Category: ಜೀವನ

ಆತ್ಮ ವಿಶ್ವಾಸವಿರಲಿ…

ಲೇಖನ ಆತ್ಮ ವಿಶ್ವಾಸವಿರಲಿ… ರಶ್ಮಿ ಹೆಗಡೆ ಕ್ರಿ.ಶ 1306 ರಲ್ಲಿ ಸ್ಕಾಟ್ ಲ್ಯಾಂಡನ್ನು ಆಳುತ್ತಿದ್ದ ರಾಬರ್ಟ್ ಬ್ರೂಸ್ ಎಂಬ ದೊರೆ ತನ್ನ ಧೈರ್ಯ  ಧೈರ್ಯ,ಶೌರ್ಯಕ್ಕೆ ಹೆಸರಾಗಿದ್ದ. ಒಮ್ಮೆ ಇಂಗ್ಲೆಂಡಿನ ದೊರೆ ತನ್ನ ಸುಸಜ್ಜಿತವಾದ ಸೈನ್ಯದೊಂದಿಗೆ ಸ್ಕಾಟ್ ಲ್ಯಾಂಡ್ ಮೇಲೆ ದಾಳಿ ನಡೆಸಿದ. ಬ್ರಿಟಿಷ್ ಸೈನ್ಯದೆದುರು ಬಹಳ ಚಿಕ್ಕದಾಗಿದ್ದರೂ,ಹೋರಾಟ ಮನೋಭಾವ ಹೊಂದಿದ್ದ ತನ್ನ ಸೈನ್ಯವನ್ನು ಬ್ರೂಸ್ ಆರು ಬಾರಿ ಮುನ್ನಡೆಸಿದ. ದುರದೃಷ್ಟವೆಂಬಂತೆ ಆರು ಬಾರಿಯೂ ಆತನ ತುಕಡಿ ಸೋಲುಂಡಿತ್ತು,ರಾಜ್ಯವನ್ನು ಉಳಿಸಿಕೊಳ್ಳುವ ಎಲ್ಲ ಎಲ್ಲ ಭರವಸೆಗಳನ್ನೂ ಕಳೆದುಕೊಂಡಿತು.ಚದುರಿದ ಸೈನ್ಯದಲ್ಲಿ ಉಳಿದ […]

ಕಾನೂನು, ಮಹಿಳೆ ಮತ್ತು ಅರಿವು

ಅಂಜಲಿ ರಾಮಣ್ಣ ಬರೆಯುತ್ತಾರೆ
ಇದು ನನಗೆ ಕಲಿಸಿದ್ದು ಎರಡು ಪಾಠ. ಒಂದು ಹೆಂಗಸು ಮನಸ್ಸು ಮಾಡಿದರೆ, ಬುದ್ಧಿಯ ಮೂಲಕ ಗಳಿಸಿಕೊಂಡ ಆತ್ಮವಿಶ್ವಾಸ ಇದ್ದರೆ ಯಾರದ್ದೇ ಆಗಿರಲಿ, ಯಾವುದೇ ರೀತಿಯ ಮುಜುಗರವನ್ನು ಹೋಗಲಾಡಿಸಬಲ್ಲಳು

ನೀರು ಕುಡಿಯಿರಿ

ಲೇಖನ ನೀರು ಕುಡಿಯಿರಿ ಆಶಾ ಸಿದ್ದಲಿಂಗಯ್ಯ ಜನರು ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲಿ ನೀರನ್ನು ಕುಡಿಯುವುದೇ ಮರೆತಿದ್ದಾರೆ ಆದರೆ ನೀರು ಆರೋಗ್ಯಕ್ಕೆ ಅತ್ಯವಶ್ಯಕ.. ನಮ್ಮ ಉಳಿವಿಗಾಗಿ ನೀರು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಬಾಯಾರಿಕೆಯನ್ನು ನೀಗಿಸುವುದಕ್ಕೆ ಮಾತ್ರವಲ್ಲ, ದೇಹ ಸರಿಯಾಗಿ ಕೆಲಸ ಮಾಡಲು ಹಾಗೂ ರೋಗ ಮುಕ್ತವಾಗಿಡಲು ನೀರು ಅಗತ್ಯ. ದೇಹದ ತೂಕ ಇಳಿಸಲು ಸಹ ನೀರು ಕುಡಿಯುವುದು ಸಹಾಯಕಾರಿ. ಬಿಸಿನೀರು ಕುಡಿದರೆ ದೇಹದ ತೂಕ ಕಡಿಮೆ ಆಗಲು ಸಹಾಯ ಆಗುತ್ತಾ? ನಮ್ಮ ದೇಹದ ಸುಮಾರು 70% […]

ಮಾತು ಮನವನ್ನು ಅರಳಿಸಬೇಕು

ಲೇಖನ ಮಾತು ಮನವನ್ನು ಅರಳಿಸಬೇಕು ಮಾಲಾ ಕಮಲಾಪುರ್ ಭಾಷೆ ಮನುಷ್ಯನಿಗೆ  ಲಭಿಸಿದ ದೈವ ದತ್ತ ವರ ವಾದರೆ ಮಾತು ನಮ್ಮ ಭಾವನೆಗಳನ್ನು ಅಭಿವ್ಯಕ್ತಗೊಳಿಸುವ ಮೂಲಕ ಅಮೂಲ್ಯ ಸಾಧನ ಆಗಿದೆ. ಮಾತು ನಮ್ಮ ಬದುಕನ್ನು ಕಟ್ಟುತ್ತದೆ. ಇದು ವ್ಯಕ್ತಿಯ  ಬಿಚ್ಚಿಡುವ ಪಾರಿಜಾತದ ಪರಿಮಳದಂತೆ. ನಾವಾಡುವ ಮಾತು ಪುಷ್ಪದ ದಳದಂತೆ. ಮಾತಿನ ಬಳಕೆ  ಬಲ್ಲವರು ಮಾಣಿಕ್ಕ್ಯ ತರುತ್ತಾರೆ. ಬಳಿಕೆ ಅರಿಯದವರು ಜಗಳ ತರುತ್ತಾರೆ.ಮನುಷ್ಯನು  ಯಾವುದೇ ಲೌಕಿಕ ವಾದ ವಸ್ತು ಗಳಿಂದ ಅಲಂಕಾರ ಮಾಡಿಕೊಂಡರು ಶೋಭಿಸುವುದಿಲ್ಲ. ಆದರೆ ಒಳ್ಳೆಯ ಮಾತು ಮತ್ತು […]

ತೆರೆ ಮರೆಯಾಗಲಿರುವ ನತದೃಷ್ಟ ೨೦೨೦

ತೆರೆ ಮರೆಯಾಗಲಿರುವ ನತದೃಷ್ಟ ೨೦೨೦ ಚಂದಕಚರ್ಲ ರಮೇಶ ಬಾಬು ಒಂದು ವರ್ಷ ಸರಿದು ಹೋಗುವಾಗ ಅದು ಕೊನೆಗೆ ಕೊಟ್ಟ ಬವಣೆಯನ್ನು ಕಂಡು ವರ್ಷವನ್ನೇ ದೂರಲಾಗುವುದಿಲ್ಲ. ಎಂದಿನ ಹೊಸ ವರ್ಷದಂತೆ ೨೦೨೦ ರನ್ನು ಸಹ ನಾವೆಲ್ಲ ಸಂಭ್ರಮದಿಂದಲೇ ಸ್ವಾಗತಿಸಿದೆವು. ನಮ್ಮ ಕನಸುಗಳನ್ನು ನನಸಾಗಿಸಲು ಈ ವರ್ಷ ತನ್ನ ಪಾತ್ರ ಪೋಷಿಸುತ್ತದೆ ಎಂಬ ಭರವಸೆಯ ಆಶೆ ಹೊತ್ತೆವು. ಮೊದಲೆರಡು ತಿಂಗಳೂ ಯಾವುದಕ್ಕೂ ಕೊರತೆಯೆನಿಸಲಿಲ್ಲ. ಹಬ್ಬಗಳೂ, ಹರಿದಿನಗಳೂ, ಮದುವೆಗಳೂ ಎಲ್ಲ ಎಲ್ಲರೂ ಅಂದುಕೊಂಡಂತೆ ನಡೆದವು. ಅಷ್ಟರಲ್ಲೇ ಚೀನಾಕ್ಕೆ ಕೊರೋನಾದ ಸೋಂಕು ಕಾಲಿಟ್ಟಿತ್ತು. […]

ಆಶ್ಚರ್ಯ,ಆಘಾತಗಳ ವರ್ಷ

ಆಶ್ಚರ್ಯ,ಆಘಾತಗಳ ವರ್ಷ ನೂತನ ದೋಶೆಟ್ಟಿ 2020ರ ವರ್ಷಕ್ಕೆ ಒಂದು ಪದದಲ್ಲಿ  ಶೀರ್ಷಿಕೆ ಕೊಡಿ ಎಂದರೆ ನಾನು ‘ದಿಗಿಲು’ ಎಂದು ಕೊಡುತ್ತೇನೆ. ಇದು ಭಯ, ಆಶ್ಚರ್ಯ, ಆಘಾತ ಮೊದಲಾದವುಗಳು ಒಟ್ಟು ಸೇರಿ ಉಂಟು ಮಾಡಬಹುದಾದ ಹೇಳಲು ಆಗದ ಒಂದು ಸ್ಥಿತಿ. ಇಂಥ ಸ್ಥಿತಿ ಆಗಾಗ ಎಲ್ಲರ ಜೀವನದಲ್ಲೂ ಬರುತ್ತಲೇ ಇರುತ್ತದೆ. ಆದರೆ ಒಟ್ಟಾರೆ ಮನುಕುಲವೇ ಇಂಥ ಸಮೂಹ ಸ್ಥಿತಿಗೆ ಒಳಗಾಗಿದ್ದು ಆಧುನಿಕ ಕಾಲದಲ್ಲಿ ಇದು ಮೊದಲ ಬಾರಿ ಎಂದು ಹೇಳಬಹುದು. ವಿಶ್ವ ಮಹಾಯುದ್ಧ ಗಳು  ನಡೆದ ಕಾಲದಲ್ಲಿ ಮಾಧ್ಯಮಗಳು, […]

ಹೊಸ ಭರವಸೆಯೊಂದಿಗೆ..

ಕೊರೊನಾ ಕಾಡಿದ ವರ್ಷಾಂತ್ಯದಲ್ಲಿ ನಿಂತು ಹೊಸ ಭರವಸೆಯೊಂದಿಗೆ..    ಜ್ಯೋತಿ  ಡಿ.ಬೊಮ್ಮ. ಹೊಸ ವರ್ಷದ ಹೊಸ್ತಿಲಲ್ಲಿ ನಿಂತು ಹಿಂದಿರುಗಿ ನೋಡಿದಾಗ ನಿಟ್ಟುಸಿರಿನೊಂದಿಗೆ ವಿಷಾದದ ವಿಷಣ್ಣ ನಗೆಯೊಂದು ಮೂಡುತ್ತದೆ ಕಂಡು ಕಾಣದಂತೆ. 2020 ನೆಯ ವರ್ಷವನ್ನು ಕೂಡ ಒಂದು ಹೊಸ ಭರವಸೆಯಿಂದಲೆ ಬರಮಾಡಿಕೊಂಡಿದ್ದೆವು.ಹಿಂದೊಂದು ಕಾಣದ ಸಾಂಕ್ರಾಮಿಕ ಪಿಡುಗಿನ ಭಯಾನಕ ರೂಪ ಇಡೀ ಮನಕುಲವನ್ನೆ ತಲ್ಲಣಿಸಿಬಿಟ್ಟಿತು. ಎಂಥ ಅನಿಶ್ಚಿತತೆಯ ವಾತಾವರಣ ,ಇಡೀ ಜಗತ್ತೇ ಸ್ಥಬ್ದವಾದಂತಹ ಅಸಹಾಯಕ ಸ್ಥಿತಿ.ರೋಗದ ಭಯ ಎಷ್ಟು ವ್ಯಾಪಿಸಿಬಿಟ್ಟಿತೆಂದರೆ ವೈದ್ಯಕೀಯ ಕ್ಷೇತ್ರವು ಕಂಪಿಸಿತು. ಯಾರಿಗೆ ಯಾವಾಗ ರೋಗ […]

ಕಾಡುಗೊಲ್ಲ ಮತ್ತು ತೋಡ ಜನಾಂಗದ ಗುಡಿಸಲಿನಲ್ಲಿ ಸಾಮ್ಯತೆ

ಬುಡಕಟ್ಟು ಜನಾಂಗದ ಬಗ್ಗೆ ಬೆಳಕು ಚೆಲ್ಲುವ ಲೇಖನ ಕಾಡುಗೊಲ್ಲ ಮತ್ತು ತೋಡ ಜನಾಂಗದ ಗುಡಿಸಲಿನಲ್ಲಿ ಸಾಮ್ಯತೆ ಆಶಾ ಸಿದ್ದಲಿಂಗಯ್ಯ ಕಾಡುಗೊಲ್ಲ ಬುಡಕಟ್ಟು ಜನಾಂಗವು ತುಮಕೂರು, ಮತ್ತು ಚಿತ್ರದುರ್ಗ,ಜಿಲ್ಲೆಯಲ್ಲಿ ಹೆಚ್ಚಾಗಿ ನೆಲೆಗೊಂಡಿದ್ದಾರೆ ಉಳಿದಂತೆ   ದಾವಣಗೆರೆ, ಬಳ್ಳಾರಿ ಗಡಿಭಾಗ  ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ , ರಾಮನಗರ  , ಮಂಡ್ಯ, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಂಗಳೂರು ಜಿಲ್ಲೆಯಲ್ಲಿ  ವಿರಳವಾಗಿ ಕಾಣಸಿಗುತ್ತಾರೆ. ಒಟ್ಟಾರೆ ಕರ್ನಾಟಕದಲ್ಲಿ ಇವರ ಜನಸಂಖ್ಯೆ ಹತ್ತು ಲಕ್ಷ ಇದೆ. ಕಾಡುಗೊಲ್ಲರನ್ನು ಮುನ್ನೆಲೆಗೆ ತರಲು  ಮತ್ತು ಸರ್ಕಾರ ಅವರನ್ನು ಗುರುತಿಸಲು […]

ದೊಡ್ಡವರ ಮನೆಯ ಸಣ್ಣ ಕತೆ

ಅನುಭವ ದೊಡ್ಡವರ ಮನೆಯ ಸಣ್ಣ ಕತೆ ವೀಣಾ ನಿರಂಜನ್ ಈ ದೊಡ್ಡವರ ಮನೆಯ ಕತೆಗಳು ಬಹಳ ಸ್ವಾರಸ್ಯಕರವಾಗಿರುತ್ತವೆ. ನಾನು ಇಲ್ಲಿ ಹೇಳ ಹೊರಟಿರುವುದು ಒಂದು ಸ್ಯಾಂಪಲ್ ಅಷ್ಟೇ. ಆ ದಿನ ಮನೆ ಮಂದಿಯೆಲ್ಲ ಸಡಗರದಿಂದ ಓಡಾಡುತ್ತಿದ್ದರು. ಮನೆಯ ಮಗನ ಹುಟ್ಟುಹಬ್ಬ ಎಂದರೆ ಕೇಳಬೇಕೆ. ಶೇಖರ್ ಬಾಬು ಬೆಳಿಗ್ಗೆಯೇ ಮಗನಿಗೆ ಇಂಪೋರ್ಟೆಡ್ ಶಾಂಪೂ, ಸೋಪು ಹಾಕಿ ಹಿತವಾಗಿ ಸ್ನಾನ ಮಾಡಿಸಿದರು. ಮಕ್ಕಳಿಬ್ಬರೂ ಸಂಭ್ರಮದಿಂದ ತಂದೆಗೆ ನೆರವಾದರು. ಶರಾವತಿ ಸಂಜೆ ಪಾರ್ಟಿಗೆ ಯಾರ್ಯಾರನ್ನು ಕರೆಯಬೇಕು, ಏನೇನು ಆರ್ಡರ್ ಮಾಡಬೇಕು ಅದೆಲ್ಲವನ್ನೂ […]

ಶರದದ ಹಗಲಲ್ಲಿ ಆಷಾಢದ ಮೋಡಗಳು…

ಶರದದ ಹಗಲಲ್ಲಿ ಆಷಾಢದ ಮೋಡಗಳು… ಎಂ.ಆರ್.ಕಮಲ. ಹೊರಗಿನ ಋತುಮಾನಕ್ಕೂ ಒಳಗಿನ ಋತುಮಾನಕ್ಕೂ ಸಂಬಂಧವಿದೆಯೇ ಎಂದು ಹಲವಷ್ಟು ಬಾರಿ ಯೋಚಿಸಿದ್ದೇನೆ. ಇದೆ ಎನ್ನುವುದು ನಿಜವಾದರೂ ಪೂರ್ಣಸತ್ಯವಲ್ಲ. ಬಯಲು ಸೀಮೆಯ ಬಿರುಬಿಸಿಲಲ್ಲಿ ಬೆಳೆದ ನನ್ನಂಥವರು ಬಾಯಿಯಲ್ಲಿ ಕೆಂಡವನ್ನೇ ಕಾರುತ್ತೇವೆ. ವಿನಾಕಾರಣ ಉದ್ವಿಗ್ನಗೊಂಡು. ಸಣ್ಣ ಸಣ್ಣ ವಿಷಯಕ್ಕೆಲ್ಲ ಜಗಳ ತೆಗೆಯುತ್ತೇವೆ. ಬಯಲು ಸೀಮೆಯ ಹೆಚ್ಚಿನ ಜನರ ಬೆಳಗುಗಳು ಗುದ್ದಾಟಗಳಿಂದಲೇ ಆರಂಭವಾಗುತ್ತದೆ. ವಸಂತನೇ ಬರಲಿ, ಗಿಡಮರಗಳು ಚಿಗುರುತ್ತಲೇ ಇರಲಿ, ಹೂವುಗಳು ತೂಗುತ್ತಲೇ ಇರಲಿ ಬೇಸಗೆಯ ಬಿರುಬಿಸಿಲಂಥ ಚಡಪಡಿಕೆ ಮಾತ್ರ ನಿಲ್ಲುವುದೇ ಇಲ್ಲ. ಆಷಾಢದ […]

Back To Top