ಕನ್ನಡ ಕಂದ
ಮಕ್ಕಳ ಪದ್ಯ ಕನ್ನಡ ಕಂದ ಮಲಿಕಜಾನ ಶೇಖ . ಕನ್ನಡ ನಾಡಿನ ಕಂದನು ನಾನುಕನ್ನಡವನ್ನೆ ಬೆಳಗುವೇನು..ಅ,ಆ,ಇ,ಈ ಎನ್ನುತ್ತಾ ನಾನುಕನ್ನಡವನ್ನೆ ಕಲಿಯುವೇನು. ಸಹ್ಯಾದ್ರಿಯ ಗಿರಿಕಂದರಗಳಕಾವೇರಿ ಕೃಷ್ಣೆ ತುಂಗೆ ತೀರದಲಿಶ್ರೀಗಂಧ ವನ್ಯಸಿರಿ ನಾಡಿನಲಿಸೌಗಂಧ ತುಂಬಿದ ಮಣ್ಣಿನಲಿಎಂದಿಗೂ ನಾನು ಮೆರೆಯುವೇನು.. ಹರಿಹರ ಕೃಷ್ಣರು ಕಟ್ಟಿದಚಾಲೂಕ್ಯ ಕದಂಬರು ಆಳಿದಚೆನ್ನಮ್ಮಾ ಓಬವ್ವಾ ಹೋರಾಡಿದವೀರರು ಧೀರರು ಮೆರೆದಿಹಶೌರ್ಯದ ಇತಿಹಾಸ ಕೇಳುವೇನು.. ಶರಣರು ದಾಸರು ಬದುಕಿದಸೂಫಿ ಸಂತರು ಬೆಳಗಿದಸತ್ಯ ಶಾಂತಿ ನಿತ್ಯ ನೀತಿಐಕ್ಯ ಮಂತ್ರ ಸಾರಿದಪಾವನ ನೆಲಕ್ಕೆ ನಮಿಸುವೇನು. ರನ್ನ ಪಂಪರ ಅಪಾರ ಪಾಂಡಿತ್ಯಕುವೆಂಪು ಬೇಂದ್ರೆಯ ಅಗಾಧ […]
ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ
ಲೇಖನ ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ ವಿಜಯಶ್ರೀ ಹಾಲಾಡಿ ಕರ್ನಾಟಕದ ಸಾಹಿತ್ಯ ಜಗತ್ತಿನಲ್ಲಿ `ಮಕ್ಕಳ ಸಾಹಿತ್ಯ’ ಎಂಬೊಂದು ಪ್ರಕಾರ ಹೇಗಿದೆ ಎನ್ನುವ ಕಡೆಗೆ ಯೋಚನೆ ಹರಿಸಿದರೆ ಬಹಳ ಖೇದವೂ, ಆಶ್ಚರ್ಯವೂ ಉಂಟಾಗುತ್ತದೆ. ಖೇದ ಏಕೆಂದರೆ ಏಕಕಾಲದಲ್ಲಿ ನಮ್ಮ ವರ್ತಮಾನವೂ, ಭವಿಷ್ಯವೂ ಆಗಿರುವ ಮಕ್ಕಳಿಗಾಗಿ ಇರುವ ಸಾಹಿತ್ಯ ಅಲಕ್ಷ್ಯವಾಗಿರುವುದಕ್ಕೆ. ಆಶ್ಚರ್ಯವೇಕೆಂದರೆ ಇಂತಹ ತಿರುಳನ್ನೇ ನಿರ್ಲಕ್ಷಿಸಿ ಇಡೀ ಸಾಹಿತ್ಯಲೋಕ ನಿಶ್ಚಿಂತೆಯಿಂದ ಇದ್ದು ಬಿಟ್ಟಿರುವುದಕ್ಕೆ! ಸಾಹಿತ್ಯ ವಲಯದ ಹಲವರೂ, ಸಂಸ್ಥೆ-ಅಂಗಸಂಸ್ಥೆಗಳೂ, ಸ್ವತಃ ಬರಹಗಾರರೂ, ಓದುಗರು ಎಲ್ಲರೂ ಸೇರಿ ಪಕ್ಕಕ್ಕೆ ಎತ್ತಿಟ್ಟು ಮರೆತುಬಿಟ್ಟ ಒಂದು […]
ಮಕ್ಕಳಿಗೆ ಬದುಕಿನ ಪಾಠ
ಲೇಖನ ಮಕ್ಕಳಿಗೆ ಬದುಕಿನ ಪಾಠ ನಿಖಿಲ ಎಸ್. ಮಕ್ಕಳಿಗೆ ಬೇಕು ಶಿಕ್ಷಣದ ಜೊತೆಗೆ ಜೀವನದ ಪಾಠ.ಒಬ್ಬ ತಂದೆ ತಾನು ಅನುಭವಿಸಿದ ನೋವು ನನ್ನ ಮಕ್ಕಳಿಗೆ ಬರಬಾರದು ಎನ್ನುವಷ್ಟು ಚೆನ್ನಾಗಿ ಓದಿಸಿ,ಒಂದು ಒಳ್ಳೆಯ ನೌಕರಿ ಸೇರಿಸಬೇಕು, ಎಂಬ ಭಾವನೆ ಹೆಚ್ಚಿನ ಪೋಷಕರದ್ದಾಗಿರುತ್ತದೆ. ಇದು ಸಹಜ ಹಾಗೆಯೇ ಇದು ತಪ್ಪಲ್ಲ. ಆದರೆ ಮಕ್ಕಳಿಗೆ ಕಷ್ಟವೇ ಇರಬಾರದು ಎಂದು ಮುದ್ದಿನಿಂದ ಬೆಳೆಸುವುದರಿಂದ ಜೀವನದ ಶಿಕ್ಷಣ ಪಾಠ ಕಲಿಸದೆ ಕೇಳಿದೆಲ್ಲವನ್ನು ತಕ್ಷಣವೇ ಅವರ ಕೈಗೆಟಕುವಂತೆ ನೀಡುವುದರಿಂದ ಮಕ್ಕಳು ಹಣವನ್ನು ಗೆಲ್ಲುತ್ತಾರೆ ವಿನಹ ಜೀವನವನ್ನಲ್ಲ.“ಮಕ್ಕಳಿಗೆ […]
ಮಕ್ಕಳ ಕವಿತೆ
ಧೂರ್ತ ಆಮೆ ನೀ.ಶ್ರೀಶೈಲ ಹುಲ್ಲೂರು ಹಂಸವೆರಡು ಕೊಳದ ಬಳಿನೀರನರಸಿ ಬಂದವುನೀರು ಕುಡಿದು ತಣಿದ ಮೇಲೆಆಮೆ ನೋಡಿ ನಿಂದವು ಹರಟೆ ಮಲ್ಲ ಆಮೆ ತಾನೆಕೊಳದ ರಾಜನೆಂದಿತುಅದನು ಇದನು ಏನೊ ಹೇಳಿಅವುಗಳ ತಲೆ ತಿಂದಿತು ಸರಿ,ನಾವು ಬರುವೆವಿನ್ನುಮತ್ತೆ ಸಿಗುವೆವೆಂದವುಬಿಡದ ಆಮೆ ನಡೆಯ ನೋಡಿಮನದಿ ತಾವೆ ನೊಂದವು ನನಗೆ ಕೊಳದ ಸಂಗ ಸಾಕುನದಿಯಲೀಜಬೇಕುಹಾಡಿ ಜಿಗಿದು ಕುಣಿದು ತಣಿದುಜಲದಿ ತೇಲಬೇಕು ದಮ್ಮಯ್ಯ ಎನುವೆ ನಾನುಮಾಡಿ ನೀವ್ ಉಪಾಯವಏನೆ ಬಂದರೂ ಸರಿಯೆಗೆಲುವೆ ನಾ ಅಪಾಯವ ಹಂಸವೆರಡು ಬಡಿಗೆ ತಂದುಆಚೆ ಈಚೆ ಹಿಡಿದವುನಡುವೆ ಆಮೆ ಬಡಿಗೆ […]
ಮಕ್ಕಳ ಕವಿತೆ
ಇರುವೆ-ಆನೆ ಗಣಪ ಮತ್ತು ಪುಟ್ಟಿ ವಿಜಯಶ್ರೀ ಹಾಲಾಡಿ ಗಣಪನ ತಿಂಡಿ ಇರುವೆ ತಿಂದರೆತಪ್ಪು ಏನಮ್ಮಆನೆಮರಿಯೇ ಗಣಪ ಎಂದುಅಜ್ಜಿ ಅಂದಿಲ್ವ? ಆನೆಗೆ ಇರುವೆ ಗೆಳೆಯನು ತಾನೇನಾನೇ ನೋಡಿಲ್ವಕಾಡಿನ ಬಿಲದಲಿ ಹುಲ್ಲಿನ ಬೀಜಕೂಡಿ ಹಾಕಿಲ್ವ? ಹುಲ್ಲು ಮೊಳೆತು ಮಳೆಯ ಬೆರೆತುಆನೆಯು ತಿಂದಿಲ್ವಆನೆಗು ಇರುವೆಗು ಭೇದವೆ ಇಲ್ಲಬೆಲ್ಲ ಕದ್ದಿಲ್ವ? ಪುಟ್ಟಿಯ ಮಾತು ಸಿಡಿಯೋ ಅರಳುತಲೆಯು ಕೆಟ್ಟಿಲ್ವ!!ಅಮ್ಮ ಅಪ್ಪ ಅಜ್ಜಿ ಅಜ್ಜಬಿದ್ದು ನಕ್ಕಿಲ್ವ? ******************************
ಮಕ್ಕಳ ವಿಭಾಗ
ಬಾವುಟ ಪದ್ಯ ಮಲಿಕಜಾನ ಶೇಖ ಅತ್ತ ನೋಡು ಇತ್ತ ನೋಡು ಸುತ್ತ ನೋಡು ಎತ್ತ ನೋಡುಬೀದಿ ನೋಡು ಕೇರಿ ನೋಡುನೋಡು ನೀನು ಬಾವುಟ ಮಾಡು ನೀನು ಸೆಲ್ಯೂಟ್… ಕೆಸರಿ ಬಿಳಿ ಹಸಿರು ಮೂರು ಬಣ್ಣ ನಡುವೆ ಚಕ್ರ ಒಂದು ನೀಲಿ ನೋಡು ಸತ್ಯ ಶಾಂತಿ ನ್ಯಾಯ ಪ್ರೀತಿತ್ಯಾಗ ಶೌರ್ಯ ನೀತಿ ಮೌಲ್ಯಐಕ್ಯ ಒಂದು ಪ್ರತೀಕ ನೋಡು ಪರತಂತ್ರವ ಕಳಚಿ ಬಿಟ್ಟುಸ್ವಾತಂತ್ರವ ಮೆರೆಸಿ ಕೊಟ್ಟುದೇಶದೊಂದು ಪ್ರತೀಕ ನೋಡು ಮೆಡಂ ಕಾಮಾ ಹಾರಿಸಿದಭಗತ ಗುರು ಪ್ರೇಮಿಸಿದಗಾಂಧೀನೆಹರು ಪ್ರೀತಿಸಿದ ಪ್ರತೀಕ ನೋಡು ಹಲವು ಭಾವ ಹಲವು ಭಾಷೆಹಲವು […]
ಬೆಕ್ಕು -ನಾಯಿಗಳ ಹುಲ್ಲಿನೌಷಧ!
ಅನುಭವ ಕಥನ(ಮಕ್ಕಳಿಗಾಗಿ) ವಿಜಯಶ್ರೀ ಹಾಲಾಡಿ ‘ಮುದೂರಿ’ ಒಂದು ಸಣ್ಣ ಹಳ್ಳಿ. ಅಲ್ಲಿ ವಿಜಿಯ ಮನೆ . ಅವರ ಊರಿನಲ್ಲಿ ಫರ್ಲಾಂಗು ದೂರಕ್ಕೊಂದೊಂದು ಮನೆಗಳು. ಆ ಊರು ಕಾಡು-ಗುಡ್ಡಗಳ ನಡುವೆ ಅವಿತುಕೊಂಡಿತ್ತು. ಜನರ ಸಂಖ್ಯೆಯೂ ಕಡಿಮೆ. ಅಲ್ಲಿಂದ ವಾಹನ ಓಡಾಡುವ ರಸ್ತೆ ತಲುಪಲು ಎರಡೂವರೆ ಮೈಲು ನಡೆದುಹೋಗಬೇಕಿತ್ತು. ಹಾಗೆ ಹೋದಾಗ ಸಿಗುವುದೇ ಹಾಲಾಡಿ. ಅಲ್ಲಿ ಕೆಲವು ಅಂಗಡಿಗಳು, ಪೋಸ್ಟ್ ಆಫೀಸ್, ಶಾಲೆ, ಹಾಲಿನ ಡೈರಿ, ಬ್ಯಾಂಕು ಇದ್ದವು . ಬಸ್ಸುಗಳು ಓಡಾಡುತ್ತಿದ್ದವು. ಡಾಕ್ಟರರನ್ನು ಕಾಣಬೇಕಾದರೆ ಅಲ್ಲಿಂದ ಬಸ್ಸು […]