Category: ಲಹರಿ

ಹೆಣ್ಣುಮಕ್ಕಳ ಓದು

ಲಹರಿ ವಸುಂಧರಾ ಕದಲೂರು ಒಂದು ತಮಾಷೆಯ ಲಹರಿ…     ಹೆಣ್ಣು ಮಕ್ಕಳು ಓದು ಬರಹ ಕಲಿಯೋದು ಏಕೆ? ಅವರು ಯಾವ ಸಾಮ್ರಾಜ್ಯ ಕಟ್ಟಬೇಕು? ಯಾರನ್ನ ಉದ್ಧಾರ ಮಾಡಬೇಕು? ಇವೇ ಇಂತಹವೇ ನೂರು ಪ್ರಶ್ನೆಗಳು ಹುಟ್ಟಿಕೊಳ್ತವೆ.    ಇಂಥ ಪ್ರಶ್ನೆಗಳು ಈಗ ಹೆಚ್ಚು ಇರಲಾರದು ಬಿಡಿ. ಆದರೂ ಲೇಖನಿ ಹಿಡಿದರೂ, ಕೀಲಿಮಣೆ ಕುಟ್ಟಿದರೂ ಮುಸುರೆ ತಿಕ್ಕೋದು, ತೊಟ್ಟಿಲು ತೂಗೋದು ನಿಮಗೆ ತಪ್ಪಿದ್ದಲ್ಲ ಎಂದು ಕೊಂಕು ರಾಗ ಹಾಡುವವರಿಗೇನೂ ಕಮ್ಮಿಯಿಲ್ಲ.    ಅಲ್ಲಾ ಇವರೇ.., ನಮ್ಮ ಮನೆ ಪಾತ್ರೆ ಪರಡೆಗಳನ್ನು […]

ನಾನು ನಾನೇ…..

ಲಹರಿ ರಾಧಿಕಾ ಕಾಮತ್ ಜೀವನ ಒಂದು ಚಲನಚಿತ್ರ… ನಮ್ಮದು ಅದರಲ್ಲಿ ಒಂದೊಂದು ಪಾತ್ರ… ಮೇಲಿರುವ ನಿರ್ದೇಶಕ ಹಿಡಿದಿರುವ ಸೂತ್ರ… ಕೊನೆಗೆ ಎಲ್ಲರೂ ಮರಳಬೇಕು ಅವನ ಹತ್ರ… ಈ ಜೀವನ ಎಂಬ ನಾಟಕ/ ಚಲನಚಿತ್ರದಲ್ಲಿ ನಾವು ಹುಟ್ಟಿನಿಂದ  ಹಲವಾರು ಪಾತ್ರಗಳನ್ನು ನಿಭಾಯಿಸುತ್ತಲೇ ಇರುತ್ತೇವೆ. ಅದು ನಮ್ಮ ಇಷ್ಟದ್ದಾಗಲಿ ಇಷ್ಟವಿಲ್ಲದ್ದಾಗಲಿ ನಾವು ನಿರ್ವಹಿಸಲೇ ಬೇಕು. ನಾನು ಹುಟ್ಟಿದಾಗ ಒಂದೇ ಬಾರಿಗೆ ಮಗಳು ,ಮೊಮ್ಮಗಳು ತಂಗಿ ಎಂಬ ಮೂರು ಪಾತ್ರಗಳನ್ನು ಒಟ್ಟಿಗೆ ನಿಭಾಯಿಸಿದ್ದೆ. ಮುಂದೆ ನಾಲ್ಕೈದು ವರ್ಷ ಕಳೆದಾಗ ಅಮ್ಮನ ಮಮತೆ […]

ಶ್ರಾವಣಕ್ಕೊಂದು ತೋರಣ

ಲಹರಿ ಪ್ರಜ್ಞಾ ಮತ್ತಿಹಳ್ಳಿ ಭರ‍್ರೋ…. ಎಂದು ಬೀಸುತ್ತಿದೆ ಗಾಳಿ. ಅನಾದಿ ಸೇಡೊಂದು ಹೂಂಕರಿಸಿ ಬಂದಂತೆ ಉರುಳಿ ಬೀಳುತ್ತಿವೆ ಹಳೆ ಮರದ ಗೆಲ್ಲುಗಳು. ನಡುಹಗಲೆ ಕತ್ತಲಾಗಿದೆ ಕರೆಂಟಿಲ್ಲದ ಒಳಮನೆಯಲ್ಲಿ. ತೌರಿಗೆ ಹೋದ ಹೊಸ ಸೊಸೆಯ ಕೋಣೆಯಲ್ಲಿ ಕಪಾಟಿನೊಳಖಾನೆಯಲ್ಲಿ ಮಡಿಸಿಟ್ಟ ರೇಷ್ಮೆ ಸೀರೆ ಅಸಹನೆಯಿಂದ ಮೈ ಕೊಡವಿ ಕೇಳುತ್ತಿದೆ ಎಂದು ಬರುತ್ತಾಳೆ? ಒಮ್ಮಲೆ ರಪರಪ ರಾಚಲಾರಂಭಿಸುತ್ತದೆ ಮಳೆ ಎಲ್ಲವನ್ನೂ ನೆನಪಿಸುವಂತೆ ಮತ್ತೆ ಎಲ್ಲವನ್ನೂ ಮರೆಸುವಂತೆ. ಕನ್ನಡಿಗಂಟಿಸಿದ ಬಿಂದಿಯೊಂದು ಗೋಡೆಯ ಕ್ಯಾಲಂಡರಿನತ್ತ ನೋಡಿ ಸಣ್ಣಗೆ ಕಣ್ಣು ಅರಳಿಸುತ್ತದೆ. ಸೋಮವಾರವೇ ಅಮಾವಾಸ್ಯೆ. ಅಂದರೆ […]

ಭರವಸೆಯ ಹೊರತು ಬೇರೇನೂ ಉಳಿದಿಲ್ಲ

ಲಹರಿ  ವಸುಂಧರಾ ಕದಲೂರು  ಖಾಲಿ ಮಂಕರಿ ಕವಚಿ ಹಾಕಿದಂತೆ ಎಲ್ಲಾ ಖಾಲಿಖಾಲಿಯಾದ ಭಾವ. ನಿರಾಳ ಅಂತೇನಲ್ಲ. ಮನಸ್ಸು ಭಾರವಾಗಿದೆ. ಏನೆಲ್ಲಾ ಇದೆ. ಆದರೂ ಏನೇನೂ ಇಲ್ಲ ಎನ್ನುವ ಒಂಟಿತನ ಹಿಂಡಿಹಿಪ್ಪೆ ಮಾಡುವಂತೆ. ಬಿಸಿಲಿಗೆ ಒಣ ಹಾಕಿದ ಬಟ್ಟೆ ಒಣಗೀ ಒಣಗೀ ಅಲ್ಲೇ ಇದ್ದು ಕೊನೆಗೆ ಬಣ್ಣಗೆಟ್ಟಂತೆ…      ಸದಾ ಗಿಜಿಗಿಜಿ ಗಜಿಬಿಜಿಯಲ್ಲಿ ಸುತ್ತಾಡುತ್ತಿದ್ದ ಮೈ ಮನಸ್ಸೆಲ್ಲಾ ಒಂದು ಕ್ಷಣಕ್ಕೆ  ಥಟ್ ಎಂದು ಏಕಾಂತ ವಾಸಕ್ಕೆ ನಿರ್ಜನ ಕಾಡ ಮಧ್ಯದಲ್ಲಿ ವಿರಮಿಸಿದಂತೆ ಭಾಸವಾಯಿತು. ಆಹಾ..!! ಇದೇ ಬೇಕಾಗಿತ್ತು […]

Back To Top