ಕೊರೊನಾ ಕಾಡಿದ ವರ್ಷಾಂತ್ಯದಲ್ಲಿ ನಿಂತು ಹೊಸ ಭರವಸೆಯೊಂದಿಗೆ.. ಜ್ಯೋತಿ ಡಿ.ಬೊಮ್ಮ. ಹೊಸ ವರ್ಷದ ಹೊಸ್ತಿಲಲ್ಲಿ ನಿಂತು ಹಿಂದಿರುಗಿ ನೋಡಿದಾಗ ನಿಟ್ಟುಸಿರಿನೊಂದಿಗೆ ವಿಷಾದದ ವಿಷಣ್ಣ ನಗೆಯೊಂದು ಮೂಡುತ್ತದೆ ಕಂಡು ಕಾಣದಂತೆ. 2020 ನೆಯ ವರ್ಷವನ್ನು ಕೂಡ ಒಂದು ಹೊಸ ಭರವಸೆಯಿಂದಲೆ ಬರಮಾಡಿಕೊಂಡಿದ್ದೆವು.ಹಿಂದೊಂದು ಕಾಣದ ಸಾಂಕ್ರಾಮಿಕ ಪಿಡುಗಿನ ಭಯಾನಕ ರೂಪ ಇಡೀ ಮನಕುಲವನ್ನೆ ತಲ್ಲಣಿಸಿಬಿಟ್ಟಿತು. ಎಂಥ ಅನಿಶ್ಚಿತತೆಯ ವಾತಾವರಣ ,ಇಡೀ ಜಗತ್ತೇ ಸ್ಥಬ್ದವಾದಂತಹ ಅಸಹಾಯಕ ಸ್ಥಿತಿ.ರೋಗದ ಭಯ ಎಷ್ಟು ವ್ಯಾಪಿಸಿಬಿಟ್ಟಿತೆಂದರೆ ವೈದ್ಯಕೀಯ ಕ್ಷೇತ್ರವು ಕಂಪಿಸಿತು. ಯಾರಿಗೆ ಯಾವಾಗ ರೋಗ […]
Read More
ಬುಡಕಟ್ಟು ಜನಾಂಗದ ಬಗ್ಗೆ ಬೆಳಕು ಚೆಲ್ಲುವ ಲೇಖನ ಕಾಡುಗೊಲ್ಲ ಮತ್ತು ತೋಡ ಜನಾಂಗದ ಗುಡಿಸಲಿನಲ್ಲಿ ಸಾಮ್ಯತೆ ಆಶಾ ಸಿದ್ದಲಿಂಗಯ್ಯ ಕಾಡುಗೊಲ್ಲ ಬುಡಕಟ್ಟು ಜನಾಂಗವು ತುಮಕೂರು, ಮತ್ತು ಚಿತ್ರದುರ್ಗ,ಜಿಲ್ಲೆಯಲ್ಲಿ ಹೆಚ್ಚಾಗಿ ನೆಲೆಗೊಂಡಿದ್ದಾರೆ ಉಳಿದಂತೆ ದಾವಣಗೆರೆ, ಬಳ್ಳಾರಿ ಗಡಿಭಾಗ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ , ರಾಮನಗರ , ಮಂಡ್ಯ, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಂಗಳೂರು ಜಿಲ್ಲೆಯಲ್ಲಿ ವಿರಳವಾಗಿ ಕಾಣಸಿಗುತ್ತಾರೆ. ಒಟ್ಟಾರೆ ಕರ್ನಾಟಕದಲ್ಲಿ ಇವರ ಜನಸಂಖ್ಯೆ ಹತ್ತು ಲಕ್ಷ ಇದೆ. ಕಾಡುಗೊಲ್ಲರನ್ನು ಮುನ್ನೆಲೆಗೆ ತರಲು ಮತ್ತು ಸರ್ಕಾರ ಅವರನ್ನು ಗುರುತಿಸಲು […]
Read More
ಅನುಭವ ದೊಡ್ಡವರ ಮನೆಯ ಸಣ್ಣ ಕತೆ ವೀಣಾ ನಿರಂಜನ್ ಈ ದೊಡ್ಡವರ ಮನೆಯ ಕತೆಗಳು ಬಹಳ ಸ್ವಾರಸ್ಯಕರವಾಗಿರುತ್ತವೆ. ನಾನು ಇಲ್ಲಿ ಹೇಳ ಹೊರಟಿರುವುದು ಒಂದು ಸ್ಯಾಂಪಲ್ ಅಷ್ಟೇ. ಆ ದಿನ ಮನೆ ಮಂದಿಯೆಲ್ಲ ಸಡಗರದಿಂದ ಓಡಾಡುತ್ತಿದ್ದರು. ಮನೆಯ ಮಗನ ಹುಟ್ಟುಹಬ್ಬ ಎಂದರೆ ಕೇಳಬೇಕೆ. ಶೇಖರ್ ಬಾಬು ಬೆಳಿಗ್ಗೆಯೇ ಮಗನಿಗೆ ಇಂಪೋರ್ಟೆಡ್ ಶಾಂಪೂ, ಸೋಪು ಹಾಕಿ ಹಿತವಾಗಿ ಸ್ನಾನ ಮಾಡಿಸಿದರು. ಮಕ್ಕಳಿಬ್ಬರೂ ಸಂಭ್ರಮದಿಂದ ತಂದೆಗೆ ನೆರವಾದರು. ಶರಾವತಿ ಸಂಜೆ ಪಾರ್ಟಿಗೆ ಯಾರ್ಯಾರನ್ನು ಕರೆಯಬೇಕು, ಏನೇನು ಆರ್ಡರ್ ಮಾಡಬೇಕು ಅದೆಲ್ಲವನ್ನೂ […]
Read More
ಶರದದ ಹಗಲಲ್ಲಿ ಆಷಾಢದ ಮೋಡಗಳು… ಎಂ.ಆರ್.ಕಮಲ. ಹೊರಗಿನ ಋತುಮಾನಕ್ಕೂ ಒಳಗಿನ ಋತುಮಾನಕ್ಕೂ ಸಂಬಂಧವಿದೆಯೇ ಎಂದು ಹಲವಷ್ಟು ಬಾರಿ ಯೋಚಿಸಿದ್ದೇನೆ. ಇದೆ ಎನ್ನುವುದು ನಿಜವಾದರೂ ಪೂರ್ಣಸತ್ಯವಲ್ಲ. ಬಯಲು ಸೀಮೆಯ ಬಿರುಬಿಸಿಲಲ್ಲಿ ಬೆಳೆದ ನನ್ನಂಥವರು ಬಾಯಿಯಲ್ಲಿ ಕೆಂಡವನ್ನೇ ಕಾರುತ್ತೇವೆ. ವಿನಾಕಾರಣ ಉದ್ವಿಗ್ನಗೊಂಡು. ಸಣ್ಣ ಸಣ್ಣ ವಿಷಯಕ್ಕೆಲ್ಲ ಜಗಳ ತೆಗೆಯುತ್ತೇವೆ. ಬಯಲು ಸೀಮೆಯ ಹೆಚ್ಚಿನ ಜನರ ಬೆಳಗುಗಳು ಗುದ್ದಾಟಗಳಿಂದಲೇ ಆರಂಭವಾಗುತ್ತದೆ. ವಸಂತನೇ ಬರಲಿ, ಗಿಡಮರಗಳು ಚಿಗುರುತ್ತಲೇ ಇರಲಿ, ಹೂವುಗಳು ತೂಗುತ್ತಲೇ ಇರಲಿ ಬೇಸಗೆಯ ಬಿರುಬಿಸಿಲಂಥ ಚಡಪಡಿಕೆ ಮಾತ್ರ ನಿಲ್ಲುವುದೇ ಇಲ್ಲ. ಆಷಾಢದ […]
Read More
ಅಂಕಣ ಬರಹ–02 ಶಾಂತಿ ವಾಸು ಹೋದ ಅಂಕಣದಲ್ಲಿ ರೇಡಿಯೋ ನಮ್ಮ ಜೀವನವನ್ನು ಆಕ್ರಮಿಸಿದ ಕಾಲ ಹಾಗೂ ರೀತಿಯನ್ನು ನೋಡಿದೆವು. ನಮ್ಮನ್ನು ಆಧುನಿಕ ಕಾಲದ ಪ್ರತಿನಿಧಿಗಳನ್ನಾಗಿಸಿದ ರೇಡಿಯೋ ಬಗ್ಗೆ ಈಗ ಇನ್ನಷ್ಟು ವಿಷಯಗಳನ್ನು ತಿಳಿಯೋಣ ಬನ್ನಿ. ಸಂಶೋಧನೆಗಾಗಿ ನೋಬಲ್ ಪ್ರಶಸ್ತಿ ಪಡೆದ ಇಟಲಿಯ ಗೂಗ್ಮಿಯೆಲ್ಮೋ ಮಾರ್ಕೋನಿಯಿಂದ 1885 ರಲ್ಲಿ ತಂತಿರಹಿತ ಸಂದೇಶ ರವಾನಿಸುವ ಮೂಲಕ ಕಂಡುಹಿಡಿಯಲ್ಪಟ್ಟ ರೇಡಿಯೋ ಎಂಬ ಒಂದು ಅದ್ಭುತವನ್ನು ಭಾರತಕ್ಕೆ ಕೊಡುಗೆಯಾಗಿ ನೀಡಿದ ಭೌತವಿಜ್ಞಾನಿ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ, ದೂರಸಂಪರ್ಕ ಹಾಗೂ ರೇಡಿಯೋ ವಿಜ್ಞಾನಿ […]
Read More
ಲೇಖನ ಚಿಕ್ಕ ಪುಟ್ಟ ಸಂಗತಿಗಳಲ್ಲೇ ಸಂತೃಪ್ತಿ ಕಾಣುತ್ತಿರಿ ಆಗ ಬದುಕು ಎಷ್ಟೊಂದು ಸುಂದರ. ಪಲ್ಲವಿ ಪ್ರಸನ್ನ ಬೆಳಗಾಗಲೆoದೆ ಕತ್ತಲು ,ಗೆಲ್ಲಲೆoದೆ ಸೋಲು,ನಗುವಿನ ಜೊತೆ ದುಃಖ ಇದ್ದೇ ಇರುತ್ತದೆ ,ಅದರೂ ಚಿಕ್ಕ ಪುಟ್ಟ ಸಂಗತಿಗಳಲ್ಲೇ ನಾವು ಆನಂದ ಅನುಭವಿಸುತ್ತೇವಲ್ಲ ಅದು ನಮಗೆ ಅಪ್ಪಟ ಆರೋಗ್ಯ ,ಉಲ್ಲಾಸಿತರಾಗಿಡಲು ಸಹಾಯಮಾಡುತ್ತದೆ. ತಲೆ ಬಾಚಿಕೊಳ್ಳುವಾಗ ಉದುರಿದ ಕೂದಲ ಬಗ್ಗೆ ಕೊರಗದೇ ಇದ್ದ ಕೂದಲನ್ನು ನೇವರಿಸುತ್ತ ಅದರ ಆರೈಕೆಯಲಿ ಮಗ್ನವಾಗಿ ಖುಷಿ ಅನುಭವಿಸಬೇಕು. ಒಂದು ಒಳ್ಳೆ ಪುಸ್ತಕವನ್ನು ಓದುವಾಗ ಅದರ ಇಂಚಿಂಚೂ ,ಪ್ರತೀ ಸಾಲನ್ನೂ […]
Read More
ಅನಿಸಿಕೆ “ಉಳ್ಳವರು ಶಿವಾಲಯವ ಮಾಡುವರು” ವೀಣಾ ದೇವರಾಜ್ ನಿಜಕ್ಕೂ ಅಣ್ಣನ ಈ ವಚನವು ಬರಿಯ ಪುಸ್ತಕಗಳಿಗೆ ಮತ್ತು ಹಾಡುಗಾರರಿಗೇ ಸೀಮಿತವಾಗಿವೆ. ಕಾರ್ಯರೂಪಕ್ಕೆ ಬರುವುದೆಂದೊ. ಹಿರಿಯರು ‘ಉಳ್ಳವರು ಶಿವಾಲಯವ ಮಾಡುವರು ‘ ಎಂದರು, ಆದರೆ ಇಂದಿನ ಉಳ್ಳವರು ತಮಗಾಗಿ ತಮ್ಮ ಕುಟುಂಬಕ್ಕಾಗಿ ಮಾತ್ರ ಆಲಯ ಮಾಡಿಕೊಳ್ಳುವರೇ ಹೊರತು ಸಮಾಜಕ್ಕಾಗಿ ಯಾವ ಉಪಯೋಗಕ್ಕೂ ಬಾರದು. ಇಂಥಹವರಿಂದ ಪರಿವರ್ತನೆ ಬಯಸುವುದು ಸಾಧ್ಯವೇ? ಆಯ್ದಕ್ಕಿ ಲಕ್ಕಮ್ಮ, ಮಾರಯ್ಯ ದಂಪತಿಗಳು, ದಾಸೋಹ ಮಾಡುವ ಶಕ್ತಿ ಇರದಿದ್ದರೂ ಅಂತಹ ಮನಸ್ಸಿತ್ತು. ಲಕ್ಕಮ್ಮತನ್ನ ಬಿಡುವಿನ […]
Read More
ಲೇಖನ ಲಿವಿಂಗ್ ಟುಗೆದರ್ ಸುಜಾತಾ ರವೀಶ್ ಇಬ್ಬರೂ ಸಮಾನ ಮನಸ್ಕರು ಒಂದೇ ಸೂರಿನಡಿ ವಾಸಿಸುತ್ತಾ ಭಾವನಾತ್ಮಕ ಹಾಗೂ ದೈಹಿಕ ಸಂಬಂಧಗಳನ್ನು ವಿವಾಹ ವ್ಯವಸ್ಥೆ ಇಲ್ಲದೆ ಹೊಂದಿ ಜೀವಿಸುವುದಕ್ಕೆ livein relationship ಅಥವಾ ಸಹಬಾಳ್ವೆ ಪದ್ಧತಿ ಎನ್ನುತ್ತಾರೆ. ಈಗ ಎರಡು ದಶಕಗಳಿಂದೀಚೆಗೆ ಪ್ರಪಂಚದಲ್ಲಿ ಶುರುವಾಗಿರುವ ಹಾಗೂ ಸಮಾಜಶಾಸ್ತ್ರಜ್ಞರು ಮತ್ತು ಮಾನವ ಶಾಸ್ತ್ರಜ್ಞರ ನಿರೀಕ್ಷೆಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ವ್ಯವಸ್ಥೆ ಇದು ಪ್ರಚಲಿತ ಅಸ್ತಿತ್ವದಲ್ಲಿರುವ ಕುಟುಂಬ ಎಂಬ ಸಾಮಾಜಿಕ ಪರಿಕಲ್ಪನೆಯಿಂದ ಹೊರತಾದ ಹೊಸ ಬದಲಾವಣೆಯ ಅಲೆ ಇದು . ಮನುಷ್ಯ […]
Read More
ಲೇಖನ ಯೋಗ್ಯತೆಯಲ್ಲ ಯೋಗ ಬೇಕು ಜ್ಯೋತಿ ಬಾಳಿಗಾ “ಯಾಕೆ ಒಳ್ಳೆ ಇಡ್ಲಿ ಹಿಟ್ಟು ಊದಿಕೊಂಡಹಾಗೆ ಮುಖ ಮಾಡಿ ಕೂತಿದ್ದೀಯಾ… ಏನಾಯಿತು ?” ಎಂದು ನನ್ನವರು ಕೇಳಿದಾಗ “ಯಾಕೋ ಮನಸ್ಸು ಸರಿಯಿಲ್ಲ ಕಣ್ರಿ.. ಅಳು ಬರುವ ಹಾಗಿದೆ…” ಎಂದು ನನ್ನ ಮನದ ಬೇಗುದಿಯನ್ನು ತಿಳಿಸದೇ ಮಾತನ್ನು ತಳ್ಳಿ ಹಾಕಿದೆ. “ವಿಷಯ ಏನೂಂತ ಹೇಳಿದ್ರೆ ನನಗೂ ಗೊತ್ತಾಗುತ್ತದೆ, ಅದು ಬಿಟ್ಟು ಮನಸ್ಸು ಸರಿಯಿಲ್ಲಾಂತ ಹೇಳಿದ್ರೆ ಹೇಗೆ …? ಇಡೀ ದಿನ ಓದುವುದು, ಬರೆಯೋದೆ ಆಯಿತು. ಯೋಚನೆ ಮಾಡಿ ಮಾಡಿ ತಲೆ ಹಾಳು ಮಾಡಿಕೊಳ್ಳೋದು […]
Read More
ಲೇಖನ ಭೂತಾಯಿಗೆ ನಮನ ರಾಘವೇಂದ್ರ ಈ ಹೊರಬೈಲು ಇವತ್ತು ರಾತ್ರಿಯೆಲ್ಲಾ ಎಚ್ರಾಗಿರ್ಬೇಕು, ಮಲಗ್ಬಿಟ್ಟಿಯೋ. ರಾತ್ರಿಯೆಲ್ಲ ಹಬ್ಬ ಮಾಡ್ಬೇಕು, ಹಬ್ಬದಾಗೆ ಎಚ್ರಾಗಿರ್ದೆ ಹಂಗೆ ಮಲ್ಗಿದ್ರೆ ದೇವ್ರು ಶಾಪ ಕೊಡ್ತಾನೆ ಕಣೋ” ನಾನು ಚಿಕ್ಕ ಹುಡುಗನಾಗಿದ್ದಾಗ ನಮ್ಮಮ್ಮನಾಡಿದ ಮಾತುಗಳು ಎಂದಿಗೂ ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಕುಳಿತಿವೆ. “ಇದ್ಯಾವ ಹಬ್ಬನಪ್ಪ, ರಾತ್ರಿಯೆಲ್ಲ ಎಚ್ರಾಗಿರ್ಬೇಕಂತೆ” ಎಂದು ಗೊಣಗುಟ್ಟುತ್ತಾ ತೂಕಡಿಸುತ್ತಾ, ಅಮ್ಮನೋ ಅಪ್ಪನೋ ಹೇಳ್ತಾಯಿದ್ದ ಸಣ್ಣಪುಟ್ಟ ಕೆಲಸಗಳನ್ನು ಒಲ್ಲದ ಮನಸ್ಸಿನಿಂದ ನಿದ್ರೆಗಣ್ಣಿನಲ್ಲೇ ಮಾಡುತ್ತಾ, ಕೆಲವೊಮ್ಮೆ ಹೆಚ್ಚು ಕಡಿಮೆಯಾಗಿ, ಬೈಸಿಕೊಳ್ಳುತ್ತಾ ರಾತ್ರಿ ಕಳೆಯುತ್ತಿದ್ದ ಆ ದಿನಗಳನ್ನು […]
Read More| Powered by WordPress | Theme by TheBootstrapThemes