Category: ಗಝಲ್

ಗಝಲ್ ಜುಗಲ್

ಗಝಲ್ ಜುಗಲ್ ಮೊಟ್ಟಮೊದಲಬಾರಿಗೆ ಗಝಲ್ ಕವಿಗಳವಿವರಣೆಗಳೊಂದಿಗೆ ಶ್ರೀದೇವಿ ಕೆರೆಮನೆ ಗಿರೀಶ್ ಜಕಾಪುರೆ ನನ್ನ ದನಿಗೆ ನಿನ್ನ ದನಿಯು (ಶ್ರೀದೇವಿ ಕೆರೆಮನೆ) ಜಗದ ಜೀವನಾಡಿಯಲ್ಲಿ ಅಮೃತದ ಕಳಶ ಜೊತೆಯಾದಂತೆ ನನ್ನ ದನಿಗೆ ನಿನ್ನ ದನಿಯುಜೀವ ಕರುಣೆಯ ಪೊರೆವ ಜಗನ್ಮಾತೆಯ ಸುದೀರ್ಘ ಉಸಿರಂತೆ ನನ್ನ ದನಿಗೆ ನಿನ್ನ ದನಿಯು ಸೆರಗಿನ ಮರೆಯಿಂದ ಇಣುಕಿದ ಕೂಸಿನ ಹವಳದ ತುಟಿಯ ಕಟವಾಯಿಯಲ್ಲಿದೆ ನೊರೆವಾಲುಹಾಲುಗಲ್ಲದ ಮುಗ್ಧ ಮುಖದ ಮಗುವಿನ ಕಿಲಕಿಲ ನಗುವಂತೆ ನನ್ನ ದನಿಗೆ ನಿನ್ನ ದನಿಯು ಕನಸುಗಳೇ ಇರದ ಬರಡು ಎದೆಯೊಳಗೆ ಮೊಳೆತಿದೆ […]

ಗಜಲ್

ಗಜಲ್ ಸುಜಾತಾ ಲಕ್ಮನೆ ಇಲ್ಲಿ ಅಬ್ಬರದ ಬಿನ್ನಾಣ, ಮಾತಿನ ಸಂಚಲಿ ಮೌನ ಗೆಲ್ಲುವುದಿಲ್ಲಸಭ್ಯ ನಡೆಗೆಲ್ಲ ನ್ಯಾಯದ ತಕ್ಕಡಿಯಲಿ ಮಾನ್ಯತೆ ಸಿಗುವುದಿಲ್ಲ ತಾ ನಡೆವ ದಾರಿಯೆಲ್ಲವೂ ರಾಜಪಥವೆಂಬ ವಿಭ್ರಮೆ ತರವೇಯಾವ ಪಯಣವೂ ಕವಲೊಡೆಯದೇ ಗುರಿ ತಲುಪುವುದಿಲ್ಲ ಶಶಿ ಸೂಸುವ ಕಿರಣ ಪ್ರಭೆ ಇಳೆಯ ಕಣಕಣಕೂ ತಂಪನ್ನೆರಚದೇಒಳತೋಟಿಗಳ ತೂರಿದಂತೆ ಎದೆಯ ತೊಳಲಾಟ ತಗ್ಗುವುದಿಲ್ಲ ಅಂತರಂಗ ತೆರೆದಿಟ್ಟ ಭಾವಗಳು ಬೀದಿಗಳಲಿ ಬಿಕರಿಯಾಗುತ್ತವೆಸುಳ್ಳಿನ ಜಗದಲಿ ಸತ್ಯದ ಕದಪಿಗಿಟ್ಟ ಮಸಿ ಬಿಳಿಯಾಗುವುದಿಲ್ಲ ನೇರವಾಗಿ ನಿಂತಷ್ಟೂ ವಕ್ರರೇಖೆಯ ಬಣ್ಣ ಬೆನ್ನಿಗೆ ಮೆತ್ತುವರುಒಳದನಿಯ ಧಿಕ್ಕರಿಸಿ ನಡೆದಂತೆಲ್ಲ ಬಂಧ […]

ಗಝಲ್

ಗಝಲ್ ಅನ್ನಪೂರ್ಣಾ ಬೆಜಪ್ಪೆ ಇದ್ದರೂ ನೋವುಗಳು ಹಲವಾರು ನಗುತಿರು ಸಖೀಬಿದ್ದರೂ ಧೃತಿಗೆಡದೆ ಪುಟಿದೆದ್ದು ಸಾಗುತಿರು ಸಖೀ ವಿಶಾಲ ಜಗವಿದು ಅವಕಾಶಗಳಿಗಹುದೇನು ಕೊರತೆವಿಷಮ ಭಾವಗಳಳಿಸಿ ಹೊಸತನಕೆ ತೆರೆಯುತಿರು ಸಖೀ ಮುಂದೆ ಸರಿದಂತೆಲ್ಲ ಜಗ್ಗಲೆತ್ನಿಸುವ ಮನವೆ ಬಹುವಿಲ್ಲಿಹಿಂದೆ ಜಾರದಂತೆ ಸಮಸ್ಥಿತಿಯ ಕಾಯುತಿರು ಸಖೀ ಸೋಲು ಬಂತೆನಲು ಕೊರಗಿ ಹತಾಶೆ ತೋರುವುದೇಕೆಗೆಲುವು ಪಡೆಯುವ ತನಕವೂ ಬಿಡದೆ ಓಡುತಿರು ಸಖೀ ಕ್ಲೇಶ ಕಳೆಯಲು ಅನುವಿಗೆ ವಿಶ್ವಾಸವೇ ಬಲವಲ್ಲವೇನುತೋಷಕಾಗಿ ಕರ್ಮ ಸಾಧನೆಯ ಕಡೆ ನಡೆಯುತಿರು ಸಖೀ ********

ಗಝಲ್

ಮಾಲತಿ ಹೆಗಡೆ ಇಳೆಯ ಕೊಳೆಯನು ತೊಳೆದು ಹರಸಿದೆ ಮುಂಗಾರು ಮಳೆಕಂಗೆಟ್ಟ ರೈತರ ಕಣ್ಣಲ್ಲಿ ಕನಸು ಬಿತ್ತುತ್ತದೆ ಮುಂಗಾರು ಮಳೆ‌‌ ಬಿರು ಬಿಸಿಲ ಕಡು ತಾಪದಲಿ ಬೆಂದಿವೆ ಜೀವಕೋಟಿಎಲ್ಲರ ಬಾಳಿಗೆ ಭರವಸೆಯಾಗಿ ಬೀಳುತ್ತದೆ ಮುಂಗಾರು ಮಳೆ ಕಾದು ಕಾದು ಬಿರಿದ ಭುವಿಯ ತಣಿಸಲು ಬೇಕು ವರ್ಷಧಾರೆಮಣ್ಣಿನಲಿ ಅವಿತ ಬೀಜವ ಮೊಳೆಯಿಸುತ್ತದೆ ಮುಂಗಾರು ಮಳೆ ಕರಿಮುಗಿಲು ಕರಕರಗಿ ಹನಿ ಮುತ್ತಾಗಿ ಬೀಳುವುದೇ ಸೊಗಎಷ್ಟೇ ಅಬ್ಬರಿಸಿ ಬೊಬ್ಬಿದರೂ ಹಿತನಿಸುತ್ತದೆ ಮುಂಗಾರು ಮಳೆ ಮಾಲತಿಯ ಮನದಲ್ಲಿ ತುಂಬಿತ್ತು ಸಾವು ನೋವಿನ ಭೀತಿಹೊಸ ಹಸುರ […]

ಗಝಲ್

ಗಝಲ್ ನೂರ್ ಸಾಘರ್ ಹಾದಿಗಳಿಂದ ಹಾದಿಗಳು ಹಾಯಿದಷ್ಟು ಕೈಮರಗಳಿವೆ ಇಲ್ಲಿ ಸಖಿಬೀದಿಗಳಿಂದ ಬೀದಿಗೆ ಬದುಕುಗಳು ಬೆತ್ತಲಾಗಿವೆ ಇಲ್ಲಿ ಸಖಿ ಜಗದ ಒಡಲು ಮನದ ಕಡಲುತಟ್ಟದಿದ್ದರೂ ಮುಟ್ಟದಿದ್ದರೂ ಔರ್ವ ಸ್ಪರ್ಶದಲೆಗಳಿವೆ ಇಲ್ಲಿ ಸಖಿ ಒಂದೇ ಒಂದು ಮಾತಿನ ಶಬ್ದಗಳು ಬಯಲಲಿ ಬಯಲಾಯಿತುಅರಿತು ಅರಿಯದ ಮರೆತು ಮರೆಯದ ಪುರಾವೆಗಳಿವೆ ಇಲ್ಲಿ ಸಖಿ ಬಾಳು ಬಿಕ್ಕಳಿಕೆಯ ಕಥೆಗಳಿವೆ ನೂರಾರು ಅನಾಥದ್ದು ಅನಾತ್ಮದ್ದು ಇನ್ನು…ತಡೆದರೂ ತಡೆಯದ ಪಡೆದರೂ ಪಡೆಯದ ನೋವುಗಳಿವೆ ಇಲ್ಲಿ ಸಖಿ ಕದವಿಲ್ಲದ ಎದೆಯನು ಪದಗಳಿಂದ ಆವರಿಸಲಾಗದುತಬಿದ ತಬ್ಬದ ಬಾಹುಗಳನು ಕಲ್ಪಿಸಲು […]

ಹೇಳದೇ ಹೋಗದಿರು

ಗಝಲ್ ಶ್ರೀದೇವಿ ಕೆರೆಮನೆ ಅದೆಷ್ಟೊ ಶತಮಾನಗಳಿಂದ ಕಾದಿರುವೆ ಹೇಳದೇ ಹೋಗದಿರುನೀ ಬರುವ ಹಾದಿಗೆ ಕಣ್ಣು ಕೀಲಿಸಿರುವೆ ಹೇಳದೇ ಹೋಗದಿರು ಬರಿದೆ ಮತ್ತೇರದಿರು ಸುರೆಗೆಲ್ಲಿದೆ ನಿನ್ನ ಮರೆಸುವ ತಾಕತ್ತುದೇಹದ ಬಟ್ಟಲಿಗೆ ಮದಿರೆ ತುಂಬಿಸಿರುವೆ ಹೇಳದೇ ಹೋಗದಿರು ಹಗಲಿರುಳೂ ಮತ್ತೇನೂ ಇಲ್ಲ ನಿನ್ನದೇ ಧ್ಯಾನ‌ದ ಹೊರತಾಗಿತಲಬಾಗಿಲ ಮೆಟ್ಟಿಲಲಿ ಕಾದು ಕುಳಿತಿರುವೆ ಹೇಳದೇ ಹೋಗದಿರು ಜೋಡಿಮಂಚದ ಬದಿಯಲ್ಲಿ ಹಚ್ಚಿಟ್ಟ ದೀಪದ ಎಣ್ಣೆ ತೀರಿದೆದೇವರ ಗೂಡಿಂದ ಹಣತೆಯೊಂದ ತರುವೆ ಹೇಳದೇ ಹೋಗದಿರು ವಿರಹ ತುಂಬಿದ ರಾತ್ರಿ ನಿದ್ದೆಯಿರದೆ ಬಲು ದೀರ್ಘವಾಗುವುದಂತೆಜೋಗುಳ ಹಾಡಿ ಮಡಿಲೊಳಗೆ […]

ಗಝಲ್

ಎ ಎಸ್. ಮಕಾನದಾರ ನೀನು ಹೋದ ಅರೆಗಳಿಗೆಗೆ ಬಾಗಿಲ ಕಿಟಕಿಗಳು ಬೋರಾಡಿ ಅಳುತಿವೆಇಂದಲ್ಲ ನಾಳೆ ಬರುತ್ತೀಯೆಂದು ಹೊಸ್ತಿಲ ಭರವಸೆಯಿಂದ ಕಾಯುತಿವೆ ಅಂಗಾಲಿಗೆ ಮುತ್ತಿಕ್ಕಿದ ಮಣ್ಣು ಹಿಮ್ಮಡಿಯಲಿ ಹಿಮ್ಮೇಳಹಾಕಿವೆ ಸಾಕಿದಣಿದ ದೇಹಕೆ ಖಬರಸ್ತಾನಿನ ಹೂಗಳು ಸದಾ ಸಾಂತ್ವನ ಹೇಳುತಿವೆ ಬೀದಿ ದೀಪಗಳು ಕಣ್ಣುಗಳನ್ನು ಪಿಳುಕಿಸಿ ಮಿಂಚುಹುಳು ವಾಗಿಸುತ್ತಿವೆನೆನಪುಗಳು ಮಗ್ಗುಲು ಬದಲಿಸಿ ನೇಸರನಿಗೆ ಕರೆದು ಸಾವು ತರಿಸುತಿವೆ ಹರಿದ ಅಂಗಿಗೆ ಬೆವರ ಉಣಿಸಿ ಬೆಂದ ಹಾಲಿಗೆ ನೆಮ್ಮದಿ ಬೇಡುತ್ತಿವೆತುಕ್ಕು ಹಿಡಿದ ತೊಟ್ಟಿಲಲಿ ಜೋಗುಳ ತೂಗಿ ಹರತಾಳವನು ಹೂಡುತಿವೆ ಸಾಹೇಬನ ಹಸಿವು […]

ಗಝಲ್

ರತ್ನರಾಯ ಮಲ್ಲ ಕೋಟೆಯಲ್ಲಿ ಕುಂತಿರುವೆ ಬರುವವರೆಲ್ಲ ಬಂದುಬಿಡಿಹಸಿವಿನಿಂದ ಬಳಲುತಿರುವೆ ತಿನ್ನುವವರೆಲ್ಲ ತಿಂದುಬಿಡಿ ಬುದ್ಧಿಮಾತುಗಳು ಬುದ್ಧಿಭ್ರಮಣೆಯಲಿ ಕೊಳೆಯುತಿವೆಜೋಳಿಗೆಯು ಹರಿದಿದೆ ನೋಟುಗಳಿಂದ ತುಂಬಿಸಿಬಿಡಿ ಭೂಷಣವಾಗಿದ್ಧ ನಾಚಿಕೆಯ ಪರದೆಯನ್ನು ಎಸೆದಿರುವೆನೀವು ಬಂದ ಕೆಲಸವನ್ನು ಮುಗಿಸಿಕೊಂಡು ಹೋಗಿಬಿಡಿ ಪೂಜೆ-ಪುನಸ್ಕಾರದ ಜೊಳ್ಳು ಮೌಲ್ಯಗಳು ಬೇಡವಾಗಿವೆನಮ್ಮ ಪಾಡಿಗೆ ನಮಗೆ ಸುಖವಾಗಿ ಇರಲು ಬಿಟ್ಟುಬಿಡಿ ಹಸಿಮಾಂಸ ತಿನ್ನುವ ರಣಹದ್ದುಗಳ ಪರಪಂಚವಿದುಅನ್ನ ತಿನ್ನುವುದನ್ನು ಕಲಿತು ನೆಮ್ಮದಿಯಾಗಿ ಇದ್ದುಬಿಡಿ **************

ಕಾವ್ಯಯಾನ

ಗಝಲ್ ಮಾಲತಿ ಹೆಗಡೆ ನೂರು ಆಸೆ ನೂರು ಕನಸ ಹತ್ತಿಕ್ಕುತ ನಡೆದೆಯೇಕೆ?ಕೋಪತಾಪದಲ್ಲಿ ಬಳಲಿ ಬಿಕ್ಕುತ್ತ ನಡೆದೆಯೇಕೆ? ಹೆತ್ತ ಕೂಸಿನ ವಾತ್ಸಲ್ಯವ ಕಳಚಿ ನಿರ್ಮೋಹ ಮೆರೆದೆಉತ್ತರ ಕೊಡದ ಮೌನ ಕಕ್ಕುತ್ತ ನಡೆದೆಯೇಕೆ? ಸಿಕ್ಕ ಬದುಕ ಕಟ್ಟಲರಿಯದೇ ಸಿಕ್ಕು ಸಿಕ್ಕಾಗಿಸಿ ಸೊರಗಿದೆನಕಾರಾತ್ಮಕ ವಿಚಾರದಲ್ಲೇ ಸೊಕ್ಕುತ್ತ ನಡೆದೆಯೇಕೆ? ಹುಟ್ಟಿದವರಿಗೆಲ್ಲ ಒಂದು ದಿನ ಬರುವುದು ಸಾವು ನಿಶ್ಚಿತಅರೆ ಆಯುಷ್ಯದಲ್ಲೇ ಸೋಲು ಮುಕ್ಕುತ್ತ ನಡೆದೆಯೇಕೆ? ಮುದ್ದುಕಂದನಿಗೆ ಅಮ್ಮನಾಗಿ ಹೆಮ್ಮೆಯ ದೇವತೆಯಾಗಿದ್ದೆನಕ್ಷತ್ರವಾಗುವ ಹುಚ್ಚಿನಲಿ ನೋಯುತ್ತ ನಡೆದೆಯೇಕೆ? ************

ಕಾವ್ಯಸಂಗಾತಿ

ಗಝಲ್ ಬಾಗೇಪಲ್ಲಿ ಕೃಷ್ಣಮೂರ್ತಿ ಬ್ರಹ್ಮಾಂಡದಿ ನೀನು ತೃಣಅದಕೆ ನೀ ಇರುವೆ ಋಣ ಹೇಗೆ ತೀರಿಸುವೆ ಅದನುಯೋಚಿಸು ಒಂದು ಕ್ಷಣ ಸದಾ ಸಲಹಲು ನಿನ್ನಬದಲಾಗಿಸು ನಿನ್ನ ಗುಣ ಅತಿಯಾಸೆಯಿಂದ ನೀನುಮಾಡಿರುವೆ ಎಲ್ಲಾ ರಣ ಸಿಕ್ಕ ಸಿಕ್ಕಲ್ಲೆಲ್ಲಾ ಅಗೆದುಮಾಡಿರುವೆ ಅದಕೆ ವ್ರಣ ಪರಿಸರ ರಕ್ಷಣೆ ಆಗಬೇಕುಸೇರು ನೀನು ಅದರ ಬಣ ಕ್ಷಮೆ ಎನೆ ಭೂಮಿ’ಮಂಕೇ’ಸಕಲರೂ ತೊಡಬೇಕು ರಕ್ಷಣೆಗೆ ಪಣ (ಚೋಟಿ ಬೆಹರ್ ರಚಿಸುವ ಯತ್ನ) **********

Back To Top