ಗೆಳೆಯನ ಮಕ್ಕಳು
ಗೆಳೆಯನ ಮಕ್ಕಳು ಅಂಕಣ ಬರಹ ಎಷ್ಟೊ ವರ್ಷಗಳ ಬಳಿಕ ಗೆಳೆಯನ ಮನೆಗೆ ಹೋಗಬೇಕಾಯಿತು. ಅವನೂ ಅವನ ಹೆಂಡತಿಯೂ ಪ್ರೀತಿಯಿಂದ ಬರಮಾಡಿಕೊಂಡರು. ನಾನು ಅವರ ಮನೆ ಹೊಕ್ಕಾಗ ಎಂಟು ವರ್ಷದ ಮಗಳು ಬೊಂಬೆಗೆ ಸೀರೆಯುಡಿಸುತ್ತಿದ್ದಳು. ಹನ್ನೆರಡು ವರುಷದ ಮಗ ಸೋಫಾದಲ್ಲಿ ಮೈಚೆಲ್ಲಿ ಕಾಲನ್ನು ಆಗಸಕ್ಕೆ ಚಾಚಿ ಲ್ಯಾಪ್ಟಾಪಿನಲ್ಲಿ ವಿಡಿಯೊ ಗೇಂ ಆಡುತ್ತಿದ್ದ. ಮನೆಗೆ ಬಂದು ಹೋದವರ ಬಗ್ಗೆ ಖಬರಿಲ್ಲದಷ್ಟು ತನ್ಮಯನಾಗಿದ್ದ. ನನ್ನ ಗೆಳೆಯ `ಅಪ್ಪಿ ನೋಡೊ. ನನ್ನ ಕ್ಲಾಸ್ಮೇಟ್ ಬಂದಾನ. ಅಂಕಲ್ಗೆ ನಮಸ್ಕಾರ ಮಾಡು’ ಎಂದರೂ ಕಣ್ಣೆತ್ತಿ ನೋಡಲಿಲ್ಲ. […]
ಹಾವು ತುಳಿದೇನೇ?
ರಾಜ್ಯಮಟ್ಟದ ಪತ್ರಿಕೆಗಳ ಜಿಲ್ಲಾ ಆವೃತ್ತಿಯ ತುದಿಮೂಲೆಯಲ್ಲಿ ಮುದ್ರಿತವಾಗುವ ಒಂದು ಕಾಲಂ ನನ್ನನ್ನು ಸದಾ ಕಾಡುತ್ತದೆ. ಅದೆಂದರೆ `ಅಪರಾಧ ಸುದ್ದಿ’. ಕೆಲವು ಪತ್ರಿಕೆಗಳು ಈ ಶೀರ್ಷಿಕೆಯನ್ನು ಕೆಂಪಕ್ಷರಗಳಲ್ಲಿಟ್ಟು ಅದರ ಕೆಳಗೆ ವರದಿ ಪ್ರಕಟಿಸುತ್ತವೆ. ಈ ರಕ್ತವರ್ಣವು ಅಪಾಯ ಮತ್ತು ಸಾವನ್ನು ಸಂಕೇತಿಸಲಿ ಎಂಬುದು ಅವುಗಳ ಇರಾದೆಯಿರಬೇಕು. ಅಲ್ಲಿ ಎರಡು ಮಾದರಿಯ ಸುದ್ದಿಗಳಿರುತ್ತವೆ. ಮೊದಲನೆಯವು-ಬೈಕುಗಳ್ಳರ ಬಂಧನ, ಸರಗಳ್ಳತನ, ಮನೆಯ ದರೋಡೆ, ಭೀಕರಕೊಲೆ, ಪ್ರಿಯಕರನೊಂದಿಗೆ ವಿವಾಹಿತ ಸ್ತ್ರೀ ಪರಾರಿ, ಮಣ್ಣುಕುಸಿದು ಕೂಲಿಗಾರನ ಜೀವಂತ ಸಮಾಧಿ, ಜಾತ್ರೆಯಲ್ಲಿ ಗುಂಪು ಘರ್ಷಣೆ, ಬಣವೆ ದಹನ, […]
ಉಗಾದಿ ಚಿತ್ರಗಳು ಕೆರೆಕೋಡಿ ಪಕ್ಕದಲ್ಲಿದ್ದ ಬೀದಿಯೊಂದರಲ್ಲಿ ನನ್ನ ತಾರುಣ್ಯ ಕಳೆಯಿತು. ಅಲ್ಲಿ ಬೆಸ್ತರು, ಈಡಿಗರು, ಬಡಗಿಗೆಲಸದ ಆಚಾರಿಗಳು, ಕಮ್ಮಾರರು, ಮಂಡಕ್ಕಿಭಟ್ಟಿಯವರು, ಮೇದಾರರು ಇದ್ದರು. ಎಲ್ಲರೂ ಬಸವಣ್ಣನವರ ವಚನದಲ್ಲಿ ಬರುವಂತೆ `ಅಂದಂದೆ ಹುಟ್ಟಿತ್ತು ಅಂದಂದೆ ಹೊಂದಿತ್ತು’ ಎಂಬಂತೆ ಹಗಲ ದುಡಿಮೆ- ರಾತ್ರಿಯ ಊಟದ ಅವಸ್ಥೆಯವರು. ಒಬ್ಬರ ಮನೆಯ ಹಬ್ಬ ಇಡೀ ಬೀದಿಯ ಹಬ್ಬವಾಗುತ್ತಿತ್ತು. ರಂಜಾನ್ ದಿನ ಶೀರ್ಕುರುಮಾ ಬಟ್ಟಲನ್ನು ಬೀದಿಯ ಎಲ್ಲರ ಮನೆಗೆ ತಲುಪಿಸುವುದು ನಮಗೆ ಲೋಕಮಹತ್ವದ ಕಾಯಕವಾಗಿತ್ತು. ಉಗಾದಿಯ ದಿನ ಬೇರೆಯವರ ಮನೆಗಳಿಂದ ಬರುತ್ತಿದ್ದ ಹೋಳಿಗೆ, ಕೋಸಂಬರಿ, […]
ಪೇಟಿಮಾಂತ್ರಿಕ ಬೆಳಗಾವಿಯಲ್ಲಿರುವ ಪಂಡಿತ್ ರಾಮಭಾವು ಬಿಜಾಪುರೆ ಅವರನ್ನು ಕಾಣಬೇಕೆಂದು ನನಗೆ ಅನಿಸಿತು. ಮಿತ್ರರಾದ ಕುಸಗಲ್ಲರಿಗೆ ವಿಷಯ ತಿಳಿಸಲು `ನಾವು ಇದೇ ಊರಾಗಿದ್ರೂ ಅವರ ಮನೀಗ್ ಹೋಗಿಲ್ಲ, ಬರ್ರಿ ಸರ’ ಎಂದು ಕರೆದೊಯ್ಯಲು ಒಪ್ಪಿದರು. ಮುಸ್ಸಂಜೆ ಹೊತ್ತಿಗೆ ಶ್ರೀ ಕುಸುಗಲ್ಲ, ಅವರ ಮಗಳು ಕವಿತಾ, ಸ್ನೇಹಿತ ಡಾ. ಕೋಲ್ಕಾರ ಅವರೊಡನೆ ಬಿಜಾಪುರೆ ಅವರಲ್ಲಿಗೆ ಹೊರಟೆ. ಹಳೇ ಬೆಳಗಾವಿಯ ಬೀದಿಗಳು. ಪಶ್ಚಿಮಘಟ್ಟದ ಜಿರ್ರೋ ಮಳೆಧಾರೆ. ಕಚಿಪಿಚಿ ಕೆಸರು. ಹಸುರು ಕಕ್ಕುವ ಗಿಡಮರಪೊದೆ. ಮನೆಯ ಛಾವಣಿ ಕಾಂಪೌಂಡು ಗೋಡೆಗಳು ಹಸಿರು ಸ್ವೆಟರುಟ್ಟಂತೆ […]