ಮೂರನೇ ಆಯಾಮ
ಅಂಕಣ ಬರಹ ಹಾಡುವ ತೊರೆಗೆ ಹಾದಿ ತೋರುವ ಕವಿತೆಗಳು ಸಂಕಲನ-ತೊರೆ ಹರಿವ ಹಾದಿಕವಿ- ವಿನಯಚಂದ್ರಬೆಲೆ-೧೨೦ಪ್ರಕಾಶನ- ವಿಶಿಷ್ಟ ಪ್ರಕಾಶನ, ಹಾಸನ ಕವಿತೆಗಳ ಜಾಡು ಎಂತಹದ್ದು? ಅದು ಯಾವ ಹಾದಿ ಹಿಡಿದು ಹೊರಟಿರುತ್ತದೆ? ಕವಿತೆ ಅಂತರ್ಮುಖಿಯಾಗಿರಬೇಕೆ ಅಥವಾ ಬಹಿರ್ಮುಖಿಯಾಗಿರಬೇಕೆ ಎನ್ನುವ ಪ್ರಶ್ನೆ ಸದಾಕಾಲ ವಿಮರ್ಶೆಯನ್ನು ಕಾಡುತ್ತಿರುತ್ತದೆ. ಒಂದು ಕವಿತೆ ಅತ್ಯುತ್ತಮ ಅಥವಾ ಇನ್ನೊಂದು ಕವಿತೆ ಸಾಧಾರಣ ಇಲ್ಲವೆ ಈ ಕವಿತೆ ಕಳಪೆ ಎಂದು ಹೇಳುವ ಮಾನದಂಡವಾದರೂ ಯಾವುದು? ಕವಿತೆಯನ್ನು ಓದಿ ಆಸ್ವಾದಿಸಬೇಕೋ ಅಥವಾ ವಿಮಶೆಯ ನಿಕಶಕ್ಕೆ ಒಡ್ಡಿ ಒಳ್ಳೆಯ […]
ಅಂಕಣ ಬರಹ ಹಲವು ಬಣ್ಣಗಳನ್ನು ಹೊತ್ತ ಭಾವನೆಗಳ ಕೋಲಾಜ್ ಆಕಾಶಕ್ಕೆ ಹಲವು ಬಣ್ಣಗಳು (ಗಜಲ್ ಸಂಕಲನ)ಕವಿ- ಸಿದ್ಧರಾಮ ಹೊನ್ಕಲ್ಬೆಲೆ-೧೩೦/-ಪ್ರಕಾಶನ- ಸಿದ್ಧಾರ್ಥ ಎಂಟರ್ಪ್ರೈಸಸ್ ಇಲ್ಲಿ ಕತ್ತಲೆ ಕಳೆದು ಬೆಳಕು ಮೂಡಿಸಿದವರೆ ಸಂತ ಸೂಫಿಗಳು ಬಸವಾದಿ ಶರಣರು ಸಾಕಿ ಎನ್ನುತ್ತ ತಮ್ಮ ನೆಲದ ಗಟ್ಟಿ ದನಿಗಳನ್ನು ಉಲ್ಲೇಖಿಸಿ ಗಜಲ್ಲೋಕಕ್ಕೆ ಬಂದಿರುವ ಕವಿ ಸಿದ್ಧರಾಮ ಹೊನ್ಕಲ್ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಾ ಹಳಬರು. ಕಥೆ, ಕವನ, ಪ್ರವಾಸ ಕಥನ, ಪ್ರಬಂಧಗಳು ಹೀಗೆ ಹತ್ತಾರು […]
ಅಂಕಣಬರಹ ಅದುಮಿಟ್ಟ ಮನದ ಮಾತುಗಳು ಕವಿತೆಗಳಾದಾಗ ಪುಸ್ತಕ- ಸಂತೆ ಸರಕುಕವಿ- ಬಿ ಎ ಮಮತಾ ಅರಸೀಕೆರೆಪ್ರಕಾಶನ- ನಾಕುತಂತಿ ಬೆಲೆ- ೮೦/- ಸಿದ್ಧ ಸೂತ್ರ ಬದಲಾಗಬೇಕುಅಜ್ಜಿ ಕಥೆಯಲ್ಲಿಅರಿವು ಜೊತೆಯಾಗಬೇಕುಹೊಸ ಕಥೆಗಳ ಬರೆಯಬೇಕುಅಕ್ಷರ ಲೋಕದಲಿಅಕ್ಷರ ಲೋಕದಲ್ಲಿ ಬದಲಾವಣೆ ಬಯಸುವ ಮಮತಾ ಆಡಲೇ ಬೇಕಾದ ಮಾತುಗಳೊಂದಿಗೆ ನಮ್ಮೆದುರಿಗಿದ್ದಾಳೆ. ಮಮತಾ ಅಂದರೇ ಹಾಗೆ. ಹೇಳಬೇಕಾದುದನ್ನು ಮನದೊಳಗೇ ಇಟ್ಟುಕೊಂಡಿರುವವಳಲ್ಲ. ಹೇಳಬೇಕಾದುದ್ದನ್ನು ಥಟ್ಟನೆ ಹೇಳಿಬಿಡುವವಳು. ಆ ಮಾತಿನಿಂದ ಏನಾದರೂ ವ್ಯತಿರಿಕ್ತವಾದರೆ ನಂತರದ ಪರಿಣಾಮಗಳ ಬಗ್ಗೆ ಕೊನೆಯಲ್ಲಿ ಯೋಚಿಸಿದರಾಯಿತು ಎಂದುಕೊಂಡಿರುವವಳು. […]
ಹಲವು ಭಾವಗಳನ್ನು ಒಟ್ಟಿಗೆ ಸೆರೆಹಿಡಿಯುವ ರೂಪಕಗಳು ಸೂಜಿ ಕಣ್ಣಿಂದ ತೂರಿದದಾರಕ್ಕೆ ಒಳಗಿಲ್ಲ ಹೊರಗಿಲ್ಲ ಈ ಒಂದು ಸಾಲಲ್ಲಿಯೇ ತನ್ನ ಇಡೀ ಕಾವ್ಯದ ಸತ್ವವನ್ನು ನಮ್ಮೆದುರಿಗೆ ತೆರೆದಿಟ್ಟ ಕೃಷ್ಣ ಗಿಳಿಯಾರ ಎಂಬ ವೈದ್ಯರ ಪರಿಚಯ ಯಾರಿಗಿಲ್ಲ ಹೇಳಿ. ವೃತ್ತಿಯಲ್ಲಿ ವೈದ್ಯರಾದರೂ ನವಿರು ಗೆರೆಗಳು ಅವರ ಭಾವಾಭಿವ್ಯಕ್ತಿಯ ಪ್ರತಿರೂಪ. ಭಟ್ಕಳದಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಕೃಷ್ಣ ಗಿಳಿಯಾರರ ಕ್ಯಾಮರಾಕ್ಕೆ ಫೋಸ್ ನೀಡಲೆಂದೇ ಬಹಳಷ್ಟು ಹೂವುಗಳು ಅರಳುತ್ತವೆ. ಹೆಚ್ಚಿನ ಪಕ್ಷಿಗಳು ಅವರೆದುರು ಹೊಸ ಮದುವಣಗಿತ್ತಿಯಂತೆ ನುಲಿಯುತ್ತ ನಡೆಯುತ್ತವೆ. ಸೂರ್ಯ ಬಳಕುತ್ತ ತನ್ನದೊಂದು […]
ದೇಹದ ಹಂಗು ತೊರೆದು; ಹೊಸದನ್ನು ಹುಡುಕಿ ಯಾರಾದರೂ ವ್ಯಾಟ್ಸ್ಆಪ್ ಅಥವಾ ಫೇಸ್ಬುಕ್ನ ಇನ್ ಬಾಕ್ಸ್ಗೆ ಬಂದು ಅಡ್ರೆಸ್ ಕೊಡಲು ಕೇಳಿದರೆ ನಾನು ಮಾತನಾಡದೇ ಕೊಟ್ಟುಬಿಡುವುದು ನನಗೆ ರೂಢಿಯಾಗಿಬಿಟ್ಟಿದೆ. ಯಾಕೆಂದರೆ ಬಹುತೇಕ ಹಾಗೆ ಕೇಳುವವರು ಸಾಹಿತಿ ಮಿತ್ರರೇ. ಅದೂ ಆಗಷ್ಟೇ ಅವರ ಪುಸ್ತಕ ಪ್ರಕಟವಾದವರು. ಹೀಗಾಗಿ ಪ್ರಕಾಶ ನಾಯಕರು ವಿಳಾಸ ತಿಳಿಸು ಎಂದು ವ್ಯಾಟ್ಸ್ ಆಪ್ನಲ್ಲಿ ಕೇಳಿದಾಗ ಅವರ ಅಂತೂ ಫೇಸ್ಬುಕ್ನಲ್ಲಿ ಸದ್ದು ಮಾಡ್ತಿರೋದನ್ನು ಗಮನಿಸಿದ್ದರಿಂದ ಅಷ್ಟೇನು ಗಮನವಹಿಸದೇ ಕೊಟ್ಟುಬಿಟ್ಟೆ. ಅದಾದ ನಂತರ […]
ಅಂಕಪಟ್ಟಿ ಬಾಲ್ಯ ಪುಸ್ತಕ-ಅಂಕಪಟ್ಟಿ ಬಾಲ್ಯಕವಿ- ರವಿರಾಜ ಸಾಗರಪ್ರಕಾಶನ- ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಟಾನ, ಕಮಲಾಪುರಬೆಲೆ-೧೩೦/- ಸ್ಪರ್ಧಾಲೋಕದಿ ಬೇಕೇ ಬೇಕಂತೆತರತರ ಪ್ರಮಾಣ ಪತ್ರಗಳುಕಷ್ಟವಾದರೂ ಮಾಡಲೇ ಬೇಕಂತೆನಾವು ಬಯಸದ ಪಾತ್ರಗಳು ಇದು ಇಂದಿನ ದಿನಮಾನದ ಎಲ್ಲಾ ಮಕ್ಕಳ ಸಮಸ್ಯೆ. ಮಕ್ಕಳ ಮನಸ್ಸನ್ನು ಯಾರು ಅರ್ಥ ಮಾಡಿಕೊಳ್ಳುತ್ತಾರೆ ಹೇಳಿ? ನಮಗೆ ಹೆಚ್ಚು ಅಂಕಕೊಡುವ ರೋಬೋಟ್ ಬೇಕಿದೆಯೇ ಹೊರತು, ನಮ್ಮಿಂದ ಮುದ್ದಿಸಲ್ಪಟ್ಟು, ನಮ್ಮನ್ನೂ ಪ್ರೀತಿಸುವ ಮಗು ಬೇಕಾಗಿಲ್ಲ. ಎಲ್ಲ ಅಪ್ಪ ಅಮ್ಮಂದಿರಿಂದ ಹಿಡಿದು, ಶಿಕ್ಷಣ ಇಲಾಖೆಯಿಂದ ಹಿಡಿದು ಸಮಾಜದ ಎಲ್ಲರಿಗೂ ಮಗುವಿನ […]
ಕಾಡು ಸುತ್ತಿಸಿ ನಿಸರ್ಗದ ಪಾಠ ಹೇಳುವ ಕಾನ್ಮನೆಯ ಕಥೆಗಳು ನಾನು ಎರಡನೇ ತರಗತಿ ಇದ್ದಿರಬಹುದು. ಅಜ್ಜಿ ಮನೆಯ ಊರಲ್ಲಿ ಬಂಡಿ ಹಬ್ಬ. ಅಂಕೋಲಾ ಹಾಗೂ ಕುಮಟಾದವರು ಏನನ್ನಾದರೂ ಬಿಟ್ಟಾರು. ಆದರೆ ಬಂಡಿ ಹಬ್ಬ ಬಿಡುವುದುಂಟೆ? ಆದರೆ ಬಂಡಿ ಹಬ್ಬದಲ್ಲಿ ದೇವರು ಒಮ್ಮೆ ಕಳಸದ ಮನೆಯಲ್ಲಿ ಕುಳಿತ ನಂತರ ಮತ್ತೆ ಎದ್ದು ಬರೋದು ರಾತ್ರಿಯೇ. ಅದರಲ್ಲೂ ಬಂಡಿ ಆಟ ಮುಗಿಸಿ ತಡವಾಗಿದ್ದ ರಾತ್ರಿಯದು. […]
ಬೆಳಕಿನ ರೋಚಕತೆ ನೀಡುವ ಬೆಳದಿಂಗಳು. ಪುಸ್ತಕ- ಬೆಳದಿಂಗಳು ಕವಿ- ಗುರು ಹಿರೇಮಠ ವಿಶ್ವೃಷಿ ಪ್ರಕಾಶನ ಬೆಲೆ-೧೨೦/- ಗುರು ಹಿರೇಮಠ ತುಮಕೂರು ಟು ಹೊಸ್ಪೇಟ್ ಎಂದೇ ನನಗೆ ಪರಿಚಯವಾದವರು. ಮೃದು ಮಾತಿನ ಅಷ್ಟೇ ನಾಚಿಕೆ ಸ್ವಭಾವದ ಹುಡುಗ. ಯಾವಾಗ ಎದುರಿಗೆ ಸಿಕ್ಕರೂ ಒಂದು ನಗೆಯ ಹೊರತಾಗಿ ಬೇರೆ ಮಾತು ಆಡಲು ಬರುವುದೇ ಇಲ್ಲವೇನೋ ಎಂಬಷ್ಟು ಮೌನಿ. ಅವರ ಚುಟುಕುಗಳ ಸಂಕಲನ ಬೆಳದಿಂಗಳು ಓದಿದಾಗ ಅವರ ಮೌನಕ್ಕೊಂದು ಅರ್ಥ ದೊರಕಿತು ನನಗೆ. ಹೇಳಬೇಕಾದುದ್ದನ್ನೆಲ್ಲ ಚುಟುಕಾಗಿ ಮೂರು ನಾಲ್ಕು ಸಾಲುಗಳಲ್ಲಿ ಹೇಳಿ […]
ಹೆಣ್ಣೊಡಲಾಳದ ನೋವಿನ ದನಿಗಳು ಅಂಕಣ ಬರಹ ಊರ ಒಳಗಣ ಬಯಲುಲೇಖಕಿ-ವಿನಯಾಪ್ರಕಾಶಕರು- ಛಂದ ಪುಸ್ತಕಬೆಲೆ-೪೦/- ನಮ್ಮ ಮನೆಯಿಂದ ಒಂದುವರೆ ಕಿ.ಮಿ ಹೋದರೆ ಗಂಗಾವಳಿ ನದಿ ಸಮುದ್ರಕ್ಕೆ ಸೇರುವ ಸ್ಥಳ ಬರುತ್ತದೆ. ಅಲ್ಲಿಯೇ ಸ್ವಲ್ಪ ಹಿಂದೆ ಗಂಗಾವಳಿ ನದಿಯನ್ನು ದಾಟಿಸುವ ಸ್ಥಳವಿದೆ. ಮೊದಲೆಲ್ಲ ದೋಣಿಯಲ್ಲಿ ದಾಟಿಸುತ್ತಿದ್ದರು. ಈಗ ದೊಡ್ಡದೊಂದು ಬಾರ್ಜು ಬಂದಿದೆ. ಮಕ್ಕಳಿಗೆ ಒಂದು ಚಂದದ ಅನುಭವವಾಗಲೆಂದು ಕೆಲವೊಮ್ಮೆ ಅಲ್ಲಿಂದ ಬಾರ್ಜಿನಲ್ಲಿ ದಾಟಿ ಸಮೀಪದ ಮಾಸ್ಕೇರಿ ಎಂಬ ಊರಿಗೆ ಹೋಗಿ ಬರುವುದೂ […]
ಶಬ್ಧಭಾರವಿಲ್ಲದ ಮನದ ಮಾತುಗಳು
ಅಂಕಣ ಬರಹ ಶಾಂತಿ ಬೀಜಗಳ ಜತನಲೇಖಕರು- ಪ್ರಕಾಶ ಖಾಡೆಯಾಜಿ ಪ್ರಕಾಶನಬೆಲೆ-೧೨೦ ಶಾಂತಿ ಬೀಜಗಳ ಜತನಲೇಖಕರು- ಪ್ರಕಾಶ ಖಾಡೆಯಾಜಿ ಪ್ರಕಾಶನಬೆಲೆ-೧೨೦ ಜಗತ್ತು ವಿಚಿತ್ರ ಸಂದಿಗ್ಧತೆಯಲ್ಲಿದೆ. ಯಾರನ್ನು ನಂಬುವುದೋ, ಯಾರನ್ನು ಮಿತ್ರರೆನ್ನುವುದೋ ಎನ್ನುವ ದ್ವಂದ್ವ ಎಲ್ಲರನ್ನೂ ಕಾಡುತ್ತಿರುವ ಈ ಹೊತ್ತಿನಲ್ಲಿ ಆತ್ಮೀಯ ಮಿತ್ರರೂ ಶತ್ರುಗಳಾಗಿಬಿಡುವ ವಿಕಲ್ಪತೆಯ ದಿನಗಳಿವು. ನಾವು ಮನುಷ್ಯರೋ ಅಥವಾ ಮನುಷ್ಯ ರೂಪದಲ್ಲಿರುವ ಆತ್ಮ ಸತ್ತ ದೇಹಗಳೋ ಎಂಬ ಅನುಮಾನ ನಮ್ಮನ್ನೇ ಕಾಡುತ್ತಿರುವ ಈ ವಿಚಿತ್ರ ಸನ್ನಿವೇಶದಲ್ಲಿ ಹಿರಿಯ ಕವಿ ಪ್ರಕಾಶ ಖಾಡೆಯವರು ಮಾನವಿಯತೆಯನ್ನು ಹುಡುಕುತ್ತ ಹೊರಡುತ್ತಾರೆ.ಏನೂ ಬೇಡವೆಂದುಮನುಷ್ಯ […]