Category: ಕಬ್ಬಿಗರ ಅಬ್ಬಿ

ಒಬ್ಬಂಟಿ…!

ಕವಿತೆ ಒಬ್ಬಂಟಿ…! ಡಾ. ಅರಕಲಗೂಡು ನೀಲಕಂಠ ಮೂರ್ತಿ. ಅನಾಥಎಲ್ಲ ಒಬ್ಬೊಬ್ಬರೂ ಅಪ್ರತಿಮಅನಾಥತೆಯ ಒಬ್ಬಂಟಿ! ಇರುವವರೆಲ್ಲ ಒಂದಿನಿತು ಇದ್ದುಎದ್ದು ಎತ್ತೆತ್ತಲೋ ಸಾಗುವವರುಬರುವವರೆಲ್ಲ ಸಹ ಕ್ಷಣಕಾಲಬಂದು ಹಾಗೇ ಹೋಗುವವರು ಕೊನೆಗೆಮತ್ತೆ ಒಬ್ಬಂಟಿಮತ್ತೆ ಮತ್ತೆ ಅಂಥದೇ ಒಬ್ಬಂಟಿತನಆಜೀವಪರ್ಯಂತ…ಇದು ಬದುಕುಯಾರಿದ್ದರೇನುಎಲ್ಲರೂ ಕೂಡಿದಂತೆ ಇದ್ದರೇನುಎಲ್ಲರ ನಡುವೆಯೇತಾನಿದ್ದೂ ಇಲ್ಲದಂಥತುಂಬು ಒಬ್ಬಂಟಿತನಬಾಧಿಸುವ ಒಬ್ಬಂಟಿಯಾಗಿ…!ಅತೀ ದೊಡ್ಡ ಮನೆಯಕಂಬಗಳ ಸುತ್ತ ಬಳಸಿಬದುಕಿದ ಹಾಗೆ… ಬದುಕು ಕ್ರೂರ ಹಲವರಿಗೆಧನ್ಯವಾದ ಓ ಬದುಕೆಮತ್ತೆ ಮತ್ತೆ ನಿನಗೆನಿನ್ನ ಥಳಕು ನಾಟಕಕೆಧನ್ಯವಾದ ಓ ಬದುಕೇ…! ಎಲೆ ಯಾತನಾಮಯ ಬದುಕೆಇಷ್ಟೊಂದು ಯಾತನೆ ಏತಕೆಯಾತನೆ ಇಲ್ಲದ ಬದುಕಬದುಕಲೊಲ್ಲೆಯಾ ನೀ […]

ಅಂಕಣ ಬರಹ ಕಬ್ಬಿಗರ ಅಬ್ಬಿ ಮೌ..ನದ ನಡುವಿನ ಮೌನ ಸುಮಾರು ಮೂವತ್ತು ವರ್ಷಗಳ ಹಿಂದೆ ಕಾಡಿನ ನಟ್ಟ ನಡುವೆ, ಟೆಂಟ್ ನೊಳಗೆ ಮಲಗಿದ್ದೆ. ಚಿಕ್ಕಮಗಳೂರಿನ ಭದ್ರಾ ರಕ್ಷಿತಾರಣ್ಯದಲ್ಲಿ ಸ್ಕೌಟ್ ಕ್ಯಾಂಪ್ ಅದು. ವಿದ್ಯುತ್ ದೀಪಗಳು ಇರಲಿಲ್ಲ, ಕತ್ತಲು ಸುತ್ತಲೂ.  ವರ್ಷಗಳ ಹಿಂದೆ ದೂರ ನಕ್ಷತ್ರ ಗಳಿಂದ ಯಾತ್ರೆ ಹೊರಟು ಯಾತ್ರೆಯ ದಣಿವಿನಿಂದ ಮಂದವಾದ ಕಿರಣಗಳು, ತಂಗದಿರನ ಸೌಮ್ಯ ಬೆಳಕು ಮಾತ್ರ ಆ ಕಾಡನ್ನು ತಬ್ಬಿದ್ದವು. ಟೆಂಟು ಸುತ್ತಲೂ ಗಗನಕ್ಕೆ ಗೆಲ್ಲು ಚಾಚಿದ ಬೃಹತ್ ವೃಕ್ಷಗಳು. ಅವುಗಳಿಂದಾಚೆಗೆ ಕತ್ತಲೆ […]

ಅಂಕಣ ಬರಹ ಕಬ್ಬಿಗರ ಅಬ್ಬಿ ಕಾವ್ಯೋದ್ಭವ “ಗುರುಗಳೇ, ನನಗೆ ಸಂಗೀತ ಕಲಿಯಬೇಕು! ಕಲಿಸುವಿರಾ..” ಅಲ್ಲಲ್ಲಿ ಹರಿದರೂ ತಕ್ಕಮಟ್ಟಿಗೆ ಒಪ್ಪವಾಗಿದ್ದ ಅಂಗಿ, ಖಾಕಿ ಚಡ್ಡಿ ಧರಿಸಿದ ಹುಡುಗ, ‘ಧ್ರುಪದ್ ಗಂಧರ್ವ’ ಮನೆ ತಲಪಿದ್ದ. ಮನೆಯ ಬಂಧನ ಬಿಟ್ಟು, ಎರಡು ದಿನ, ಮೂರು ರಾತ್ರೆ ರೈಲು ಯಾತ್ರೆ ಮಾಡಿದಾಗ, ಹೊತ್ತು ತಂದದ್ದು ಕಪ್ಪು ಕಣ್ಣುಗಳ ತುಂಬಿದ ಕನಸು ಮಾತ್ರ. ಕಣ್ಣಲ್ಲಿ ಕಣ್ಣಿಟ್ಟು ಒಳಗಿನ ಭಾಷೆಯನ್ನು ಅರ್ಥ ಮಾಡಿಕೊಂಡವರಂತೆ ಗುರುಗಳು ಒಪ್ಪಿಕೊಂಡರು. ಗುರುಗಳ ಮನೆಯಲ್ಲಿಯೇ ವಾಸ. ಬೆಳಗ್ಗೆ ಗಡಿಯಾರದ ಲೋಲಕ ಢಣ್ […]

ಅಂಕಣ ಬರಹ ಕಬ್ಬಿಗರ ಅಬ್ಬಿ ಮಗುವಿನ ಪರಿಮಳ ಆ ಮಗು ಹುಟ್ಟಿ ಆಗಷ್ಟೇ ಮೂರು ತಿಂಗಳು ದಾಟಿರಬೇಕು. ಬೆಳಕಿನತ್ತ ಮುಖ ಮಾಡುತ್ತೆ. ಹೊಸ ಮುಖಗಳನ್ನು ನಿರ್ಮಲ ಕಣ್ಣುಗಳೊಳಗೆ ತುಂಬಿ ಏನೋ ನೆನಪಿಸಿಕೊಂಡಂತೆ ತನ್ನಷ್ಟಕ್ಕೇ ಮುಗುಳು ನಕ್ಕು ದೃಷ್ಟಿ ಬದಲಿಸುತ್ತೆ.  ಮಾಮನಿಗೆ ಆ ಮಗುವಿನೊಂದಿಗೆ ಆಡುವುದೆಂದರೆ ಇಷ್ಟ!. ಆತ, ಮಗುವಿನ ನುಣುಪು ಹೊಟ್ಟೆಗೆ, ಹೊಕ್ಕುಳ ಸುತ್ತ ತನ್ನ ಮೂಗು ಸವರಿ ” ಪಂಬಳ ಪಂಬಳ ಬತ್ತನ್ನೇ!” ( ಪರಿಮಳ ಪರಿಮಳ ಬರ್ತಿದೇ!) ಅಂತ ಆಘ್ರಾಣಿಸುತ್ತಾನೆ. ಮಗು ತನ್ನ ಬೊಚ್ಚುಬಾಯಿ […]

ಅಂಕಣ ಬರಹ ಕಬ್ಬಿಗರ ಅಬ್ಬಿ ಸೌಂದರ್ಯ ಲಹರಿ ಆ ಅಜ್ಜ ತನ್ನ ಮನೆಯ ಅಂಗಳದಲ್ಲಿ ಕುಳಿತು ನೋಡುತ್ತಲೇ ಇದ್ದರು. ದಿನಾಲೂ ನೋಡುತ್ತಿದ್ದರು. ಚಿಟ್ಟೆಯನ್ನು! ಬಣ್ಣದ ಚಿಟ್ಟೆಯನ್ನು.  ಅದರ ಎಡ ಬಲದ ರೆಕ್ಕೆಗಳು ಒಂದಕ್ಕೊಂದು ಕನ್ನಡಿ ಹಿಡಿದ ಬಿಂಬಗಳ ಹಾಗೆ. ಆಗಷ್ಟೇ ರವಿ ವರ್ಮ, ತನ್ನ ಕುಂಚದಿಂದ ಬಳಿದು ಬಿಡಿಸಿದ ತೈಲವರ್ಣಚಿತ್ರದ ರೇಖೆಗಳ ಹಾಗೆ ನಾಜೂಕು ವರ್ಣ ರೇಖೆಗಳು ಆ ರೆಕ್ಕೆಗಳಲ್ಲಿ!. ಅದು ಹಾರೋದಂದರೆ! ಲಪ್..ಟಪ್.. ಎಂದು ರೆಕ್ಕೆಯನ್ನು ನಯ ನಾಜೂಕಿನಿಂದ ತೆರೆದು ಮಡಿಸಿ ವಿಶ್ವಾಮಿತ್ರನ ತಪಸ್ಸು ಭಂಗಕ್ಕೆ […]

ಇಂತಹ ಅಗಾಧತೆಯಲ್ಲಿ ಸೂಜಿ ಮೊನೆಯ ಮಿದುಳಿನ ಮನುಷ್ಯ ಮತ್ತು ಆತನ ಮನಸ್ಸು, ತಾನು ಮಾತ್ರ ಜೀವಿ, ಇನ್ನುಳಿದ ಕಲ್ಲು, ಭೂಮಿ, ನಕ್ಷತ್ರ, ಆಕಾಶಗಳು ನಿರ್ಜೀವಿ ಎಂದು ನಿರ್ಧರಿಸುವಾಗ, ಆ ಪ್ರಜ್ಞೆ ಎಷ್ಟು ಸ್ವಕೇಂದ್ರಿತವಲ್ಲವೇ?.

ಅಂಕಣ ಬರಹ ಕಬ್ಬಿಗರ ಅಬ್ಬಿ  ಸಾಲುಗಟ್ಟಿದ  ಮನಸ್ಸುಗಳು ಮನೆ ಕಟ್ಟುವಾಗ ಮೊದಲು  ಕಲ್ಲಿನಿಂದ ಗಟ್ಟಿಯಾದ ಅಡಿಪಾಯ, ಆಮೇಲೆ ಕಟ್ಟುವುದೇ ಗೋಡೆ!. ತಳಪಾಯದ ನಾಲ್ಕೂ ಅಂಚುಗಳುದ್ದಕ್ಕೂ ನಾಲ್ಕು ಗೋಡೆಗಳು ಮಧ್ಯದಲ್ಲಿ ಸ್ಪೇಸ್ ಮತ್ತು ಗಾಳಿ ಬಂಧಿಸಲ್ಪಡುತ್ತದೆ. ಒಳಗೆ ಮತ್ತೊಂದಷ್ಟು ಗೋಡೆಗಳು. ಡ್ರಾಯಿಂಗ್ ರೂಂ ಮತ್ತು ಮಲಗುವ ಕೋಣೆ ನಡುವೆ ಗೋಡೆ, ಮನೆಗೆ ಬರುವ ಆಗಂತುಕರಿಂದ ಪ್ರೈವೆಸಿ ಅತ್ಯಗತ್ಯ.  ಆಮೇಲೆ ಅಡುಗೆ ಕೋಣೆ ಮತ್ತು ಡೈನಿಂಗ್ ರೂಂ ನಡುವೆ ಗೋಡೆಗಳು. ಮತ್ತೆ, ದೇವರ ಕೋಣೆ ಎನ್ನಲ್ಪಡುವ ಗೂಡಿನಂತಹ ಚಿಕ್ಕ ಕೋಣೆಗೂ […]

ಅಂಕಣ ಬರಹ ಕಬ್ಬಿಗರ ಅಬ್ಬಿ  ಕ್ಯಾನುವಾಸು ಮತ್ತು ಕಾವ್ಯ ರಾತ್ರೆ ಆಗಷ್ಟೇ ಲಂಗದಾವಣಿ ತೊಟ್ಟು ಕುಳಿತಿತ್ತು. ಆ ಹೊತ್ತಿಗೆ ಆ ಪುಟ್ಟ ಮನೆಯೊಳಗೆ ಬಡಕಲು ಕ್ಯಾಂಡಲ್ ಮಾತ್ರ ಉರಿಯುತ್ತಿದೆ. ನಸುಗೆನ್ನೆಯ ಹೊಳೆವ ಕಣ್ಣುಗಳ ಬಾಲಕ ಮತ್ತು ಆತನ ಉಬ್ಬುಗೆನ್ನೆಯ ಕನಸುನೇತ್ರದ ತಂಗಿಗೆ ತಿನ್ನಲು ಬರೇ ಎರಡು ಸ್ಲೈಸ್ ಬ್ರೆಡ್ ಮಾತ್ರ ಉಳಿದಿದೆ. ಆ ಮಕ್ಕಳ ಅಮ್ಮ ಬ್ರೆಡ್ ಬಿಸಿ ಮಾಡಿಕೊಡಲು ವಿದ್ಯುತ್ ಪೂರೈಕೆ ಇಲ್ಲದೇ, ಆ ಛಳಿಯಲ್ಲೂ ತಣ್ಣಗಿನ ಬ್ರೆಡ್ ಮಕ್ಕಳಿಗೆ ತಿನ್ನಲು ಕೊಡುತ್ತಾಳೆ. ಎರಡನೇ ಮಹಾಯುದ್ಧದ […]

ಕಬ್ಬಿಗರ ಅಬ್ಬಿ ಮನಸ್ಸು ಕಟ್ಟಿದ ಕೇರಿ ಮತ್ತು ಸಾಕ್ಷೀಪ್ರಜ್ಞೆ ಆ ಸಾಯಂಕಾಲ ಪಶ್ಚಿಮ ಘಟ್ಟದ ಮೇಲ್ ಮೆಟ್ಟಿಲು ಗಳಲ್ಲಿ ಒಂದಾದ, ‘ಕೊಟ್ಟಿಗೆಹಾರ’ ದಿಂದ ಸೈಕಲ್ ತುಳಿಯುತ್ತಾ ಇಳಿದರೆ ಘಟ್ಟದ ಬುಡದಲ್ಲಿ ಧರ್ಮಸ್ಥಳ. ಪಶ್ಚಿಮದ ಅರಬ್ಬೀ ಸಮುದ್ರ ಅಲೆಯೆಬ್ಬಿಸಿ ಸೂರ್ಯಾಲಿಂಗನಕ್ಕೆ ತೋಳು ಚಾಚಿ ಕಾಯುತ್ತಿತ್ತು. ಅದು ಚಾರ್ಮಾಡಿ ಘಟ್ಟ. ಯಾವಾಗಲೂ ಹತ್ತುವ ರಸ್ತೆ ಎಂದೂ ಮುಗಿಯದ ಪಯಣದಂತಿದ್ದರೆ, ಇಳಿಯುವ ರಸ್ತೆ ಹಾಗಲ್ಲ. ಮೈಭಾರ ಹೆಚ್ಚಿದ್ದಷ್ಟು ಬೇಗ ಭಾರ ಇಳಿಸುವ ತವಕ ಅದಕ್ಕೆ. ಅದೆಷ್ಟು ತಿರುವುಗಳೋ!. ಸೈಕಲ್ ಚಕ್ರಗಳು ಅಲೆಕ್ಸಾಂಡರ್ […]

ಅಂಕಣ ಬರಹ ಕಬ್ಬಿಗರ ಅಬ್ಬಿ ನೆಲದವ್ವನ ಒಡಲ ಜೀವಜಲ ಆ ಬಾವಿ ನೀರಿಗೆ ಅಷ್ಟೊಂದು ರುಚಿ. ಆಸರಾದ ಗಂಟಲಿಗರ ಆಸರೆಯೇ ಆ ಬಾವಿ. ನಮ್ಮ ಮನೆಯಿಂದ ಶಾಲೆ ತಲಪಲು ನಾಲ್ಕುಮೈಲಿಯ ಹೆಜ್ಜೆ. ನಡುದಾರಿಯಲ್ಲಿ ದೇವಸ್ಥಾನ. ಅದರ ಪಕ್ಕದಲ್ಲಿ ಈ ಬಾವಿ. ನಾನು ತುಂಬಾ ಚಿಕ್ಕವನಿದ್ದಾಗ, ನನ್ನ ಅಕ್ಕನ ಜತೆಗೆ ಶಾಲೆಗೆ ನಡೆದು ಬಾಯಾರಿದರೆ ಈ ಬಾವಿಯಿಂದ ಅಕ್ಕ ನೀರು ಸೇದುತ್ತಿದ್ದಳು. ಬಾವಿಯಾಳಕ್ಕೆ ಹಳೆಯ ಅಲ್ಯುಮಿನಿಯಮ್ ಬಿಂದಿಗೆ ಇಳಿಸಿ ನೀರು ನಿಧಾನವಾಗಿ ತುಂಬುವಾಗ ಗುಳು ಗುಳು ಶಬ್ಧ ಬಾವಿಯ […]

Back To Top