Category: ಜೀವನ

ವಿವಾಹ ವ್ಯವಸ್ಥೆ- ಒಂದು ಚರ್ಚೆ

ಚರ್ಚೆ ವಿವಾಹ ವ್ಯವಸ್ಥೆ- ಒಂದು ಚರ್ಚೆ ಚಂದಕಚರ್ಲ ರಮೇಶ ಬಾಬು ಹೊಸ ತಲೆಮಾರಿನ ವಿವಾಹಗಳು ವೈವಿಧ್ಯತೆ ಸಂತರಿಸಿಕೊಂಡಿರುವುದರಿಂದ ಈಗ ನಮ್ಮ ಸಮಾಜದಲ್ಲಿನ ವಿವಾಹ ವ್ಯವಸ್ಥೆಯ ಬಗ್ಗೆ ಒಂಚೂರು ಚರ್ಚೆ ಮಾಡುವ ಎಂತಾಗಿದೆ. ನಮಗೆ ಕಾಣುವ ಹಾಗೆ ವಿವಾಹಗಳಲ್ಲಿ ಎರಡು ರೀತಿಯ ಪ್ರಭಾಗಗಳು ಕಾಣುತ್ತವೆ. ಗಂಡು ಹೆಣ್ಣು ಪ್ರೀತಿಸಿ ತಾವೇ ನಿರ್ಣಯಿಸಿಕೊಂಡು ಮದುವೆ ಯಾಗುವುದು (ಪ್ರೇಮ ವಿವಾಹ)  ಮತ್ತೊಂದು ಸಾಂಪ್ರದಾಯಿಕವಾಗಿ ನಡೆದು ಬಂದ ರೀತಿಯಲ್ಲಿ ಮನೆಗೆ ದೊಡ್ಡವರು ಹೆಣ್ಣು ನೋಡಿ ನಿಶ್ಚಯಿಸಿ ಮದುವೆ ಮಾಡುವುದು ( ಅರೇಂಜ್ಡ್ ಮ್ಯಾರೇಜ್) […]

ಇತರೆ

ರೈತರ ಆಪತ್ಭಾಂದವ ಜೋಕಪ್ಪನೂ..! ಮಳೆ ತರುವ ದೇವರು ಜೋಕುಮಾರಸ್ವಾಮಿ. ಗಣೇಶ ಶಿಷ್ಟ ಪರಂಪರೆಯ ದೇವರು. ಅಲ್ಲದೇ ಜಾನಪದರ ದೇವರು ಜೋಕುಮಾರಸ್ವಾಮಿ.ಗಣೇಶ ಹೊಟ್ಟೆ ತುಂಬ ಉಂಡು ಭೂಲೋಕದಲ್ಲಿ ಎಲ್ಲವೂ ಸೌಖ್ಯವಾಗಿದೆ ಎಂದು ತನ್ನ ತಂದೆತಾಯಿಗಳಾದ ಶಿವ-ಪಾರ್ವತಿಯರಿಗೆ ವರದಿ ಒಪ್ಪಿಸಿದರೆ, ಜಾನಪದರ ದೇವರು ಜೋಕುಮಾರಸ್ವಾಮಿ ಇಲ್ಲಿ ಮಳೆ, ಬೆಳೆ ಇಲ್ಲದೇ ಕಂಗಾಲಾಗಿರುವ ಜನತೆಯ ಕಷ್ಟ ಕಾರ್ಪಣ್ಯಗಳ ವರದಿ ನೀಡಿ ಮಳೆ ಸುರಿಸಲು ವಿನಂತಿಸಿಕೊಳ್ಳುತ್ತಾನೆ. ಹೀಗಾಗಿಯೇ ಜೋಕುಮಾರಸ್ವಾಮಿ ಒಕ್ಕಲಿಗರಿಗೆ ಮಳೆ ತರುವ ನಂಬಿಗಸ್ತ ದೇವರು. ‘ಜೋಕುಮಾರಸ್ವಾಮಿ ಮಳಿ ಕೊಡಾವ ನೋಡ್ರೀ’ ಎಂದು […]

ನಮ್ಮ ಮಕ್ಕಳು ಮಕ್ಕಳಲ್ಲ

ಸರಿತಾ ಮಧು ಮಕ್ಕಳಿಗಾಗಿ ಹಂಬಲ ಎಲ್ಲರದು. ಅಂದಿನಿಂದ ಇಂದಿನವರೆಗೂ ಮಕ್ಕಳು ಮನೆಯ ನಂದಾದೀಪ. ಮಕ್ಕಳಿರಲವ್ವ ಮನೆತುಂಬ ಎನ್ನುವ ಕಾಲ ಸರಿದು ಆರತಿಗೊಬ್ಬಳು ಕೀರ್ತಿ ಗೊಬ್ಬ , ತದನಂತರ ನಾವಿಬ್ಬರು ನಮಗೊಂದು ಮಗು ಅನ್ನುವ ಕಾಲಘಟ್ಟದಲ್ಲಿದ್ದೇವೆ. ಇದೆಲ್ಲವೂ ಸರಿಯಷ್ಟೇ ಆಧುನಿಕತೆಯ ಬೆನ್ನನೇರಿದ ಈಗಿನವರು ಮಗುವಿನ್ನೂ ಗರ್ಭದಲ್ಲಿರುವಾಗಲೇ ವಿದ್ಯಾಭ್ಯಾಸದ ವಿಚಾರಕ್ಕೆ ತಲೆಬಿಸಿ ಮಾಡಿಕೊಳ್ಳುತ್ತಾರೆ.ಮೊದಲೆಲ್ಲಾ ಹೀಗಿರುತ್ತಿತ್ತೇ? ಅವಿಭಕ್ತ ಕುಟುಂಬಗಳಲ್ಲಿ ಅನೌಪಚಾರಿಕವಾಗಿ ಪ್ರಾಥಮಿಕ ಶಿಕ್ಷಣ ಆರಂಭವಾಗುತ್ತಿತ್ತು.ಐದುವರ್ಷಗಳು ಪೂರ್ಣ ತುಂಬುವವರೆಗೂ ಬಾಲ್ಯಾವಸ್ಥೆಯ ಎಲ್ಲಾ ಸುಖಗಳನ್ನು ಸಂಪೂರ್ಣ ಬಾಚಿಕೊಳ್ಳುತ್ತಿದ್ದೆವು. ಮನೆಯ ಅಜ್ಜ ಅಜ್ಜಿ, ದೊಡ್ಡಪ್ಪ ದೊಡ್ಡಮ್ಮ, […]

ಕ್ಷಮಯಾ ಧರಿತ್ರೀ …

ಕ್ಷಮಯಾ ಧರಿತ್ರೀ … ಲಕ್ಷ್ಮಿ ನಾರಾಯಣ ಭಟ್ ಜೀವನ ಪ್ರವಾಹ ನಿಂತ ನೀರಲ್ಲ; ಅದು ಚಿರಂತನ. ನಿರಂತರವಾಗಿ ಹರಿಯುತ್ತಲೇ ಇರುವುದು ಅದರ ಸ್ವ-ಭಾವ. ಯಾವುದು ವ್ಯಕ್ತಿ/ವಸ್ತುವೊಂದಕ್ಕೆ ಸಹಜ ಭಾವವಾಗಿರುತ್ತದೋ ಅದೇ ಅದರ ಸ್ವಭಾವ. ಆದರೆ ಸ್ವಭಾವವನ್ನು ಪರಿಶ್ರಮ, ಚಿಂತನೆಗಳಿಂದ ಪರಿಷ್ಕರಿಸಿಕೊಳ್ಳಬಹುದು. ಇದು ಮನುಷ್ಯನಾದವನಿಗೆ ಮಾತ್ರ ಪ್ರಕೃತಿಯೇ ಕರುಣಿಸಿದ ವಿಶೇಷ ಕರ್ತೃತ್ವ. ಇದರಿಂದ ಆತ ಪ್ರಕೃತಿಯನ್ನೂ ಮಣಿಸಬಲ್ಲ! ಉದಾಹರಣೆಗೆ, ಎತ್ತರದಿಂದ ತಗ್ಗಿಗೆ ಹರಿಯುವುದು ನೀರಿನ ಸ್ವಭಾವವಲ್ಲವೇ? ಆ ಸ್ವಭಾವವನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಪರಿರ್ತಿಸಿದಾಗ, ಜೋಗದಲ್ಲಿ ಜಲಪಾತವಾಗಿ ಧುಮುಕುವ […]

ಯಡ್ರಾಮಿಯ ಉಡುಪಿ ಹೋಟೆಲ್

ಪ್ರಬಂಧ ಮಲ್ಲಿಕಾರ್ಜುನ ಕಡಕೋಳ   ಹಾಗೆ ನೋಡಿದರೆ ನಮ್ಮ ಯಡ್ರಾಮಿಗೆ  ಬೆಳ್ಮಣ್ಣು ಶಂಕರಭಟ್ಟರ ಉಡುಪಿ ಹೋಟೆಲ್ ಬರುವ ಪೂರ್ವದಲ್ಲೇ ನಿಯತ್ತಿನ ನಾಯಿಗುರುತು ಬ್ಯಾಂಕ್ ಬಂದಿತ್ತು. ಸುಂಬಡ ಹಾದಿಬದಿಯ ಬಹುಪಾಲು ಬೆಳಕಿಲ್ಲದ ಬ್ಯಾಂಕಿಗೂ ಭಟ್ಟರ ಹೋಟೆಲಿಗೂ ಕೂಗಳತೆ ದೂರ.  ಅಜಮಾಸು ಮುವತ್ತು ವರ್ಷಗಳ ಹಿಂದಿನ ಮಜಕೂರವಿದು. ಹಣಮಂದೇವರ ಗುಡಿ ಬಳಿಯ ಹಳೆಯ ಬಸ್ ನಿಲ್ದಾಣದಲ್ಲಿ ಉಡುಪಿ ಹೋಟೆಲ್. ಆಗೆಲ್ಲ ರುದ್ರಯ್ಯ ಮುತ್ಯಾನ ಹೋಟೆಲ್ ಹಾಗೂ ಹಲಕರ್ಟಿ ಶಿವಣ್ಣನವರ ಹೋಟೆಲಗಳದ್ದೇ ಸ್ಟಾರ್ ಹೋಟೆಲ್ ಹವಾ. ಯಥೇಚ್ಛ ಹೊಗೆಯುಂಡು ಮಸಿಬಟ್ಟೆ ಬಣ್ಣಕ್ಕಿಳಿದ […]

ವೃದ್ಧಾಶ್ರಮಗಳ ಸುತ್ತ

ಚಿಂತನೆ ಅರುಣ ರಾವ್ ನನ್ನ  ಶಾಲಾ ದಿನಗಳಲ್ಲಿ ಬ್ರಹ್ಮಚರ್ಯ, ಗೃಹಸ್ಥ, ವಾನಪ್ರಸ್ಥ, ಸನ್ಯಾಸ ಈ ನಾಲ್ಕು ಆಶ್ರಮಗಳನ್ನು ಕೇಳಿದ್ದ ನನಗೆ, ವೃದ್ಧಾಶ್ರಮ ಎಂಬ  ಹೊಸ ಆಶ್ರಮ ನವ  ಪ್ರಪಂಚವೊಂದನ್ನು ಪರಿಚಯಿಸಿತು. ನನ್ನ ಚಿಕ್ಕಂದಿನಲ್ಲಿ ವೃದ್ಧಾಶ್ರಮ ಎನ್ನುವ ಪದವನ್ನು ನಾನೆಂದೂ  ಕೇಳಿಯೇ  ಇರಲಿಲ್ಲ. ಆಗೆಲ್ಲಾ  ಒಂದು ಕುಟುಂಬದಲ್ಲಿ ತಂದೆ-ತಾಯಿ, ಅಜ್ಜ-ಅಜ್ಜಿ, ಮಕ್ಕಳು ಬಹಳ ಆನಂದದಿಂದ ಸಮರಸದಿಂದ ಕೂಡಿ ಬಾಳುವೆ ನಡೆಸುತ್ತಿದ್ದರು. ಇವರೆಲ್ಲರೂ ಇದ್ದಾಗ ಮಾತ್ರ ನಮ್ಮದೊಂದು ಸಂಸಾರವಾಗುತ್ತದೆ ಎಂದು ಎಲ್ಲರೂ ಬಲವಾಗಿ ನಂಬಿದ್ದರು. ವಯಸ್ಸಾದ  ತಂದೆ ತಾಯಿಗಳು ನಮಗೊಂದು […]

ಬಸವಣ್ಣನಿಗೊಂದು ಪತ್ರ

ಲೇಖನ ನೂತನ ದೋಶೆಟ್ಟಿ ಶರಣು ಶರಣಾರ್ಥಿಗಳು.ದಿನವೂ ಬೆಳಿಗ್ಗೆಇವನಾರವ ಇವನಾರವ ಎನ್ನದಿರಯ್ಯ,ಇವ ನಮ್ಮವ ಇವ ನಮ್ಮವ ಎಂದೆನಿಸಯ್ಯಾ ಎಂಬ ನಿನ್ನ ವಚನವನ್ನು ಹೇಳಿಕೊಳ್ಳುವಾಗ ನಾಲಿಗೆ ತೊದಲುತ್ತದೆ. ಎಲ್ಲರನ್ನೂ ನನ್ನವರು ಎಂದು ಅಪ್ಪಿಕೊಂಡ ನಿನ್ನ ನಾಡಿನಲ್ಲೇ ಇವ ನಮ್ಮವನಲ್ಲ ; ನಾವೇ ಬೇರೆ ಅವನೇ ಬೇರೆ ಎಂದು ಪ್ರತಿಪಾದಿಸಲು, ತಮ್ಮ ಈ ಪ್ರತಿಪಾದನೆಯನ್ನು ಸ್ಥಾಪಿಸಲು ಜನ ಸಂಚು ಮಾಡುತ್ತಿದ್ದಾರೆ ! ನಿನ್ನ ಕಾಲದ ಇತಿಹಾಸ ಮರುಕಳಿಸಿಬಿಟ್ಟಿದೆ ಅಣ್ಣಾ.ಜಾತಿ ವಿಜಾತಿ ಎನಬೇಡ ಎಂದು ಕಳಕಳಿಸಿದ ನೀನು ಜಾತಿ ಆಧಾರದ ಮೇಲೆ ಒಡೆದು […]

ಬದುಕು ಕಠೋರ

ಅನುಭವ ನಾಗರಾಜ ಮಸೂತಿ ಇವತ್ತು ಬದುಕು ಬಹಳ ಕಠೋರ ಅನಿಸ್ತು. ನಾವೆಲ್ಲ ಮನೆ ಮುಂದಿನ ಗೇಟ್ ಕೂಡ ದಾಟದ ಹಾಗೆ ಮನೆಯಲ್ಲಿಯೇ ಕೂತಿವಿ. ಹಳ್ಳಿ ಹೆಣ್ಣು ಮಗಳು ಮೊಸರು ಮಾರ್ತಾ ಮನೆ ಬಾಗ್ಲಿಗೆ ಬಂದ್ಲು. ನಮವ್ವಗ ಒಂದು ಒಳ್ಳೆ ಅಭ್ಯಾಸ ಏನಂದ್ರ ಯಾರೇ ಬರ್ಲಿ ಕರದ ಕುಂಡರ್ಸಿ ನೀರ ಕೊಟ್ಟ ಮಾತಾಡ್ಸುದು. ವ್ಯಾಪಾರ ಎರಡನೆ ಮಾತು. ಇದು ನಮ್ಮ ಮನೆ ಮಂದಿಗೆ ಹಿರೆರಿಂದ ಬಂದ ಬಳುವಳಿ. ಇರ್ಲಿ ಹಾಂ ಮೊಸರ ಮಾರಕ ಬಂದಾಕಿ ಮಸರು ಕೊಟ್ಲ ರೊಕ್ಕಾನು […]

ಆಚರಣೆಗಳಲ್ಲಿನ ತಾರತಮ್ಯ

ವಿಚಾರ ಜ್ಯೋತಿ ಡಿ.ಬೊಮ್ಮಾ ದೇವರನ್ನು ನಂಬಿ ಕೆಟ್ಟವರಿಲ್ಲ ಎಂಬ ವಾದವನ್ನು ಒಪ್ಪಬಹುದು.ಆದರೆ ದೈವದ ಹೆಸರಲ್ಲಿ ಆಚರಿಸುವ ಆಚರಣೆಗಳಲ್ಲಿನ ತಾರತಮ್ಯ ಒಪ್ಪಲಾಗದು. ಪೂಜೆಯ ಆಚರಣೆಗಳು ನಮ್ಮ ಮನಸ್ಸಿಗೆ ಸಮಾಧಾನವಾಗಿದ್ದರಷ್ಷೆ ಸಾಲದು ,ಆ ಆಚರಣೆಗಳು ಮತ್ತೊಬ್ಬರ ಮನಸ್ಸಿಗೆ ನೊವನ್ನುಂಟು ಮಾಡಬಾರದು. ನಿರಾಕಾರನನ್ನು ಒಂದೊಂದು ರೂಪ ಕೊಟ್ಟು ಬಟ್ಟೆ ತೊಡಿಸಿ ಅಲಂಕರಿಸಿ ಒಂದೊಂದು ಹೆಸರು ಕೊಟ್ಟು ಪೂಜಿಸುವರಿಗೆ , ದೇವರನ್ನು ತಾವೆ ಸೃಷ್ಟಿಸುತ್ತಿದ್ದೆವೆ ಎಂಬ ಅರಿವಾಗದೆ..! ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತಿಕ  ,ಈಗ ಬರುತ್ತಿರುವ ವರಮಹಾಲಕ್ಷಿ ಹಬ್ಬವೂ ಅದಕ್ಕೊಂದು ಉದಾಹರಣೆ.ಲಕ್ಷ್ಮಿ ಎಂದರೆ […]

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ ಪ್ರಜ್ಞಾ ಮತ್ತಿಹಳ್ಳಿ            ತನ್ನೆಲ್ಲ ಎಲೆಗಳನ್ನುದುರಿಸಿಕೊಂಡು ಒಣಗಿ ನಿಟಾರನೆ ನಿಂತುಕೊಂಡ ಬಿದಿರು ಗಳದಂತಹ ಎಲುಬುಗಳಿಗೆ   ಚರ್ಮ ಸುತ್ತಿ ಇಟ್ಟ ಹಾಗೆ ಭಾಸವಾಗುವ ಅವಳ ಕುತ್ತಿಗೆಯ ನರಗಳು ಹಸಿರು ಕಾಡು ಬಳ್ಳಿಗಳಂತೆ ಉಬ್ಬುಬ್ಬಿ ಗಂಟಲು ಹರಿದು ಹೊರಬಂದು ಬಿಡುತ್ತವೋ ಎಂಬಂತೆ ಕಾಣುತ್ತಿದ್ದವು. ಹಕ್ಕಿಯೊಂದು ಮೊಟ್ಟೆಯಿಡಲು ಮರದ ಕಾಂಡದಲ್ಲಿ ಹುಡುಕಿಕೊಂಡ ಡೊಗರಿನ ಹಾಗೆ ಎಲುಬುಗಳ ನಡುವೆ ಖಾಲಿ ಜಾಗ ಎದ್ದು ಕಾಣುತ್ತಿತ್ತು.  ಬದುಕಿನ ನಲವತ್ತು ವರ್ಷ ಜೊತೆಗಿದ್ದ ಅಸ್ತಮಾ ಅವಳ ಉಸಿರಾಟದ ರೀತಿಯನ್ನೇ […]

Back To Top