Category: ಪ್ರಬಂಧ

ಬೀದಿಯ ಪ್ರಪಂಚ….

ಲಲಿತ ಪ್ರಬಂಧ ಬೀದಿಯ ಪ್ರಪಂಚ…. ಟಿ.ಎಸ್.ಶ್ರವಣಕುಮಾರಿ ಹಾದಿ ಬೀದಿಗಳಿಗೆ ತನ್ನದೇ ಒಂದು ಆಕರ್ಷಣೆಯಿದೆ. ಅದರದ್ದೇ ಒಂದು ಪ್ರಪಂಚ. ಎಂಥ ಅಳುತ್ತಿರುವ ಪುಟ್ಟ ಮಕ್ಕಳನ್ನೂ ಎತ್ತಿಕೊಂಡು ಬೀದಿಗೆ ಕರೆದುಕೊಂಡು ಬಂದರೆ ಕೆಲವೇ ಕ್ಷಣಗಳಲ್ಲಿ ಅವುಗಳ ಅಳು ಮಾಯ. ಅವುಗಳಿಗೆ ತೋರಿಸುವುದಕ್ಕೆ ಇಡಿಯ ಪ್ರಪಂಚವೇ ಅಲ್ಲಿದೆ. “ಪುಟ್ಟೂ ಅಲ್ನೋಡು ಕಾರು.. ಬಂತು ಬಂತು ಬಂತು…. ಈಗ ಸ್ಕೂಟರ್ ನೋಡೋಣ.. ಮಾಮಾ ಬಂದ್ಮೇಲೆ ಸ್ಕೂಟರ್‌ನಲ್ಲಿ ರೌಂಡ್ ಹೋಗ್ತೀಯಾ…  ಇದೇನಿದು..? ಸ್ಕೂಲು ವ್ಯಾನು.. ಮುಂದಿನ್ವರ್ಷದಿಂದ ನೀನೂ ಸ್ಕೂಲಿಗೆ ಹೋಗ್ತೀಯಾ ಅಣ್ಣಾ ತರ…. ಇಲ್ನೋಡು […]

ಹೊರಗೋಡೆ

ಪ್ರಬಂಧ ಹೊರಗೋಡೆ ಗೋಡೆ ಎಂಬುದು ಹಲವಾರು ವಸ್ತುಗಳು, ವಿಶೇಷಗಳು ಹಾಗೂ ವಿಷಯಗಳನ್ನು ಮುಚ್ಚಿಡಬಹುದಾದ ಇಟ್ಟಿಗೆ, ಮರಳು, ಸುಣ್ಣ, ಬೆಲ್ಲ, ಸಿಮೆಂಟುಗಳಿಂದ ಕಟ್ಟಿದ ಒಂದು ರಚನೆ ಎಂದುಕೊಳ್ಳುವುದು ಒಂದು ಬಗೆಯಲ್ಲಿ ಒಪ್ಪಬಹುದಾದ ವಿಷಯವಾದರೂ, ಹಲವಾರು ಕಾರಣಗಳಿಂದ ಗೋಡೆಗಳು ನಮ್ಮನ್ನು ಪೂರ್ವಜರೊಂದಿಗೆ ಬೆಸೆಯುತ್ತಲೇ ಪ್ರಸ್ತುತ ಜೀವನದಲ್ಲಿ ಆಸಕ್ತಿ ಮೂಡಿಸುತ್ತಾ ಹೋಗುತ್ತವೆ. ಪ್ರತಿಯೊಂದು ಗೋಡೆಯನ್ನು ಕಟ್ಟಲು ಆರಂಭಿಸಿದ ಕೂಡಲೇ ಹೊರಗೋಡೆ ಹಾಗೂ ಒಳಗೋಡೆ ಎರಡೂ ಜೊತೆ ಜೊತೆಗೆ ನಿರ್ಮಾಣವಾಗುತ್ತಾ ಸಾಗುತ್ತದೆ. ನಾಗರೀಕತೆಯ ಆರಂಭವನ್ನು ನಾವು ಅರಿಯಲು ಹಾಗೂ ನಮ್ಮ ಪೂರ್ವಜರ ಇರುವನ್ನು […]

ಆಡು ಭಾಷೆಯ ವೈಶಿಷ್ಟ್ಯತೆ

ಪ್ರಬಂಧ ಆಡು ಭಾಷೆಯ ವೈಶಿಷ್ಟ್ಯತೆ ಬಾಲಾಜಿ ಕುಂಬಾರ ನಮ್ಮ ಉತ್ತರ ಕರ್ನಾಟಕದ ಭಾಷೆಗೂ ದಕ್ಷಿಣ ಕನ್ನಡದ ಮಾತುಗಾರಿಕೆಗೂ ತುಂಬಾ ವ್ಯತ್ಯಾಸ ಕಾಣುತ್ತೇವೆ. ಉತ್ತರ ಕರ್ನಾಟಕದ ಮಂದಿ ಹೇಳಿ ಕೇಳಿ ತುಂಬಾ ಸೀದಾ ಸಾದಾ, ಭಾಳ ಮುಗ್ದ ಸ್ವಭಾವದ ಗಟ್ಟಿ ಜನ, ಬಿಳಿ ಜೋಳ ರೊಟ್ಟಿ , ಫುಂಡೆ ಪಲ್ಯ ಜೊತೆಗೆ ಉಳಾಗಡ್ಡೆ ಖಾರಾ, ಹಸಿ ಖಾರಾ ತಿಂದರೂ ‘ಇನ್ನೂ ಸ್ವಲ್ಪ ಸಪ್ಪಗೆ ಆಗ್ಯಾದ್ ಪಲ್ಯ’ ಎನ್ನುವ ಜವಾರಿ ಜನ, ಎಲ್ಲಿ ಹೋದರೂ ಏನಾದರೂ ಹೊಸತನ ಕಾಣುವುದು, ಹೊಸ […]

ಶಿಶುತನದ ಹದನದೊಳು ಬದುಕಲೆಳಸಿ…

ಪ್ರಬಂಧ ಶಿಶುತನದ ಹದನದೊಳು ಬದುಕಲೆಳಸಿ… ಲಕ್ಷ್ಮಿ ನಾರಾಯಣಭಟ್ ಈ ಸುಂದರ ಮುಂಜಾನೆ ನನಗೆ ತುಂಬಾ ಪ್ರಿಯವಾದ ಹಾಡೊಂದರ ಸಾಲುಗಳು ನನ್ನ ಮನ:ಪಟಲದಲ್ಲಿ ಭಾವ ತರಂಗಗಳನ್ನು ಎಬ್ಬಿಸುತ್ತಿವೆ. ನಾನು ಹಾಡುಗಾರನಲ್ಲದಿದ್ದರೂ, ಈ ಸಾಲುಗಳಿಗೆ ದಯವಿಟ್ಟು ಕಿವಿಗೊಡಿ. ನೆನಪಿದೆಯೇ ನಿನಗೆ? ನಾವಿಬ್ಬರೂ ಅಂದು ಹೊಳೆಯ ದಡದಲ್ಲಿ ನಿಂದು ಮರಳು ಮನೆಗಳ ಕಟ್ಟಿ ಆಟವಾಡಿದ್ದು ನಿನಗೆ ನೆನಪಿದೆಯೇ ನಿನಗೆ? ಬಾ ಗೆಳೆಯ ಬಾರಯ್ಯಾ, ಆಟವಾಡೋಣ ಬಾಲ್ಯದ ನೆನಪನು ಮರಳಿ ಕಟ್ಟೋಣ. ನೆನಪಿದೆಯೇ ನಿನಗೆ? ನನಗೆ ಬೇಜಾರಾದಾಗಲೆಲ್ಲಾ ಈ ಸಾಲುಗಳನ್ನು ಗುಣುಗುಣಿಸುತ್ತೇನೆ. ಆಗ […]

ಫ್ಲೈಟ್ ತಪ್ಪಿಸಿದ ಮೆಹೆಂದಿ

ಪ್ರಬಂಧ    ಫ್ಲೈಟ್ ತಪ್ಪಿಸಿದ  ಮೆಹೆಂದಿ ಸುಮಾ ವೀಣಾ                                         ಫ್ಲೈಟ್  ರಾತ್ರಿ ಹತ್ತು ಗಂಟೆಗೆ ಅಂದುಕೊಂಡು ಬೆಳಗ್ಗೆ 6 ಗಂಟೆಗೆಎದ್ದು  ವಿದೇಶೀ ಲಲನೆಯರಿಗಿಂತ ನಾವೇನು ಕಡಿಮೆ ನಾವೂ ಹೇರ್ ಕಲರ್ ಮಾಡಿಕೊಳ್ಳೋಣ  ಎನ್ನುತ್ತಲೇ ನಾನು ನನ್ನ ತಮ್ಮನ ಹೆಂಡತಿ ಶಾಲಿನಿ ಇಬ್ಬರೂ ಮೆಹೆಂದಿ ಕಲೆಸಿ ತಲೆಗೆ ಮೆತ್ತಿಕೊಂಡೆವು.  ಫಿಲ್ಟರ್ ಕಾಫಿ ಹೀರುತ್ತಾ   ಹರಟುತ್ತಿರಬೇಕಾದರೆ ನಮ್ಮ ಮೊಬೈಲಿಗೆ ಮೆಸೇಜ್  ಮಹಾಶಯ ಬಂದು “ನನ್ನನ್ನು ಒಮ್ಮೆ ನೋಡುವಿರಾ! ನೋಡುವಿರಾ!” ಎಂದು ವಿನಂತಿಸಿಕೊಳ್ಳಲಾರಂಭಿಸಿದ. ಹಾಗೆ  ತಲೆಯನ್ನೊಮ್ಮೆ ನೇವರಿಸಿಕೊಂಡರೆ ಮೆಹೆಂದಿ ಕೈಗೆಲ್ಲಾ […]

ನಾನು ಈಜು ಕಲಿತ ಪ್ರಸಂಗ:

ಪ್ರಬಂದ ನಾನು ಈಜು ಕಲಿತ ಪ್ರಸಂಗ: ಲಕ್ಷ್ಮಿನಾರಾಯಣ್ ಭಟ್ ಪಿ. ಚಿಕ್ಕಂದಿನಲ್ಲಿ ನನಗೆ ಈಜು ಕಲಿಯುವ ಉಮೇದು. ಅದಕ್ಕೆ ಮನೆಯಲ್ಲಿ ಯಥಾಪ್ರಕಾರ ಅಡ್ಡಿ – ‘ಮಾಣಿಗೆ ಏನಾದ್ರೂ ಹೆಚ್ಚು-ಕಮ್ಮಿ’ (ನೇರ ಮಾತಲ್ಲಿ ‘ಗೊಟಕ್!’) ಆದರೆ ಎಂಬ ಭಯ! ಅದಕ್ಕೆ ಸರಿಯಾಗಿ ಅದೇ ಸಮಯಕ್ಕೆ ನಮ್ಮ ಮನೆ ಪಕ್ಕದ ಸುಬ್ರಾಯ ದೇವಸ್ಥಾನದ ಚಿಕ್ಕ, ಅಷ್ಟೇನೂ ಆಳವಿಲ್ಲದಿದ್ದ ಕೆರೆಯಲ್ಲಿ ಈಜು ಕಲಿಯುವಾಗ ಓರಗೆಯ ಹುಡುಗನೊಬ್ಬ ಮುಳುಗಿ ಪ್ರಾಣಬಿಟ್ಟಿದ್ದ. ಅವನು ಮುಳುಗುವುದನ್ನು ನೋಡಿ ಉಳಿದ ಚಿಳ್ಳೆಪಿಳ್ಳೆಗಳೆಲ್ಲಾ ಹೆದರಿ ಪದ್ರಾಡ್! ( ತುಳು […]

ಶಿಶುತನದ ಹದನದೊಳು ಬದುಕಲೆಳಸಿ

ಪ್ರಬಂಧ ಶಿಶುತನದ ಹದನದೊಳು ಬದುಕಲೆಳಸಿ ಡಾ.ಲಕ್ಷ್ಮಿನಾರಾಯಣ ಭಟ್ ಈ ಸುಂದರ ಮುಂಜಾನೆ ನನಗೆ ತುಂಬಾ ಪ್ರಿಯವಾದ ಹಾಡೊಂದರ ಸಾಲುಗಳು ನನ್ನ ಮನ:ಪಟಲದಲ್ಲಿ ಭಾವ ತರಂಗಗಳನ್ನು ಎಬ್ಬಿಸುತ್ತಿವೆ. ನಾನು ಹಾಡುಗಾರನಲ್ಲದಿದ್ದರೂ, ಈ ಸಾಲುಗಳಿಗೆ ದಯವಿಟ್ಟು ಕಿವಿಗೊಡಿ. ನೆನಪಿದೆಯೇ ನಿನಗೆ? ನಾವಿಬ್ಬರೂ ಅಂದು ಹೊಳೆಯ ದಡದಲ್ಲಿ ನಿಂದು ಮರಳು ಮನೆಗಳ ಕಟ್ಟಿ ಆಟವಾಡಿದ್ದು ನಿನಗೆ ನೆನಪಿದೆಯೇ ನಿನಗೆ? ಬಾ ಗೆಳೆಯ ಬಾರಯ್ಯಾ, ಆಟವಾಡೋಣ ಬಾಲ್ಯದ ನೆನಪನು ಮರಳಿ ಕಟ್ಟೋಣ. ನೆನಪಿದೆಯೇ ನಿನಗೆ? ನನಗೆ ಬೇಜಾರಾದಾಗಲೆಲ್ಲಾ ಈ ಸಾಲುಗಳನ್ನು ಗುಣುಗುಣಿಸುತ್ತೇನೆ. ಆಗ […]

Back To Top