದವರು ಶಿವಪುತ್ರ ಅಜಮನಿ. ವಿಜಯಪುರ ಜಿಲ್ಲೆ […]

‌ಬಾಲಂಗೋಚಿ

ಪುಸ್ತಕ ಸಂಗಾತಿ ‌ಬಾಲಂಗೋಚಿ ಮಕ್ಕಳ ಕವನ ಸಂಕಲನ ‘ಬಾಲಂಗೋಚಿ’ ಮಕ್ಕಳ ಕವನ ಸಂಕಲನ.ಪ್ರಕಟಣೆ: 2019ಪುಟಗಳು: 96ಬೆಲೆ: 90ರೂ.ಪ್ರಕಾಶಕರು: ಗೋಮಿನಿ ಪ್ರಕಾಶನಶಾಂತಿ ನಗರ, ತುಮಕೂರು-2 ದೂರವಾಣಿ: 9986692342 ಮಕ್ಕಳ ಮನವನ್ನು ಅರಳಿಸುವ ಪದ್ಯಗಳು ಅರಳ ಬೇಕು ಚಿಣ್ಣರ ಮನಸು ಮೊಲ್ಲೆ ಹೂವಿನಂತಯೇ ಸಲ್ಲಬೇಕು ಮನುಜ ಕುಲಕೆ ಅದರ ಸೇವೆಯಂತೆಯೇ ಬಾಲ್ಯದ ನೆನಪುಗಳೇ ಎಲ್ಲರಿಗೂ ಒಂದು ರೀತಿಯ ಪ್ರೀತಿ ಹಾಗೂ ಚೈತನ್ಯ ಬಾಲ್ಯ ನೆನಪಾಗುತ್ತಲೇ ನಮ್ಮ ಬದುಕಿನ ಬಹುದೂರದ ಪಯಣವೆಲ್ಲ ಮರೆತಂತಾಗಿ ನಾವೂ ಒಂದು ರೀತಿಯ ಬಾಲ್ಯದ ಖುಷಿಯಲ್ಲಿ ತೇಲತೊಡಗುತ್ತೇವೆ. […]

ಡಾ.ಅಂಬೇಡ್ಕರ್ ವಾದದ ಆಚರಣೆ

ಪುಸ್ತಕ ಸಂಗಾತಿ ಡಾ.ಅಂಬೇಡ್ಕರ್ ವಾದದ ಆಚರಣೆ ಡಾ.ಅಂಬೇಡ್ಕರ್ ವಾದದ ಆಚರಣೆಲೇಖಕರು– ಡಾ.ಸಿ.ಜಿ.ಲಕ್ಷ್ಮೀಪತಿಪುಟಗಳು– 104ಪುಸ್ತಕದ ಬೆಲೆ– 68 ರೂಪಾಯಿಗಳುಪ್ರಕಾಶನ– ಚಾರು ಪ್ರಕಾಶನಅಡ್ರೆಸ್– # 83, ಪ್ರೈಡ್ ಪ್ಲಾಜಾ ಕಾಂಪ್ಲೆಕ್ಸ್, ಆದರ್ಶ ಕಾಲೇಜ್ ಹತ್ತಿರ, 5 ನೇ ಮುಖ್ಯ ರಸ್ತೆ. ಬೆಂಗಳೂರು. ‘ಡಾ.ಅಂಬೇಡ್ಕರ್ ವಾದದ ಆಚರಣೆ’ ಎಂಬ ಪುಸ್ತಕವು,  ಮತ್ತು ಆ ಪುಸ್ತಕ ಬರೆದ ಡಾ.ಸಿ.ಜಿ.ಲಕ್ಷೀಪತಿ ಅವರ ಬಗೆಗೆ ಒಂದಿಷ್ಟು..! ಸಿ.ಜಿ. ಲಕ್ಷ್ಮೀಪತಿ ಅವರು ಸದ್ಯ ಬೆಂಗಳೂರಿನ ವಿ.ಎಚ್.ಸಿ ಸೆಂಟ್ರಲ್ ಇನ್ ಸ್ಟಿಟ್ಯೂಟ್ ಆಫ್ ಹೋಮ್ ಸೈನ್ಸ್ ನಲ್ಲಿಸಮಾಜಶಾಸ್ತ್ರ ವಿಭಾಗದ […]

ವಸುಂಧರಾ

ವಸುಂಧರಾ ಕಾದಂಬರಿ ಕುರಿತು ಬಾಳೆಯ ಹಣ್ಣನ್ನು ತಿಂದವರೆಸೆವರು, ಸಿಪ್ಪೆಯ ಬೀದಿಯ ಕೊನೆಗೆ ಕಾಣದೆ ಕಾಲಿಟ್ಟು ಜಾರುವರು ಅನ್ಯರು,_ ಕಷ್ಟವು ಬರುವುದೇ ಹೀಗೆ. ಎನ್ನುವುದೊಂದು , ಅನುಭವದ ನುಡಿಮುತ್ತು. ನಂಬಿಕೆ ಮತ್ತು ಮೂಡ ನಂಬಿಕೆಯ ನಡುವೆ ಅಪಾರ ವ್ಯತ್ಯಾಸವಿದೆ ಹಿಂದಿನಿಂದಲೂ ಈಗಲೂ ಜನ ಸಮುದಾಯದೊಳಗೆ ಮೂಢನಂಬಿಕೆಯ ಕಾರಣದಿಂದಾಗಿ ಆಗಿ ಹೋಗಿರುವ ಅನಾಹುತಗಳೇನೂ , ಕಡಿಮೆ ಇಲ್ಲ. ಮೊನ್ನೆ ಮೊನ್ನೆ ತಾನೆ ಕೇಳಿದ್ದು , ದೆವ್ವ ಬಿಡಿಸುವೆನೆಂದು  ಹೆಣ್ಣುಮಗಳೊಬ್ಬಳ  ಪ್ರಾಣವನ್ನೇ ಬಲಿತೆಗೆದುಕೊಂಡ ಜ್ವಲಂತ ಉದಾಹರಣೆ ನಮ್ಮ ಕಣ್ಣಮುಂದಿದೆ. ಹೀಗಿರುವಾಗ ಜಯಂತಿ […]

ನೋವೂ ಒಂದು ಹೃದ್ಯ ಕಾವ್ಯ

ಪುಸ್ತಕ ಸಂಗಾತಿ ನೋವೂ ಒಂದು ಹೃದ್ಯ ಕಾವ್ಯ ಕವಯತ್ರಿ ರಂಗಮ್ಮ ಹೊದೇಕಲ್ ತಮ್ಮ ಚೆಂದದ ಕೈ ಬರಹದ ಮೂಲಕ  ಈಗಾಗಲೇ ನಾಡಿನಾದ್ಯಂತ  ಚಿರಪರಿಚಿತ ಹೆಸರು. ಇವತ್ತು ಇಡೀ ಜಗತ್ತು ಕೀಲಿಮಣೆಯ ಮುಂದೆ ಪವಡಿಸಿಕೊಂಡು ಬೆರಳ ತುದಿಯಲ್ಲಿ ಕುಟು ಕುಟು ಕುಟ್ಟುತ್ತಾ ಅಕ್ಷರವ ಅರಳಿಸುತ್ತಿರುವಾಗ, ಗಣಕ ಯಂತ್ರ ಇಲ್ಲದಿದ್ದರೆ ನಾನು ಖಂಡಿತಾ ಇಷ್ಟೂ ಬರೆಯುತ್ತಿರಲಿಲ್ಲವೇನೋ ಅಂತ ಬಡಬಡಿಸುತ್ತಿರುವ ಹೊತ್ತಿನಲ್ಲಿ ಇದಕ್ಕೆಲ್ಲ ಉತ್ತರವೆಂಬಂತೆ ಹಲವಾರು ವರುಷಗಳಿಂದ  ಬರಹಗಾರ್ತಿ ಶೈಲಾ ನಾಗರಾಜ್ ಅವರ ಸಂಪಾದಕತ್ವದಲ್ಲಿ  ರಂಗಮ್ಮ ಹೊದೇಕಲ್ ರವರ  ಕೈ ಬರಹದಲ್ಲಿಯೇ […]

ಕಾದಂಬರಿ ಕುರಿತು ಸು ನಾನು ಪ್ರತಿ ಪುಸ್ತಕ ಓದಿದಾಗಲೂ ಅದರಲ್ಲಿ ಬರುವ ಒಂದು ಪಾತ್ರ ನಾನೇ ಎನ್ನಿಸಿಬಿಡುವಷ್ಟು ಕೆಲವೊಂದು ಪಾತ್ರಗಳು ಕಾಡುತ್ತವೆ. ಇಲ್ಲಿ ಸು ಕಥಾನಾಯಕನಾದರೂ ನನಗ್ಯಾಕೊ ಪ್ರಕಾಶ್ ಪಾತ್ರ ಬಹಳ ಹಿಡಿಸಿತು. ಇಡೀ ಸು ಕಾದಂಬರಿ ಪ್ರಕಾಶ್ ಪಾತ್ರವೇ ನಿರೂಪಣೆ ಮಾಡಿದ್ದು ಅಂತ ನನಗೆ ಭಾಸವಾಯಿತು. ಇದನ್ನ ಕಾದಂಬರಿ ಅನ್ನೋದಕ್ಕಿಂತ ಒಂದು ಅನುಭವ ಕಥನ ಅಂತ ಕರೆಯೋದು ಹೆಚ್ಚು ಸೂಕ್ತ ಅನ್ನಿಸಿತು ನನಗೆ. ಕಡೆಯ ಎರಡು ಅಧ್ಯಾಯಗಳಲ್ಲಿ ಸು ಮತ್ತು ಪ್ರಕಾಶ್ ಮನಸ್ಸಿನ ತಳಮಳಗಳು ಬಹಳ […]

ಬೊಗಸೆ ತುಂಬ ಕನಸು”

ಪುಸ್ತಕ ಪರಿಚಯ ಬೊಗಸೆ ತುಂಬ ಕನಸು ಪ್ರಪಂಚದಲ್ಲಿ ಎರಡು ರೀತಿಯ ಸಾಧಕರಿರುತ್ತಾರೆ. ಒಬ್ಬರು ಇದ್ದ ಹಾದಿಯಲ್ಲಿ ಶ್ರದ್ಧೆಯಿಂದ ಸಾಗಿ ಗುರಿ ತಲುಪುವವರು. ಮತ್ತೊಬ್ಬರು ತಾವೇ ಹಾದಿ ನಿರ್ಮಿಸಿಕೊಂಡು ಗುರಿ ಕಂಡುಕೊಳ್ಳುವವರು. ಹೀಗೆ ಎರಡನೇ ಸಾಲಿನ ಮುಂದಾಳುವಿನ ಹಾಗೆ ನಿಂತು ಯಶ ಬದುಕಿನ ಗಾಥೆ ಬರೆದವರು ಡಾ.ಪ್ರಭಾಕರ ಶಿಶಿಲರು. ಅವರ ಆತ್ಮಕತೆ “ಬೊಗಸೆ ತುಂಬ ಕನಸು” ಓದಿದ ತಕ್ಷಣಕ್ಕೆ ನನಗೆ ಅನ್ನಿಸಿದ್ದು ಹೀಗೆ. ಬಹುಶ: ಈ ಕೃತಿಯನ್ನು ಓದುವ ಎಲ್ಲರಿಗೂ ಹೀಗೊಂದು ಭಾವ ಮೂಡಿಯೇ ಮೂಡುತ್ತದೆ. ಅರ್ಥಶಾಸ್ತ್ರದ ಅಧ್ಯಾಪಕರಾಗಿ. […]

Back To Top