Category: ಚಿತ್ತ ಜನ್ಯ

ಮತ್ತೆ ಏನೇನೋ ವಿಚಾರಗಳಿವೆ ಬರೆಯಲಿಕ್ಕೆ. ಆದರೆ ಬರೆಯ ಹೊರಟ ಕೂಡಲೇ ಅದು ಸುತ್ತಿ ಸುತ್ತಿ ಸುಳಿದು ಮತ್ತದೇ ದಾರಿಗೆ ಹೊರಳಿಬಿಡುವುದು ಪರಿಸ್ಥಿತಿಯ ನಾವು ತಳ್ಳಿ ಹಾಕಲಾಗದ ಪ್ರಭಾವವೇ ಇರಬಹುದು. ಅದನ್ನು ಮೀರಬೇಕಾದ ಸಾವಾಲೊಂದು ಮುಂದೆ ಕುಳಿತಿದೆ. ಅದನ್ನೀಗ ಮೀರಲೇಬೇಕಿದೆ.

ಅಳುವಿನ ಕ್ಷೀಣ ಶಬ್ಧವನ್ನು ಹೊರತುಪಡಿಸಿ ಹೆಚ್ಚಿನ ಜನವೂ ಇಲ್ಲ, ಗದ್ದಲವೂ ಇಲ್ಲ. ಕನಿಷ್ಟ ದೇಹ ತ್ಯಜಿಸಿರುವ ಆತ್ಮಕ್ಕೆ ಸಲ್ಲಬೇಕಾದ ಅಶ್ರುತರ್ಪಣವೂ ಇಲ್ಲದೆ ವಿದಾಯ ಸಲ್ಲಿಸಬೇಕಾದ ದುಃಸ್ಥಿತಿ! ಒಂದು ಸಣ್ಣ ಅತಿ ಸಣ್ಣ ನೋವಿನೆಳೆ ಮಾತ್ರ ಇಡೀ ಜೀವವನ್ನೇ ಹಿಂಡುತ್ತಿದೆ

ತಾಯ್ತನ ಎನ್ನುವದು ಬರಿದೆ ಜೈವಿಕ ತಾಯ್ತನಕ್ಕೆ ಸಂಬಂಧ ಪಟ್ಟುದಲ್ಲ. ಅದೊಂದು ಭಾವ. ಆ ಭಾವವಿದ್ದವರೆಲ್ಲಾ ತಾಯಂದಿರಾಗಬಹುದು ಎನ್ಬುವುದು ಸಾವಿತ್ರಿಯವರಿಂದ ಸಾಬೀತಾಗುತ್ತದೆ. ಆಕೆ ತಮ್ಮದೇ ಒಂದು ಮಗುವನ್ನು ಹೆರಲಿಲ್ಲ. ಆದರೆ ದೀನ ದಲಿತರ ಪಾಲಿಗೆ ನಿಜವಾದ ಮಾತೃಪೂರ್ಣ ತಾಯಿಯೇ ಆದರು.

ಅಂಕಣ ಬರಹ ಒಂದು ಹಾವಿನ ಕಥೆ ಮತ್ತು ನಾವು ಕೆಲವು ಒತ್ತಡಗಳು ಹುಟ್ಟಿಕೊಳ್ಳುತ್ತವೆ. ಎಂಥದೋ ಅನಿವಾರ್ಯತೆ ಕಾಡುತ್ತದೆ. ಮಾಡಬೇಕೆಂದುಕೊಂಡದ್ದನ್ನು ಮಾಡಲಾಗುತ್ತಿಲ್ಲ ಎನ್ನುವ ಚಡಪಡಿಕೆ, ನೋವು, ಹತಾಶೆ… ಬೇಕಾದವರನ್ನು ಮನಸಿಗೆ ಹತ್ತಿರವಾದವರನ್ನು ನಾವಾಗೇ ಹಚ್ಚಿಕೊಂಡವರನ್ನು ಎದೆಗೆ ತಬ್ಬುವ ಮನಸಿದ್ದಾಗಲೂ ದೂರ ನಿಲ್ಲಬೇಕಾದ ಸಂಯಮದ ಪ೫ರೀಕ್ಷೆಗೆ ತಯಾರಾಗಬೇಕಾಗಿ ಬರುವ ಪರಿಸ್ಥಿತಿಯನ್ನು ಧ್ವನಿ ತೆಗೆಯದೇ ಬಯ್ದುಕೊಳ್ಳುತ್ತಾ ಒಳಗೊಳಗೇ ಹಟಕ್ಕೆ ಬೀಳುತ್ತೇವೆ. ಅದು ನಮ್ಮ ಮೇಲಿನ ನಮ್ಮ ಹಟ. ಚೌಕಟ್ಟನ್ನು ದಾಟಿದರೆ ನಮಗೆ ನಾವು ದಕ್ಕಿಬಿಡುತ್ತೇವೆಂದು ನಮಗೆ ಗೊತ್ತು. ಆದರೆ ನಮಗೆ ಅದಕ್ಕೆ […]

ಅಂಕಣ ಬರಹ ಸಂಕ್ರಾಂತಿ ಬಂತೋ ರತ್ತೋ ರತ್ತೋ ಸಂಕ್ರಾಂತಿ ಎಂದ ಕೂಡಲೇ ನೆನಪಾಗುವುದೇ ಚಂದದ ರೇಷಿಮೆ ಲಂಗ ತೊಟ್ಟು ಉದ್ದ ಜಡೆ ಹೆಣೆದುಕೊಂಡು, ಘಮ ಘಮ ಮಲ್ಲಿಗೆ ಹೂ ಮುಡಿದು, ಏನೆಲ್ಲ ಸಾಧ್ಯವಿರುತ್ತದೋ ಅಷ್ಟೆಲ್ಲಾ ಅಲಂಕಾರ ಮಾಡಿಕೊಂಡು ನೆರೆಹೊರೆಯವರಿಗೆ ಎಳ್ಳು ಬೆಲ್ಲ ಹಂಚಲು ಹೊರಡುತ್ತಿದ್ದದ್ದು… ಸಂಕ್ರಾಂತಿ ಹಬ್ಬದ ಪ್ರಮುಖ ಆಕರ್ಷಣೆಯೇ ಇದಾಗಿರುತ್ತಿತ್ತಾದರೂ ಸಂಕ್ರಾಂತಿಗಿರುವ ಆಕರ್ಷಣೆಗಳ ದೊಡ್ಡಪಟ್ಟಿಯೂ ಇರುತ್ತಿತ್ತು. ಸಂಕ್ರಾಂತಿ ಹೆಣ್ಣುಮಕ್ಕಳ ಹಬ್ಬ ಎನಿಸಿಬಿಡುತ್ತಿತ್ತು. ಅದೆಷ್ಟೋ ದಿನಗಳ ತಯಾರಿ ಈ ಹಬ್ಬಕ್ಕೆ. ಹದಿನೈದು ದಿನಗಳಿಗೆ ಮುಂಚೆಯೇ  ಎಳ್ಳು-ಬೆಲ್ಲ ತಯಾರಿಸಲು […]

ಅಂಕಣ ಬರಹ ಅರಿವಿನ ನಾವೆಯ ಮೇಲೆ ಸುಖ ಪಯಣ… “Every human being lives in a perpetual state of insuffiency. No matter who you are or what you have achieved, you still want a little more than what you have right now…“ -Sadhguru (Inner Engineering) ಕೊರತೆಯ ಶಾಶ್ವತ ಸ್ಥಿತಿಯೊಂದು ನಮ್ಮೊಳಗೆ ಸದಾ ಜಾಗೃತ ಮತ್ತು ಜೀವಂತ ಇಲ್ಲದೆ ಹೋಗಿದ್ದಿದ್ದರೆ ನಾವೆಲ್ಲ ಬಹುಶಃ ಕೈಕಟ್ಟಿ […]

ಅಂಕಣ ಬರಹ ನಿತ್ಯ ಎದುರಾಗುವ ನಿರ್ವಾಹಕರು ಪ್ರತಿನಿತ್ಯ ಕೆಲಸಕ್ಕೆ ಬಸ್ಸಿನಲ್ಲೆ ತೆರಳುವ ನಾವು ಹಲವಾರು ಜನ ಕಂಡಕ್ಟರುಗಳನ್ನು ಪ್ರತಿನಿತ್ಯ ನೋಡುತ್ತಿರುತ್ತೇವೆ. ಒಬ್ಬೊಬ್ಬ ನಿರ್ವಾಹಕರೇ ಒಂದೊಂದು ಥರ. ಕೆಲವರು ತಾಳ್ಮೆಯಿಂದ ಇರುತ್ತಾರೆ, ಕೆಲವರಿಗೆ ಎಂಥದ್ದೋ ಅವಸರ, ಕೆಲವರು ಎಷ್ಟೊಂದು ದಯಾಮಯಿಗಳು, ಮತ್ತೊಂದಿಷ್ಟು ಜನ ಜಗತ್ತಿನ ಎಲ್ಲ ಕೋಪವನ್ನೂ ಹೊತ್ತು ತಿರುಗುತ್ತಿರುವವರಂತೆ ಚಟಪಟ ಸಿಡಿಯುತ್ತಿರುತ್ತಾರೆ. ಮನಸಿನಂತೆ ಮಹದೇವ ಎನ್ನುವ ಹಾಗೆ ಮನಸಿನ ಅವತಾರಗಳಷ್ಟೇ ವೈವೀಧ್ಯಮಯ ನಿರ್ವಾಹಕರು. ಪ್ರತಿನಿತ್ಯ ನಿರ್ವಾಹಕರು ಮತ್ತು ಪ್ರಯಾಣಿಕರ ನಡುವೆ ಬಹುತೇಕ ಉಂಟಾಗುವ ಜಗಳಕ್ಕೆ ಮುಖ್ಯ ಕಾರಣವಾಗುವುದೇ […]

ಸಿಕ್ಕಿರುವ ಬದುಕಿಗೆ ಕೃತಜ್ಞರಾಗಿರಬೇಕಿದೆ

ಅಂಕಣ ಬರಹ ಸಿಕ್ಕಿರುವ ಬದುಕಿಗೆ ಕೃತಜ್ಞರಾಗಿರಬೇಕಿದೆ ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮತ್ತು ಕೊಲೆ! ಪ್ರತಿನಿತ್ಯ ಇಂತಹ ಅಸಂಖ್ಯ ಸುದ್ದಿಗಳು ಸರ್ವೆ ಸಾಮಾನ್ಯ ಎನಿಸುವಷ್ಟು ಬರುತ್ತಿರುತ್ತವೆ. ಓದುವುದಕ್ಕೇ ಆಗದಂಥ ವಿಚಿತ್ರ ಸಂಕಟ… ನಿರ್ಲಕ್ಷಿಸುವುದು ಸಾಧ್ಯವಿಲ್ಲ, ಏನಾದರೂ ಮಾಡುವಾ ಎಂದರೆ ಮಾಡಲಾಗದ ಅಸಹಾಯಕತೆ… ಹಿಂದೆಯೇ ಇಂಥವನ್ನ ಎಷ್ಟು ದಿನ ಅಂತ ಸಹಿಸಿಕೊಳ್ಳುವುದು ಎನ್ನುವ ಬೆಂಬಿಡದ ಪ್ರಶ್ನೆ… ಇನ್ನೂ ಅರಳದ ಮೊಗ್ಗನ್ನ ತಮ್ಮ ಕೆಟ್ಟ ದಾಹಕ್ಕೆ ಬಳಸಿ ಬಿಸಾಡುತ್ತಾರಲ್ಲ, ರಕ್ತ ಕುದಿಯುತ್ತದೆ. ಎಲ್ಲೋ ಕೆಲ ಕಂದಮ್ಮಗಳಿಗೆ ಒಂದಷ್ಟು ಸಂತಾಪವಾದರೂ […]

ಅಂಕಣ ಬರಹ ಎಡವಿದವನಿಗೂ ಸಣ್ಣ ಸಹಾನುಭೂತಿ ಸಿಗಲಿ ಬಹುಶಃ ನಾನವಾಗ ನಾಲ್ಕನೆಯ ತರಗತಿಯಲ್ಲಿದ್ದೆ. ಅಂದು ಭಾನುವಾರ. ಅವತ್ತು ನಾವೆಲ್ಲ ಹೀಗೇ ಆಟ ಆಡುತ್ತಿದ್ದೆವು. ಶಾಲೆಯ ಸುತ್ತಮುತ್ತ ನಾನು, ಶ್ರುತಿ, ಸ್ವಪ್ನ ಮತ್ತೆ ಇನ್ನೂ ಒಂದಿಷ್ಟು ಗೆಳತಿಯರು, ಆಡಿ ಆಡಿ ಸುಸ್ತಾದೆವು. ಕೊನೆಗೆ ನೀರು ಕುಡಿಯಬೇಕೆನಿಸಿತು ಎಲ್ಲರಿಗೂ. ಅಲ್ಲಿಯೇ ಇದ್ದ ಬೋರನ್ನು ಹೊಡೆಯತೊಡಗಿದೆವು. ನೀರು ಬಂತು. ಒಬ್ಬೊಬ್ಬರೇ ನೀರು ಹೊಡೆಯುವುದು, ಉಳಿದೆಲ್ಲರು ಸರತಿಯಲ್ಲಿ ಮುಖತೊಳೆದು ನೀರುಕುಡಿಯುವುದು ಮಾಡುತ್ತಿರುವಾಗ, ನಾನೊಂದಿಷ್ಟು ಬೋರು ಹೊಡೆಯುವ ಉಳಿದವರು ಕುಡಿಯಲಿ ಎಂದು ಹಿಂದೆ ಬಂದೆ. […]

ಅಂಕಣ ಬರಹ ಅರಿತವರ ಮರೆತು ಸಾಗುವುದೆಂದರೆ … ನಮ್ಮನ್ನು ನಾವು ಹುಡುಕಿಕೊಳ್ಳುವುದು ಎಂದರೆ ಏನು? ನಮ್ಮೊಳಗೆ ನಾವು ಇಳಿಯುವುದು ಎಂದರೆ ಏನು? ನಮಗೇ ಕಾಣದ ನಮ್ಮನ್ನು ಕಂಡುಕೊಳ್ಳುವುದು ಎಂದರೆ ಏನು? ಮತ್ತೆ ಈ ಧಾವಂತದ ಬದುಕಲ್ಲಿ ಅದಕ್ಕೆ ತಗುಲುವ ಸಮಯವನ್ನು ಉಳಿಸಿಟ್ಟುಕೊಳ್ಳುವ ವ್ಯವಧಾನವಾದರೂ ನಮ್ಮಲ್ಲಿ ಉಳಿದಿದೆಯಾ… ಇಂತಹ ಹಲವಾರು ಉತ್ತರ ಸಿಗದ ಪ್ರಶ್ನೆಗಳು, ಗೊಂದಲಗಳು ನನ್ನನ್ನು ಸದಾ ಕಾಡುತ್ತಿರುತ್ತದೆ. ಇಂಥವಕ್ಕೆ  ನಾನೇ ನಾನು ಉತ್ತರಿಸಿಕೊಳ್ಳಬೇಕಿರುತ್ತದೆ. ಆದರೆ ಕೆಲವೊಮ್ಮೆ ಎಂತಹ ಸಂದಿಗ್ಧತೆ ಒದಗಿಬರುತ್ತದೆ ಎಂದರೆ ಉತ್ತರಿಸುವುದಿರಲಿ ಪ್ರಶ್ನೆಯನ್ನು ಎದುರಿಸುವುದೂ […]

Back To Top