‘ಅಮ್ಮನ ನಿರಾಳತೆ’
ವಸುಂಧರಾ ಕದಲೂರು ಬರೆಯುತ್ತಾರೆ
ಒಟ್ಟಿನಲ್ಲಿ ಹೊಟ್ಟೆ ತುಂಬಿದ ಮಗು ಒಂದಷ್ಟು ಹೊತ್ತು ತರಲೆ ಮಾಡದೇ ಆಡಿಕೊಂಡೋ, ಮಲಗಿಕೊಂಡೋ ಇದ್ದರೆ ಅಮ್ಮನಿಗೆ ಸಿಗುವ ನಿರಾಳತೆ ಇದೆಯಲ್ಲಾ ಅದಕ್ಕೆ ಬೆಲೆ ಕಟ್ಟಲಾಗದು.
ಒಳ್ಳೆಯದು ಬಾಡದ ಹೂವಿನಂತೆ ನಗುತಿರಲಿ
ಪ್ರಬಂಧ ಒಳ್ಳೆಯದು ಬಾಡದ ಹೂವಿನಂತೆ ನಗುತಿರಲಿ ಜಯಶ್ರೀ.ಜೆ. ಅಬ್ಬಿಗೇರಿ ಇಸ್ಲಾಂ ಧರ್ಮದ ಪ್ರಖ್ಯಾತ ಗುರು ‘ಸಾದಿ’ ಸಣ್ಣವರಿದ್ದಾಗ ತನ್ನ ತಂದೆಯೊಂದಿಗೆ ಮಸೀದಿಗೆ ಹೋಗಿದ್ದರು. ತಂದೆ ಮಕ್ಕಳು ಮಸೀದಿಯ ಮೇಲ್ವಿಚಾರಣೆ ನೋಡಿಕೊಳ್ಳಬೇಕಿತ್ತು. ಅಲ್ಲಿ ಪ್ರಾರ್ಥನೆಗೆ ಬಂದವರೆಲ್ಲ ನಿದ್ದೆಗೆ ಜಾರಿದ್ದರು. ಅದನ್ನು ಕಂಡ ಸಾದಿಗೆ ಆಶ್ಚರ್ಯವಾಯಿತು. ಆತ ತಂದೆಗೆ ತಿಳಿಸಿದ. ‘ನಮ್ಮಿಬ್ಬರನ್ನು ಬಿಟ್ಟು ಬಾಕಿಯವರೆಲ್ಲ ಮಲಗಿ ಬಿಟ್ಟಿದ್ದಾರೆ. ಆತನ ತಂದೆಗೆ ಕೋಪ ಬಂದಿತು.’ನಿನ್ನ ಕೆಲಸ ನೀನು ಮಾಡು. ಬೇರೆಯವರು ಏನು ಮಾಡುತ್ತಿದ್ದಾರೆಂದು ನೋಡುವುದು ನಿನ್ನ ಕೆಲಸವಲ್ಲ. ‘ಬೇರೆಯವರಲ್ಲಿ ತಪ್ಪು […]
ಜೀವ ಮಿಡಿತದ ಸದ್ದು
ನಮ್ಮ ಫ್ಲಾಟಿನ ಮನೆ; ನೆಲದ ಸ್ಪರ್ಶ ಮಣ್ಣ ಘಮ, ಮರಗಳ ಸ್ನೇಹ, ಬೆಕ್ಕು ನಾಯಿಗಳ ಸಾನಿಧ್ಯ ಇಲ್ಲದ ನೆಲೆಯಾದರೂ ಇಲ್ಲಿಯೂ ಜೀವಮಿಡಿತದ ಸದ್ದಿದೆ. ಮರಗಿಡಗಳ, ತಂಗಾಳಿಯ ಸ್ಪರ್ಶವಿದೆ, ವಿಧ ವಿಧ ಹಕ್ಕಿ ಹಾಡಿನ ನಿನಾದವಿದೆ.
ಸಲಾಮನ ಗಾಡಿಯೂ… ಸಂಕ್ರಾಂತಿ ಹಬ್ಬವೂ
ಲಲಿತ ಪ್ರಬಂಧ ಸಲಾಮನ ಗಾಡಿಯೂ… ಸಂಕ್ರಾಂತಿ ಹಬ್ಬವೂ… ಟಿ.ಎಸ್.ಶ್ರವಣಕುಮಾರಿ ಇಮಾಂ ಸಾಬಿಗೂ ಗೋಕುಲಾಷ್ಟಮಿಗೂ ಏನು ಸಂಬಂಧ’ ಎಂದು ಹೇಳುವಂತೆ ‘ಸಲಾಂ ಸಾಬಿಗೂ ಸಂಕ್ರಾಂತಿಗೂ ಏನು ಸಂಬಂಧ’ ಎಂದು ಹುಬ್ಬೇರಿಸುತ್ತೀರೇನೋ! ಪ್ರತಿ ಸಂಕ್ರಾಂತಿಗೂ ಸಲಾಮನನ್ನು ನೆನಸಿಕೊಳ್ಳದೆ ನನಗೆ ಸಂಕ್ರಾಂತಿ ಹಬ್ಬ ಆಗುವುದೇ ಇಲ್ಲ. ಈಗೊಂದೈವತ್ತು ವರ್ಷಗಳ ಹಿಂದೆ ಜನಸಾಮಾನ್ಯರಿಗೆ ಶಿವಮೊಗ್ಗದಲ್ಲಿ ಸಂಚಾರಕ್ಕೆ ಇದ್ದದ್ದು ಎರಡೇ ರೀತಿ. ಮೊದಲನೆಯದು ನಟರಾಜ ಸರ್ವೀಸ್ ಅಂದರೆ ಕಾಲ್ನಡಿಗೆಯಲ್ಲಿ ಹೋಗುವುದು; ಇನ್ನೊಂದು ಕುದುರೆ ಗಾಡಿ. ಕಾರೆನ್ನುವುದು ಅತಿ ಶ್ರೀಮಂತರ ಸೊತ್ತು ಬಿಡಿ; ನಮದಲ್ಲ. ಊರಲ್ಲಿ […]
ಒಕ್ಕಲುತನ
ಇನ್ನ ಕಬ್ಬ ಸುಲದು ರಸಾ ಹೀರೂದು ನಮ್ ಜನಕ್ಕೆ ಭಾರೀ ಸಲೀಸು. ಒಂದ ಕೈಯಾಗ ಸೈಕಲ್ ಹಿಡದು ಮತ್ತೊಂದ ಕೈಯಾಗ ಕಬ್ಬ ತಿನಕೋತ ಹೋಗವರನ್ನ ನೀವು ಎಲ್ಲೆಲ್ಲೂ ನೋಡಬಹುದು.
ದಂತ ಪುರಾಣ
ಸಂಗೀತಾರವಿರಾಜ್ ಬರೆಯುತ್ತಾರೆ ದಂತಪುರಾಣ
ಪರಿವರ್ತನೆಗೆ ದಾರಿ ಯಾವುದಾದರೇನು?
ಲಲಿತ ಪ್ರಬಂಧ ಪರಿವರ್ತನೆಗೆ ದಾರಿ ಯಾವುದಾದರೇನು? ನಾಗರೇಖಾ ಗಾಂವಕರ್ ಹೊಸ ಸುತ್ತೋಲೆಯಂತೆ ಪದವಿ-ಪೂರ್ವ ಹಂತಕ್ಕೂ ಪ್ರಾರ್ಥನೆಯನ್ನು ಕಡ್ಡಾಯಗೊಳಿಸಿ ಇಲಾಖೆ ಆದೇಶ ಹೊರಡಿಸಿದ್ದು ಪಡ್ಡೆ ಹುಡುಗರಿಗೆ ಕೊಂಚವೂ ಇಷ್ಟವಿಲ್ಲ. ಆಗಾಗ ಆ ಬಗ್ಗೆ ತಕರಾರು ಮಾಡುವ ಗುಂಪು ಇದ್ದೇ ಇತ್ತು. ಆದರೂ ಪ್ರಾಚಾರ್ಯರು ಅದಕ್ಕೆಲ್ಲ ಅವಕಾಶ ಕೊಡದೆ ಕಡ್ಡಾಯ ಎಂದು ನೋಟೀಸು ತೆಗೆದು ಒತ್ತಡ ಹೇರಿದ್ದರು. ಹಾಗಾಗಿ ವಿದ್ಯಾರ್ಥಿಗಳು ಪ್ರಾರ್ಥನೆಗೆ ಹಾಜರಾಗುವುದು ಅನಿವಾರ್ಯವಾಗಿತ್ತು. ವಾಣಿಜ್ಯ ವಿಭಾಗದ ಆ ತರಗತಿಯಲ್ಲಿ ಇರುವುದು ಬರಿಯ ಇಪ್ಪತೆಂಟು ವಿದ್ಯಾರ್ಥಿಗಳು ಮಾತ್ರ. ಉಳಿದೆಲ್ಲ ಮಕ್ಕಳು […]
ಎಲೆಗಳ ಬಲೆಯಲ್ಲಿ…
ಲಲಿತ ಪ್ರಬಂಧ ಎಲೆಗಳ ಬಲೆಯಲ್ಲಿ… ಟಿ.ಎಸ್.ಶ್ರವಣಕುಮಾರಿ ಈ ಹದಿಮೂರು ಎಲೆಗಳಿಗೊಂದು ವಿಶಿಷ್ಟ ಆಕರ್ಷಣೆಯಿದೆ, ಸೆಳೆತವಿದೆ. ಕೆಲವರು ರಮ್ಮಿ, ಬ್ರಿಡ್ಜ್, ಮೂರೆಲೆ ಎನ್ನುತ್ತಾ ಇಸ್ಪೀಟಿನ ಹಿಂದೆ ಬಿದ್ದರೆ, ಇನ್ನು ಕೆಲವರು ಸಾಲಿಟೇರ್, ಫ್ರೀಸೆಲ್ ಎನ್ನುತ್ತಾ ಕಂಪ್ಯೂಟರಿನಲ್ಲಿ ಅದೇ ಹದಿಮೂರು ಎಲೆಗಳಲ್ಲಿ ಅಡಗಿಕೊಂಡಿರುತ್ತಾರೆ. ʻಅಂದರ್ ಬಾಹರ್ ಅಂದರ್ ಬಾಹರ್ʼ ಎಂದು ಕೋರಸ್‌ನಲ್ಲಿ ಗುನುಗುತ್ತ ʻಎಕ್ಕ ರಾಜ ರಾಣಿ ನನ್ನ ಕೈಯೊಳಗೆ, ಹಿಡಿಮಣ್ಣು ನಿನ್ನ ಬಾಯೊಳಗೆʼ ಎಂದು ಹಾಡುತ್ತ ಜಾಕಿ ಚಲನಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ತನ್ನೆಲ್ಲಾ ಅಭಿಮಾನಿಗಳನ್ನೂ ವಶೀಕರಣ ಮಾಡಿಕೊಂಡಿದ್ದು […]
ವಿಚಿತ್ರ ಆಸೆಗಳು…ಹೀಗೊಂದಷ್ಟು,
ಲಲಿತ ಪ್ರಬಂಧ ವಿಚಿತ್ರ ಆಸೆಗಳು…ಹೀಗೊಂದಷ್ಟು, ಸಮತಾ ಆರ್. “ಕಕ್ ಕಕ್ ಕಕ್ ಕೊಕ್ಕೋಕ್ಕೊ” ಅಂತ ಒಂದು ಬಿಳಿ,ಬೂದು,ಕೆಂಪು ಬಣ್ಣದ ರೆಕ್ಕೆ ಪುಕ್ಕಗಳ,ಅಂಗೈ ಅಗಲದ ಜುಟ್ಟಿದ್ದ,ಕಮ್ಮಿ ಅಂದರೂ ನಾಲ್ಕೈದು ಕೆಜಿ ತೂಗುತ್ತಿದ್ದ ಗಿರಿರಾಜ ಹುಂಜ ವೊಂದು ಹೆಜ್ಜೆಯ ಮೇಲೆ ಹೆಜ್ಜೆ ಇಡುತ್ತಾ ಗತ್ತಿನಿಂದ ,ಅತ್ತಿಂದಿತ್ತ ಇತ್ತಿಂದತ್ತ ಓಡಾಡುತ್ತಿದ್ದಾಗ,ಸುತ್ತ ನಾಲ್ಕೈದು ಮಕ್ಕಳನ್ನು ಸಾಮಾಜಿಕ ಅಂತರದಲ್ಲಿ ಕೂರಿಸಿಕೊಂಡು ವಿದ್ಯಾಗಮ ಕಾರ್ಯಕ್ರಮದ ಅಡಿಯಲ್ಲಿ ಕಲಿಸುತ್ತಿದ್ದ ನನಗೆ ಎಷ್ಟು ಪ್ರಯತ್ನ ಪಟ್ಟರೂ ಆ ಹುಂಜನಿಂದ ಕಣ್ಣು ಕೀಳ ಲಾಗಲಿಲ್ಲ. ನನ್ನಿಂದ ಅನತಿ ದೂರದಲ್ಲಿ ಕುಳಿತಿದ್ದ […]
ಪಾರಿಜಾತ ಗಿಡ
ಲಲಿತ ಪ್ರಬಂಧ ಪಾರಿಜಾತ ಗಿಡ ವಿದ್ಯಾ ಶ್ರೀ ಎಸ್ ಅಡೂರ್. ಪಾರಿಜಾತ ಹೂವಿನ ಮರ ಎಂದರೆ ಚಿಕ್ಕಂದಿನಿಂದಲೂ ನನಗೆ ಅದೆಂತದೋ ಒಂದು ರೀತಿಯ ಪ್ರೀತಿ.ಅದೊಂದು ದೇವಲೋಕದ ಸುವಸ್ತು, ಕೃಷ್ಣ ತನ್ನ ಮಡದಿ ಸತ್ಯಭಾಮೆಗಾಗಿ ತಂದ ಹೂವು ಎಂದೆಲ್ಲ ಅರ್ದಂಬರ್ದ ಕಥೆಗಳು ಕಲಸುಮೇಲೋಗರ ವಾಗಿ ಒಂದು ಅಲೌಕಿಕ ಆಕರ್ಷಣೆ ಯಾಗಿ ಬೆಳೆದಿದೆ. ಕೆಲವು ವರ್ಷಗಳ ಹಿಂದೆ ಎಲ್ಲೋ ನೆಂಟರ ಮನೆಗೆ ಹೋಗಿದ್ದಾಗ ಒಂದು ಗೆಲ್ಲು ಕೇಳಿ ತಂದು ಮನೆಯ ಹಿತ್ತಿಲಲ್ಲಿ ನೆಟ್ಟಿದ್ದೆ. ಕಾಲಮಾನ ಕ್ಕೆ ಅನುಗುಣವಾಗಿ ಅದು […]