ಕಾಯಕದ ಮಹತ್ವ.
ಲೇಖನ ಕಾಯಕದ ಮಹತ್ವ. ಜಯಶ್ರೀ ಭ.ಭಂಡಾರಿ. ದಾಸೋಹ ಕಾಯಕವೆಂಬ ನಾಣ್ಯದ ಇನ್ನೊಂದು ಮುಖ.ಸಮಾಜದಲ್ಲಿ ಸಂಪತ್ತು ಉತ್ಪತ್ತಿಯಾಗಲು ಸತ್ಯಶುದ್ಧ ಕಾಯಕ ಬೇಕು.ಆದರೆ,ಸಂಪತ್ತು ಕೇಂದ್ರೀಕತವಾದರೆ ಎಲ್ಲಾ ಬಗೆಯ ಅಸಮಾನತೆಗಳು ಹುಟ್ಟುತ್ತವೆ.ಆದ್ದರಿಂದ ಬಸವಾದಿ ವಚನಕಾರರು ದಾಸೋಹ ತತ್ವವನ್ನು ಆವಿಷ್ಕರಿಸಿ ಆಚರಣೆಯಲ್ಲಿ ತಂದರು.ಅಣ್ಣನವರ ಸುಪ್ರಸಿದ್ಧ ವಚನ “ಕಾಗೆಯೊಂದಗುಳ ಕಂಡಡೆ ಕೂಗಿ ಕರೆಯದೆ ತನ್ನ ಬಳಗವ….”. ಸಮಾಜದಲ್ಲಿ ಸಂಪತ್ತಿನ ವಿತರಣೆಯಾಗಲೇಬೇಕೆಂದು ವಿಧಿಸುವ ನಿಯಮ. ಕಾಯಕ ಸಾರ್ಥಕವಾಗುವದೇ ದಾಸೋಹದಲ್ಲಿ.ಆದ್ದರಿಂದಲೇ “ಸೋಹಂ ಎಂದೆನಿಸದೆ ದಾಸೋಹಂ ಎಂದೆನಿಸಯ್ಯ” ಎಂದು ದೇವರಲ್ಲಿ ಪ್ರಾರ್ಥಿಸುತ್ತಾರೆ ಅಣ್ಣ.”ತನು ಮನ ಬಳಲಿಸಿ ತಂದು ದಾಸೋಹ […]
ಖುಷಿ ನಮ್ಮಲ್ಲೇ!!!
ಲೇಖನ ಖುಷಿ ನಮ್ಮಲ್ಲೇ!!! ಮಾಲಾ ಅಕ್ಕಿಶೆಟ್ಟಿ ಕೈಯಲ್ಲಿ10 ರ ನೋಟು ಹಿಡಿದುಕೊಂಡು ಬಡ ಹುಡುಗ ರೋಡ್ ಮೇಲೆ ಇರುವ ಭಜಿ ಅಂಗಡಿಗೆ ಬಂದಿದ್ದ. ಆಸೆ ಕಂಗಳಿಂದ ಮೂರು ತರಹದ ಭಜಿ, ಅಂದರೆ ಕಾಂದಾ, ಮಿರ್ಚಿ ಮತ್ತು ಮೈಸೂರ ಭಜಿಯನ್ನು ಒಂದೇ ಸಮನೇ ನೋಡಿದ. ಆ ಅಂಗಡಿಯಲ್ಲಿ 4 ಭಜಿಗಳ ಪ್ಲೇಟ್ಗೆ 20 ರೂಪಾಯಿ.ಒಂದು ಭಜಿಯನ್ನು ಕೊಡುವ ಸೌಲಭ್ಯವಿರುವದರಿಂದ 5ರೂಪಾಯಿಗೆ ಯಾವುದಾದರು ಭಜಿ ತಿನ್ನಬಹುದು.ಆತ ಡಿಸೈಡ್ ಮಾಡಿ 5 ರೂ ಕೊಟ್ಟು ಮಿರ್ಚಿ ಭಜಿಯನ್ನು ಸವಿದ.ಬಸಿಯಾಕಾರದಲ್ಲಿ ಕಣ್ಣು ತೆರೆದು, […]
ಯಾಕೆ ನೆಗೆಟಿವಿಟಿ?
ಲೇಖನ ಯಾಕೆ ನೆಗೆಟಿವಿಟಿ? ಮಾಲಾ.ಮ. ಅಕ್ಕಿಶೆಟ್ಟಿ. “ಆಕೆ ಯಾವಾಗಲೂ ಹಾಗೆಯೇ ಬಿಡಿ. ಏನ್ ಹೇಳಿದ್ರು ನೆಗೆಟಿವ್ ಆಗಿ ಯೋಚಿಸಿ, ಅದರಲ್ಲೇ ಮುಳುಗಿರುತ್ತಾಳೆ. ಇದ್ದ ಗಳಿಗೆಯನ್ನು ಆನಂದಿಸಲು ಬರಲ್ಲ. ಬರೀ ನೆಗೆಟಿವ್. ಜೀವನವನ್ನು ಆನಂದಿಸುವುದೂ ಒಂದು ಕಲೆ. ಅದು ಆಕೆಗೆ ಗೊತ್ತಿಲ್ಲ. ಎಲ್ಲರದೂ ಒಂದೊಂದು ಸಮಸ್ಯೆ ಇದ್ದೇ ಇರುತ್ತೆ. ಯಾರಿಗೂ ಸಮಸ್ಯೆ ತಪ್ಪಿದ್ದಿಲ್ಲ. ಜೀವನ ಇದ್ದ ಹಾಗೆ ನಡೆದುಕೊಂಡು ಹೋಗಬೇಕು. ಅದು ಬಿಟ್ಟು ಸತತ ಇಪ್ಪತ್ತನಾಲ್ಕು ಗಂಟೆಯೂ ನಕಾರಾತ್ಮಕವಾಗಿ ಯೋಚಿಸಿದರೆ ಹೇಗೆ? ಅದೇನೊ ಅಂತಾರಲ್ಲ ಪ್ರತಿ ಪರಿಹಾರಕ್ಕೂ ಇಂಥವರು […]
ಥಾಂಕ್ಸ್ ಎಂದರೆ ಸಾಕೇ
ಲೇಖನ ಥಾಂಕ್ಸ್ ಎಂದರೆ ಸಾಕೇ ಶಾಂತಿವಾಸು ನನಗೆ ನಮ್ಮಪ್ಪ (ನಾವು ನಮ್ಮಪ್ಪನನ್ನು ಅಣ್ಣ ಅಂತಾನೇ ಕರೀತಿದ್ದಿದ್ದು) ಏನು ಅಂತ ಅರ್ಥವಾಗಿದ್ದು, ನಾನು ಮದುವೆ ಆದ ಮೇಲೇನೆ. ನನ್ನ ಮದುವೆಯಾದ ನಂತರ ಮೊದಲ ಸಲ ಅತ್ತೆ ಮನೆಗೆ ಹೊರಡಿಸಲು ಕೆಲವರು ಹಾಗೂ ಕರೆದುಕೊಂಡು ಹೋಗಲು ಬಂದ ನೆಂಟರು ಮನೆ ತುಂಬಾ ತುಂಬಿರುವಾಗ, ನಮ್ಮಪ್ಪ ಬಚ್ಚಲುಮನೆಯ ಒಳಗೆ ಸೇರಿಕೊಂಡು ಚಿಲಕ ಜಡಿದು ಕಿರಿಚಿ ಕಿರಿಚಿ ಅತ್ತಿದ್ದನ್ನು ಕಂಡು ಎಲ್ಲರಿಗೂ ಪರಮಾಶ್ಚರ್ಯ. ನಮ್ಮಪ್ಪನ ಹೃದಯದಲ್ಲಿಯೂ ಪ್ರೀತಿ ಎಂಬ ಒರತೆ ಜಿನುಗುತ್ತದೆ ಎಂದು […]
ಹೋಗಿ ಬರುತ್ತೇವೆ ಆ ಬೆಟ್ಟಕ್ಕೆ
ಅನುಭವ ಹೋಗಿ ಬರುತ್ತೇವೆ ಆ ಬೆಟ್ಟಕ್ಕೆ ಪ್ರತಿ ಡಿಸೆಂಬರ್ ೨೨ಕ್ಕೆ ನಮ್ಮ ಶಾಲೆಯ ವಾರ್ಷಿಕೋತ್ಸವ, ಯಾವಾಗಲು ವಾರ್ಷಿಕೋತ್ಸವ ಮುಗಿದ ಬಳಿಕ ನಮಗೆ ಕ್ರಿಸ್ಮಸ್ರಜೆ. ರಜೆ ಕಳೆಯಲೆಂದೇ ಅಜ್ಜನ ಮನೆಗೆ ಹೋದೆವು. ನಮ್ಮ ಹಾಗೆ ಕ್ರಿಸ್ಮಸ್ ರಜೆ ಕಳೆಯಲು ನಮ್ಮಜ್ಜನ ದಾಯಾದಿಗಳ ಮನೆಮಕ್ಕಳೂ ಬಂದಿದ್ದರು. ಒಂದು ರೀತಿ ಮಕ್ಕಳ ಸೈನ್ಯವೇ ಸರಿ. ನಿಮ್ಮ ಶಾಲೆ ಹೇಗೆ? ನಿಮ್ಮ ಶಾಲೆಯಲ್ಲಿ ಏನೇನು ಕಲಿಸುತ್ತಾರೆ? ನಿಮಗೆ ಯಾವ ಟೀಚರ್ ಇಷ್ಟ? ಯಾರು ಹೇಗೆ ಬಯ್ಯುತ್ತಾರೆ? ಇತ್ಯಾದಿಗಳ ಚರ್ಚೆ ಮಾಡುತ್ತಿದ್ದೆವು. ರಜೆಗೆಂದು […]
ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧ
ಪ್ರಸ್ತುತ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧದ ಕುರಿತು ಮಹಾತ್ಮ ಗಾಂಧೀಜಿ ಡಾ.ಎಸ್.ಬಿ. ಬಸೆಟ್ಟಿ ಮಹಾತ್ಮ ಗಾಂಧೀಜಿಯವರು ಜನರು ಬಯಸುವ ಹಾನಿಕಾರಕ ಮತ್ತು ಅನಾವಶ್ಯಕ ಮಾದಕ ವಸ್ತುಗಳನ್ನು ವಿರೋಧಿಸುತ್ತಿದ್ದರು. ಗಾಂಧೀಜಿಯವರು ತಂಬಾಕು ಮತ್ತು ಮಧ್ಯವನ್ನು ಜನರ ಆರೋಗ್ಯಕ್ಕೆ ಅತ್ಯಂತ ಹಾನಿ ಕಾರಕ ವಸ್ತುಗಳೆಂದು ಪರಿಗಣಿಸಿದ್ದರು ಜೊತೆಗೇ ಚಹಾ ಮತ್ತು ಕಾಫಿಯನ್ನು ಕೂಡಾ ಅನಾವಶ್ಯಕ ವಸ್ತುಗಳೆಂದು ಭಾವಿಸಿದ್ದರು. “ಬೆಂಕಿ ದೇಹವನ್ನು ನಾಶ ಮಾಡಿದರೆ, ಮದ್ಯ ಮತ್ತು ಮಾದಕ ವಸ್ತು ದೇಹ ಮತ್ತು ಆತ್ಮ ಎರಡನ್ನೂ ನಾಶ ಮಾಡುತ್ತದೆ” […]
ಲೆಕ್ಕಕ್ಕೊಂದು ಸೇರ್ಪಡೆ
ಲೇಖನ ಲೆಕ್ಕಕ್ಕೊಂದು ಸೇರ್ಪಡೆ ಶಾಂತಿ ವಾಸು ಚೀನಿಯರ ಕೆಟ್ಟ ಮನಸ್ಥಿತಿಯ ಕನ್ನಡಿ ಕೊರೊನ, ಭಾರತವನ್ನು ಪ್ರವೇಶಿಸುವ ಮೊದಲೇ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದ, ಸಂಪೂರ್ಣ ದೇಹವನ್ನು ಅದೇನೋ ಹೊಸತರಹದ ದಿರಿಸಿನಿಂದ ಮುಖಸಹಿತ ಮುಚ್ಚಿಕೊಂಡ ಜನರು ಪ್ಲಾಸ್ಟಿಕ್ ಚೀಲದಲ್ಲಿ ಬಿಗಿಯಾಗಿ ಸುತ್ತಿದ ನೂರಾರು ಜನರ ಮೃತದೇಹಗಳನ್ನು ಒಟ್ಟೊಟ್ಟಿಗೇ, ಆಳವಾದ ಒಂದೇ ಹಳ್ಳದಲ್ಲಿ ಹಾಕಿ ಮಣ್ಣು ಮುಚ್ಚುವುದು ಹಾಗೂ ಪೆಟ್ರೋಲ್ ಸುರಿದು ಸಾಮೂಹಿಕವಾಗಿ ಸುಡುವುದನ್ನು ನೋಡಿಯೇ ಪ್ರಪಂಚವು ನಡುಗಿಹೋಗಿತ್ತು. ಇದೇನು?? ಹೊಸದಾಗಿ ನಡೆದದ್ದೇ? ಅಥವಾ ಯಾವುದಾದರೂ ಸಿನಿಮಾಗಾಗಿ ಇರಬಹುದೇನೋ ಎಂದು ಗೊಂದಲಗೊಂಡ ಕೋಟ್ಯಂತರ […]
ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..!
ಲೇಖನ ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! ಕೆ.ಶಿವು ಲಕ್ಕಣ್ಣವರ ಹಿಂದಿ ಹೇರಿಕೆಯು ದ್ರಾವಿಡ ಭಾಷಾ ಅಸ್ಮಿತೆಗೆ ಕೇಂದ್ರದ ಕೊಡಲಿ ಪೆಟ್ಟು..! ಕರ್ನಾಟಕದಲ್ಲಿ ಎರಡು ವರ್ಷಗಳ ಹಿಂದೆ ಕೇಂದ್ರ ಸರ್ಕಾರದ ಅಣತಿ ಮೇರಗೆ ಬೆಂಗಳೂರು ಮೆಟ್ರೋ ಆಡಳಿತ ಮಂಡಳಿ ಇಲ್ಲಿನ ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಭಾಷೆಯಲ್ಲಿ ಫಲಕಗಳನ್ನು ಹಾಕಿದಾಗಲೇ ಸ್ಥಳೀಯ ಕನ್ನಡಪರ ಹೋರಾಟಗಾರರು ಹಿಂದಿ ಫಲಕಗಳಿಗೆ ಬಣ್ಣ ಬಳಿದು ಪ್ರತಿಭಟಿಸಿದ್ದರು. ಈ ಸಂದರ್ಭದಲ್ಲಿ ಸಂವಿಧಾನದಲ್ಲಿ ಯಾವ ಭಾಷೆಗೂ ರಾಷ್ಟ್ರಭಾಷೆ ಎಂಬ ವಿಶೇಷ ಸ್ಥಾನಮಾನ ನೀಡಲಾಗಿಲ್ಲ ಎಂಬುದನ್ನು […]
ವಿವಾಹ ವ್ಯವಸ್ಥೆ- ಒಂದು ಚರ್ಚೆ
ಚರ್ಚೆ ವಿವಾಹ ವ್ಯವಸ್ಥೆ- ಒಂದು ಚರ್ಚೆ ಚಂದಕಚರ್ಲ ರಮೇಶ ಬಾಬು ಹೊಸ ತಲೆಮಾರಿನ ವಿವಾಹಗಳು ವೈವಿಧ್ಯತೆ ಸಂತರಿಸಿಕೊಂಡಿರುವುದರಿಂದ ಈಗ ನಮ್ಮ ಸಮಾಜದಲ್ಲಿನ ವಿವಾಹ ವ್ಯವಸ್ಥೆಯ ಬಗ್ಗೆ ಒಂಚೂರು ಚರ್ಚೆ ಮಾಡುವ ಎಂತಾಗಿದೆ. ನಮಗೆ ಕಾಣುವ ಹಾಗೆ ವಿವಾಹಗಳಲ್ಲಿ ಎರಡು ರೀತಿಯ ಪ್ರಭಾಗಗಳು ಕಾಣುತ್ತವೆ. ಗಂಡು ಹೆಣ್ಣು ಪ್ರೀತಿಸಿ ತಾವೇ ನಿರ್ಣಯಿಸಿಕೊಂಡು ಮದುವೆ ಯಾಗುವುದು (ಪ್ರೇಮ ವಿವಾಹ) ಮತ್ತೊಂದು ಸಾಂಪ್ರದಾಯಿಕವಾಗಿ ನಡೆದು ಬಂದ ರೀತಿಯಲ್ಲಿ ಮನೆಗೆ ದೊಡ್ಡವರು ಹೆಣ್ಣು ನೋಡಿ ನಿಶ್ಚಯಿಸಿ ಮದುವೆ ಮಾಡುವುದು ( ಅರೇಂಜ್ಡ್ ಮ್ಯಾರೇಜ್) […]
ಇತರೆ
ರೈತರ ಆಪತ್ಭಾಂದವ ಜೋಕಪ್ಪನೂ..! ಮಳೆ ತರುವ ದೇವರು ಜೋಕುಮಾರಸ್ವಾಮಿ. ಗಣೇಶ ಶಿಷ್ಟ ಪರಂಪರೆಯ ದೇವರು. ಅಲ್ಲದೇ ಜಾನಪದರ ದೇವರು ಜೋಕುಮಾರಸ್ವಾಮಿ.ಗಣೇಶ ಹೊಟ್ಟೆ ತುಂಬ ಉಂಡು ಭೂಲೋಕದಲ್ಲಿ ಎಲ್ಲವೂ ಸೌಖ್ಯವಾಗಿದೆ ಎಂದು ತನ್ನ ತಂದೆತಾಯಿಗಳಾದ ಶಿವ-ಪಾರ್ವತಿಯರಿಗೆ ವರದಿ ಒಪ್ಪಿಸಿದರೆ, ಜಾನಪದರ ದೇವರು ಜೋಕುಮಾರಸ್ವಾಮಿ ಇಲ್ಲಿ ಮಳೆ, ಬೆಳೆ ಇಲ್ಲದೇ ಕಂಗಾಲಾಗಿರುವ ಜನತೆಯ ಕಷ್ಟ ಕಾರ್ಪಣ್ಯಗಳ ವರದಿ ನೀಡಿ ಮಳೆ ಸುರಿಸಲು ವಿನಂತಿಸಿಕೊಳ್ಳುತ್ತಾನೆ. ಹೀಗಾಗಿಯೇ ಜೋಕುಮಾರಸ್ವಾಮಿ ಒಕ್ಕಲಿಗರಿಗೆ ಮಳೆ ತರುವ ನಂಬಿಗಸ್ತ ದೇವರು. ‘ಜೋಕುಮಾರಸ್ವಾಮಿ ಮಳಿ ಕೊಡಾವ ನೋಡ್ರೀ’ ಎಂದು […]