Category: ಜೀವನ

ಲಾಕ್ಡೌನ್ ಕಾಲಘಟ್ಟದ ದಾಂಪತ್ಯ

ಲೇಖನ ಲಾಕ್ಡೌನ್ ಕಾಲಘಟ್ಟದ ದಾಂಪತ್ಯ ಅಂಜಲಿ ರಾಮಣ್ಣ ಬೆಳಗಿನಲ್ಲಿ ಅವನು ಬಲು ಸುಭಗ. ರಾತ್ರಿಯಾಯಿತೆಂದರೆ ಕೀಚಕನೇ ಮೈಯೇರಿದ್ದಾನೆ ಎನ್ನುವಂತೆ ಇರುತ್ತಿದ್ದ. ಅವಳ ಮೈಮೇಲಿನ ಹಲ್ಗುರುತು, ಉಗುರ್ಗೆರೆ, ಸಿಗರೇಟಿನ ಬೊಟ್ಟು ಕತ್ತಲಲ್ಲೂ ಮಿರಮಿರ ಉರಿಯುತ್ತಿತ್ತು. ಸಹಿಸುತ್ತಲೇ ಅವಳ ದಾಂಪತ್ಯಕ್ಕೆ ಮೂರು ವರ್ಷ ಕಳೆದುಹೋಗಿತ್ತು. ಸ್ನಾನದ ನೀರು ಬಿದ್ದರೆ ಧಗಧಗ ಎನ್ನುವ ದೇಹ ದಹನಕ್ಕೆ ಹೆದರಿದ್ದ ದಾಕ್ಶಾಯಣಿ  ಅವಳು ಅದೆಷ್ಟೋ ದಿನಗಳಿಗೆ ಒಮ್ಮೆ ಸ್ನಾನ ಮಾಡುತ್ತಿದ್ದಳು. ಕತ್ತಲಲ್ಲಿ ಅವಳಾತ್ಮವನ್ನು ಹೀಗೆ ಚರ್ಮದಂತೆ ಸಂಸ್ಕರಿಸುತ್ತಿದ್ದವ ಬೆಳಕಿನಲ್ಲಿ ಬೆಕ್ಕಿನ ಮರಿಯಂತೆ ಆಗುತ್ತಿದ್ದ. ಆಫೀಸಿನಲ್ಲಿ […]

ಸಿರಿಗರ ಹೊಡೆದವರ. . . . .

ಸಾರ್ವಜನಿಕವಾಗಿ ನಮ್ಮ ನಡೆ ನುಡಿ ಅಂದರೆ ನಾವು ಕಾಣಿಸಿಕೊಳ್ಳುವ ರೀತಿ ನಡೆಯುವಾಗಿನ ಗತ್ತು ನಿಲ್ಲುವ ಭಂಗಿ ಕೂರುವ ಬಗೆ ಮಾತನಾಡುವ ಪರಿ ಇದರ ಮೇಲೆ ವ್ಯಕ್ತಿಯ ವ್ಯಕ್ತಿತ್ವದ ಕುರಿತಾಗಿ ಒಂದು ಚಿತ್ರಣ ರೂಪುಗೊಳ್ಳುತ್ತದೆ. ಆದರೆ ಕೇವಲ ಆಂಗಿಕ ಭಾಷೆಯಿಂದಲೇ ವ್ಯಕ್ತಿ ಅಹಂಕಾರಿ ಇಲ್ಲವೇ ವಿನಯವಂತ ಎಂದು ನಿರ್ಣಯಿಸಿ ಬಿಡುವುದು ಹಲವು ಸಲ ತಪ್ಪು ಎಂದೆನಿಸುವುದು

ನಮ್ಮದೇ ಇಷ್ಟವ ಆಗಾಗ.. ಕೇಳಿಕೊಳುವ ಇನ್ನಾದರೂ

ಬೆಳಕಿನ ಕವಿ ಜಿ ಎಸ್ ಶಿವರುದ್ರಪ್ಪನವರು ಹೇಳುವಂತೆ, “ಹಣತೆ ಹಚ್ಚುತ್ತೇನೆ ನಾನೂ, ಕತ್ತಲನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ, ಇರುವಷ್ಟು ಹೊತ್ತು ನನ್ನ ಮುಖ ನೀನು, ನಿನ್ನ ಮುಖ ನಾನು ನೋಡಬಹುದೆಂಬ ಆಸೆಯಿಂದ……..”

ಬದಲಾಗುತ್ತ ಹೋದ ಅವಳ ದೇವರು

ಬದಲಾಗುತ್ತ ಹೋದ  ಅವಳ ದೇವರು  ಎಂ. ಆರ್. ಅನಸೂಯ ಅವಳು ಏಳೆಂಟು ವರ್ಷದವಳಿದ್ದಾಗ  ಅಮ್ಮ ಹೇಳಿದ್ದು ಕೇಳಿದಾಗ ದೇವರೆಂದರೆ ಭಕ್ತಿಯಿಂದ ಕೇಳಿದರೆ ಸಾಕು ಕೇಳಿದ್ದನ್ನೆಲ್ಲಾ ಕೊಡುವಂಥಾ ಸರ್ವಶಕ್ತನೆಂಬ ನಂಬಿಕೆ. ತಾಯಿಯ ಕೈ ಹಿಡಿದು ನಡೆವ ಮಗುವಿನ ನಂಬಿಕೆ, ಮಳೆ ಬರುವುದೆಂದು ಬೀಜ ಬಿತ್ತನೆ ಮಾಡುವ ರೈತನ ನಂಬಿಕೆ ದೇವರ ಪ್ರಸಾದವೆಂದು ಕಣ್ಣಿಗೊತ್ತಿಕೊಂಡು ತಿನ್ನುವಂಥ  ಭಕ್ತರ ನಂಬಿಕೆ. ಭಕ್ತಿಯೆಂದರೆ ಹೇಗಿರಬೇಕು ಎಂಬುದಕ್ಕೆ ಅಮ್ಮನ ಮಾತೇ ವೇದವಾಕ್ಯ.ದಾಸವಾಳ ಹಾಗೂ ಗಿಡದ ಮೇಲೆ ಮೊಸರು ಚೆಲ್ಲಿದಂತೆ ಮೈತುಂಬ ಹೂ ಬಿಟ್ಟ ನಂದಿ […]

ಯಶಸ್ಸು ಮತ್ತು ಸಾಧನೆ

ಲೇಖನ ಯಶಸ್ಸು ಮತ್ತು ಸಾಧನೆ ಮಾಲಾ ಕಮಲಾಪುರ್ ಪ್ರತಿಯೊಬ್ಬ ಮನುಷ್ಯನು ಯಶಸ್ಸನ್ನು ಬಯಸುತ್ತಾನೆ. ಅತ್ತ್ಯುತ್ತಮ ಗುಣ ಮಟ್ಟದ ಜೀವನ ವನ್ನು ಅನುಭವಿಸಲು ಹಂಬಲಿಸುತ್ತಾನೆ. ಆದರೆ ಅದನ್ನು ಸಾಧಿಸಿ ಅಂಥ ಜೀವನ ನಡೆಸುವವರು ಕೆಲವರು ಮಾತ್ರ ಬಲವಾದ ನಂಬಿಕೆ ವಿಶ್ವಾಸ ಇದ್ದವರು ಹಿಡಿದ ಕಾರ್ಯ ವನ್ನು ಸಾಧಿಸಿಯೇ ತೀರುತ್ತಾರೆ. ಇಂಥವರಿಗೆ ಕಾಲು ಎಳೆಯುವವರು ಸಾವಿರಾರು.ಎಲ್ಲಿ ಸಾಧನೆ ಮಟ್ಟ ಇರುತ್ತದೆಯೋ ಅಲ್ಲಿ ಟೀಕಿಸುವವರು ನಮ್ಮ ಹಿಂದೆಯೇ ಇರುವರು . ನಾವುಹಿಂದೆ ನೋಡದೆ ಮುಂದೆ ಸಾಗುತ್ತ ಹೋಗಬೇಕು ಹಿತೈಷಿಗಳ ಮಾರ್ಗ ದರ್ಶನಇದ್ದರೆ […]

ಆತ್ಮ ವಿಶ್ವಾಸವಿರಲಿ…

ಲೇಖನ ಆತ್ಮ ವಿಶ್ವಾಸವಿರಲಿ… ರಶ್ಮಿ ಹೆಗಡೆ ಕ್ರಿ.ಶ 1306 ರಲ್ಲಿ ಸ್ಕಾಟ್ ಲ್ಯಾಂಡನ್ನು ಆಳುತ್ತಿದ್ದ ರಾಬರ್ಟ್ ಬ್ರೂಸ್ ಎಂಬ ದೊರೆ ತನ್ನ ಧೈರ್ಯ  ಧೈರ್ಯ,ಶೌರ್ಯಕ್ಕೆ ಹೆಸರಾಗಿದ್ದ. ಒಮ್ಮೆ ಇಂಗ್ಲೆಂಡಿನ ದೊರೆ ತನ್ನ ಸುಸಜ್ಜಿತವಾದ ಸೈನ್ಯದೊಂದಿಗೆ ಸ್ಕಾಟ್ ಲ್ಯಾಂಡ್ ಮೇಲೆ ದಾಳಿ ನಡೆಸಿದ. ಬ್ರಿಟಿಷ್ ಸೈನ್ಯದೆದುರು ಬಹಳ ಚಿಕ್ಕದಾಗಿದ್ದರೂ,ಹೋರಾಟ ಮನೋಭಾವ ಹೊಂದಿದ್ದ ತನ್ನ ಸೈನ್ಯವನ್ನು ಬ್ರೂಸ್ ಆರು ಬಾರಿ ಮುನ್ನಡೆಸಿದ. ದುರದೃಷ್ಟವೆಂಬಂತೆ ಆರು ಬಾರಿಯೂ ಆತನ ತುಕಡಿ ಸೋಲುಂಡಿತ್ತು,ರಾಜ್ಯವನ್ನು ಉಳಿಸಿಕೊಳ್ಳುವ ಎಲ್ಲ ಎಲ್ಲ ಭರವಸೆಗಳನ್ನೂ ಕಳೆದುಕೊಂಡಿತು.ಚದುರಿದ ಸೈನ್ಯದಲ್ಲಿ ಉಳಿದ […]

ಕಾನೂನು, ಮಹಿಳೆ ಮತ್ತು ಅರಿವು

ಅಂಜಲಿ ರಾಮಣ್ಣ ಬರೆಯುತ್ತಾರೆ
ಇದು ನನಗೆ ಕಲಿಸಿದ್ದು ಎರಡು ಪಾಠ. ಒಂದು ಹೆಂಗಸು ಮನಸ್ಸು ಮಾಡಿದರೆ, ಬುದ್ಧಿಯ ಮೂಲಕ ಗಳಿಸಿಕೊಂಡ ಆತ್ಮವಿಶ್ವಾಸ ಇದ್ದರೆ ಯಾರದ್ದೇ ಆಗಿರಲಿ, ಯಾವುದೇ ರೀತಿಯ ಮುಜುಗರವನ್ನು ಹೋಗಲಾಡಿಸಬಲ್ಲಳು

ನೀರು ಕುಡಿಯಿರಿ

ಲೇಖನ ನೀರು ಕುಡಿಯಿರಿ ಆಶಾ ಸಿದ್ದಲಿಂಗಯ್ಯ ಜನರು ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲಿ ನೀರನ್ನು ಕುಡಿಯುವುದೇ ಮರೆತಿದ್ದಾರೆ ಆದರೆ ನೀರು ಆರೋಗ್ಯಕ್ಕೆ ಅತ್ಯವಶ್ಯಕ.. ನಮ್ಮ ಉಳಿವಿಗಾಗಿ ನೀರು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಬಾಯಾರಿಕೆಯನ್ನು ನೀಗಿಸುವುದಕ್ಕೆ ಮಾತ್ರವಲ್ಲ, ದೇಹ ಸರಿಯಾಗಿ ಕೆಲಸ ಮಾಡಲು ಹಾಗೂ ರೋಗ ಮುಕ್ತವಾಗಿಡಲು ನೀರು ಅಗತ್ಯ. ದೇಹದ ತೂಕ ಇಳಿಸಲು ಸಹ ನೀರು ಕುಡಿಯುವುದು ಸಹಾಯಕಾರಿ. ಬಿಸಿನೀರು ಕುಡಿದರೆ ದೇಹದ ತೂಕ ಕಡಿಮೆ ಆಗಲು ಸಹಾಯ ಆಗುತ್ತಾ? ನಮ್ಮ ದೇಹದ ಸುಮಾರು 70% […]

ಮಾತು ಮನವನ್ನು ಅರಳಿಸಬೇಕು

ಲೇಖನ ಮಾತು ಮನವನ್ನು ಅರಳಿಸಬೇಕು ಮಾಲಾ ಕಮಲಾಪುರ್ ಭಾಷೆ ಮನುಷ್ಯನಿಗೆ  ಲಭಿಸಿದ ದೈವ ದತ್ತ ವರ ವಾದರೆ ಮಾತು ನಮ್ಮ ಭಾವನೆಗಳನ್ನು ಅಭಿವ್ಯಕ್ತಗೊಳಿಸುವ ಮೂಲಕ ಅಮೂಲ್ಯ ಸಾಧನ ಆಗಿದೆ. ಮಾತು ನಮ್ಮ ಬದುಕನ್ನು ಕಟ್ಟುತ್ತದೆ. ಇದು ವ್ಯಕ್ತಿಯ  ಬಿಚ್ಚಿಡುವ ಪಾರಿಜಾತದ ಪರಿಮಳದಂತೆ. ನಾವಾಡುವ ಮಾತು ಪುಷ್ಪದ ದಳದಂತೆ. ಮಾತಿನ ಬಳಕೆ  ಬಲ್ಲವರು ಮಾಣಿಕ್ಕ್ಯ ತರುತ್ತಾರೆ. ಬಳಿಕೆ ಅರಿಯದವರು ಜಗಳ ತರುತ್ತಾರೆ.ಮನುಷ್ಯನು  ಯಾವುದೇ ಲೌಕಿಕ ವಾದ ವಸ್ತು ಗಳಿಂದ ಅಲಂಕಾರ ಮಾಡಿಕೊಂಡರು ಶೋಭಿಸುವುದಿಲ್ಲ. ಆದರೆ ಒಳ್ಳೆಯ ಮಾತು ಮತ್ತು […]

Back To Top