ಶ್ರೀಮಂತ ಅನುಭವಗಳ ಸಹಜ ಒಡಂಬಡಿಕೆ ಸುಧಾ ಆಡುಕಳ ಮೂಲತಃ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಆಡುಕಳದವರು. ಪ್ರಸ್ತುತ ಉಡುಪಿಯಲ್ಲಿ ಗಣಿತ ಶಿಕ್ಷಕಿಯಾಗಿದ್ದಾರೆ. ಸಾಹಿತ್ಯ ಕೃಷಿಯಲ್ಲಿ ಆಸಕ್ತಿ ಇರುವ ಕಾರಣ ರಾಧಾ, ನೃತ್ಯಗಾಥಾ, ಮಕ್ಕಳ ರವೀಂದ್ರ, ನಾರಸಿಂಹ, ಮಕ್ಕಳ ರಾಮಾಯಣ, ಕನಕ-ಕೃಷ್ಣ ಮೊದಲಾದ ನಾಟಕಗಳನ್ನು ರಚಿಸಿದ್ದಾರೆ. ರವೀಂದ್ರ ನಾಥ ಟ್ಯಾಗೋರರ ಚಿತ್ರಾ, ಕೆಂಪುಕಣಗಿಲೆ, ಅವಳ ಕಾಗದ ಮೊದಲಾದ ನಾಟಕಗಳನ್ನು ಕನ್ನಡಕ್ಕೆ ರೂಪಾಂತರಿಸಿದ್ದಾರೆ. ‘ಬಕುಲದ ಬಾಗಿಲಿನಿಂದ’ ಎಂಬ ಅಂಕಣ ಬರಹ ಜಿ.ಎನ್ ಮೋಹನ್ ಸಾರಥ್ಯದ “ಅವಧಿ” ಅಂತರ್ಜಾಲ ಪತ್ರಿಕೆಯಲ್ಲಿ ಪ್ರಕಟವಾಗುತ್ತಿತ್ತು. […]
ಅಂಕಣ ಬರಹ ಘೋಷಣೆಗಳ ನಡುವೆ ರೂಪಕಗಳಿಗೂ ಕಾತರಿಸುವ ಕಲ್ಮೇಶ ತೋಟದ್ ಕವಿತೆಗಳು ಕಲ್ಮೇಶ ತೋಟದ್ . ಮೂರು ಗೇಣಿನಷ್ಟೇ ಅಂತರ ಭಾಸವಾಗುತ್ತಿದ್ದ ಬಾನಹಂದರ ನೋಡಲದೆಷ್ಟು ಸುಂದರ ಆಕಾಶ ಭೂಮಿ ಮಂದಾರ ಅಪ್ಪನ ಹೆಗಲದು ಸುಂದರ ಇಂಥ ಭಾವುಕ ಸಾಲುಗಳಲ್ಲಿ ಅಪ್ಪನ ಹೆಗಲನ್ನು ವರ್ಣಿಸಿ ಅಪ್ಪನನ್ನು ಕುರಿತಂತೆ ಈವರೆಗೂ ಇದ್ದ ಇಮೇಜುಗಳಿಗೆ ಮತ್ತೊಂದು ಹೊಸ ರೂಪಕವನ್ನು ಕೊಡಮಾಡಿರುವ ೨೬ರ ಹರಯದ ಯುವ ಕವಿ ಕಲ್ಮೇಶ ತೋಟದ ಅವರ ಕವಿತೆಗಳನ್ನು ಪರಿಚಯಿಸುವುದಕ್ಕೆ ಸಂತೋಷ ಮತ್ತು ಸಂಭ್ರಮಗಳು ಮೇಳೈಸುತ್ತವೆ. “ಕೌದಿ” ಶೀರ್ಷಿಕೆಯಲ್ಲಿ […]
ಸಹಜ ನಡಿಗೆಯ ರುದ್ರ ನರ್ತನದ ಭಾವಗಳಂತೆ ಕುಮಾರ್ ಹೊನ್ನೇನಹಳ್ಳಿ ಪದ್ಯಗಳು . ಕುಮಾರ್ ಹೊನ್ನೇನಹಳ್ಳಿ ವೃತ್ತಿಯಿಂದ ಶಿಕ್ಷಕ ಮತ್ತು ಶಿಕ್ಷಕರ ತರಬೇತುದಾರ ಅಂದರೆ ರಿಸೋರ್ಸ್ ಪರ್ಸನ್. ಅವರ ವೃತ್ತಿಯ ಕಾರಣ ಅಂದರೆ ಸಂಪನ್ಮೂಲ ವ್ಯಕ್ತಿಯಾಗಿರುವ ಕಾರಣ ಜಗತ್ತಿನ ಸಮಸ್ತ ಆಗು ಹೋಗುಗಳ ಅರಿವು ಮತ್ತು ಅಂಥ ಸಂಗತಿಗಳು ಒಟ್ಟೂ ಸಮಾಜದ ಮೇಲೆ ಬೀರುವ ಪರಿಣಾಮಗಳನ್ನೂ ಪ್ರಮಾಣಗಳನ್ನೂ ಆನುಷಂಗಿಕವಾಗಿ ಅವರು ಪ್ರಸ್ತಾಪಿಸದೇ ಅನ್ಯ ಮಾರ್ಗಗಳು ಇರುವುದಿಲ್ಲ. ಹಾಗಾಗಿಯೇ ಏನೋ ಇವರ ಕವಿತೆಗಳಲ್ಲಿ ಐತಿಹಾಸಿಕ ವ್ಯಕ್ತಿಗಳೂ ವರ್ತಮಾನದ ಸಂಗತಿಗಳೂ ಆಗೀಗ […]
ಡಿ ವಿ ಪ್ರಹ್ಲಾದರ ಆರ್ತ ಯಾಪನೆ “ದಯಾ ನೀ, ಭವಾ ನೀ” ಡಿ ವಿ ಪ್ರಹ್ಲಾದ ತಮ್ಮ ಹೊಸ ಸಂಕಲನ “ದಯಾ ನೀ, ಭವಾ ನೀ” ಸಂಕಲನಕ್ಕೆ ನನ್ನನ್ನೆರಡು ಮಾತು ಬರೆಯಲು ಕೇಳಿದಾಗ ನನಗೆ ಆಶ್ಚರ್ಯ. ಏಕೆಂದರೆ ನಮ್ಮಲ್ಲಿ ಬಹುತೇಕರು ಸ್ವ ಪ್ರತಿಷ್ಠೆ ಮತ್ತು ಒಣ ಸಿದ್ಧಾಂತಗಳನ್ನು ಮೆರೆಸಲು ಈ ನಡುವೆ ಕವಿತೆಯನ್ನೂ ಗುರಾಣಿಯಂತೆ ಬಳಸುತ್ತಿರುವ ಸಂಧಿಗ್ದ ಕಾಲವಿದು. ಈ ಇಂಥ ಕಾಲದಲ್ಲಿ ನಮ್ಮ ಸಂಕಲನಗಳಿಗೆ ಮುನ್ನುಡಿ ಹಿನ್ನುಡಿ ಬೆನ್ನುಡಿಗಳಿಗೆ ನಾವಾಶ್ರಯಿಸುವುದು ಪೀಠಾಧಿಪತಿಗಳ ಬೆನ್ನು ಕೆರೆಯುವ ಸನ್ನಿಧಾನಕ್ಕೆ […]
ನೀಲಿ ನಕ್ಷತ್ರದ ಬೆಡಗಿನ ಪದ್ಯಗಳು ವಿ.ನಿಶಾ ಗೋಪಿನಾಥ್ ವಿನಿಶಾ ಗೋಪಿನಾಥ್ ಫೇಸ್ಬುಕ್ಕಿನಲ್ಲಿ ನಿರ್ಭಿಡೆಯಿಂದ ಬರೆಯುತ್ತಿರುವ ಕೆಲವೇ ಕವಯತ್ರಿಯರ ಪೈಕಿ ಗಮನಿಸಲೇ ಬೇಕಾದ ಹೆಸರು. ಈಗಾಗಲೇ ಒಂದು ಕಥಾ ಸಂಕಲನ ಮತ್ತು ಒಂದು ಕವನ ಸಂಕಲನ ಪ್ರಕಟಿಸಿರುವ ವಿನಿಶಾ ಅವರ ಪದ್ಯಗಳು ಪ್ರೀತಿಯ ನಶೆ ಹೊತ್ತಿರುವ ಮತ್ತು ಸಂಜೆಯ ಏಕಾಂತಗಳಿಗೆ ನಿಜದ ಸಾಥ್ ನೀಡುವ “ನಿಶಾ” (ಹೊತ್ತಿಳಿದ ಮಬ್ಬು ಬೆಳಕಿನ ಸಂಜೆಯ) ಕಾಲದ ಯಶಸ್ವೀ ಪದ್ಯಗಳೇ ಆಗಿವೆ. ಅವರ ಮೊದಲ ಸಂಕಲನ ಪ್ರಕಟಿಸಿರುವುದು “ಶಬ್ದ ಗುಣ” ಸಾಹಿತ್ಯ ಪತ್ರಿಕೆಯ […]
ಪ್ರತಿಮೆಗಳ ಭಾರಕ್ಕೆ ಹೊಯ್ದಾಡುವ ರೂಪ(ಕ)ಗಳು
ಪ್ರತಿಮೆಗಳ ಭಾರಕ್ಕೆ ಹೊಯ್ದಾಡುವ ರೂಪ(ಕ)ಗಳು 80ರ ದಶಕದ ಆಚೀಚಿನ ವರ್ಷಗಳಲ್ಲಿ ಕನ್ನಡ ಸಾಹಿತ್ಯದಲ್ಲಿ ಫಿಲಾಸಫಿಗಳ ಗುಂಗು ಶುರುವಾಯಿತು. ಇದ್ದಕ್ಕಿದ್ದ ಹಾಗೆ ರಜನೀಶ್, ಬುದ್ಧ, ಜಿಡ್ಡು ಕೃಷ್ಣಮೂರ್ತಿ, ಯೂಜಿ ಮುಂತಾದವರು ಪ್ರಚಾರಕ್ಕೆ ಬಂದರು. ಇವರೆಲ್ಲ ಹೇಳಿದ್ದನ್ನು ಕತೆಗಳಲ್ಲೂ ಕವನಗಳಲ್ಲೂ ಲೇಖನಗಳಲ್ಲೂ ತಂದು ಕೊನೆಗೆ ಆ ಹೆಸರುಗಳನ್ನು ಕೇಳಿದರೆ ಕಿರಿಕಿರಿಯಾಗುವಂತೆ ಮಾಡುವಲ್ಲಿ ನಮ್ಮ ಲೇಖಕರೂ ಸಾಹಿತಿಗಳೂ ಯಶಸ್ವಿಯಾದರು.ಈಗಲೂ ಕೆಲವರು ಲೋಹಿಯಾವಾದವನ್ನು ಮತ್ತೆ ಕೆಲವರು ಅಂಬೇಡ್ಕರರನ್ನೂ ಕೆಲವರು ಗಾಂಧಿಯನ್ನೂ ಹೀಗೇ ಬಳಸುತ್ತ, ಬೆದಕುತ್ತ ತಮ್ಮ ಬರವಣಿಗೆಗೆ ಬಳಸುತ್ತ ಆ ಅಂಥವರ ಹೆಸರನ್ನೇ […]
“ಭವ”ದ ಬಂಧಗಳಲ್ಲೇ ಅರಳಿದ ಸಾರ್ಥಕ ಸಾಲುಗಳು
“ಭವ”ದ ಬಂಧಗಳಲ್ಲೇ ಅರಳಿದ ಸಾರ್ಥಕ ಸಾಲುಗಳು ಫೇಸ್ಬುಕ್ಕಿನ ತುಂಬ ಹರಡುವ ಪದ್ಯದ ಘಮಲಿಗೆ ತಮ್ಮ ದನಿಯನ್ನೂ ಸೇರಿಸಲು ಹಾತೊರೆಯುತ್ತಿರುವ ಅಸಂಖ್ಯ ಕವಿ ಮನಸ್ಸುಗಳ ನಡುವೆ ಕೊಟ್ರೇಶ್ ತಂಬ್ರಳ್ಳಿ ಅಮರಗೋಳಮಠ ಅವರದು ಗಮನಿಸಲೇಬೇಕಾದ ಹೆಸರು. ಸ್ವಲ್ಪ ಹದವೆನ್ನಿಸುವ ಯಾರದೇ ಕವಿತೆಗಳಿಗೆ ತಕ್ಷಣದ ಪ್ರತಿಕ್ರಿಯೆ ನೀಡುವ ಕೊಟ್ರೇಶ್ ಆಗೀಗ ತಮ್ಮ ರಚನೆಗಳನ್ನೂ ಈ ಸಾಮಾಜಿಕ ಜಾಲ ತಾಣದಲ್ಲಿ ಹರಿ ಬಿಟ್ಟು ಪ್ರತಿಕ್ರಿಯೆಗೆ ಕಾಯುತ್ತಾರೆ. ನಿಜಕ್ಕೂ ಚಂದ ಇರುವ ಅವರ ನಿಜದ ರಚನೆಗಳಿಗಿಂತ ತಕ್ಷಣಕ್ಕೆ ಕೋಪ ತರಿಸುವ, ಸ್ವಲ್ಪ ಒರಟೇ ಎನ್ನಿಸುವ […]
ಅಂಕ(ಣ)ದ ಪರದೆ ಸರಿಯುವ ಮುನ್ನ.
ಸಂಗಾತಿ ಸಾಹಿತ್ಯ ಪತ್ರಿಕೆಯನ್ನು ಅದರ ನಿಲುವನ್ನೂ ಹಲವು ಗೆಳೆಯರು ಗಮನಿಸಿರಬಹುದು. ಸದಾ ಹೊಸ ಆಲೋಚನೆಗಳಿಗೆ ಮತ್ತು ಆಧುನಿಕ ಕಾಲದ ಸಂವೇದನೆಗೆ ವೇದಿಕೆಯಾಗಿರ ಬಯಸುವ ಸಂಗಾತಿ ಸ್ಥಾಪಿತ ಹಿತಾಸಕ್ತಿಗಳನ್ನು ಮತ್ತು ಬರಿಯ ತೋರಿಕೆಯನ್ನು ಎಂದಿಗೂ ಎತ್ತಿಹಿಡಿದಿಲ್ಲ. ಅವರು ಇವರು ಎಂದಲ್ಲ. ಫೇಸ್ಬುಕ್ ಈ ನಡುವೆ ಬಹುತೇಕರ ನಿರಂತರ ನಿಲುದಾಣ, ತಂಗುದಾಣ, ಹಾಗೂ ಅಭ್ಯಾಸದ ಮೈದಾನವೂ ಆಗಿದೆ. ಹಲವರನ್ನು ಫಾಲೋ ಮಾಡುತ್ತ ಅವರ ರಚನೆಗಳನ್ನು ಗಮನಿಸಿದರೆ ದಿನದಿಂದ ದಿನಕ್ಕೆ ಪ್ರಭೃದ್ಧರಾಗುತ್ತಿರುವ ಹಲವರಿದ್ದಾರೆ. ಇನ್ನು ಒಂದೋ ಎರಡೋ ಸಂಕಲನ ತಂದೂ ಫೇಸ್ಬುಕ್ಕಲ್ಲಿ […]