Category: ದಿಕ್ಸೂಚಿ

ಬಿಟ್ಟು ಬಿಡಿ ಹೋಲಿಕೆ ಬೆಳೆಸಿಕೊಳ್ಳಿ ಸ್ವಂತಿಕೆ

ಅಂಕಣ ‘ಪಕ್ಕದ ಮನೆ ಪದ್ಮ ಕೋಗಿಲೆ ತರ ಹಾಡುತ್ತಾಳೆ. ನೀನೂ ಇದ್ದಿಯಾ. ನಿನ್ನ ಗೆಳೆಯ ರವಿ ನೋಡು ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದವರೆಗೂ ಬಹುಮಾನ ಪಡೆದಿದ್ದಾನೆ. ಹಾಡು ಭಾಷಣ ಇರದಿದ್ದರೆ ಅಷ್ಟೇ ಹೋಯ್ತು ರಜನಿ ತರಹ ಕ್ಲಾಸಿಗೆ ರ‍್ಯಾಂಕ್ ಬರೋಕೆ ಆಗಲ್ಲ ಯಾವಾಗ ನೋಡಿದರೂ ಮನೆ ಮುಂದೆ, ಮೈದಾನದಲ್ಲಿ ಕ್ರಿಕೆಟ್ ಬ್ಯಾಟ್ ಹಿಡಿದು ಆಡ್ತಿಯಾ ನಾಯಿ ಬಾಲ ಯಾವಾಗಲೂ ಡೊಂಕು ಅದನ್ನು ನೇರ ಮಾಡಲು ಸಾಧ್ಯವಿಲ್ಲ. ನಾ ಹೇಳಿದಾಗ ಮಾತ್ರ ಅಭ್ಯಾಸ ಮಾಡುತ್ತಿಯಾ.’ ಇದು ರಾಜುವಿನ ಅಪ್ಪ […]

ಪರಿಶ್ರಮದಿಂದ ಗೆಲುವನ್ನು ಕೊಳ್ಳಬಹುದು ಇಂದಿನ ದಾವಂತದ ಬದುಕಿನಲ್ಲಿ ಎಲ್ಲ ಸುಖಗಳೂ ನಮ್ಮೆಡೆ ತಾವೇ ಬರಲಿ ಎಂದು ಆಶಿಸುತ್ತೇವೆ. ಬೆರಳ ತುದಿಯಲ್ಲಿ ಬೇಕಾದ್ದೆಲ್ಲವೂ ದೊರೆಯುತ್ತಿರುವಾಗ ಗೆಲುವಿಗೆ ಮಾತ್ರ ಇನ್ನಿಲ್ಲದ ಪರಿಶ್ರಮ ಏಕೆ ಪಡಬೇಕು ಎಂದು ಪ್ರಶ್ನಿಸುತ್ತೇವೆ. ‘ಕೆಲಸಕ್ಕೆ ಕರೆಯಬೇಡ್ರಿ ಊಟಕ್ಕೆ ಮರೆಯಬೇಡ್ರಿ.’ ಅನ್ನೋ ಜಾಯಮಾನದವರನ್ನು ಕಂಡರೆ ಯಶಸ್ಸು ಹತ್ತಿರವೂ ಸುಳಿಯುವುದಿಲ್ಲ. ಶ್ರಮವಿಲ್ಲದೇ ಏನೆಲ್ಲವೂ ತಮ್ಮ ಪಾದದ ಕೆಳಗೆ ಬಿದ್ದಿರಬೇಕೆಂಬುದು ನಮ್ಮಲ್ಲಿ ಬಹುತೇಕ ಜನರ ಅಭಿಪ್ರಾಯ. ವ್ಯಕ್ತಿತ್ವ ವಿಕಾಸದಲ್ಲಂತೂ ಪರಿಶ್ರಮ ಮೂಲ ವಸ್ತುವಿನಂತೆ ಕಾರ‍್ಯ ನಿರ‍್ವಹಿಸುತ್ತದೆ. ಶ್ರಮದ ಬೀಜಕ್ಕೆ ಅಗಾಧ […]

ಅಪಾಯ ಎದುರಿಸುವ ಬಗೆ ಹೀಗೆ . ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವ ಕಥೆ ರಷ್ಯಾದ ಖ್ಯಾತ ಸಾಹಿತಿ ಲಿಯೋ ಟಾಲ್ ಸ್ಟಾಯ್ ಬರೆದದ್ದು. ಒಮ್ಮೆ ಇಬ್ಬರು ಗೆಳೆಯರು ಕಾಡಿನಲ್ಲಿ ಹೋಗುತ್ತಿದ್ದರು. ಕಾಡು ಪ್ರಾಣಿಗಳು ಪೊದೆಗಳ ಹಿಂದೆ ಅಡಗಿರಬಹುದೆಂಬ  ಭಯದಿಂದ ಇಬ್ಬರೂ ಕೈ ಕೈ ಹಿಡಿದು ಸಾಗುತ್ತಿದ್ದರು.  ಕಾಡಿನ ದಾರಿಯನು ಗೆಲುವಾಗಿ ಸಾಗಲು ಅತಿ ಪ್ರೀತಿಯಿಂದ ಅದು ಇದು ಹರಟುತ್ತ ಸಾಗುತ್ತಿದ್ದರು. ಒಮ್ಮೆಲೇ ಕರಡಿ ಕಾಣಿಸಿಕೊಂಡಿತು.ಕರಡಿ ಇನ್ನೂ ದೂರದಲ್ಲಿತ್ತು. ಹಾಗಾಗಿ ಹೇಗಾದರೂ ಅದರಿಂದ ಬಚಾವಾಗಬೇಕೆಂದು ಉಪಾಯ ಮಾಡಲು ಅವರಿಬ್ಬರಿಗೂ ಕೆಲ […]

ಭಯದ ಬಗ್ಗೆ ಭಯ ಬೇಡ

ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ  ಮನಸ್ಸಿನ ಮೆಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ.         ಮಕ್ಕಳು ಯಾವ ಯಾವುದೋ ವಿಷಯಕ್ಕೆ ಭಯಗೊಳ್ಳುತ್ತವೆ. ಭಯ ಕೇವಲ ಮಕ್ಕಳಿಗೆ ಅಷ್ಟೇ ಅಲ್ಲ ದೊಡ್ಡವರಿಗೂ ಕಾಡುವ ಮಾನಸಿಕ ಸಮಸ್ಯೆ. ಭಯ ಅಂದರೇನು? ಅದು ಏಕೆ […]

ಅವಮಾನದ ತಿರುವುಗಳು ಗೆಲುವಿನ ಮೈಲಿಗಲ್ಲುಗಳು ನಾನೀಗ ತಮ್ಮೊಂದಿಗೆ ಹಂಚಿಕೊಳ್ಳುತ್ತಿರುವುದು ಅವಮಾನದ ಒಂದು ಪ್ರಸಿದ್ಧ ಉದಾಹರಣೆ; ಪವಿತ್ರ ನರ್ಮದಾ ನದಿಯಲ್ಲಿ ಒಮ್ಮೆ ಸಂತ ಏಕನಾಥ ಸ್ನಾನ ಮಾಡಿ ಹೊರ ಬರುತ್ತಿದ್ದ.ಆಗ ಪಠಾಣನೊಬ್ಬ ಮನದಲ್ಲಿ ವಿಷ ತುಂಬಿಕೊಂಡು ಸಂತನ ಮೇಲೆ ಉಗುಳಿದ. ಏಕನಾಥ ‘ಜೈ ವಿಠ್ಠಲ’ ಎನ್ನುತ್ತ ಮತ್ತೆ ನರ್ಮದೆಗಿಳಿದ. ಈ ರೀತಿ ಮುಂಜಾನೆಯಿಂದ ಸಂಜೆಯವರೆಗೂ ಇಬ್ಬರ ನಡುವೆ ನಡೆಯಿತು ಯಾರು ಸೋಲುತ್ತಾರೆಂದು ನದಿ ತಟದಲ್ಲಿ ಜನ ನಿಂತು ನೋಡುತ್ತಿದ್ದರು. ಕೊನೆಗೆ ಪಠಾಣ, ಸಂತರನ್ನು ಉದ್ದೇಶಿಸಿ ನಾನು ಯಾವುದೇ ಕಾರಣವಿಲ್ಲದೇ […]

ದಿಕ್ಸೂಚಿ

ತೊಂದರೆ ಕೊಡಬೇಡಿ ಅಂತ ಹೇಳಿಬಿಡಿ ಜಯಶ್ರೀ.ಜೆ.ಅಬ್ಬಿಗೇರಿ ಮೊದಲೇ ಓದಿನ ಒತ್ತಡ. ಇದು ಸಾಲುವುದಿಲ್ಲ ಎಂಬಂತೆ ಬಹು ದಿನಗಳಿಂದ ಬೆನ್ನು ಬಿಡದಿರುವ ಕೆಲ ವೈಯುಕ್ತಿಕ ಸಮಸ್ಯೆಗಳು. ತಲೆ ತಿನ್ನುತ್ತಿವೆ. ಒಂದಿಷ್ಟು ಹೊತ್ತು ಎಲ್ಲೋ ಒಂದು ಕಡೆ ಹೋಗಿ ಮೌನವಾಗಿದ್ದು ಬರೋಣವೆಂದರೆ ನಿಮ್ಮ ಗೆಳೆಯ/ ಗೆಳತಿ ನಿಮಗೆ ಸಂಬಂಧವಿಲ್ಲದ ಯಾವುದೋ ವಿಷಯ ಹೇಳಿ ತಲೆ ತಿನ್ನುತ್ತಿದ್ದರೆ ಕೋಪ ನೆತ್ತಿಗೇರಿ ಬಿಡುತ್ತದೆ. ಖಂಡ ತುಂಡವಾಗಿ ಹೇಳಿ ಹೊರಗೆ ಅಟ್ಟಬೇಕೆನಿಸಿದರೂ ಹಾಗೆ ಮಾಡಲು ಸಾಧ್ಯವಿಲ್ಲವೆಂದು ಹೇಗೋ ಸಹಿಸಿಕೊಳ್ಳುತ್ತೀರಿ. ವಿವಿಧ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ […]

ದಿಕ್ಸೂಚಿ

ಸೋಲು ಒಪ್ಪಿಕೊಳ್ಳುವ ಮುನ್ನ ಕೊಂಚ ಪ್ರಶ್ನಿಸಿಕೊಳ್ಳಿ ಜಯಶ್ರೀ ಅಬ್ಬಿಗೇರಿ ನಾನು ಕೈ ಹಾಕಿದ ಯಾವ ಕೆಲಸದಲ್ಲೂ ಗೆಲುವು ಸಿಗುತ್ತಲೇ ಇಲ್ಲ. ನನ್ನ ಹಣೆ ಬರಹವೇ ಚೆನ್ನಾಗಿಲ್ಲ. ನಸೀಬು ಕೆಟ್ಟಿದೆ. ಸಾಲು ಸಾಲು ಸೋಲುಗಳು ನನ್ನ ಬೆನ್ನು ಹತ್ತಿವೆ. ಹೀಗೇ ಇನ್ನೊಂದಿಷ್ಟು ಸಮಯ ಕಳೆದರೆ ಜೀವನದ ಆಸೆಗಳೇ ಕಮರಿ ಹೋಗಿ ಬಿಡುತ್ತವೆ. ನನ್ನಿಂದೇನೂ ಮಾಡಲು ಸಾಧ್ಯವಿಲ್ಲವೆಂದು ಊಟ ತಿಂಡಿ ಬಿಟ್ಟು ಕೈ ಕಟ್ಟಿ ಕುಳಿತು ಚಿಂತಿಸಿದರೆ ಬದುಕು ನಿಂತ ನೀರಾಗಿ ಬಿಡುತ್ತದೆ. ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳುತ್ತವೆ. ಉಗ್ರ ರೂಪ […]

Back To Top