ಚಲನೆಯ ವೇಗ ಜಾಸ್ತಿ ಇರುವುದರಿಂದ ಅಂತರವು ಕೂಡ ಜಾಸ್ತಿಯಾಗ್ತಾ ಹೋಗ್ತಾ ಇದೆ ಆಧುನಿಕತೆ ಸ್ಪರ್ಶ ಹೆಚ್ಚಾಗಿ ನಮ್ಮ ಮೂಲ ಸಂಸ್ಕೃತಿಯನ್ನು ನಾವು ಕಳೆದುಕೊಳ್ಳುತ್ತಿದ್ದೇವೆ ಎಂದು ಅನಿಸುತ್ತದೆ.
ಅಂಕಣ ಬರಹ ಪ್ರಸ್ತುತ ಸಾಂಸ್ಕೃತಿಕ ವಾತಾವರಣದಲ್ಲಿ ಫೇವರಟಿಸಂ, ಜಾತೀಯತೆ, ಧಾರ್ಮಿಕತೆ, ಎಡ-ಬಲ, ವಶೀಲಿ ಎಲ್ಲವೂ ಇವೆ ಡಾ ಪ್ರೇಮಲತ .ಬಿ. ಪರಿಚಯ ಮೂಲತಃ ತುಮಕೂರಿನವರಾದ ಪ್ರೇಮಲತ ವೃತ್ತಿಯಲ್ಲಿ ದಂತವೈದ್ಯೆ. ಕಳೆದ 18 ವರ್ಷಗಳಿಂದ ಇಂಗ್ಲೆಂಡಿನಲ್ಲಿ ವಾಸ.ದಿನಪತ್ರಿಕೆ, ವಾರಪತ್ರಿಕೆ,ಮಾಸಪತ್ರಿಕೆ ಮತ್ತು ಅಂತರ್ಜಾಲ ತಾಣಗಳಲ್ಲಿ ಲೇಖನಗಳು,ಅಂಕಣ ಬರಹ, ಕಥೆ, ಕವನಗಳು ಮತ್ತು ಪ್ರಭಂದಗಳನ್ನು ಬರೆದಿದ್ದಾರೆ.ತುಷಾರ ಚಿತ್ರಕವನ ಸ್ಪರ್ಧೆಯ ಬಹುಮಾನ, ಪ್ರಜಾವಾಣಿ ಪ್ರೇಮ ಪತ್ರ ಬರೆಯುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಸುಧಾ ಯುಗಾದಿ ಪ್ರಭಂದ ಸ್ಪರ್ದೆಯಲ್ಲಿ ಸಮಾಧಾನಕರ ಬಹುಮಾನ, ಕರ್ನಾಟಕ ಲೇಖಕಿಯರ […]
ಅಂಕಣ ಬರಹ ಜೀವ ಜಂತುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಥೆ ಹುಟ್ಟುತ್ತದೆ “ ಸುರೇಶ್ ಹೆಗಡೆ ಪರಿಚಯ: ಸುರೇಶ್ ಹೆಗಡೆ ಹೊನ್ನಾವರದ ಕರ್ಕಿ ಗ್ರಾಮದವರು .1952 ಜನನ. ಇವರ ತಂದೆ ಚಂದ್ರ ಮಾಸ್ತರ ಇವರ ಗುರು. ಹೊನ್ನಾವರ ಕಾಲೇಜಿನಿಂದ ವಿಜ್ಞಾನದ ವಿಷಯದಲ್ಲಿ ಪದವಿ ಪಡೆದರು. 1973 ರಲ್ಲಿ ಕರ್ನಾಟಕ ವಿದ್ಯುತ್ ನಿಗಮದಲ್ಲಿ 38 ವರ್ಷ ನೌಕರಿ ಮಾಡಿ ನಿವೃತ್ತರಾಗಿದ್ದಾರೆ. ಕತೆ ಬರೆಯುತ್ತಿದ್ದ ಇವರು ,ಅವುಗಳನ್ನು ಪ್ರಕಟಿಸಿದ್ದು, ನಿವೃತ್ತಿ ನಂತರ. 2020 ರಲ್ಲಿ ಇವರ ಮೊದಲ ಕಥಾ ಸಂಕಲನ ಇನಾಸ […]
ಅಂಕಣ ಬರಹ ಮಹಿಳೆಯರು ಹೊರ ಜಗತ್ತಿಗೆ ತೆರೆದುಕೊಂಡಾಗಿದೆ ದೀಪ್ತಿ ಭದ್ರಾವತಿ ಪರಿಚಯ: ದೀಪ್ತಿ ಭದ್ರಾವತಿ ಕನ್ನಡದ ಕತೆಗಾರ್ತಿ. ಮೂಲತಃ ದಕ್ಷಿಣ ಕನ್ನಡದವರಾದರು, ದೀಪ್ತಿ ನೆಲೆ ನಿಂತದ್ದು ಭದ್ರಾವತಿಯಲ್ಲಿ. ಆರೋಗ್ಯ ಇಲಾಖೆಯಲ್ಲಿ ನೌಕರಿ. ಕವಿತೆ ಬರೆಯುತ್ತಿದ್ದ ದೀಪ್ತಿ ಆರಂಭದಲ್ಲಿ ಕಾಗದದ ಕುದುರೆ, ಗ್ರೀನ್ ರೂಂನಲ್ಲಿ ಎಂಬ ಎರಡು ಕವಿತಾ ಸಂಕಲನ ಪ್ರಕಟಿಸಿದರು. ಆ ಬದಿಯ ಹೂ, ಗೀರು ಇವರ ಕಥಾ ಸಂಕಲನಗಳು. ಆ ಬದಿಯ ಹೂ ಸಂಕಲನಕ್ಕೆಕತೆಗಳಿಗೆ ಮಾಸ್ತಿ ಕಥಾ ಪ್ರಶಸ್ತಿ ಪಡೆದವರು, ಗೀರು ಕಥಾ ಸಂಕಲನಕ್ಕೆ ಪಾಟೀಲ […]
ಅಂಕಣ ಬರಹ ನಿರ್ಮಲಾ ಶೆಟ್ಟರ್ ಕಥೆಯ ಕೇಂದ್ರ ಒಳಮನದಲ್ಲಿ ಬೇರುಬಿಟ್ಟರೂ ಅದರ ವ್ಯಾಪ್ತಿ ಜಗದಗಲ ಪರಿಚಯ: ನಿರ್ಮಲಾ ಶೆಟ್ಟರ ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದವರು. ಧಾರವಾಡ ಜಿಲ್ಲೆಯಲ್ಲಿ ಹೈಸ್ಕೂಲ್ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಅತ್ಯುತ್ತಮ ಬೋಧನೆಯಿಂದ ತಾಲೂಕಾಮಟ್ಟದ ಹಾಗೂ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದಾರೆ. ಈ ವರೆಗೂ ‘ಬೆಳಕಿನೊಡನೆ ಪಯಣ’ ಮತ್ತು ‘ನಿನ್ನ ಧ್ಯಾನಿಸಿದ ಮೇಲೂ’ ಎನ್ನುವ ಎರಡು ಪುಸ್ತಕಗಳು ಪ್ರಕಟಗೊಂಡಿರುತ್ತವೆ. ಅದರಲ್ಲಿ ಒಂದು ಕಾವ್ಯಸಂಕಲನವಾದರೆ, ಇನ್ನೊಂದು ಗಜಲ್ ಸಂಕಲನವಾಗಿದೆ. ಸಧ್ಯ, ‘ಸರಹದ್ದುಗಳಿಲ್ಲದ ಭೂಮಿಯ […]
ಅಂಕಣ ಬರಹ ಜೀವಕ್ಕಿಂತಲೂ ಹೆಚ್ಚಾಗಿ ಅಂಧಶ್ರದ್ಧೆಯಲ್ಲಿ ನಂಬಿಕೆ ಇಟ್ಟಿರುವುದು ನನಗೆ ಹೆಚ್ಚುಕಾಡುವ ವಿಷಯ” ಈ ಸಲದ ಮುಖಾಮುಖಿ ಯಲ್ಲಿ ನಾಗರಾಜ್ ಹರಪನಹಳ್ಳಿ ಸಂದರ್ಶಿಸಿದ್ದಾರೆ ಕವಿ,ಕತೆಗಾರ ಹುಬ್ಬಳ್ಳಿಯ ಕುಮಾರ ಬೇಂದ್ರೆ ಅವರನ್ನು.……….ಪರಿಚಯ :ಸಂಯುಕ್ತ ಕರ್ನಾಟಕ, ಉದಯವಾಣಿ, ಗೌರಿಲಂಕೇಶ್ ಪತ್ರಿಕೆಗಳು ಸೇರದಂತೆ ೧೪ ವರ್ಷಗಳ ಕಾಲ ಪತ್ರಕರ್ತನಾಗಿ ಕೆಲಸ. ಸಧ್ಯ ಚಲನಚಿತ್ರ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದಾರೆ. ಚಿತ್ರಕಲೆಯಲ್ಲಿ ಡಿಪ್ಲೋಮಾ, ಕನ್ನಡ ಎಂ.ಎ. ಪದವಿಧರ. ಸುಮಾರು ಎರಡು ದಶಕಗಳಿಂದ ಸಾಹಿತ್ಯ ಕೃಷಿಯಲ್ಲಿ ಸಕ್ರಿಯರು. ಮಾದಪ್ಪನ ಸಾವುಅದೃಶ್ಯ ಲೋಕದ ಮಾಯೆ ನಿರ್ವಾಣಗಾಂಧಿ ವೃತ್ತದ ದಂಗೆ […]
ಅಂಕಣ ಬರಹ ” ಹೆಣ್ಣೆಂಬ ತಾರತಮ್ಯವೇ ಪದೆ ಪದೆ ಕಾಡುವ ವಿಷಯ “ ಇಂದುಮತಿ ಲಮಾಣಿ ಪರಿಚಯ; ಇಂದುಮತಿ ಲಮಾಣಿ. ಬಿಜಾಪುರದವರು. ೧೯೫೯ ಜನನ. ಓದಿದ್ದು ಪಿಯುಸಿ.ಕತೆ ,ಕವನ ಸಂಕಲನ ,ಸಂಪಾದನಾ ಕೃತಿ ಸೇರಿ ೧೮ ಕೃತಿಗಳನ್ನು ಪ್ರಕಟಿಸಿದ್ದಾರೆ. ನನ್ನ ಆಸೆ ಎಂಬ ಕವನ ೯ ನೇ ತರಗತಿ ಕನ್ನಡ ಪಠ್ಯದಲ್ಲಿ ಸೇರಿದೆ. ಅತ್ತಿಮಬ್ಬೆ,ರಾಣಿ ಚೆನ್ನಮ್ಮ ಪ್ರಶಸ್ತಿ ಪಡೆದಿದ್ದಾರೆ. ಬಿಜಾಪುರದ ಬಂಜಾರ ಸಮಾಜ ಸೇವಾ ಸಂಘದ ಅಧ್ಯಕ್ಷೆಯಾಗಿ ಸಮಾಜ ಸೇವೆ ಮಾಡುತ್ತಿದ್ದಾರೆ. ಬಿಜಾಪುರಮಹಿಳಾ ಸೇನಾ ಸಾಹಿತ್ಯ ಸಂಗಮದ […]
” ರಾಜಕಾರಣ ಎಂದರೆ ಸಮುದಾಯ, ಧರ್ಮಗಳ ಮಧ್ಯ ಯಾವುದೇ ದ್ವೇಷ ಹುಟ್ಟದಂತಿರಬೇಕು “
ಅಂಕಣ ಬರಹ ನಾಗರಾಜ ಎಂ ಹುಡೇದ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ತಂಗೋಡ ಹುಟ್ಟೂರು. ಬಡತನದಲ್ಲಿ ಬೆಳೆದು, ಪರಿಶ್ರಮದಿಂದ ಶಿಕ್ಷಣವನ್ನು ಪಡೆದು ೨೦೦೪ ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೈಲಂದೂರು ಗೌಳಿವಾಡದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಹದಿನೇಳು ವರ್ಷಗಳಿಂದ ಅದೇ ಕುಗ್ರಾಮದಲ್ಲಿ ಅಚ್ಚುಮೆಚ್ಚಿನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗುಣಮಟ್ಟದ ಉತ್ತಮ ಶಾಲೆಯನ್ನಾಗಿಸಿದ್ದಾರೆ. ಬೋಧನೆಯನ್ನು ವೃತ್ತಿಯಾಗಿಸಿಕೊಂಡು ಸಾಹಿತ್ಯವನ್ನು ಪ್ರವೃತ್ತಿಯಾಗಿಸಿಕೊಂಡು ತಾಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದಾರೆ. ನಿರಂತರ ಅಭ್ಯಾಸ, ಸಾಹಿತ್ಯಿಕ ಕಾರ್ಯಕ್ರಮಗಳ […]
ಅಂಕಣ ಬರಹ ಸುಜಾತಾ ಎನ್. ರವೀಶ್ ಸುಜಾತಾ ಎನ್. ಮೈಸೂರಿನಲ್ಲಿಯೇ ಹುಟ್ಟಿ ಬೆಳೆದದ್ದು .ಬಿಕಾಂ ಪದವೀಧರೆ. ಅನಂತರ ಅಂಚೆ ದೂರಶಿಕ್ಷಣದ ಮೂಲಕ ಎಂಕಾಂ ಪದವಿ ಪೂರೈಸಿದರು. ಚಿಕ್ಕಂದಿನಿಂದ ಓದುವ ಹವ್ಯಾಸ ಇತ್ತು. ಶಾಲೆ ಕಾಲೇಜು ಪತ್ರಿಕೆಗಳಲ್ಲಿ ಕಥೆ ಕವನಗಳು ಪ್ರಕಟವಾದವು. ಭಾರತೀಯ ಜೀವ ವಿಮಾ ನಿಗಮ ಮೈಸೂರು ಶಾಖೆ ೫ ರಲ್ಲಿ ವೃತ್ತಿ. ಈ ಮಧ್ಯೆ ಸುದೀರ್ಘ ಮೂವತ್ತು ವರ್ಷಗಳ ಅವಧಿಯಲ್ಲಿ ಓದುವ ಹವ್ಯಾಸ ಮುಂದುವರಿದಿದ್ದರೂ ಏಕೋ ಬರವಣಿಗೆ ಕೈ ಹಿಡಿದಿರಲಿಲ್ಲ. ಇತ್ತೀಚೆಗೆ ಮೂರು ವರ್ಷಗಳಲ್ಲಿ ಎಫ್ […]