ಶ್ರಾವಣಕ್ಕೊಂದು ತೋರಣ
ಲಹರಿ ಪ್ರಜ್ಞಾ ಮತ್ತಿಹಳ್ಳಿ ಭರ‍್ರೋ…. ಎಂದು ಬೀಸುತ್ತಿದೆ ಗಾಳಿ. ಅನಾದಿ ಸೇಡೊಂದು ಹೂಂಕರಿಸಿ ಬಂದಂತೆ ಉರುಳಿ ಬೀಳುತ್ತಿವೆ ಹಳೆ ಮರದ ಗೆಲ್ಲುಗಳು. ನಡುಹಗಲೆ ಕತ್ತಲಾಗಿದೆ ಕರೆಂಟಿಲ್ಲದ ಒಳಮನೆಯಲ್ಲಿ. ತೌರಿಗೆ ಹೋದ ಹೊಸ ಸೊಸೆಯ ಕೋಣೆಯಲ್ಲಿ ಕಪಾಟಿನೊಳಖಾನೆಯಲ್ಲಿ ಮಡಿಸಿಟ್ಟ ರೇಷ್ಮೆ ಸೀರೆ ಅಸಹನೆಯಿಂದ ಮೈ ಕೊಡವಿ ಕೇಳುತ್ತಿದೆ ಎಂದು ಬರುತ್ತಾಳೆ? ಒಮ್ಮಲೆ ರಪರಪ ರಾಚಲಾರಂಭಿಸುತ್ತದೆ ಮಳೆ ಎಲ್ಲವನ್ನೂ ನೆನಪಿಸುವಂತೆ ಮತ್ತೆ ಎಲ್ಲವನ್ನೂ ಮರೆಸುವಂತೆ. ಕನ್ನಡಿಗಂಟಿಸಿದ ಬಿಂದಿಯೊಂದು ಗೋಡೆಯ ಕ್ಯಾಲಂಡರಿನತ್ತ ನೋಡಿ ಸಣ್ಣಗೆ ಕಣ್ಣು ಅರಳಿಸುತ್ತದೆ. ಸೋಮವಾರವೇ ಅಮಾವಾಸ್ಯೆ. ಅಂದರೆ […]
ಭರವಸೆಯ ಹೊರತು ಬೇರೇನೂ ಉಳಿದಿಲ್ಲ
ಲಹರಿ ವಸುಂಧರಾ ಕದಲೂರು ಖಾಲಿ ಮಂಕರಿ ಕವಚಿ ಹಾಕಿದಂತೆ ಎಲ್ಲಾ ಖಾಲಿಖಾಲಿಯಾದ ಭಾವ. ನಿರಾಳ ಅಂತೇನಲ್ಲ. ಮನಸ್ಸು ಭಾರವಾಗಿದೆ. ಏನೆಲ್ಲಾ ಇದೆ. ಆದರೂ ಏನೇನೂ ಇಲ್ಲ ಎನ್ನುವ ಒಂಟಿತನ ಹಿಂಡಿಹಿಪ್ಪೆ ಮಾಡುವಂತೆ. ಬಿಸಿಲಿಗೆ ಒಣ ಹಾಕಿದ ಬಟ್ಟೆ ಒಣಗೀ ಒಣಗೀ ಅಲ್ಲೇ ಇದ್ದು ಕೊನೆಗೆ ಬಣ್ಣಗೆಟ್ಟಂತೆ… ಸದಾ ಗಿಜಿಗಿಜಿ ಗಜಿಬಿಜಿಯಲ್ಲಿ ಸುತ್ತಾಡುತ್ತಿದ್ದ ಮೈ ಮನಸ್ಸೆಲ್ಲಾ ಒಂದು ಕ್ಷಣಕ್ಕೆ ಥಟ್ ಎಂದು ಏಕಾಂತ ವಾಸಕ್ಕೆ ನಿರ್ಜನ ಕಾಡ ಮಧ್ಯದಲ್ಲಿ ವಿರಮಿಸಿದಂತೆ ಭಾಸವಾಯಿತು. ಆಹಾ..!! ಇದೇ ಬೇಕಾಗಿತ್ತು […]