Category: ಮೂರನೇ ಆಯಾಮ

ಎಂದೂ ಸಾಕೆನಿಸದ ನೆಲದ ನಂಟು, ಸಮುದ್ರದ ಪ್ರೀತಿ

ಅಂಕಣಬರಹ ಪುಸ್ತಕ- ಬಾನಸಮುದ್ರಕೆ ಗಾಳನೋಟ ಲೇಖಕರು- ಪ್ರವೀಣ ಬೆಲೆ ೮೦/- ಪ್ರಕಾಶನ-ಸಲೀಲ ಪುಸ್ತಕ ಚಿಕ್ಕವನಿರುವಾಗ ಬಟ್ಟೆಯ ಸ್ಟ್ಯಾಂಡ್‌ನಲ್ಲಿರುವ ಬಟ್ಟೆಗಳನ್ನೆಲ್ಲ ಒಂದೆಡೆ ಗುಡ್ಡೆಹಾಕಿಕೊಂಡು ಬೆಚ್ಚಗೆ ಮಲಗುತ್ತಿದ್ದ ಮಗನಿಗೆ ಈಗ ಆತ ಹಾಗೆ ಮಾಡುತ್ತಿದ್ದ ಎಂದರೆ ನಂಬುವುದಿಲ್ಲ. ಮಲಗುವಾಗ ನಾನು ಬೆಳ್ಳಿಗ್ಗೆ ಬೇಗ ಏಳಬೇಕಾದಾಗಲೆಲ್ಲ ಅವನ ಪಕ್ಕ ನನ್ನ ಉಪಯೋಗಿಸಿದ ಉಡುಪುಗಳನ್ನು ಇಡುತ್ತಿದ್ದೆ. ಅದನ್ನೇ ತಬ್ಬಿಕೊಂಡು ಆತ ಹಾಯಾಗಿ ಮಲಗಿಬಿಡುತ್ತಿದ್ದ. ಕೆಲವೊಮ್ಮೆ ಬಟ್ಟೆ ಇಡದಿದ್ದಾಗ ಎದ್ದು ಅಳಲು ಪ್ರಾರಂಭಿಸುತ್ತಿದ್ದ. ಪ್ರವೀಣ ಅವರ ಬಾನಸಮುದ್ರಕೆ ಗಾಳನೋಟ ಎನ್ನುವ ಸಂಕಲನದ ಮೊದಲ ಕವನವನ್ನು […]

ಮಗುವಾಗಿಸುವ ಸುಂದರ ಹೂ ಮಾಲೆ

ಪುಟ್ಟಲಕ್ಷ್ಮಿ ಕಥೆಗಳುಲೇಖಕರು- ರಘುನಾಥ ಚ ಹಬೆಲೆ-೮೦/-ಪ್ರಕಾಶನ-ಅಂಕಿತ ಪುಸ್ತಕ ಚಿಕ್ಕ ಮಕ್ಕಳ ಲೋಕವೇ ಬೇರೆ ರೀತಿಯದ್ದು. ಕಂಡಿದ್ದೆಲ್ಲವೂ ಅಚ್ಚರಿಯ ವಿಷಯವೇ. ನಾನು ಮೂರನೇ ತರಗತಿಯಲ್ಲಿದ್ದಾಗ ನನ್ನ ಪಕ್ಕದ ಮನೆಯಲ್ಲಿ ದೀಪಾ ಕೊಡ್ಲೆಕೆರೆ ಎನ್ನುವ ನಾಲ್ಕನೆ ತರಗತಿಯ ಗೆಳತಿಯೊಬ್ಬಳಿದ್ದಳು. ಅವಳ ತಂದೆ ಅಲ್ಲೇ ಸಮೀಪದ ಮತ್ತೊಂದು ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದರು. ಅವರು ನಮ್ಮ ಹೆಸರಾಂತ ಕಥೆಗಾgರಾಗಿರುವ ಚಿಂತಾಮಣಿ ಕೊಡ್ಲೆಕೆರೆ ಹಾಗೂ ಮಹಾಬಲಮೂರ್ತಿ ಕೊಡ್ಲೆಕೆರೆಯವರ ಚಿಕ್ಕಪ್ಪ. ನಾನು ದೀಪಾ ಆಗಲೇ ಕವನ ಬರೆಯುತ್ತೇವೆಂದು ಏನೇನೋ ಬರೆಯುತ್ತಿದ್ದೆವು. ಆಗ ನಾವಿದ್ದ ಅಮ್ಮಿನಳ್ಳಿ ಎಂಬ […]

ನವಿರು ಹಾಸ್ಯದೊಳಗೆ ಚುಚ್ಚುವ ಮೊನಚಿದೆ ಹಿಂದೊಮ್ಮೆ ಪ್ರಮಿಳಾ ರಾಜ್ಯವೊಂದಿತ್ತಂತೆ. ಅಲ್ಲಿ ಮಹಿಳೆಯರೇ ರಾಣಿಯರು, ಅಧಿಕಾರದಲ್ಲಿರುವವರು ಎಲ್ಲಾ. ಅಲ್ಲಿ ಗಂಡಸರಿಗೆ ಪ್ರವೇಶವೇ ಇರಲಿಲ್ಲವಂತೆ. ಸಂತಾನ ಬೇಕಾದ ಸ್ತ್ರೀಯರೂ ರಾಜ್ಯದ ಹೊರಗೆ ಹೋಗಿ ಪಡೆಯಬೇಕಾಗಿತ್ತಂತೆ. ಒಂದುವೇಳೆ ಗಂಡು ಸಂತಾನವನ್ನು ಪಡೆದರೆ ಆ ಮಗುವನ್ನು ಅಲ್ಲಿಯೇ ಬಿಟ್ಟು ಬಿಡುವುದು ಅನಿವಾರ್ಯವಾಗಿತ್ತಂತೆ. ಆದರೆ ಹೆಣ್ಣು ಮಗುವಾಗಿದ್ದರೆ ಮಾತ್ರ ತಮ್ಮ ರಾಜ್ಯಕ್ಕೆ ಕರೆದೊಯ್ಯಬಹುದಿತ್ತಂತೆ. ಅಂತಹುದ್ದೊಂದು ಪ್ರಮಿಳಾ ರಾಜ್ಯವಿದ್ದರೆ  ನಾನೂ ಅಲ್ಲಿಯೇ ಹೋಗಿ ಇರಬಹುದಾಗಿತ್ತು ಎಂದು ಎಷ್ಟೋ ಸಲ ಅಂದುಕೊಳ್ಳುತ್ತಿರುತ್ತೇನೆ. ಎಷ್ಟೊಂದು ಕೆಲಸಗಳು. ಮುಗಿಯದ, ಮುಗಿಯಲೊಲ್ಲದ […]

ವಲಸೆಯ ಹಾದಿಯಲ್ಲಿ ಪುಸ್ತಕ- ಮಲಾಣ್ಲೇಖಕರು- ಶಾಂತಾ ನಾಯ್ಕ ಶಿರಗಾನಹಳ್ಳಿಬೆಲೆ-೩೧೦/-ಪ್ರಕಾಶಕರು- ದೇಸಿ ಪುಸ್ತಕ        ಸೃಷ್ಟಿ ನಾಗೇಶ್ ಒಂದಿಷ್ಟು ಪುಸ್ತಕಗಳನ್ನು ಕಳಿಸಿದ್ದರು. ಅದರಲ್ಲಿ ಮಲಾಣ್ ಕೂಡ ಒಂದು. ನೋಡಿದ ಕೂಡಲೇ ಬೇರೆಲ್ಲ ಕೆಲಸ ಬಿಟ್ಟು ಅದನ್ನೇ ಓದಲಾರಂಭಿಸಿದೆ. ಯಾಕೆಂದರೆ ಅದು ನಾನು ತುಂಬಾ ಗೌರವಿಸುವ ಶಾಂತಾ ನಾಯ್ಕ ಶಿರಗಾನಹಳ್ಳಿಯವರ ಪುಸ್ತಕ. ಹಿಂದೊಮ್ಮೆ ಸುಮಾರು ನಾನು ಹೈಸ್ಕೂಲಿನಲ್ಲಿದ್ದಾಗ ಅವರು ಕಾರವಾರದ ಆಕಾಶವಾಣಿಯಲ್ಲಿದ್ದವರು. ಆಗಲೇ ಇವಳು ಬರೆಯುತ್ತಾಳೆ ನೋಡಿ ಎಂದು ಬೆನ್ನು ತಟ್ಟಿದವರು. ಹೀಗಾಗಿ ಅವರ ಹೆಸರು ನೋಡಿದಾಕ್ಷಣ […]

ಚಹಾ ಎನ್ನುವ ಜನುಮದ ಸಾಕಿ ಬುಕ್ ಆಫ್ ಟೀ ಲೇಖಕರು – ಕುಮಾರ್ ಎಸ್ ಬೆಲೆ- -100           ಎಲ್ಲವನ್ನೂ ಬೆಸೆದ ಚಹಾ ಪ್ರೀತಿಗೆ ಎನ್ನುವ ಬರೆಹದೊಂದಿಗೆ ಈ ಪುಸ್ತಕ ನನ್ನ ಕೈ ಸೇರಿದಾಗ ಎಷ್ಟೊಂದು ಖುಷಿಯಾಗಿತ್ತು ಎಂದರೆ ಕುಳಿತಲ್ಲೇ ಒಂದು ಕಪ್ಪು ಬಿಸಿಬಿಸಿ ಚಹಾ ಕುಡಿದಷ್ಟು ರಿಲ್ಯಾಕ್ಸ್ ಆಗಿದ್ದೆ.  ನನ್ನ ಚಹಾ ಪ್ರೀತಿಯೇ ಅಂತಹುದ್ದು. ಕೊಟ್ಟರೆ ಮೊಗಮೊಗೆದು ಕುಡಿಯುತ್ತಲೇ ಇರುವ ಇಲ್ಲದಿದ್ದರೆ ದಿನವಿಡೀ ಕುಡಿಯದ ಪ್ರೀತಿಯಂತಹ ಪ್ರೀತಿ ಈ ಚಹ. ಪ್ರೀತಿಯೂ ಹಾಗೆ. ಪ್ರೇಮ ಸಾಗರದಲ್ಲಿ […]

ಉದಯಿಸುತ್ತಿರುವ ಸೂರ್ಯನೊಂದಿಗೆ ಹೆಜ್ಜೆಯಿಡುವ ತವಕದಲ್ಲಿ. ತೇರೂವೋ ಮೂಲ ಗೌರಿ ದೇಶಪಾಂಡೆ ಕನ್ನಡಕ್ಕೆ- ಚಂದ್ರಕಾಂತ ಪೋಲಳೆ ಬೆಲೆ-೮೦   ನನಗೆ ಬೇರೆ ಭಾಷೆಗಳಿಂದ ಅನುವಾದಗೊಂಡ ಕಾದಂಬರಿಗಳ ಹುಚ್ಚು ಹಿಡಿಸಿದ್ದು ಸೃಷ್ಟಿ ನಾಗೇಶರವರು. ಅವರ ಸೃಷ್ಟಿ ಪ್ರಕಾಶನ ಎಂದರೆ ಅನುವಾದಗಳಿಗಾಗಿಯೇ ಮೀಸಲಾಗಿರುವ ಪ್ರಕಾಶನ. ಜಗತ್ತಿನ ಅದ್ಭುತ ಕಾದಂಬರಿಗಳ ಅನುವಾದಗಳನ್ನು ನಾನು ಓದಿದ್ದು ಸೃಷ್ಟಿ ಪ್ರಕಾಶನದ ಪುಸ್ತಕಗಳಿಂದಾಗಿಯೇ. ತಮ್ಮ ಪ್ರಕಾಶನದ ಪುಸ್ತಕಗಳನ್ನು ತಲುಪಿಸುವ ಸೃಷ್ಟಿ ನಾಗೇಶ ಇದನ್ನು ಮೊದಲು ಓದಿ, ಈ ಪುಸ್ತಕ ಅದ್ಭುತವಾಗಿದೆ ಓದಿ ಎಂದೆಲ್ಲ ಸಲಹೆ ಮಾಡಿಯೇ ಕಳುಹಿಸುತ್ತಾರೆ. […]

ಮೂರನೇ ಆಯಾಮ

ಸುಪ್ತಮನದೊಳಗಿನ ಗುಪ್ತತೆಗಳ ಅನಾವರಣ ಸುಪ್ತಲೇಖಕರು- ಡಾ. ಕೆಬಿ ಶ್ರೀಧರಬೆಲೆ- ೨೦೦ ತ್ರೀ ಈಡಿಯೆಟ್ಸ್ ನೋಡಿದ್ದೀರಲ್ಲ? ಅಲ್ಲಿನ ಒಂದು ದೃಶ್ಯ. ಇಂಜಿನಿಯರ್ ಕಾಲೇಜಿನ ರಿಸಲ್ಟ್ ಬಂದಿರುತ್ತದೆ. ಸ್ನೇಹಿತರಾದ ಫರ್ಹಾನ್ ಖಾನ್ ಮತ್ತು ರಾಜು ತಮ್ಮ ತಮ್ಮ ರಿಸಲ್ಟ್ ನೋಡಲು ಅಂಕಪಟ್ಟಿಯ ಕೆಳಗಿನಿಂದ ಮೇಲಕ್ಕೆ ನೋಡುತ್ತಿರುತ್ತಾರೆ. ಅಲ್ಲೆಲ್ಲೋ ಮಧ್ಯದಲ್ಲಿ ಅವರ ಹೆಸರುಗಳು ಕಾಣಿಸುತ್ತವೆ. ತಮ್ಮ ಹೆಸರು ಸಿಕ್ಕ ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಾರೆ. ಆದರೆ ತಮಗಿಂತ ಒಂದಿಷ್ಟು ಮೇಲಿನವರೆಗೆ ನೋಡಿದರೂ ರಾಂಚೋ ನಂಬರ್ ಸಿಕ್ಕುವುದೇ ಇಲ್ಲ. ಗೆಳೆಯರಿಗೆ ಬೇಸರ. ತಮ್ಮದೇ ಜೊತೆ […]

Back To Top