Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಕಣ್ಣ ಮುಂದಿನ ಎರಡು ಮೌಲ್ಯಗಳು -ಎರಡು ದಾರಿಗಳು

ಪುಸ್ತಕ ವಿಮರ್ಶೆ ನಾಗರಾಜಹರಪನಹಳ್ಳಿ ಬಹಳ ದಿನಗಳಿಂದ ನನ್ನ ಕಾಡುತ್ತಿರುವ ವಿಷಯವನ್ನು ಇಲ್ಲಿ ಪ್ರಸ್ತಾಪಿಸುವೆ. ಒಂದು ದೇವನೂರು ಮಹಾದೇವ ಅವರ `ಎದೆಗೆ ಬಿದ್ದ ಅಕ್ಷರ’ ಕೃತಿ ಹಾಗೂ ಇನ್ನೊಂದು ಸಾರ್ವಜನಿಕರ ಕವಿ ಎಂದೇ ಹೆಸರಾಗಿದ್ದ ಡಾ.ಸಿದ್ದಲಿಂಗಯ್ಯ ಅವರ `ನನ್ನ ಜನಗಳು ಮತ್ತು ಇತರೆ ಕವಿತೆಗಳು’. ಕನ್ನಡದಲ್ಲಿ ಬಹಳ ಮಹತ್ವದ ಎರಡು ಕೃತಿಗಳ ಹೆಸರು ಹೇಳಿ ಅಂತ ಯಾರಾದರೂ ನನ್ನ ಪ್ರಶ್ನಿಸಿದರೆ ನಾನು ಮೊದಲು ಹೇಳುವ ಕೃತಿಗಳ ಹೆಸರು `ಎದೆಗೆ ಬಿದ್ದ ಅಕ್ಷರ’, `ನನ್ನ ಜನಗಳು’ ಕವಿತಾ ಸಂಕಲನ. ಯಾಕೆ […]

ನಾಡಿ ಮಿಡಿತದ ದಾರಿ

ಪುಸ್ತಕಪರಿಚಯ ಪುಸ್ತಕ : ನಾಡಿ ಮಿಡಿತದ ದಾರಿ 🩺(ವೈದ್ಯಲೋಕದ ಅನುಭವ ಕಥನಗಳು) ಲೇಖಕರು: ಡಾ|| ಶಿವಾನಂದ ಕುಬಸದಪ್ರಕಾಶನ: ನೀಲಿಮಾ ಪ್ರಕಾಶನಬೆಂಗಳೂರುಪುಟಗಳು: 160ಬೆಲೆ: ರೂ. 130/-ಪ್ರಕಟಿತ ವರ್ಷ: 2019ಲೇಖಕರ ದೂರವಾಣಿ: 9448012767 ವೃತ್ತಿಯಿಂದ ಪರಿಣತ ಶಸ್ತ್ರ ಚಿಕಿತ್ಸಕರಾಗಿ, ಜನಾನುರಾಗಿ ವೈದ್ಯರಾಗಿ, ವಿವಿಧ ವ್ಯಾಧಿಗಳ ಕುರಿತು ಜನತೆಗೆ ಮಾಹಿತಿ ನೀಡುವ ವಕ್ತಾರರಾಗಿ, ಗ್ರಾಮೀಣರ ಮೂಡನಂಬಿಕೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ಮನೋಭಾವ ಮೂಡಿಸುವ ಆಪ್ತ ಬಂಧುವಾಗಿ, ರೋಗಿಗಳ ಸೇವೆಯಲ್ಲಿ ದೇವರನ್ನು ಕಾಣುವ ಕಾಯಕ ಯೋಗಿಯಾಗಿ, ಸೃಜನಶೀಲ ಕವಿ, ಲೇಖಕರಾಗಿ ಒಂದು ಪ್ರದೇಶದ ಒಂದು […]

ಪ್ರೀತಿ ಮತ್ತು ಪ್ರೀತಿ ಮಾತ್ರ

ಪ್ರೀತಿ ಮತ್ತು ಪ್ರೀತಿ ಮಾತ್ರಲೇಖಕರು – ಜ್ಯೋತಿ ಗುರು ಪ್ರಸಾದ್ ಆರಂಭದ ಲೇಖನದಲ್ಲಿ ಪರಿಸರ ಹೋರಾಟಗಾತಿಯಾದ ದಿವಂಗತ ಕುಸುಮಾ ಸೊರಬ ಅವರ ಬಗ್ಗೆ ತಿಳಿಸುತ್ತಾ ಲೇಖಕಿಯು ಅವರ ಈ ಮಾತುಗಳನ್ನುಉಲ್ಲೇಖಿಸುತ್ತಾರೆ ಗಮನಿಸಿ – ” ಗಿಡ ಬೆಳೆಸಿದೆವನಿಗೆ ನರಕವಿಲ್ಲ” ಎಂಬ ಅಂಶ ಗರುಡ ಪುರಾಣದಿಂದಲೇ ಆರಂಭವಾಗಿ ಅಂದಿನ ಜನಜೀವನದ ದಿನನಿತ್ಯ ಕಾರ್ಯಕ್ರಮವಾಗಿತ್ತು. ಪರಿಸರ ರಕ್ಷಣೆ ಹಾಗೆಂದು ತಿಳಿದುಕೊಳ್ಳದೆಯೇ ಜೀವನದ ಆಂಗ ಆಗಿತ್ತು. ಈಗ ಮಾತ್ರ ಇದು ಫ್ಯಾಶನ್. ಮಳೆ – ಇಳೆ ಎಂಬ ಪೃಥ್ವಿಯನ್ನು ರಕ್ಷಣೆ ಮಾಡುವುದೇ […]

ಒಂದು ಮರ ನೂರು ಸ್ವರ

ಪುಸ್ತಕಸಂಗಾತಿ ಒಂದು ಮರ ನೂರು ಸ್ವರಭಾರತೀಯ ಸಣ್ಣಕಥೆಗಳುಎನ್ ಎಸ್ ಶಾರದಾಪ್ರಸಾದ್ಸಂಚಯ ಪ್ರಕಾಶನ ಈ ಪುಸ್ತಕ ಮುದ್ರಣದ ಹಂತದಲ್ಲಿದ್ದಾಗ ಶಾರದಾಪ್ರಸಾದರು ತೀರಿಕೊಂಡಿದ್ದು ದುಃಖದ ವಿಷಯ. ಅವರು ತಮ್ಮ ಬರವಣಿಗೆಯ ಬದುಕಿನುದ್ದಕ್ಕೂ ಆಯ್ದು ಪೋಣಿಸಿದ ಕಥೆಗಳಿವು. 1981 ರಿಂದ 2014 ರ ತನಕದ ಅವರ ಎಲ್ಲಾ ಅನುವಾದಿತ ಚೆಂದದ ಕತೆಗಳು ಇಲ್ಲಿವೆ. ರಾಜಾಜಿ (ಚಕ್ರವರ್ತಿ ರಾಜಗೋಪಾಲಾಚಾರಿ) ಅವರ, ಲೋಕನಾಯಕ ಜಯಪ್ರಕಾಶ ನಾರಾಯಣ್ ಅವರ ಅಪರೂಪದ ಕತೆಗಳೂ ಇಲ್ಲಿವೆ. ಒಟ್ಟೂ 51 ಕತೆಗಳು ಇಲ್ಲಿ ಕನ್ನಡಿಸಿವೆ‌.ಅಷ್ಟೇನೂ ಪರಿಚಿತರಲ್ಲದವರ ಕತೆಗಳೂ ಇಲ್ಲಿವೆ. ಕಳೆದ […]

ಅವ್ವ ಮತ್ತು ಅಬ್ಬಲಿಗೆ

ನನಗೆ  ಅವ್ವ ಮತ್ತು ಅಬ್ಬಲಿಗೆ  ಇಡೀ ಕವನ ಸಂಕಲನದಲ್ಲಿ ಲಂಕೇಶರ ಅವ್ವ ಆಧುನಿಕ, ನಗರವಾಸಿ ಅವ್ವನಾಗಿ  ಕಾಣುತ್ತಿದ್ದಾಳೆ.   ಅಬ್ಬಲಿಗೆಯಲ್ಲಿನ ಆಧುನಿಕ ಅವ್ವ  ನೌಕರಿ ಮಾಡುತ್ತಾ, ಗಂಡನ ಸಂಭಾಳಿಸುತ್ತಾ , ತವರು ಮನೆಯ ನೆನಪ ಮೆಲುಕು ಹಾಕುತ್ತಾ ,  ಆಧುನಿಕ ವೈರುದ್ಧ್ಯಗಳಿಗೆ ಮುಖಾಮುಖಿಯಾಗುತ್ತಾ ನಡೆಯುತ್ತಾಳೆ.  ಅನ್ಯಾಯಕ್ಕೆ ಕವಿತೆಯ ಮೂಲಕ ಸಣ್ಣ ಧ್ವನಿಯಲ್ಲಿ ಅತ್ಯಂತ ಖಚಿತವಾಗಿ ವ್ಯವಸ್ಥೆಯನ್ನು ಟೀಕಿಸುತ್ತಾಳೆ. ದೇವರು, ದೇವಾಲಯ,ಯುದ್ಧ ಗಳ ನಿರರ್ಥಕತೆಯನ್ನು  ಬಿಡಿಸಿಡುತ್ತಾಳೆ. ಹೆಣ್ಣಿನ ಅಂತರಂಗದ ತಳಮಳಕ್ಕೆ ಭಾಷ್ಯ ಬರೆಯುತ್ತಾಳೆ. ಆಧುನಿಕ ಯಶೋಧರೆಯ ಅಂತರಂಗವನ್ನು ಇವತ್ತಿನ ಅಕ್ಷರಸ್ಥ […]

ಪುಸ್ತಕ ಸಂಗಾತಿ

ಆಲದ ನೆರಳು ಈ ಕಥಾ ಸಂಕಲನದಲ್ಲಿ ಒಟ್ಟು ಹನ್ನೆರಡು ಕಥೆಗಳಿವೆ. ಕತೆಗೆ ಬೇಕಾದ ವಸ್ತು, ಅದರಲ್ಲಿ ತುಂಬಿಕೊಳ್ಳುವ ಪಾತ್ರಗಳು, ಪ್ರಾದೇಶಿಕ ಭಾಷೆಯ ಸೊಗಡು,ಅದರ ನಿರ್ವಹಣೆ, ಅನಿರೀಕ್ಷಿತ ತಿರುವುಗಳು, ಕಾಡುವ ಪಾತ್ರಗಳ ಹೆಣಿಗೆ, ಕೃತಕತೆಯಲ್ಲೂ ಮೈಮರೆಯದ ವಾಸ್ತವೀಕತೆ… ಇವುಗಳಿಂದ ಮಧುರಾ ಅವರು ಕತೆಗಳ ಮೂಲಕ ನಮ್ಮನ್ನು ಬಂಧಿಸಿಡುವಲ್ಲಿ ಯಶಸ್ವಿ ಆಗಿದ್ದಾರೆ. ಆಲದ ನೆರಳು – ಪುರುಷ ಪ್ರಧಾನ ಸಮಾಜದಲ್ಲಿ ಎರಡು ಹೆಣ್ಣು ಜೀವಗಳು ಸಾಂಸ್ಕೃತಿಕವಾಗಿ ನಲುಗಿ,ಕೊರಗಿ ಹೋಗುವ ಕಥಾ ಹಂದರ ಹೊಂದಿದೆ. ‘ ಬರೀ ನೆರಳಿದ್ರೆ ಉಳಕಿ ಗಿಡಗೋಳು […]

ಪುಸ್ತಕ ಸಂಗಾತಿ

ಹುಲಿಕಡ್ಜಿಳ ಸರಳ ಜೀವನ ಸೂತ್ರ ಪಠಿಸುವ ಕಥೆಗಳು- ಹುಲಿಕಡ್ಜಿಳ ತೀರ್ಥಹಳ್ಳಿಯ ಒಡ್ಡಿನ ಬೈಲಿನ ಹರೀಶ ಟಿ. ಜೆ. ಎಂದೇ ಹೆಸರಾಗಿರುವ ಹರೀಶ ಮಿಹಿರ ಇವರು ಮೂಡಬಿದಿರೆ ಆಳ್ವಾಸ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರು. ನೀಲಿನದಿ ಕಥಾ ಸಂಕಲನದಿಂದ ಈಗಾಗಲೇ ಕಥಾ ಸಾಹಿತ್ಯ ಲೋಕದಲ್ಲಿ ಪರಿಚಿತರು ಕೂಡಾ.ಅವರ ಎರಡನೇ ಕಥಾ ಸಂಕಲನ ಹುಲಿಕಡ್ಜಿಳ. ಸಂಕಲನದ ಹೆಸರೇ ಭಯ ಬೀಳಿಸುವಂತದ್ದು. ಆದರೆ ಒಳಪುಟದಲ್ಲಿ ಸಾಮಾಜಿಕ ಬದುಕಿನ ಹಲವು ತಿಕ್ಕಾಟಗಳು ಸಂಘರ್ಷಗಳು ಸಮ ಕಾಲೀನ ಜಗತ್ತು ಆಧುನಿಕತೆಯ ಜೊತೆಗೆ ನಡೆಯಬಾರದ ನಡೆಯಲ್ಲಿ ಹಾದಿ […]

ಪುಸ್ತಕ ಸಂಗಾತಿ

ಮಕ್ಕಳಿಗಾಗಿ ನೂರಾರು ಕವಿತೆಗಳು ಕವಿ: ಸೋಮಲಿಂಗ ಬೇಡರಪ್ರಕಾಶನ: ಪಲ್ಲವಿ ಪ್ರಕಾಶನ, ಬೀಳಗಿಪುಟಗಳು: 220ಬೆಲೆ: ರೂ. 175/-ಪ್ರಕಟಿತ ವರ್ಷ: 2019ಕವಿಯ ದೂರವಾಣಿ: 9741637606 ಕಥೆ-ಕಾದಂಬರಿಗಳ ವಿಷಯದ ಹರವು-ಹರಿವು ವ್ಯಾಪಕ ಹಾಗೂ ವಿಶಾಲ. ಆದರೆ ಕವಿತೆಗಳದು ಹಾಗಲ್ಲ. ಅದರ ಕ್ಯಾನ್ವಾಸ್ ಚಿಕ್ಕದು. ಕಡಿಮೆ ಶಬ್ಧಗಳಲ್ಲಿ ಸುಂದರ ಗೇಯತೆ, ಲಯ, ಮಾತ್ರೆಗಳಲ್ಲಿ, ಅಂದದ ಪದಪುಂಜಗಳಲ್ಲಿ ಕವಿತೆ ಕಟ್ಟುವುದು ನಿಜಕ್ಕೂ ಒಂದು ಅದ್ಬುತ ಕುಶಲಕಲೆ. ಅದರಲ್ಲಿಯೂ ಮಕ್ಕಳ ಕವಿತೆಗಳನ್ನು ಸರಳ-ಸುಂದರ ಪದಗಳಲ್ಲಿ ಎಳೆಯ ಮನಸ್ಸಿಗೆ ಸುಲಭವಾಗಿ ಮುಟ್ಟುವಂತೆ ಪದ್ಯ ಬರೆಯುವುದು ಸಹ ಒಂದು […]

ಪುಸ್ತಕ ಸಂಗಾತಿ

ದರ್ಪಣ ನನಗೆ ಸಾಮಾನ್ಯವಾಗಿ ಆತ್ಮಚರಿತ್ರೆ, ವೈಚಾರಿಕ ಲೇಖನ, ಚರ್ಚೆ ಇಂತಹವುಗಳನ್ನು ಓದುವುದೆಂದರೆನೇ ಬಲು ಇಷ್ಟ. ಕೆಲವೂಮ್ಮೆ ಕವಿತೆಗಳನ್ನು ಓದಿದರೂ ಅದನ್ನು ಒಂದೇ ಬಾರಿಗೆ ಓದಲಾರೆ. ಅಂದರೆ ಕವನ ಸಂಕಲನದಲ್ಲಿ ಇರುವ ಎಲ್ಲಾ ಕವಿತೆಗಳನ್ನು ಒಂದೇ ಉಸಿರಿಗೆ ಓದಲಾರೆ. ಇವನ್ನೆಲ್ಲ ಬಿಟ್ಟು ಕತೆಗಳ ವಿಷಯಕ್ಕೆ ಬಂದರೆ ನನಗೆ ಕಾದಂಬರಿಗಳಿಗಿಂತ ಸಣ್ಣ, ಸಣ್ಣ ಕತೆಗಳನ್ನು ಓದುವುದೆಂದರೆ ಬಹಳ ಇಷ್ಟ.ಅದ್ದರಿಂದ ನನ್ನಲ್ಲಿ ಬಹಳಷ್ಟು ಕಥಾಸಂಕಲನಗಳ ಸಂಗ್ರಹವೇ ಇದೆ. ಹಾಗೆ ಕಥಾಸಂಕಲನಗಳು ಇಷ್ಟವಾಗಲು ಕಾರಣ ಒಂದೇ ಓದಿನಲ್ಲಿ ನಾವು ನಮ್ಮನ್ನು ಭಿನ್ನ, ಭಿನ್ನ […]

ಪುಸ್ತಕ ಸಂಗಾತಿ

ಬಣ್ಣದ ಜೋಳಿಗೆ ಬಣ್ಣದ ಜೋಳಿಗೆ ಸ್ನೇಹಾ ಪಬ್ಲಿಕೇಶನ್ಸ್ ಗಾಯಿತ್ರಿ ರಾಜ್ “”ಬಣ್ಣದ ಜೋಳಿಗೆ “” ಗಾಯತ್ರಿ ರಾಜ್ ಅವರ ಮೊದಲ ಕಥಾ ಸಂಕಲನ, ಚೊಚ್ಚಲ ಪುಸ್ತಕ,ಒಂದೇ ದಿನದಲ್ಲಿ ಬರೆಯಬಹುದುದಾದ ಅನಿಸಿಕೆಗೆ ಮೂರು ದಿನಾ ತಗೊಂಡೆ ಅಂದ್ರೆ ನಾನು ಬರೆಯೋದು “ಆರು ಹೆತ್ತೋಳಿಗೆ ಮೂರು ಹೆತ್ತೋಳು ಹದ ಹೇಳಿದಂತೆ”” ಆಗತ್ತೇನೋ ಅನ್ನಿಸಿ, ತಡ ಮಾಡಿದೆ, ನನ್ನ ತಿಳಿವಿನ ಮಟ್ಟಕ್ಕೆ, ಯಾವ ಅತಿಶಯೋಕ್ತಿ ಪೂರ್ವಗ್ರಹ ಇಲ್ಲದೇ ಬರೆದಿರುವೆ, ಗುಣಕ್ಕೆ ಮತ್ಸರ ಏಕೆ?? ಅಲ್ವಾ..ಪೂರ್ಣ ಪ್ರಮಾಣದಲ್ಲಿ ಬರಹಕ್ಕೆ ಕುಳಿತರೆ ಒಳ್ಳೇ ಸಾಹಿತಿ […]

Back To Top