Category: ಜೀವನ

ಅಂಕಣ ಬರಹ–02 ಶಾಂತಿ ವಾಸು ಹೋದ ಅಂಕಣದಲ್ಲಿ ರೇಡಿಯೋ ನಮ್ಮ ಜೀವನವನ್ನು ಆಕ್ರಮಿಸಿದ ಕಾಲ ಹಾಗೂ ರೀತಿಯನ್ನು ನೋಡಿದೆವು. ನಮ್ಮನ್ನು ಆಧುನಿಕ ಕಾಲದ ಪ್ರತಿನಿಧಿಗಳನ್ನಾಗಿಸಿದ ರೇಡಿಯೋ ಬಗ್ಗೆ ಈಗ ಇನ್ನಷ್ಟು ವಿಷಯಗಳನ್ನು ತಿಳಿಯೋಣ ಬನ್ನಿ. ಸಂಶೋಧನೆಗಾಗಿ ನೋಬಲ್ ಪ್ರಶಸ್ತಿ ಪಡೆದ ಇಟಲಿಯ  ಗೂಗ್ಮಿಯೆಲ್ಮೋ ಮಾರ್ಕೋನಿಯಿಂದ 1885 ರಲ್ಲಿ ತಂತಿರಹಿತ ಸಂದೇಶ ರವಾನಿಸುವ ಮೂಲಕ ಕಂಡುಹಿಡಿಯಲ್ಪಟ್ಟ ರೇಡಿಯೋ ಎಂಬ ಒಂದು ಅದ್ಭುತವನ್ನು ಭಾರತಕ್ಕೆ ಕೊಡುಗೆಯಾಗಿ ನೀಡಿದ ಭೌತವಿಜ್ಞಾನಿ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ, ದೂರಸಂಪರ್ಕ ಹಾಗೂ ರೇಡಿಯೋ ವಿಜ್ಞಾನಿ […]

ಬದುಕು ಎಷ್ಟೊಂದು ಸುಂದರ

ಲೇಖನ ಚಿಕ್ಕ ಪುಟ್ಟ ಸಂಗತಿಗಳಲ್ಲೇ ಸಂತೃಪ್ತಿ ಕಾಣುತ್ತಿರಿ ಆಗ ಬದುಕು ಎಷ್ಟೊಂದು ಸುಂದರ. ಪಲ್ಲವಿ ಪ್ರಸನ್ನ ಬೆಳಗಾಗಲೆoದೆ ಕತ್ತಲು ,ಗೆಲ್ಲಲೆoದೆ ಸೋಲು,ನಗುವಿನ ಜೊತೆ ದುಃಖ ಇದ್ದೇ ಇರುತ್ತದೆ ,ಅದರೂ ಚಿಕ್ಕ ಪುಟ್ಟ ಸಂಗತಿಗಳಲ್ಲೇ ನಾವು ಆನಂದ ಅನುಭವಿಸುತ್ತೇವಲ್ಲ ಅದು ನಮಗೆ ಅಪ್ಪಟ ಆರೋಗ್ಯ ,ಉಲ್ಲಾಸಿತರಾಗಿಡಲು ಸಹಾಯಮಾಡುತ್ತದೆ. ತಲೆ ಬಾಚಿಕೊಳ್ಳುವಾಗ ಉದುರಿದ ಕೂದಲ ಬಗ್ಗೆ  ಕೊರಗದೇ ಇದ್ದ ಕೂದಲನ್ನು ನೇವರಿಸುತ್ತ ಅದರ ಆರೈಕೆಯಲಿ ಮಗ್ನವಾಗಿ ಖುಷಿ ಅನುಭವಿಸಬೇಕು. ಒಂದು ಒಳ್ಳೆ ಪುಸ್ತಕವನ್ನು ಓದುವಾಗ ಅದರ ಇಂಚಿಂಚೂ ,ಪ್ರತೀ ಸಾಲನ್ನೂ […]

“ಉಳ್ಳವರು ಶಿವಾಲಯವ ಮಾಡುವರು”

ಅನಿಸಿಕೆ “ಉಳ್ಳವರು ಶಿವಾಲಯವ ಮಾಡುವರು” ವೀಣಾ ದೇವರಾಜ್           ನಿಜಕ್ಕೂ ಅಣ್ಣನ ಈ ವಚನವು ಬರಿಯ ಪುಸ್ತಕಗಳಿಗೆ ಮತ್ತು ಹಾಡುಗಾರರಿಗೇ ಸೀಮಿತವಾಗಿವೆ. ಕಾರ್ಯರೂಪಕ್ಕೆ ಬರುವುದೆಂದೊ. ಹಿರಿಯರು ‘ಉಳ್ಳವರು ಶಿವಾಲಯವ ಮಾಡುವರು ‘ ಎಂದರು, ಆದರೆ ಇಂದಿನ ಉಳ್ಳವರು ತಮಗಾಗಿ ತಮ್ಮ ಕುಟುಂಬಕ್ಕಾಗಿ ಮಾತ್ರ ಆಲಯ ಮಾಡಿಕೊಳ್ಳುವರೇ ಹೊರತು ಸಮಾಜಕ್ಕಾಗಿ ಯಾವ ಉಪಯೋಗಕ್ಕೂ ಬಾರದು. ಇಂಥಹವರಿಂದ ಪರಿವರ್ತನೆ ಬಯಸುವುದು ಸಾಧ್ಯವೇ?        ಆಯ್ದಕ್ಕಿ ಲಕ್ಕಮ್ಮ, ಮಾರಯ್ಯ ದಂಪತಿಗಳು, ದಾಸೋಹ ಮಾಡುವ ಶಕ್ತಿ ಇರದಿದ್ದರೂ ಅಂತಹ ಮನಸ್ಸಿತ್ತು. ಲಕ್ಕಮ್ಮತನ್ನ ಬಿಡುವಿನ […]

ಲಿವಿಂಗ್ ಟುಗೆದರ್

ಲೇಖನ ಲಿವಿಂಗ್ ಟುಗೆದರ್ ಸುಜಾತಾ ರವೀಶ್ ಇಬ್ಬರೂ ಸಮಾನ ಮನಸ್ಕರು ಒಂದೇ ಸೂರಿನಡಿ ವಾಸಿಸುತ್ತಾ ಭಾವನಾತ್ಮಕ ಹಾಗೂ ದೈಹಿಕ ಸಂಬಂಧಗಳನ್ನು ವಿವಾಹ ವ್ಯವಸ್ಥೆ ಇಲ್ಲದೆ ಹೊಂದಿ ಜೀವಿಸುವುದಕ್ಕೆ livein relationship ಅಥವಾ ಸಹಬಾಳ್ವೆ ಪದ್ಧತಿ ಎನ್ನುತ್ತಾರೆ.  ಈಗ ಎರಡು ದಶಕಗಳಿಂದೀಚೆಗೆ ಪ್ರಪಂಚದಲ್ಲಿ ಶುರುವಾಗಿರುವ ಹಾಗೂ ಸಮಾಜಶಾಸ್ತ್ರಜ್ಞರು ಮತ್ತು ಮಾನವ ಶಾಸ್ತ್ರಜ್ಞರ ನಿರೀಕ್ಷೆಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ವ್ಯವಸ್ಥೆ ಇದು ಪ್ರಚಲಿತ ಅಸ್ತಿತ್ವದಲ್ಲಿರುವ ಕುಟುಂಬ ಎಂಬ ಸಾಮಾಜಿಕ ಪರಿಕಲ್ಪನೆಯಿಂದ ಹೊರತಾದ ಹೊಸ ಬದಲಾವಣೆಯ ಅಲೆ ಇದು .  ಮನುಷ್ಯ […]

ಯೋಗ್ಯತೆಯಲ್ಲ ಯೋಗ ಬೇಕು

ಲೇಖನ ಯೋಗ್ಯತೆಯಲ್ಲ ಯೋಗ ಬೇಕು ಜ್ಯೋತಿ ಬಾಳಿಗಾ “ಯಾಕೆ ಒಳ್ಳೆ ಇಡ್ಲಿ ಹಿಟ್ಟು ಊದಿಕೊಂಡಹಾಗೆ ಮುಖ ಮಾಡಿ ಕೂತಿದ್ದೀಯಾ… ಏನಾಯಿತು ?” ಎಂದು ನನ್ನವರು ಕೇಳಿದಾಗ “ಯಾಕೋ ಮನಸ್ಸು ಸರಿಯಿಲ್ಲ ಕಣ್ರಿ.. ಅಳು ಬರುವ ಹಾಗಿದೆ…” ಎಂದು ನನ್ನ ಮನದ ಬೇಗುದಿಯನ್ನು ತಿಳಿಸದೇ ಮಾತನ್ನು ತಳ್ಳಿ ಹಾಕಿದೆ. “ವಿಷಯ ಏನೂಂತ ಹೇಳಿದ್ರೆ ನನಗೂ ಗೊತ್ತಾಗುತ್ತದೆ, ಅದು ಬಿಟ್ಟು ಮನಸ್ಸು ಸರಿಯಿಲ್ಲಾಂತ ಹೇಳಿದ್ರೆ ಹೇಗೆ …? ಇಡೀ ದಿನ ಓದುವುದು, ಬರೆಯೋದೆ ಆಯಿತು. ಯೋಚನೆ ಮಾಡಿ ಮಾಡಿ ತಲೆ ಹಾಳು ಮಾಡಿಕೊಳ್ಳೋದು […]

ಭೂತಾಯಿಗೆ ನಮನ

ಲೇಖನ ಭೂತಾಯಿಗೆ ನಮನ ರಾಘವೇಂದ್ರ ಈ ಹೊರಬೈಲು ಇವತ್ತು ರಾತ್ರಿಯೆಲ್ಲಾ ಎಚ್ರಾಗಿರ್ಬೇಕು, ಮಲಗ್ಬಿಟ್ಟಿಯೋ. ರಾತ್ರಿಯೆಲ್ಲ ಹಬ್ಬ ಮಾಡ್ಬೇಕು, ಹಬ್ಬದಾಗೆ ಎಚ್ರಾಗಿರ್ದೆ  ಹಂಗೆ ಮಲ್ಗಿದ್ರೆ ದೇವ್ರು ಶಾಪ ಕೊಡ್ತಾನೆ ಕಣೋ” ನಾನು ಚಿಕ್ಕ ಹುಡುಗನಾಗಿದ್ದಾಗ ನಮ್ಮಮ್ಮನಾಡಿದ ಮಾತುಗಳು ಎಂದಿಗೂ ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಕುಳಿತಿವೆ. “ಇದ್ಯಾವ ಹಬ್ಬನಪ್ಪ, ರಾತ್ರಿಯೆಲ್ಲ ಎಚ್ರಾಗಿರ್ಬೇಕಂತೆ” ಎಂದು ಗೊಣಗುಟ್ಟುತ್ತಾ ತೂಕಡಿಸುತ್ತಾ, ಅಮ್ಮನೋ ಅಪ್ಪನೋ ಹೇಳ್ತಾಯಿದ್ದ ಸಣ್ಣಪುಟ್ಟ ಕೆಲಸಗಳನ್ನು ಒಲ್ಲದ ಮನಸ್ಸಿನಿಂದ ನಿದ್ರೆಗಣ್ಣಿನಲ್ಲೇ ಮಾಡುತ್ತಾ, ಕೆಲವೊಮ್ಮೆ ಹೆಚ್ಚು ಕಡಿಮೆಯಾಗಿ, ಬೈಸಿಕೊಳ್ಳುತ್ತಾ ರಾತ್ರಿ ಕಳೆಯುತ್ತಿದ್ದ ಆ ದಿನಗಳನ್ನು […]

ಹೀಗೇಕೆ ನನ್ನವ್ವ ?

ಲೇಖನ ಹೀಗೇಕೆ ನನ್ನವ್ವ ? ಸುಮಾ ಆನಂದರಾವ್       ಇಂದೇಕೆ ನನ್ನವ್ವ ಪದೇ ಪದೇ ನೆನಪಾಗುತ್ತಿದ್ದಾಳೆ? ಅವಳೇಕೆ ಹಾಗಿದ್ದಳು?                  ಜೆರ್ಮನಿಯಲ್ಲಿ  ಒಬ್ಬ  ವಯೋ ವೃದ್ಧೆಯ ಪರಿಚಯವಾದಂದಿನಿಂದ ಗಮನಿಸುತ್ತಿದ್ದೇನೆ.  ಅವಳ ದಿಟ್ಟತನ ಅಚ್ಚರಿ ಉಂಟುಮಾಡುತ್ತಿದೆ. ಅವಳು ತನ್ನೆಲ್ಲಾ  ಕರ್ತವ್ಯ ಮುಗಿಸಿದ್ದಳು, ಮಕ್ಕಳನ್ನು ಓದಿಸಿ ಅವರ ಕಾಲಮೇಲೆ ಅವರು ನಿಲ್ಲುವ ಹಾಗೆ ಮಾಡಿದ್ದಾಳೆ. ಆಗಾಗ ಮಕ್ಕಳು ಬಂದು ಹೋಗುತ್ತಿರುತ್ತಾರೆ. ತೊಂಬತ್ತು ವರ್ಷಆದರೂ ತನ್ನ ಕೆಲಸ ತಾನೇ ಮಾಡಿಕೊಳ್ಳುತ್ತಾಳೆ, ಕೈಯಲ್ಲಿ ಕೋಲು  ಹಿಡಿದು ಸಣ್ಣ ನೂಕುವ ಗಾಡಿಯಲ್ಲಿ ಅಗತ್ಯ ವಸ್ತುಗಳನ್ನು […]

ಶಿಕ್ಷಣ ಕ್ಷೇತ್ರ ಮತ್ತು ಎರಡು ದಶಕಗಳ ಪ್ರಯಾಣ

ಅನುಭವ ಶಿಕ್ಷಣ ಕ್ಷೇತ್ರ ಮತ್ತು ಎರಡು ದಶಕಗಳ ಪ್ರಯಾಣ ಮಮತಾ ಅರಸೀಕೆರೆ ಬಯಸಿ ಬಂದದ್ದಲ್ಲ. ಹಂಬಲಿಸಿ ಪಡೆದದ್ದಲ್ಲ. ಒಂದು ಬಗೆಯ ಓರೆ ನೋಟದ ಕಸಿವಿಸಿಯ ಬಿಗುವಿನೊಡನೆ ಅನಿಚ್ಛಾಪೂರ್ವಕವಾಗಿ ಇಲಾಖೆಗೆ ಕಾಲಿಟ್ಟದ್ದು. ನಂತರ ಜರುಗಿದ್ದು ಬರೋಬ್ಬರಿ ಇಪ್ಪತ್ತು ವರ್ಷಗಳ ಅನಿಯಮಿತ ಅಡೆತಡೆಯಿಲ್ಲದ ಪ್ರಯಾಣ. ಇದೇ ಅಕ್ಟೋಬರ್ ೨೫ ಕ್ಕೆ ನಾನು ಶಿಕ್ಷಣ ಇಲಾಖೆಯ ಸದಸ್ಯಳಾಗಿ ಎರಡು ದಶಕಗಳೇ ಆಗುತ್ತಿದೆ. ನನ್ನಮ್ಮ ಕೂಡ ಇದೇ ಇಲಾಖೆಯಲ್ಲಿದ್ದವರು.ಅಪ್ಪ ಅಂಚೆ ಇಲಾಖೆ ಉದ್ಯೋಗಿ.ಅದೇಕೋ ತನ್ನ ಇಲಾಖೆ ಬಗ್ಗೆ ಅಸಡ್ಡೆಯಿದ್ದಬಅಪ್ಪನ ಉದ್ಯೋಗಕ್ಕಿಂತ ಸುಲಭವಾಗಿ ಸರಳವಾಗಿ […]

ಬದಲಾದ ಕಾಲಕ್ಕೆ ಹಳ್ಳಿಯ ಬದುಕು

ಲೇಖನ ಬದಲಾದ ಕಾಲಕ್ಕೆ ಹಳ್ಳಿಯ ಬದುಕು ಸರಿತಾ ಮಧು ಹಳ್ಳಿಗಳ ದೇಶವೇ ನಮ್ಮದು. ಮೊದಲಾದರೆ ಸುಂದರ ಸ್ವರ್ಗದಂತೆ ಇದ್ದವು. ಕೂಡು ಕುಟುಂಬ, ಅದಕ್ಕೆ ಹೊಂದಿಕೊಂಡಂತೆ ಗದ್ದೆ- ತೋಟಗಳು, ರಕ್ತ ಸಂಬಂಧಗಳು ಹಾಗೂ ಮಾನವೀಯ ನೆಲೆಯಲ್ಲಿ ಒಟ್ಟಿಗೆ ಸೇರಿ ನಲಿಯುತ್ತಿದ್ದ ಸಂದರ್ಭಗಳು. ಮೂರು – ನಾಲ್ಕು ತಲೆಮಾರಿನ ಅನುಭವಗಳ ಬೆರೆತ ಸಂಸಾರ. ಮನೆಗಳಲ್ಲಿ ಆಡಂಬರವಿರಲಿಲ್ಲ ಮನಸಿನಲ್ಲಿ ಆತ್ಮೀಯತೆ ಇತ್ತು. ಅವಿಭಕ್ತ ಭಾವ ರಕ್ತಗತವಾಗಿ ಮುಂದುವರೆಯುತ್ತಿತ್ತು. ಹಣಕಾಸಿಗೆ ಅಡಚಣೆಯಿತ್ತು ಅದರ ಹೊರತು ಪರಿಶುದ್ಧವಾದ  ಬದುಕಿಗಲ್ಲ. ನಗರ ಜೀವನಕ್ಕೆ ಮನಸೋತ ಕೆಲವು […]

ಕಡಿವಾಣವೂ ಪ್ರೀತಿಯೇ!!!!!

ಲೇಖನ ಕಡಿವಾಣವೂ ಪ್ರೀತಿಯೇ!!!!! ಮಾಲಾ ಅಕ್ಕಿಶೆಟ್ಟಿ   ಕೊರೊನಾ ಲಾಕಡೌನ್ ಕ್ಕಿಂತ ಮುಂಚೆ ನಡೆದ ಮಾತಿದು.ಆತ್ಮೀಯರೊಬ್ಬರು ಚರ್ಚಿಸಿದ ವಿಚಾರ.ಅವರು ವಿವರಿಸಿದ ಹಾಗೆ ಈಗ ಒಂದು ವರ್ಷದಿಂದ ಶಾಲೆಗೆ ಹೋಗುವ ನಾಲ್ಕು ವರ್ಷದ ಮಗಳು ದಿನಾಲು ಒಂದಿಲ್ಲೊಂದು ವಸ್ತುಗಳನ್ನು ಶಾಲೆಯಲ್ಲಿ ಕಳೆದುಕೊಂಡು ಬಂದು ತಾಯಿಗೆ ಮತ್ತೆ ಹೊಸ ವಸ್ತುಗಳನ್ನು ಕೊಡಿಸುವಂತೆ ಪೀಡಿಸುತ್ತಿದ್ದಳು. ಮಗಳು ದಿನವೂ ಪೆನ್ಸಿಲ್, ರಬ್ಬರ್, ಶಾರ್ಪನರ್, ಕ್ರೆಯಾನ್ಸ್ ಗಳನ್ನು ಕಳೆದುಕೊಂಡು ಬರುವುದು ತಾಯಿಗೆ ತಲೆನೋವಾಗಿ ಪರಿಣಮಿಸಿತ್ತು. ಬೇಸತ್ತ ತಾಯಿ ಒಂದು ದಿನ ಮಗಳಿಗೆ ಸ್ಟ್ರಿಕ್ಟಾಗಿ ಎಚ್ಚರಿಕೆ […]

Back To Top