ಆನ್ಲೈನ್ ಶಿಕ್ಷಣ – ಪ್ರಯೋಗ?
ಅರ್ಪಣಾ ಮೂರ್ತಿ ಪ್ರಸ್ತುತ ಪರಿಸ್ಥಿತಿಯಲ್ಲಿ ಶೈಕ್ಷಣಿಕ ವರ್ಷದ ಆರಂಭವೇ ಗೊಂದಲಗಳಿಂದ ಕೂಡಿರುವ ಈ ಸಂದರ್ಭದಲ್ಲಿ, ಅನೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಇದಾಗಲೇ ಕಂಡುಕೊಂಡಿರುವ ಶಿಕ್ಷಣದ ಪರ್ಯಾಯ ಮಾರ್ಗದ ಹೆಸರೇ ಈ ಆನ್ಲೈನ್ ಶಿಕ್ಷಣ, ಈ ಪರ್ಯಾಯ ಮಾರ್ಗದ ಶಿಕ್ಷಣಕ್ಕೆ ಸರ್ಕಾರವು ಸಹ ಸಮ್ಮತಿಯ ಮುದ್ರೆ ಒತ್ತಿದೆ. ಈಗಿರುವ ಪ್ರಶ್ನೆಯೆಂದರೆ ಈ ಆನ್ಲೈನ್ ಶಿಕ್ಷಣ ಎಷ್ಟು ಪರಿಣಾಮಾತ್ಮಕವಾಗಿದೆ, ಮಕ್ಕಳ ಕಲಿಕೆಯ ಮಟ್ಟಕ್ಕೆ ಅದೆಷ್ಟು ಪೂರಕವಾಗಿದೆ ಅನ್ನುವುದು. ಮೊದಲಿಗೆ ಪ್ರಾಥಮಿಕ ಶಾಲಾ ಹಂತದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನೀಡುವುದರ ಕುರಿತು […]
ಆನ್ಲೈನ್ ಶಿಕ್ಷಣ – ಸಾಧ್ಯತೆ ಮತ್ತು ಜವಾಬ್ದಾರಿಗಳು.
ಡಿಎಸ್.ರಾಮಸ್ವಾಮಿ ಆನ್ಲೈನ್ ಶಿಕ್ಷಣ – ಸಾಧ್ಯತೆ ಮತ್ತು ಜವಾಬ್ದಾರಿಗಳು. ಈ ಕರೋನಾದ ಭಯ ನಮ್ಮೆಲ್ಲರನ್ನೂ ಎಷ್ಟು ಜರ್ಝರಿತಗೊಳಿಸಿದೆ ಎಂದರೆ ನಮ್ಮ ನಿತ್ಯದ ಜೀವನದ ಕನಿಷ್ಠ ಕೆಲಸ ಕಾರ್ಯಗಳಲ್ಲೂ ವಿಪರೀತ ಎಚ್ಚರಿಕೆಯ ಹೆಜ್ಜೆಯನ್ನು ಇಡಬೇಕಾಗಿದೆ. ಒಂದೇ ಸೂರಿನೊಳಗಿದ್ದೂ ಅಪರಿಚಿತರಂತೆ ಬಾಳುವುದು ಅಭ್ಯಾಸವೇ ಆಗಿಬಿಟ್ಟಿದೆ. ನಿತ್ಯವೂ ಬೇಕಾಗುವ ತರಕಾರಿ, ಹಣ್ಣು, ಹೂವು, ದಿನಸಿ ತರುವುದಕ್ಕೂ ಸಮಯ ಹೊಂದಿಸಿಕೊಂಡು ಅವು ಯಾವ ಜಾಗದಲ್ಲಿ ಸಿಗುತ್ತವೆಯೋ ಅಲ್ಲಿಗೆ ದೌಡಾಯಿಸುವ ಪರಿಸ್ಥಿತಿ ಎಲ್ಲ ಊರಲ್ಲೂ ಸಾಮಾನ್ಯ ಸಂಗತಿಯಾಗಿದೆ. ಸರ್ಕಾರದ ಕಛೇರಿಗಳು ಅತಿ ಜರೂರು ಎಂದು […]