ಅಂಕಣ ಬರಹ ಸಾಮಾನ್ಯ ಸಂಗತಿಗಳಲ್ಲೇ ಅಸಾಮಾನ್ಯ ಬೆರಗನ್ನು ಹಿಡಿದಿಡುವ ಉಮಾ ಮುಕುಂದರ ಕವಿತೆಗಳು . ಸಂಗಾತಿಗಾಗಿ ಈ ಅಂಕಣವನ್ನು ಆರಂಭಿಸಿದಾಗ ಫೇಸ್ಬುಕ್ಕಿನ ಕವಿತೆಗಳ ವಿಶ್ಲೇಷಣೆ ಅಷ್ಟೇನೂ ಕಷ್ಟವಾಗದು ಮತ್ತು ನನ್ನ ಇಷ್ಟೂ ದಿನದ ಕಾವ್ಯದ ಓದು ಅದನ್ನು ಪೊರೆಯುತ್ತದೆಂದೇ ಅಂದುಕೊಂಡಿದ್ದೆ. ಆದರೆ ಫೇಸ್ಬುಕ್ಕಿನಲ್ಲಷ್ಟೇ ಮೊದಲು ಪ್ರಕಟಿಸಿ ಆ ಮಾಧ್ಯಮದ ಮೂಲಕವೇ ಬೇರೆಡೆಯೂ ಖ್ಯಾತರಾದ ಅನೇಕ ಹೆಸರುಗಳು ಆನಂದ ಮತ್ತು ಆಶ್ಚರ್ಯವನ್ನು ಉಂಟು ಮಾಡುವುದರ ಜೊತೆಗೇ ಈವರೆವಿಗೂ ಪತ್ರಿಕೆಗಳಲ್ಲಿ ಪ್ರಕಟಿಸದೆಯೂ ತಮ್ಮ ಆಳದನುಭವಗಳಿಗೆ ಕವಿತೆಯ ರೂಪ ಕೊಡುವುದಕ್ಕಷ್ಟೇ ಸೀಮಿತವಾಗದೇ […]
ಅಂಕಣ ಬರಹ ಹೊಸ ದನಿ ಹೊಸ ಬನಿ ೧೬ ಹುಚ್ಚು ಆದರ್ಶಗಳಿಲ್ಲದ ಭಾವ ಭಿತ್ತಿಯ ಸಹಜ ನಿರೂಪಣೆ ನಾಗರೇಖಾ ಗಾಂವಕರ್ ಕವಿತೆಗಳು ಅವಳ ಮಾಂಸ ಮಜ್ಜೆಯ ನೆರಳು, ಮುಟ್ಟಿನ ವಾಸನೆಬಡಿಯದೇ, ಪೊಗರಿದ ಅವನೆಂಬವನ ಹುಡುಕಿ ಸೋತಿದ್ದೇನೆ, ಹುಡುಕಿ ಕೊಡು ಹೇ! ಪ್ರಭು. ಎಂದು ಗಟ್ಟಿಯಾಗಿ ಪ್ರಶ್ನಿಸುತ್ತಲೇ ಸುರುವಾಗುವ ಈ ಕವಿತೆ ಗಂಡಿನ ಅಹಮ್ಮನ್ನು ಗುರಾಯಿಸುತ್ತಲೇ ಕಡೆಗೆ ಆದರವನ ದೇವರಿಗೆ ಅವಳ ಮಾಂಸ ಮಜ್ಜೆಯ ನೆರಳು, ಮುಟ್ಟಿನ ವಾಸನೆ ಮೈಲಿಗೆಯಂತೆ. ಆ ದೇವನೆಂಬವನ ಹುಡುಕಿ ಕೊಡು ಹೇ! ಪ್ರಭು […]
ಅಂಕಣ ಬರಹ ಹೊಸ ದನಿ ಹೊಸ ಬನಿ – ೧೫. ದೀರ್ಘ ಶೀರ್ಷಿಕೆಗಳ ಭಾರದಲ್ಲೂ ಸರಳ ನಡಿಗೆಯ ಮಂಜುಳ. ಡಿ ಕವಿತೆಗಳು ಮಂಜುಳ ಡಿ ಈಗಾಗಲೇ ವಿಶ್ವವಾಣಿ ಪತ್ರಿಕೆಯ ಅಂಕಣ ಬರಹಗಾರರಾಗಿ ಕವಯತ್ರಿಯಾಗಿ ಖ್ಯಾತರಾದವರು. ಈಗಾಗಲೇ ಮೂರು ಪುಸ್ತಕಗಳನ್ನು ಪ್ರಕಟಿಸಿರುವ ಅವರು ಬೆಂಗಳೂರಿನವರು. ಅವರ ಫೇಸ್ಬುಕ್ ಬರಹಗಳಲ್ಲಿ ಗದ್ಯ ಪದ್ಯಗಳ ಮಿಶ್ರಣವನ್ನು ಕಾಣಬಹುದು. “ಆಸೆಯ ಕಂದೀಲು” ಕವನ ಸಂಕಲನಕ್ಕೆ ಕಾವ್ಯ ವ್ಯಾಮೋಹಿ ವಾಸುದೇವ ನಾಡಿಗರು ಮುನ್ನುಡಿ ಬರೆದಿರುವುದರಿಂದ ಸಂಕಲನದ ಗುಣ ನಿಷ್ಕರ್ಷೆ ಸುಲಭದ್ದೇ ಆಗಿದೆ. ಈ ಸಂಕಲನ […]
ಅಂಕಣ ಬರಹ ಹೊದಬನಿ-ಹೊಸದನಿ-14 ಅಗತ್ಯಕ್ಕಿಂತ ಲಂಬಿಸಿಯೂ ಹ್ರಸ್ವವಾಗೇ ಉಳಿಯುವ ಆಸ್ಪರಿಯವರ ಕವಿತೆಗಳು ಚನ್ನಬಸವ ಆಸ್ಪರಿ . ಅವ್ವನೂ ಕಸೂತಿ ಹಾಕುತ್ತಿದ್ದಳು ಅಪ್ಪನ ತೂತುಬಿದ್ದ ಬನಿಯನ್ನಿನ ಮೇಲೆ ಉಟ್ಟರೆ ಅಂಡು ಕಾಣಿಸುವ ನನ್ನ ದೊಗಲೆ ಚಡ್ಡಿಗೆ ಅಲ್ಲಲ್ಲಿ ಹರಿದ ಪಾಟೀಚೀಲಕ್ಕೆ ಎಂದು ತನ್ನೊಳಗಿನ ಸಂಕಟಗಳನ್ನು ಕವಿತೆಯಾಗಿಸುವ ಚನ್ನಬಸವ ಆಸ್ಪರಿ ಫೇಸ್ಬುಕ್ಕಿನಲ್ಲಿ ಬರೆಯುತ್ತಿರುವ ಹಲವು ಹೆಸರುಗಳ ನಡುವೆ ಅನುಭವದ ಆಧಾರ ಪಡೆದ ಸಶಕ್ತ ಕವಿತೆಗಳನ್ನು ಅಪರೂಪಕ್ಕೆ ಪ್ರಕಟಿಸುತ್ತಿರುತ್ತಾರೆ. ನಾವೆಲ್ಲ ಅವ್ವ ಎನ್ನುವ ಕವಿತೆಯ ಸರ್ವ ಸ್ವಾಮ್ಯವನ್ನೂ ಲಂಕೇಶರಿಗೆ ಅರ್ಪಿಸಿಬಿಟ್ಟಿರುವಾಗಲೂ ಒಬ್ಬೊಬ್ಬರಿಗೆ […]
ಅಂಕಣ ಬರಹ ಹೊಸ ದನಿ – ಹೊಸ ಬನಿ-೧೩. ಸಿದ್ಧಾಂತದ ಚೌಕಟ್ಟಿನಲ್ಲೇ ಉಳಿದೂ ಬೆಳಕಿಗೆ ತಡಕುವ ವಸಂತ ಬನ್ನಾಡಿ ಕವಿತೆಗಳು ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನಲ್ಲಿ ವಾಣಿಜ್ಯ ಪಾಠ ಕಲಿಸುತ್ತಿದ್ದ ಶ್ರೀ ವಸಂತ ಬನ್ನಾಡಿ ಅಲ್ಲಿನ ರಂಗ ಅಧ್ಯಯನ ಕೇಂದ್ರದ ಸಂಚಾಲಕರಾಗಿಯೂ ಪ್ರಸಿದ್ಧರು. ಶಬ್ದಗುಣ ಹೆಸರಿನ ಅರ್ಧವಾರ್ಷಿಕ ಸಾಹಿತ್ಯ ಪತ್ರಿಕೆಯನ್ನು ಅತ್ಯಂತ ಶ್ರೀಮಂತವಾಗಿ ಸಂಪಾದಿಸುತ್ತಿದ್ದವರು ಅವರು. ಶಬ್ದಗುಣ ಕೂಡ ಉಳಿದೆಲ್ಲ ಹಲವು ಸಾಹಿತ್ಯ ಪತ್ರಿಕೆಗಳ ಹಾಗೇ ಪ್ರಾರಂಭದಲ್ಲಿ ಅತಿ ಉತ್ಸಾಹ ತೋರುತ್ತಲೇ ಮೂರು ಸಂಚಿಕೆಗಳನ್ನು ಸಂಪಾದಿಸುವಷ್ಟರಲ್ಲೇ ಅಕಾಲಿಕ ಮರಣಕ್ಕೆ […]
ಅಂಕಣ ಬರಹ ಹೊಸ ದನಿ ಹೊಸ ಬನಿ-೧೨. ಚದುರಿದ ಚಿತ್ರಗಳಲ್ಲೇ ಅರಳುವ ಹೂವುಗಳಂಥ ನರಸಿಂಹ ವರ್ಮ ಕವಿತೆಗಳು ವಿಟ್ಲದ ನರಸಿಂಹ ವರ್ಮ “ಆಕಾಶದ ಚಿತ್ರಗಳು” ಹೆಸರಿನ ಕವನ ಸಂಕಲನವನ್ನು ೨೦೧೯ರಲ್ಲಿ ಪ್ರಕಟಿಸುವುದರ ಮೂಲಕ ಈಗಾಗಲೇ ಸಾಹಿತ್ಯ ಲೋಕಕ್ಕೆ ಪರಿಚಿತರಾಗಿದ್ದಾರೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಾನೂನು ಅಧಿಕಾರಿಯಾಗಿ ಕೆಲಸ ಮಾಡುತ್ತಿರುವ ಅವರ ಕವಿತೆಗಳಲ್ಲಿ ಹುಡುಕಿದರೂ ವಾದ ವಿವಾದಗಳಾಗಲೀ, ವ್ಯವಸ್ಥೆಯ ಪರ ಅಥವ ವಿರೋಧದ ನಿಲುವಾಗಲೀ ಇಲ್ಲದೇ ಇರುವುದು ವಿಶೇಷ. ಜೊತೆಗೇ ವರ್ತಮಾನದ ಸಂಗತಿಗಳಿಗೆ ಥಟ್ಟನೆ ಪ್ರತಿಕ್ರಯಿಸಿ ಪದ್ಯವೊಂದನ್ನು […]
ಅಂಕಣ ಬರಹ ಹೊಸ ದನಿ-ಹೊಸ ಬನಿ-೧೧ ಭಾವಕ್ಕಿಂತಲೂ ಬುದ್ಧಿಯ ನಡೆಯಲ್ಲೇ ತವಕಿಸುವ ದಿಲೀಪ ಕುಮಾರ್ ಪದ್ಯಗಳು. ಹೊಸ ಕಾಲದ ಹುಡುಗ ಹುಡುಗಿಯರು ಫೇಸ್ಬುಕ್ ವಾಟ್ಸ್ ಆಪಿನಂಥ ಸಾಮಾಜಿಕ ಜಾಲತಾಣದಲ್ಲಿ ಬರೆದುದನ್ನು ತಿದ್ದುವ ಮೊದಲೇ ಪ್ರಕಟಿಸಿ ಬಿಡುವುದರಿಂದ ನಿಜಕ್ಕೂ ಕವಿತೆಗಳಾಗುವ ತಾಕತ್ತಿದ್ದ ರಚನೆಗಳು ಕೂಡ ಗರ್ಭಪಾತಕ್ಕೆ ಸಿಲುಕಿ ಅಂಥ ತಾಣಗಳಲ್ಲೇ ತಿಣುಕುತ್ತಿರುವ ಕೆಲವರ ಲೈಕು ಈಮೋಜಿ ಕಮೆಂಟುಗಳಿಂದಲೇ ಉಬ್ಬಿ ಹೋಗಿ ಆ ಕವಿ ಮಿಣುಕುಗಳು ನಕ್ಷತ್ರಗಳಾಗುವ ಮೊದಲೇ ಉರಿದು ಬಿದ್ದು ಹೋಗುತ್ತಿರುವ ಕಾಲವಿದು. ಅಪರೂಪಕ್ಕೆ ಹೊಸತಲೆಮಾರಿನ ಕೆಲವು ಹುಡುಗ […]
ಅಂಕಣ ಬರಹ ಹೊಸ ದನಿ ಹೊಸ ಬನಿ – ೧೦. ಹಂಗೆ ಇಲ್ಲದ ಖಬರಿನೊಳಗ ಏನೊ ಗುನುಗಿದ್ಹಾಂಗ ಚಂ ಸು ಕವಿತೆಗಳು ರಾಣೇಬೆನ್ನೂರು ಸಮೀಪ ಕೂನಬೇವು ಗ್ರಾಮದ ಸಾಹಿತಿ ಚಂಸು (ಚಂದ್ರಶೇಖರ ಸುಭಾಸ ಗೌಡ ಪಾಟೀಲ ಅಂದರೆ ಯಾರಿಗೂ ಗೊತ್ತಾಗುವುದಿಲ್ಲ!) ಅವರ “ಬೇಸಾಯದ ಕತಿ” ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ೨೦೧೮ನೇ ಸಾಲಿನ ಸಿಂಪಿ ಲಿಂಗಣ್ಣ ದತ್ತಿ (ಜೀವನಚರಿತ್ರೆ) ಪ್ರಶಸ್ತಿ ಪ್ರಕಟವಾದಾಗ ಅವರನ್ನು ಅಭಿನಂದಿಸಲು ಫೋನ್ ಮಾಡಿದ್ದೆ. ಆ ಲೇಖನಗಳಲ್ಲಿ ಕೆಲವನ್ನು ಓದಿದ್ದರಿಂದಾಗಿ ಬೇಸಾಯದ ಬದುಕಿನ ಹಿಂದಣ […]
ಅಂಕಣ ಬರಹ ಹೊಸ ದನಿ – ಹೊಸ ಬನಿ – ೯ ಅರ್ಥಕ್ಕೂ ಮೀರಿದ ಅನುಭವಗಳಲ್ಲಿ ಅರಳುವ “ಶ್ರೀ ತಲಗೇರಿ” ಕವಿತೆಗಳು ಅರ್ಥಕ್ಕೂ ಮೀರಿದ ಅನುಭವಗಳಲ್ಲಿ ಅರಳುವ “ಶ್ರೀ ತಲಗೇರಿ” ಕವಿತೆಗಳು. ಉತ್ತರ ಕನ್ನಡ ಜಿಲ್ಲೆ ಕನ್ನಡ ಸಾಹಿತ್ಯ ಮತ್ತು ರಂಗಭೂಮಿಗೆ ತನ್ನದೇ ಆದ ವಿಶೇಷ ಕೊಡುಗೆಗಳನ್ನು ನೀಡುತ್ತಲೇ ಬಂದಿದೆ. ಯಶವಂತ ಚಿತ್ತಾಲ, ಜಯಂತ ಕಾಯ್ಕಿಣಿಯಂಥ ಅದ್ಭುತ ಪ್ರತಿಭೆಗಳನ್ನು ಮುಂಬಯಿಯ ಮಹಾಕೂಪಕ್ಕೆ ತಳ್ಳಿಯೂ ಅವರಿಂದ ಆ ಮಹಾನಗರದ ಸಕಲ ಸೂಕ್ಷ್ಮಗಳ ಪರಿಚಯ ಮಾಡಿಸುತ್ತಲೇ ತನ್ನದೇ ಆದ ಹವ್ಯಕ […]
ಹೊಸ ದನಿ – ಹೊಸ ಬನಿ – ೮. ತಲೆ ಬರಹ ಇಲ್ಲದೆಯೂ ತಲೆದೂಗಿಸುವ ನಾಗಶ್ರೀ ಎಸ್ ಅಜಯ್ ಕವಿತೆಗಳು. ಬೆಂಗಳೂರಿನ ಗಾಂಧಿ ಬಜಾರಿಗೆ ಕಾಲ್ನಡಿಗೆಯ ಅಂತರದ ಬಿ.ಪಿ.ವಾಡಿಯಾ ಸಭಾಂಗಣ. ಕವಿ ವಾಸುದೇವ ನಾಡಿಗರ ಕವನ ಸಂಕಲನದ ಬಿಡುಗಡೆ ಸಮಾರಂಭ. ವೇದಿಕೆಯಲ್ಲಿ ಸರ್ವ ಶ್ರೀ ಮೂಡ್ನಾಕೂಡು ಚಿನ್ನಸ್ವಾಮಿ, ಜಿ.ಕೆ.ರವೀಂದ್ರ ಕುಮಾರ್, ಸುಬ್ರಾಯ ಚೊಕ್ಕಾಡಿಯಂಥ ಅತಿರಥ ಮಹಾರಥರು. ಪುಸ್ತಕ ಬಿಡುಗಡೆಯ ಆತಂಕದಲ್ಲಿ ಕವಿ ದಂಪತಿ. ತುಂಬಿದ ಸಭೆಯ ಗೌರವಾನ್ವಿತರಿಗೆಲ್ಲ ಕಲಾಪದ ಸೊಗಸು ಮತ್ತು ಸಂದರ್ಭಕ್ಕೆ ತಕ್ಕ ಕವಿ ನುಡಿಗಳನ್ನೂ […]