Category: ಶಿಕ್ಷಣ

ಹೊಸ ಶಿಕ್ಷಣ ನೀತಿ

ಚರ್ಚೆ ಕಠಿಣ ಕಾಯಿದೆ ಅತ್ಯಗತ್ಯ ಡಿ.ಎಸ್.ರಾಮಸ್ವಾಮಿ ಮೆಕಾಲೆ ಪ್ರಣೀತ ಶಿಕ್ಷಣ ವ್ಯವಸ್ಥೆಯನ್ನು ಅಷ್ಟು ಸುಲಭದಲ್ಲಿ ಬದಲಿಸುವುದು ಅಸಾಧ್ಯದ ಕೆಲಸ. ಮೂಲತಃ ವರ್ಣವ್ಯವಸ್ಥೆಯೇ ಪುರಾತನ ಭಾರತೀಯ ಸಮಾಜದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸೇತುವಾಗಿತ್ತು. ಬ್ರಿಟಿಷರ ಅಪಭ್ರಂಶ ಅರ್ಥಾಂತರವೇ ಇವತ್ತಿನ ಜಾತಿ ಪದ್ಧತಿಯಾಗಿ ಬದಲಾಗಿ ಶ್ರೇಣೀಕೃತ ಸಮಾಜವನ್ನು ಜಾತಿ ಮೂಲಕ ಕಾಣಹೊರಟದ್ದೇ ಸದ್ಯದ ದುರಂತ. ಪುರಾತನ ಶಿಕ್ಷಣ ಗುರುಕುಲಗಳಲ್ಲಿ ಆಯಾ ವರ್ಣದ ಕಸುಬು ಮತ್ತು ಜೀವನ ನಿರ್ವಹಣೆಯ ಗುರಿಯಾಗಿ ರೂಪುಗೊಳ್ಳುತ್ತಿತ್ತು. ಪರಸ್ಪರ ಅವಲಂಬನೆ ಇದ್ದ ಕಾಲದಲ್ಲಿ ಪರಸ್ಪರ ಗೌರವ […]

ಶಿಕ್ಷಣ ಆನ್ ಲೈನ್!

ವಿನುತಾ ಹಂಚಿನಮನಿ ವಿಕಾಸ ವಾದ (Evolution theory) ದ ಪ್ರಕಾರ ಜೀವಿಗಳ ಅಳಿವು ಉಳಿವು ಯಾವುದರ ಮೇಲೆ ಅವಲಂಬಿಸಿದೆ? ಯಾರು ಬದಲಾಗುತ್ತಿರುವ ಪರಿಸರಕ್ಕೆ ಹೊಂದಾಣಿಕೆ ಮಾಡಿಕೊಂಡರೋ ಅವರು ಗೆದ್ದವರು. ಬಲವಾನರು, ಬುದ್ಧಿವಂತರು ಇದರಲ್ಲಿ ಸೋತರು. ಪ್ರಾಣಿ ಇರಲಿ ಮನುಷ್ಯನಿರಲಿ ಪರಿಸರಕ್ಕೆ, ಪರಿಸ್ಥಿತಿಗೆ ಹೊಂದಿಕೊಂಡು ಜೀವಿಸುವದನ್ನು ಕಲಿತರಷ್ಟೇ ಬದುಕಬಹುದು. ಅದೇ ಸೂಕ್ತರು ಬದುಕುವರು ಸಶಕ್ತರಲ್ಲ ಅನ್ನುವುದು (survival of the fittest). ಈ ಬದಲಾಗುವ ಕ್ರಮ ಪ್ರಕೃತಿಯಲ್ಲಿ ಅನಿವಾರ್ಯ. ಪರಿವರ್ತನೆ ಜಗದ ನಿಯಮ. ಇದು ಎಲ್ಲ ಕ್ರಾಂತಿಗಳಿಗೂ ಅನ್ವಯಿಸುವುದು. […]

ಆನ್ಲೈನ್ ಶಿಕ್ಷಣ – ಪ್ರಯೋಗ?

ಅರ್ಪಣಾ ಮೂರ್ತಿ ಪ್ರಸ್ತುತ ಪರಿಸ್ಥಿತಿಯಲ್ಲಿ ಶೈಕ್ಷಣಿಕ ವರ್ಷದ ಆರಂಭವೇ ಗೊಂದಲಗಳಿಂದ ಕೂಡಿರುವ ಈ ಸಂದರ್ಭದಲ್ಲಿ, ಅನೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಇದಾಗಲೇ ಕಂಡುಕೊಂಡಿರುವ ಶಿಕ್ಷಣದ ಪರ್ಯಾಯ ಮಾರ್ಗದ ಹೆಸರೇ ಈ ಆನ್ಲೈನ್ ಶಿಕ್ಷಣ, ಈ ಪರ್ಯಾಯ ಮಾರ್ಗದ ಶಿಕ್ಷಣಕ್ಕೆ ಸರ್ಕಾರವು ಸಹ ಸಮ್ಮತಿಯ ಮುದ್ರೆ ಒತ್ತಿದೆ. ಈಗಿರುವ ಪ್ರಶ್ನೆಯೆಂದರೆ ಈ ಆನ್ಲೈನ್ ಶಿಕ್ಷಣ ಎಷ್ಟು ಪರಿಣಾಮಾತ್ಮಕವಾಗಿದೆ, ಮಕ್ಕಳ ಕಲಿಕೆಯ ಮಟ್ಟಕ್ಕೆ ಅದೆಷ್ಟು ಪೂರಕವಾಗಿದೆ ಅನ್ನುವುದು. ಮೊದಲಿಗೆ ಪ್ರಾಥಮಿಕ ಶಾಲಾ ಹಂತದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನೀಡುವುದರ ಕುರಿತು […]

ಆನ್ಲೈನ್ ಶಿಕ್ಷಣ – ಸಾಧ್ಯತೆ ಮತ್ತು ಜವಾಬ್ದಾರಿಗಳು.

ಡಿಎಸ್.ರಾಮಸ್ವಾಮಿ ಆನ್ಲೈನ್ ಶಿಕ್ಷಣ – ಸಾಧ್ಯತೆ ಮತ್ತು ಜವಾಬ್ದಾರಿಗಳು. ಈ ಕರೋನಾದ ಭಯ ನಮ್ಮೆಲ್ಲರನ್ನೂ ಎಷ್ಟು ಜರ್ಝರಿತಗೊಳಿಸಿದೆ ಎಂದರೆ ನಮ್ಮ ನಿತ್ಯದ ಜೀವನದ ಕನಿಷ್ಠ ಕೆಲಸ ಕಾರ್ಯಗಳಲ್ಲೂ ವಿಪರೀತ ಎಚ್ಚರಿಕೆಯ ಹೆಜ್ಜೆಯನ್ನು ಇಡಬೇಕಾಗಿದೆ. ಒಂದೇ ಸೂರಿನೊಳಗಿದ್ದೂ ಅಪರಿಚಿತರಂತೆ ಬಾಳುವುದು ಅಭ್ಯಾಸವೇ ಆಗಿಬಿಟ್ಟಿದೆ. ನಿತ್ಯವೂ ಬೇಕಾಗುವ ತರಕಾರಿ, ಹಣ್ಣು, ಹೂವು, ದಿನಸಿ ತರುವುದಕ್ಕೂ ಸಮಯ ಹೊಂದಿಸಿಕೊಂಡು ಅವು ಯಾವ ಜಾಗದಲ್ಲಿ ಸಿಗುತ್ತವೆಯೋ ಅಲ್ಲಿಗೆ ದೌಡಾಯಿಸುವ ಪರಿಸ್ಥಿತಿ ಎಲ್ಲ ಊರಲ್ಲೂ ಸಾಮಾನ್ಯ ಸಂಗತಿಯಾಗಿದೆ. ಸರ್ಕಾರದ ಕಛೇರಿಗಳು ಅತಿ ಜರೂರು ಎಂದು […]

Back To Top