ಅಂಕಣ ಬರಹ ಕಬ್ಬಿಗರ ಅಬ್ಬಿ ಹಣತೆ ಹಚ್ಚಿದ ಅಕ್ಷರ ದೀಪ ನಮ್ಮ ಅಜ್ಜಿ ಹಚ್ಚಿ ಹಣತೆ ಬೆಳಕಲ್ಲಿ ತೆರೆದಳು ರಾಮಾಯಣ. ಹಣತೆ ಸಣ್ಣಗೆ ಬೆಳಗುವಾಗ ರಾಮ ಪುಟು ಪುಟು ಹೆಜ್ಜೆ ಹಾಕುತ್ತಿದ್ದ.ಜತೆಗೆ ಇನ್ನೂ ಮೂರು ತಮ್ಮ ತಮ್ಮ ತಮ್ಮಂದಿರು. ಎಷ್ಟು ಪ್ರೀತಿ ಮುಗ್ಧ ಬೆಳಕಿತ್ತು. ಕತೆ ಕೇಳುತ್ತಾ ನಮಗೆಲ್ಲ ಪುಳಕ. ಹಣತೆಯ ಬೆಳಕೂ ರಾಮನೂ ಜತೆ ಜತೆ ಬೆಳೆದರು. ವಿಶ್ವಾಮಿತ್ರನ ಕೈ ಹಿಡಿದು ಅಣ್ಣ ತಮ್ಮ ಗುರು ತೋರಿದ ಕಾಡುಹಾದಿಯಲ್ಲಿ ತಿಳಿವಿನ ಬೆಳದಿಂಗಳಿತ್ತು. ಕೆಂಗಣ್ಣ ದೈತ್ಯೆ ತಾಟಕಿಯ […]
ಅಂಕಣ ಬರಹ ಕಬ್ಬಿಗರ ಅಬ್ಬಿ ನಿಮಗೆ ತಿಳಿಸಾರು ಗೊತ್ತೇ? ಅದೊಂದು ಕೋಣೆ, ರಸಾವಿಷ್ಕಾರದ ಕೋಣೆ ಅದು!. ಅದನ್ನು ಜನರು ಈ ಕೋಣೆಯನ್ನು ಮನೆ ಅಂತಲೇ ಕರೆಯೋದಕ್ಕೆ, ಬಹುಷಃ ಈ ಕೋಣೆಯ ತಾಯ್ತನವೇ ಕಾರಣ ಅನ್ಸುತ್ತೆ. ಮಗುವಿಗೆ ಅಮ್ಮ ಊಡುವ ಎದೆ ಹಾಲಿನ ಹಾಗೆಯೇ, ಈ ಕೋಣೆ ಮನೆ ಮಂದಿಗೆಲ್ಲ ಉಣಿಸುವುದು ಬದುಕು. ‘ಅಡುಗೆ ಮನೆ’ ಯಲ್ಲಿ ಜೀವಜಲ ಬಿಂದುವಾಗಿ ಹರಿಯುತ್ತೆ. ಹಸಿರು ತರಕಾರಿಗಳು ನೆಲಹಾಸಿನಲ್ಲಿ ತಣ್ಣಗೆ ಕಾಯುತ್ತವೆ. ನೆಲದೊಳಗೆ ಬೇರಿಳಿಸಿ ಪಿಷ್ಟಅಹಾರ ಸಂಗ್ರಹಿಸಿ ಬಲಿತ ಗಡ್ಡೆಗಳೂ ಜತೆಗೆ. […]
ಅಂಕಣ ಬರಹ ಕಬ್ಬಿಗರ ಅಬ್ಬಿ ಪಟ್ಟಣದ ಕವಿತೆಗೆ ಛಂದಸ್ಸಿಲ್ಲ! ಈ ಷಹರ ನಿದ್ರಿಸಲ್ಲ!. ಏರ್ಪೋರ್ಟ್ ನಲ್ಲಿ ಇಳಿಯಲು ಅನುಮತಿ ಸಿಗುವ ವರೆಗೆ ಪೈಲಟ್ ವಿಮಾನವನ್ನು ಷಹರಕ್ಕೆ ಸುತ್ತು ಹಾಕುತ್ತಿದ್ದ. ವಿಂಡೋ ದಿಂದ ಕಣ್ಣು ಹಾಯಿಸಿದರೆ, ಕೆಳಗೆ ಅಷ್ಟೂ ಬೆಳಕು. ಉದ್ದಕ್ಕೆ ಅಡ್ಡಕ್ಕೆ ಕೆಲವು ನೇರ,ಹಲವು ವಕ್ರ ರಸ್ತೆಗಳು. ಅವುಗಳನ್ನು ಬೆಳಗುವ ರಾತ್ರಿ ದೀಪಗಳು. ಈ ಪಟ್ಟಣಕ್ಕೆ ಮಧ್ಯರಾತ್ರಿ ಎನ್ನುವುದು ಬರೇ ಒಂದು ಪದ. ಆಕಾಶದಿಂದ ನೋಡಿದರೆ, ನೆಲದೆದೆಗೆ ಮೊಳೆ ಹೊಡೆದ ಹಾಗಿರುವ ಕಟ್ಟಡಗಳು. ಅವುಗಳ ಕಿಟಿಕಿಗಳಿಂದ ತಡರಾತ್ರೆ […]
ಅಂಕಣ ಬರಹ ಕಬ್ಬಿಗರ ಅಬ್ಬಿ ರಾಗದ ಬೆನ್ನೇರಿ ಬಂತು ಭಾವನಾ ವಿಲಾಸ ಕರ್ನಾಟಕ ಸಂಗೀತದಲ್ಲಿ’ ಕದನ ಕುತೂಹಲ’ ಅನ್ನೋ ರಾಗ ಇದೆ. ಈ ರಾಗದ ಸ್ವರಗಳನ್ನು ಸಾಕಷ್ಟು ವೇಗವಾಗಿ ಹಾಡುತ್ತಾರೆ. ಸಮುದ್ರಮಥನದ ಸಮಯದಲ್ಲಿ ಆಕಡೆ ರಾಕ್ಷಸರು,ಈ ಕಡೆ ದೇವತೆಗಳು ಅಮೃತಕ್ಕಾಗಿ ಕಡಲನ್ನು ಕಡೆಯುವಾಗಲೂ, ಎರಡೂ ವಿರುದ್ಧ ಪಂಗಡಗಳ ನಡುವೆ ಕದನವೇ. ಮನಸ್ಸೊಳಗೂ ಅಷ್ಟೇ, ಯಾವುದೇ ಹೊಸ ಆವಿಷ್ಕಾರದ ಬೆಣ್ಣೆ ಮೂಡುವುದು, ವಿರುದ್ಧ ಚಿಂತನೆಗಳ ಮಂಥನದಿಂದಲೇ. ಈ ರಾಗವನ್ನು ನೀವು ಆಲಿಸುವಾಗ ಒಂದು ಮಂಥನದ ಅನುಭವ ಆಗುತ್ತೆ. ರಾಗ […]
ಕಬ್ಬಿಗರ ಅಬ್ಬಿ.-13 ಗಗನ ಚುಂಬಿ ಮತ್ತು ಲಿಫ್ಟು ಸರ್ಗೇಯಿ ಬೂಬ್ಕಾ ,ಎಂಬ ಸೋವಿಯತ್ ಯುನಿಯನ್ ನ ಹುಡುಗ ಉದ್ದ ಕೋಲು ಹಿಡಿದು ಪೋಲ್ ವಾಲ್ಟ್ ಹಾರಲು ಸಿದ್ಧನಾಗಿದ್ದ. ಇದೊಂದು ಥರದ ಹೈ ಜಂಪ್ ಸ್ಪರ್ಧೆ. ಈ ಆಟದಲ್ಲಿ ಒಂದು ಕೋಲಿನ ಸಹಾಯದಿಂದ ಜಿಗಿಯಲಾಗುತ್ತೆ, ಆ ಕೋಲನ್ನು ಹಾರುಗೋಲು ಎಂದು ಕರೆಯೋಣ. ಹೈಜಂಪ್ ಮಾಡೋವಾಗ ಮೊದಲೇ ನಿರ್ಧರಿಸಿದ ಎತ್ತರದಲ್ಲಿ ನೆಲಕ್ಕೆ ಸಮಾನಾಂತರವಾಗಿ ಒಂದು ಕೋಲು ( ಅಳೆಗೋಲು) ಇಟ್ಟಿರುತ್ತಾರೆ. ಉದ್ದದ ಹಾರುಗೋಲು ಹಿಡಿದು, ಓಡುತ್ತಾ ಬಂದು, ಕೋಲನ್ನು ಹೈ […]
ಅಂಕಣ ಬರಹ ಕಬ್ಬಿಗರ ಅಬ್ಬಿ–12 ಬಸರೀಕಟ್ಟೆ ಮತ್ತು ಬೂದಿಕಟ್ಟೆ ನಡುವಿನ ಈ ವಿಸ್ಮಯ ಆ ಇಬ್ಬರು ಆಗಲೇ ೨೭೦೦೦ ಅಡಿಗಳಷ್ಟು ಎತ್ತರ ಏರಿದ್ದರು. ಅದುವರೆಗೂ ಯಾರೂ ಏರದ ಎತ್ತರ ಅದು. ಹಿಮದ ಗಡ್ಡೆಗಳ ಇಳಿಜಾರು ಒಂದು ಕಡೆ, ದೂರ ದೂರದತ್ತ ಕಣ್ಣು ಹಾಯಿಸಿದರೆ ಕಾಣುವುದು ಬರೇ ಬಿಳಿ ಬಿಳೀ ಹಿಮ. ಅದರಡಿಯಲ್ಲಿ ಅದೆಷ್ಟು ಸಾಹಸೀ ದೇಹಗಳು ದಫನವಾಗಿವೆ ಎಂದು ಯೋಚಿಸಿ ಆತ ನಡುಗುತ್ತಾನೆ. ಬದುಕೇ ಹಾಗೆ, ಕಾಣದ ಕಾಣ್ಕೆಗೆ ಹಂಬಲಿಸುತ್ತೆ. ಎತ್ತರೆತ್ತರ ಏರಲು, ಏನೋ ಹೊಸತು..ಹೊಸ ದಿಕ್ಕು, […]
ಕಬ್ಬಿಗರ ಅಬ್ಬಿ ೧೧. ಹಸಿವಿನಿಂದ ಹಸಿರಿನತ್ತ ಹಸಿವಿನಿಂದ ಹಸಿರಿನತ್ತ “Generations to come will scarce believe that such a one as this ever in flesh and blood walked upon this earth” .(Albert Einstein, About Mahatma Gandhi) ” ಮುಂದಿನ ಪೀಳಿಗೆಯ ಮಕ್ಕಳು ಆಶ್ಚರ್ಯ ಪಡುವ ದಿನ ಬರಲಿದೆ, ಇಂತಹಾ ಮನುಷ್ಯ ದೇಹ, ಈ ಭೂಮಿಯ ಮೇಲೆ ನಡೆದಾಡಿರಬಹುದೇ?” ( ಆಲ್ಬರ್ಟ್ ಐನ್ ಸ್ಟೈನ್ ,ಮಹಾತ್ಮಾ ಗಾಂಧಿ ಅವರ […]
ಕಬ್ಬಿಗರ ಅಬ್ಬಿ -9 ಕನಸು ಕಲಿಸುವ ಕವಿತೆಗಳು ಆಫೀಸ್ನಲ್ಲಿ ದಿನವಿಡೀ ದುಡಿದು, ಚಿಂತೆಯ ಗೆರೆಗಳು ಹಣೆಯಲ್ಲಿ ಮೂಡಿ ಮನೆಗೆ ಬಂದಾಗ, ಬಿಸಿ ಬಿಸಿ ಕಾಫಿಯ ಜತೆಗೆ ಭಾವ ಗೀತೆ ಕೇಳುತ್ತೇನೆ. ಕುದಿದು ಕೆನೆಗಟ್ಟಿದ ಮನಸ್ಸನ್ನು ತಣಿಸಿ, ತಂಪು ಐಸ್ ಕ್ರೀಂ ಮಾಡುವ ಶಕ್ತಿ ಈ ಕವಿತೆಗಳಿಗೆ. ಹಾಡು ಕೇಳುತ್ತಾ ಭೃಂಗದ ಬೆನ್ನೇರಿ ಬಂತು ಕಲ್ಪನಾ ವಿಲಾಸ, ಅಂತ ಸ್ಮೃತಿ ಪಟಲದಿಂದ ಅಕ್ಷಿಪಟಲಕ್ಕೆ ಚಿತ್ರಗಳು ಪ್ರೊಜೆಕ್ಟ್ ಆಗಿ, ಕನಸುಗಳಿಗೆ ರೆಕ್ಕೆ ಮೂಡುತ್ತವೆ. ಬದುಕಿನಲ್ಲಿ ವೈಫಲ್ಯಗಳು ಹಲವು. ಆದರೂ ನೂರರಲ್ಲಿ […]
ಕಬ್ಬಿಗರ ಅಬ್ಬಿ -9
ಕಬ್ಬಿಗರ ಅಬ್ಬಿ -8 ಬಂಧ ಮತ್ತು ಸ್ವಾತಂತ್ರ್ಯದ ನಡುವೆ ಹದ ಹುಡುಕುತ್ತಾ. ಶ್ರೀ ಹರಿ ಕೋಟಾದ ರಾಕೆಟ್ ಉಡ್ಡಯನ ಕೇಂದ್ರವದು. ಭಾರತೀಯ ಬಾಹ್ಯಾಕಾಶ ಸಂಸ್ಥೆಯ ವಿಜ್ಞಾನಿಗಳು ಗಣಕಯಂತ್ರದ ಪರದೆಯೇ ಕಣ್ಣಾಗಿ ಕುಳಿತಿದ್ದಾರೆ. ಮಹಿಳಾ ವಿಜ್ಞಾನಿಯ ಇಂಪಾದ ಮತ್ತು ಅಷ್ಟೇ ಸಾಂದ್ರವಾದ ದನಿಯಿಂದ ನಿಧಾನವಾಗಿ ಮತ್ತು ಖಚಿತವಾಗಿ…ಹತ್ತು..ಒಂಭತ್ತು…ಎಂಟು.. ಹೌದು. ಅದು ಕೌಂಟ್ ಡೌನ್! ಉಪಗ್ರಹದ ಭಾರ ಹೊತ್ತ ರಾಕೆಟ್ ಸಾಕಮ್ಮನ ಮಡಿಲಿಂದ ಎದೆಯುಬ್ಬಿಸಿ ಹಾರಬೇಕು.ಒಂದು….ಸೊನ್ನೆ!!.ಅದೋ ಅದೋ..ಅಧೋಮುಖದಿಂದ ಬೆಂಕಿ ಹೊಗೆ ಚಿಮ್ಮಿತು, ರಾಕೆಟ್ಟು ಜಿಗಿಯಿತು ಅನಂತಕ್ಕೆ. ವ್ಯೋಮಗಮನಕ್ಕೆ ಮೊದಲ ಜಿಗಿತ.ಸಾಕೇ?. […]
ಕಬ್ಬಿಗರ ಅಬ್ಬಿ -8 ನಿಸರ್ಗಕ್ಕೂ ಬೇಕು ಸ್ವಾತಂತ್ರ್ಯ ಈ ನೆಲ, ಈ ಜಲ ಈ ಆಕಾಶಈ ಜೀವ ಈ ಭಾವ ಅನಂತಾವಕಾಶಈ ಕಲ್ಲು ಪರಮಾಣು ಒಳದೇವರ ಕಣ್ಣುಈ ಸ್ಥಾವರ ಈ ಜಂಗಮ ಪ್ರಾಣ ವಿಹಂಗಮಈ ವಾತ ನಿರ್ವಾತ ಆತ್ಮನೇ ಆತ್ಮೀಯಈ ಅಂಡ ಬ್ರಹ್ಮಾಂಡ ಉಸಿರಾಡುವ ಕಾಯ ಕಾವ್ಯದೊಳಗೆ ಜೀವರಸವಿದೆ.ರಸದ ಸೆಲೆಯಿದೆ.ಕುದಿಸಮಯವನ್ನೂ ತಣಿಸುವ ಪ್ರೀತಿಯಿದೆ.ಕಲ್ಲ ಮೊಟ್ಟೆಯನ್ನೂ ಕಾವು ಕೊಟ್ಟು ಮರಿ ಮಾಡುವ ಸೃಷ್ಟಿ ತಂತುವಿನ ತರಂಗವಿದೆ.ಕವಿಯ ಕಣ್ಣೊಳಗೆ ಮೂಡಿದ ಪ್ರತೀ ವಸ್ತುವಿನ ಬಿಂಬ ಜೀವಾತ್ಮವಾಗಿ ಕಾವ್ಯದೇಹ ತೊಟ್ಟು ಹೊರ […]