ಏಕೀ ಏಕತಾನತೆ
ಲಹರಿ ಏಕೀ ಏಕತಾನತೆ ಸ್ಮಿತಾ ಭಟ್ ಅಮ್ಮಾ ನಿಂಗೆ ಇತ್ತೀಚಿಗೆ ಫಲಾವ್ ಮಾಡೋಕೆ ಬರಲ್ಲ ಎಂದು ಊಟಕ್ಕೆ ಕುಳಿತವ ಅಸಾಧ್ಯವಾದ ಅಸಮಾಧಾನ ತೋರಿಸಿ ಎರಡು ತುತ್ತು ತಿಂದ ಶಾಸ್ತ್ರ ಮಾಡಿ ಗೊಣಗುತ್ತಾ ಎದ್ದು ಹೊರಟೇ ಹೋದ. ನನಗೋ ಅಳುವೇ ತುಟಿಗೆ ಬಂದ ಅನುಭವ. ಮಾತು ಮಾತಿಗೂ ಅಮ್ಮನ ಫಲಾವ್ ಅಂದ್ರೆ ಅದೆಷ್ಟು ರುಚಿ, ಯಾರಿಗೂ ಈತರ ಮಾಡೋಕೆ ಬರಲ್ಲ ಎಂದು ಯಾರದ್ದಾದರೂ ಮನೆಯಲ್ಲಿ, ಹೋಟೆಲ್ ಗಳಲ್ಲಿ , ತಿಂದು ಬಂದಾಗೆಲ್ಲ ಪಲಾವ್ ನ ಗುಣ ಸ್ವಭಾವ ದೂರುತ್ತ […]
ಭರವಸೆಯ ಹೊರತು ಬೇರೇನೂ ಉಳಿದಿಲ್ಲ’
ಲಹರಿ ಭರವಸೆಯ ಹೊರತು ಬೇರೇನೂ ಉಳಿದಿಲ್ಲ’ ವಸುಂಧರಾ ಕದಲೂರು ಕವಚಿ ಹಾಕಿದ್ದ ಖಾಲಿ ಮಂಕರಿಯನ್ನು ಬೋರಲಾಕಿದಂತೆ, ಎಲ್ಲಾ ಖಾಲಿಖಾಲಿಯಾದ ಭಾವ. ಹಾಗೆಂದು ನಿರಾಳ ಅಂತೇನಲ್ಲ. ಮನಸ್ಸು ಭಾರವಾಗಿದೆ. ಏನೆಲ್ಲಾ ಇದೆ. ಆದರೂ ಏನೇನೂ ಇಲ್ಲ ಎನ್ನುವ ಒಂಟಿತನ ಹಿಂಡಿಹಿಪ್ಪೆ ಮಾಡುತ್ತಿದೆ. ಬಿಸಿಲಿಗೆ ಒಣ ಹಾಕಿದ ಬಟ್ಟೆ ಒಣಗೀ ಒಣಗೀ ಅಲ್ಲೇ ಇದ್ದು ಕೊನೆಗೆ ಬಣ್ಣಗೆಟ್ಟಂತೆ… […]
ನೀ ಒಂದು ಸಾರಿ ನನ್ನ ಮನ್ನಿಸು
ನೀ ಒಂದು ಸಾರಿ ನನ್ನ ಮನ್ನಿಸು ಜಯಶ್ರೀ ಜೆ.ಅಬ್ಬಿಗೇರಿ ಪ್ರೀತಿ ಪ್ರೇಮದ ವಿಷಯದಲ್ಲಿ ತಿರಸ್ಕರಿಸಲ್ಪಟ್ಟರೆ ಅದೆಂಥ ಭಯಂಕರ ನೋವು ಆಗುತ್ತದೆ ಅನ್ನೋದು ಅನುಭವಿಸಿದವರಿಗೆ ಗೊತ್ತು. ಅದೊಂಥರ ಹಲ್ಲು ನೋವಿದ್ದ ಹಾಗೆ. ಎಂಥ ಹುಲಿಯಂಥ ಮನುಷ್ಯನನ್ನೂ ನರಮ್ ಮಾಡಿಬಿಡುತ್ತದೆ. ಈ ಸಾಲುಗಳು ನಿನ್ನ ಭಾವ ಪ್ರಪಂಚವನ್ನು ತಟ್ಟುತ್ತವೆ ಅಂದುಕೊಂಡಿದೀನಿ. ಇವು ಕೇವಲ ಪದಗಳಲ್ಲ. ನಿನಗಾಗಿ ಬರೆದ ಮೌನ ಮಿಲನದ ಮುದ್ದು ಮನವಿ ಪತ್ರ. ಪ್ರೀತಿಯ ಭಾವದಲ್ಲಿ ವಿರಹದ ಉರಿ ಸಣ್ಣಗೆ ಮನಸ್ಸನ್ನು ಸುಡುತ್ತಿದೆ. ಒಂದೇ ಒಂದು ಸಾರಿ ಎದೆಗವಚಿಕೊಂಡು […]
ಕಾಡುವ ವಿಚಾರ…
ಕಾಡುವ ವಿಚಾರ… ವಸುಂಧರಾ ಕದಲೂರು ಆ ದಿನ ನಿಜಕ್ಕೂ ಬಹಳ ಕಳವಳಪಟ್ಟಿದ್ದೆ. ಏನು ಮಾಡಿದರೂ ನನಗೆ ನಂಬಿಕೆ ಮೂಡುತ್ತಿರಲಿಲ್ಲ. ಏಕೋ ಎದೆಯಾಳದಲಿ ತೀವ್ರ ನೋವಾಗುತ್ತಿರುವ ಅನುಭವ. ಆ ಕ್ಷಣಕ್ಕೆ ಆಶಾಭಂಗದ ಅರ್ಥವೂ, ದಿಗ್ಭ್ರಮೆ ಎಂಬುದರ ಪರಿಚಯವೂ ಆಗಿಹೋಯಿತು. ಎಳೆ ಮನದ ಭಿತ್ತಿಯಲಿ ಉದಿಸಿದ ದುಃಖ ಹಸಿ ನೆಲದಲ್ಲಿ ಬೇರೂರಿದ ಬೀಜದಂತಾಯ್ತು. ಹೌದು, ಮೊದಲ ಬಾರಿಗೆ ಪ್ರೀತಿಯ ‘ಗಾಂಧಿ’ ಅವರ ಸಾವು ಹೇಗಾಯಿತೆಂದು ತಿಳಿದಾಗ ನನಗಾದ ಅನುಭವವೇ ಈ ಮೇಲಿನದ್ದು. ‘ಮಹಾತ್ಮ […]
ಮಾಯಾ ಜಗತ್ತಿನ ಚಕ್ರವ್ಯೂಹದಲ್ಲಿ ಸಿಲುಕಿ
ಲಹರಿ ಡಾ. ಅಜಿತ್ ಹರೀಶಿ ವಾತಾವರಣ ಥಂಡಿಯಿಂದ ಕೂಡಿದೆ. ಮನಸ್ಸು ದುಪ್ಪಡಿ ಹೊದ್ದು ಮಲಗಿದೆ. ನಿನ್ನೆ ಒಂದೇ ದಿನಕ್ಕೆ ವಾಟ್ಸಾಪ್ ಗುಂಪೊಂದರಿಂದ ನಾಲ್ಕು ಜನ ಲೆಫ್ಟ್ ಆದರು. ಹೋದ ವರ್ಷ ಜುಲೈ ತಿಂಗಳಲ್ಲೇ ನಾನು ಎಲ್ಲ ಗ್ರೂಪ್ ಗಳಿಂದ ಹೊರಹೋಗಿದ್ದೆ. ಮತ್ತೆ ಕೆಲವು ಗ್ರೂಪ್ ಗಳಿಗೆ ಸೆಪ್ಟೆಂಬರ್ ತಿಂಗಳಲ್ಲಿ ಮರಳಿದ್ದೆ. ಅವರೂ ಮರಳಬಹುದು. ವಾತಾವರಣ, ವಾಟ್ಸಾಪು ಮತ್ತು ಮಾನಸಿಕತೆಯ ಜೊತೆಗೆ ಈ ಬಾರಿ ಕೊರೋನ ಯಾಡೆಡ್ ಫ್ಲೇವರ್ರು. ಫೇಸ್ಬುಕ್ ನಮ್ಮನೆ ದೇವರು! ಬೆಳಿಗ್ಗೆ ಫೇಸ್ಬುಕ್ ಮುಂದೆ ಕುಳಿತು […]
‘ಎಳೆ ಹಸಿರು ನೆನಪು ..’
ಲಹರಿ ವಸುಂಧರಾ ಕದಲೂರು ಆಗೆಲ್ಲಾ ಮೂರ್ನಾಲ್ಕು ವರ್ಷಗಳಿಗೊಮ್ಮೆ ಮನೆಯ ಸಾಮಾಗ್ರಿಗಳನ್ನು ಗಂಟುಮೂಟೆ ಕಟ್ಟಿಕೊಂಡು ನಮ್ಮ ಕುಟುಂಬ ಊರಿಂದೂರಿಗೆ ಪ್ರಯಾಣಿಸುತ್ತಿತ್ತು. ನಾನು ಸಣ್ಣವಳಿದ್ದಾಗಿನ ವಿಷಯವಿದು. ಈ ಸಂಚಾರದ ನಿರಂತರತೆಗೆ ನಮ್ಮಪ್ಪ ಸರಕಾರಿ ನೌಕರರಾಗಿದ್ದು ಹಾಗೂ ವರ್ಗಾವಣೆಯನ್ನು ಅವರು ಸಹಜವಾಗಿ ಸ್ವೀಕರಿಸುತ್ತಿದ್ದದ್ದು ಪ್ರಮುಖವಾಗಿತ್ತು ಎನ್ನುವುದು ನನಗೀಗ ಅರ್ಥವಾಗುತ್ತಿದೆ. ಹೀಗೆ ಪದೇ ಪದೇ ವರ್ಗವಾಗುತ್ತಿದ್ದರಿಂದ ನನ್ನ ಶಾಲಾ ಶಿಕ್ಷಣ ಮೈಸೂರು, ಹಾಸನ ಜಿಲ್ಲೆಗಳ ಹಲವು ಹಳ್ಳಿಗಳ ಸರಕಾರಿ ಶಾಲೆಗಳಲ್ಲಿ ನಡೆಯಿತು. ಮತ್ತೆ ಮತ್ತೆ ಹೊಸ […]
ಹೆಣ್ಣುಮಕ್ಕಳ ಓದು
ಲಹರಿ ವಸುಂಧರಾ ಕದಲೂರು ಒಂದು ತಮಾಷೆಯ ಲಹರಿ… ಹೆಣ್ಣು ಮಕ್ಕಳು ಓದು ಬರಹ ಕಲಿಯೋದು ಏಕೆ? ಅವರು ಯಾವ ಸಾಮ್ರಾಜ್ಯ ಕಟ್ಟಬೇಕು? ಯಾರನ್ನ ಉದ್ಧಾರ ಮಾಡಬೇಕು? ಇವೇ ಇಂತಹವೇ ನೂರು ಪ್ರಶ್ನೆಗಳು ಹುಟ್ಟಿಕೊಳ್ತವೆ. ಇಂಥ ಪ್ರಶ್ನೆಗಳು ಈಗ ಹೆಚ್ಚು ಇರಲಾರದು ಬಿಡಿ. ಆದರೂ ಲೇಖನಿ ಹಿಡಿದರೂ, ಕೀಲಿಮಣೆ ಕುಟ್ಟಿದರೂ ಮುಸುರೆ ತಿಕ್ಕೋದು, ತೊಟ್ಟಿಲು ತೂಗೋದು ನಿಮಗೆ ತಪ್ಪಿದ್ದಲ್ಲ ಎಂದು ಕೊಂಕು ರಾಗ ಹಾಡುವವರಿಗೇನೂ ಕಮ್ಮಿಯಿಲ್ಲ. ಅಲ್ಲಾ ಇವರೇ.., ನಮ್ಮ ಮನೆ ಪಾತ್ರೆ ಪರಡೆಗಳನ್ನು […]
ನಾನು ನಾನೇ…..
ಲಹರಿ ರಾಧಿಕಾ ಕಾಮತ್ ಜೀವನ ಒಂದು ಚಲನಚಿತ್ರ… ನಮ್ಮದು ಅದರಲ್ಲಿ ಒಂದೊಂದು ಪಾತ್ರ… ಮೇಲಿರುವ ನಿರ್ದೇಶಕ ಹಿಡಿದಿರುವ ಸೂತ್ರ… ಕೊನೆಗೆ ಎಲ್ಲರೂ ಮರಳಬೇಕು ಅವನ ಹತ್ರ… ಈ ಜೀವನ ಎಂಬ ನಾಟಕ/ ಚಲನಚಿತ್ರದಲ್ಲಿ ನಾವು ಹುಟ್ಟಿನಿಂದ ಹಲವಾರು ಪಾತ್ರಗಳನ್ನು ನಿಭಾಯಿಸುತ್ತಲೇ ಇರುತ್ತೇವೆ. ಅದು ನಮ್ಮ ಇಷ್ಟದ್ದಾಗಲಿ ಇಷ್ಟವಿಲ್ಲದ್ದಾಗಲಿ ನಾವು ನಿರ್ವಹಿಸಲೇ ಬೇಕು. ನಾನು ಹುಟ್ಟಿದಾಗ ಒಂದೇ ಬಾರಿಗೆ ಮಗಳು ,ಮೊಮ್ಮಗಳು ತಂಗಿ ಎಂಬ ಮೂರು ಪಾತ್ರಗಳನ್ನು ಒಟ್ಟಿಗೆ ನಿಭಾಯಿಸಿದ್ದೆ. ಮುಂದೆ ನಾಲ್ಕೈದು ವರ್ಷ ಕಳೆದಾಗ ಅಮ್ಮನ ಮಮತೆ […]
ಶ್ರಾವಣಕ್ಕೊಂದು ತೋರಣ
ಲಹರಿ ಪ್ರಜ್ಞಾ ಮತ್ತಿಹಳ್ಳಿ ಭರ್ರೋ…. ಎಂದು ಬೀಸುತ್ತಿದೆ ಗಾಳಿ. ಅನಾದಿ ಸೇಡೊಂದು ಹೂಂಕರಿಸಿ ಬಂದಂತೆ ಉರುಳಿ ಬೀಳುತ್ತಿವೆ ಹಳೆ ಮರದ ಗೆಲ್ಲುಗಳು. ನಡುಹಗಲೆ ಕತ್ತಲಾಗಿದೆ ಕರೆಂಟಿಲ್ಲದ ಒಳಮನೆಯಲ್ಲಿ. ತೌರಿಗೆ ಹೋದ ಹೊಸ ಸೊಸೆಯ ಕೋಣೆಯಲ್ಲಿ ಕಪಾಟಿನೊಳಖಾನೆಯಲ್ಲಿ ಮಡಿಸಿಟ್ಟ ರೇಷ್ಮೆ ಸೀರೆ ಅಸಹನೆಯಿಂದ ಮೈ ಕೊಡವಿ ಕೇಳುತ್ತಿದೆ ಎಂದು ಬರುತ್ತಾಳೆ? ಒಮ್ಮಲೆ ರಪರಪ ರಾಚಲಾರಂಭಿಸುತ್ತದೆ ಮಳೆ ಎಲ್ಲವನ್ನೂ ನೆನಪಿಸುವಂತೆ ಮತ್ತೆ ಎಲ್ಲವನ್ನೂ ಮರೆಸುವಂತೆ. ಕನ್ನಡಿಗಂಟಿಸಿದ ಬಿಂದಿಯೊಂದು ಗೋಡೆಯ ಕ್ಯಾಲಂಡರಿನತ್ತ ನೋಡಿ ಸಣ್ಣಗೆ ಕಣ್ಣು ಅರಳಿಸುತ್ತದೆ. ಸೋಮವಾರವೇ ಅಮಾವಾಸ್ಯೆ. ಅಂದರೆ […]
ಭರವಸೆಯ ಹೊರತು ಬೇರೇನೂ ಉಳಿದಿಲ್ಲ
ಲಹರಿ ವಸುಂಧರಾ ಕದಲೂರು ಖಾಲಿ ಮಂಕರಿ ಕವಚಿ ಹಾಕಿದಂತೆ ಎಲ್ಲಾ ಖಾಲಿಖಾಲಿಯಾದ ಭಾವ. ನಿರಾಳ ಅಂತೇನಲ್ಲ. ಮನಸ್ಸು ಭಾರವಾಗಿದೆ. ಏನೆಲ್ಲಾ ಇದೆ. ಆದರೂ ಏನೇನೂ ಇಲ್ಲ ಎನ್ನುವ ಒಂಟಿತನ ಹಿಂಡಿಹಿಪ್ಪೆ ಮಾಡುವಂತೆ. ಬಿಸಿಲಿಗೆ ಒಣ ಹಾಕಿದ ಬಟ್ಟೆ ಒಣಗೀ ಒಣಗೀ ಅಲ್ಲೇ ಇದ್ದು ಕೊನೆಗೆ ಬಣ್ಣಗೆಟ್ಟಂತೆ… ಸದಾ ಗಿಜಿಗಿಜಿ ಗಜಿಬಿಜಿಯಲ್ಲಿ ಸುತ್ತಾಡುತ್ತಿದ್ದ ಮೈ ಮನಸ್ಸೆಲ್ಲಾ ಒಂದು ಕ್ಷಣಕ್ಕೆ ಥಟ್ ಎಂದು ಏಕಾಂತ ವಾಸಕ್ಕೆ ನಿರ್ಜನ ಕಾಡ ಮಧ್ಯದಲ್ಲಿ ವಿರಮಿಸಿದಂತೆ ಭಾಸವಾಯಿತು. ಆಹಾ..!! ಇದೇ ಬೇಕಾಗಿತ್ತು […]