Category: ರಂಗ ರಂಗೋಲಿ

ರಂಗದ ಮೇಲಿನ ಕೆಮಿಸ್ಟ್ರಿಗೆ, ರಂಗದ ಕೆಳಗಿನ ಕಲಾವಿದರ ಅನ್ಯೋನ್ಯತೆ, ಕಾಳಜಿ, , ಹಾಸ್ಯ ಲಾಸ್ಯಗಳು ಅತ್ಯಂತ ಅಗತ್ಯ ಜೀವತಂತುಗಳು ಎಂಬುದನ್ನು ನಾನು ನಿಧಾನವಾಗಿ, ಪಾರಿವಾಳ ಒಂದೊಂದೇ ಕಾಳುಗಳನ್ನು ಹೆಕ್ಕಿ ನುಂಗುವಂತೆ, ಕಲಿಯುತ್ತಲೇ ಇದ್ದೆ.

ಹೊರಡುವ ಘಳಿಗೆ ತನ್ನ ಹೆಂಡತಿ ತನ್ನನ್ನು ಹಿಂದೆ ಕರೆಯುವಳೆಂದು ಆಸೆಯಿಂದ ದಿಟ್ಟಿಸುತ್ತಾನೆ. ಆದರೆ ಆಕೆಗೆ ಅದರ ಗಮನವೇ ಇರುವುದಿಲ್ಲ. ಅವನು ನಿರಾಸೆ,ನೋವಿನಲ್ಲಿ ಹೊರಡುತ್ತಾನೆ. ಈ ದೃಶ್ಯದ ಮುಕ್ತಾಯದಲ್ಲಿ ಸಭಾಂಗಣ ನಿಂತು ಕಲಾವಿದನ ಅಭಿನಯಕ್ಕೆ ಚಪ್ಫಾಳೆ ಮಳೆ ಸುರಿಸಿತ್ತು.

ಎತ್ತರದ ಹೊಸ್ತಿಲಿನಾಚೆಗಿನ ಅಂಗಳಕ್ಕೆ ಮನೆಯ ಸೊಸೆ ದಾಟಿ ಬಂದದ್ದೇ, ನಾಟಕದ ಮೊದಲ ದೃಶ್ಯಕ್ಕೆ ತೆರೆ ತೆರೆದಂತೆಯೇ, ಅಲ್ಲವೇ.

ಅಂಕಣ ಬರಹ “ಆಕಾಶವಾಣಿಯ ಅವಕಾಶದಾಕಾಶ” “ಬರೆದ ಕಥೆ ಹಾಗೇ ಬಿಡುವಂತಿಲ್ಲ. ವಿಳಾಸ ಕೊಡುತ್ತೇನೆ. ಆಕಾಶವಾಣಿಗೆ ಕಳುಹಿಸು. ನೋಡೋಣ! ನೀನು ಎಂತಹ  ಕಥೆಗಾರ್ತಿ”.ನಾನು ಬರೆದ ಕಥೆಯೊಂದು ಸರ್ ಗೆ ಸಿಕ್ಕಿ ಗಂಡ- ಹೆಂಡತಿ ಅದನ್ನು ಓದಿ ಮುಂದಿನ ಬಾರಿ ಅವರ ಮನೆಗೆ ಹೋದಾಗ ಇಬ್ಬರೂ ಸೇರಿ ವಿಚಾರಣೆಗೆ ಕಟಕಟೆಯಲ್ಲಿ ನಿಲ್ಲಿಸಿದ್ದರು. ತಲೆತಗ್ಗಿಸಿದವಳ ಪರ ಲಾಯರ್ ಆಗಿ ಅವರ ಶ್ರೀಮತಿ ನಿಂತಿದ್ದರು. ಕೊನೆಗೂ ತೀರ್ಪು ಹೊರಬಿದ್ದಿತ್ತು.  ಚಿಕ್ಕನಡುಕ,ಸಂಭ್ರಮ ಜೊತೆಯಾಗಿತ್ತು. ಆದರೆ ಸರ್ ಗೆ ಆಕಾಶವಾಣಿಯಲ್ಲಿ ಪರಿಚಯವಿದೆ. ಅವರು ಒಂದು ಮಾತು […]

ಅಂಕಣ ಬರಹ ಹೊಸ್ತಿಲಾಚೆಗಿನ ರಂಗಜೀವಿ ಬದುಕ ರಂಗವನ್ನು ಆತ್ಮ ತೊರೆದಿತ್ತು. ಮನೆಯ ಉದ್ದದ ಚಾವಡಿಯಲ್ಲಿ ಅತ್ತೆಯ ಶರೀರ  ಮಲಗಿತ್ತು. ತಲೆಯ ಬದಿಯಲ್ಲಿ ತೆಂಗಿನ ಕಾಯಿಯ ಒಂದು ಭಾಗದೊಳಗೆ ದೀಪ ಮೌನವಾಗಿ ಉರಿಯುತ್ತಿತ್ತು. ರಾಶಿ ಮೌನಗಳನ್ನು ದರದರನೆ ಎಳೆತಂದು ಕಟ್ಟಿ ಹಾಕಿದ ರಾಕ್ಷಸ ಮೌನ ಘೀಳಿಡುತ್ತಿತ್ತು. ಎದೆ ಒತ್ತುವ, ಕುತ್ತಿಗೆ ಒತ್ತುವ ನಿರ್ವಾತಕ್ಕೆ ಅಂಜಿ ಮುಂಬಾಗಿಲಿಗೆ ಬಂದೆ. ಶರೀರವನ್ನು ಉದ್ದಕ್ಕೆ ನೆಲಕಂಟಿಸಿ ಮುಖವನ್ನು ಅಡ್ಡಕ್ಕೆ ಬಾಗಿಸಿ ‘ಪೀಕು’ ಮಲಗಿದ್ದಾಳೆ. ನಾನು ಅಲ್ಲಿರುವುದು ತಿಳಿದಿಲ್ಲವೇ? ಯಾವಾಗಲೂ ನಡಿಗೆಯ ಪದತರಂಗವನ್ನು ಗಬಕ್ಕೆಂದು […]

ರಂಗ ರಂಗೋಲಿ
ಹೊರಗಡೆ ಕಪ್ಪು ಇರುಳು. ತೆಂಗಿನಪಾತಿ ಕಪ್ಪಾಗಿ ಅದರ ಹಿಂಬದಿ ಚಿತ್ತಾರಗೊಂಡು ಅರಳಿದ ಚಂದಿರನನ್ನು ಆ ಮರದ ಕಿಟಕಿಯ ಸರಳುಗಳ ನಡುವಿನಿಂದ ನೋಡುತ್ತಲೇ ಇದ್ದೆ. ಮಲಗಿದ ಭಂಗಿ ಸಡಿಲಿಸಿ ಅದೇ ಹಳೆಯ ದೊಡ್ಡ ಮಂಚದ ಮೇಲೆ ಕೂತು ಕಣ್ಣಬೊಗಸೆಗೆ ದಕ್ಕುವಷ್ಟು ದೂರ ದೃಷ್ಟಿ ನೆಟ್ಟರೆ, ಎದೆಗಿಳಿಯುತ್ತಿದ್ದ ಚಂದ್ರಿಕೆಯ ಒಡಲ ರಾಗ ತುಂಡಾಗಿ ಬಿಡುವ ಅಂಜಿಕೆ

ಪೂರ್ಣಿಮಾ ಸುರೇಶ್
ಈಗ ಅನಿಸುತ್ತದೆ. ನವರಸಗಳನ್ನು ರಂಗದಲ್ಲಿ ಅನುಭವಿಸಿ ಎದುರಿನಲ್ಲಿ ಕೂತು ನೋಡುವ ಮನಸ್ಸುಗಳಿಗೆ ವರ್ಗಾಯಿಸಬೇಕಾದರೆ, ಮೊದಲು ಅದಕ್ಕಿಂತ ಹಿರಿದಾದ ರಂದಲ್ಲಿ ನಾವೂ ಪಾತ್ರವಾಗುವ ಅದ್ಬುತಕ್ಕೆ ತೆರೆದುಕೊಳ್ಳುತ್ತ, ಭಾವಗಳನ್ನು ಆರ್ತಿಯಿಂದ ಹೃದಯದೊಳಗೆ ಭರಿಸಬೇಕು. ಆಗ ರಂಗಭೂಮಿಯಲ್ಲಿ ಭಾವನೆಗಳ ಜೊತೆಗಿನ ಆಟ ಸುಲಲಿತವಾದೀತು.

ವಿಕ್ರಮಶಿಲಾ” ಮೂರು ಮಹಡಿಯ ಕಟ್ಟಡದ ಮೆಟ್ಟಲುಗಳನ್ನು ಏರುತ್ತಿದ್ದೆ‌. ಹಂಚಿನ ಮಾಡಿನ ಶಾಲೆಯ ಆಂಗಳದಿಂದ ಮಂಗಳನ ನೆಲದತ್ತ ಹಾರಿ ಹೊರಟ ಉಪಗ್ರಹದ ಏಕಾಂಗೀ ಹೆಜ್ಜೆಗಳವು.

ಅಂಕಣ ಬರಹ ಮುಗಿಲ ಪ್ರೇಮದಿ ಕಳೆಗಟ್ಟಿತು ಇಳೆ ನನ್ನ ಅರಳಿದ ಬೊಗಸೆಯೊಳಗೆ ಅವಳು ಸುರಿದ ಹಣದಲ್ಲಿ  ಮಡಚಿದ ಹತ್ತು, ಐದು, ಎರಡು, ಒಂದರ ‌ನೋಟುಗಳು. ಅಘ್ರಾಣಿಸಿದರೆ ಅವಳ ಬೆವರು ಹಾಗೂ ಹಸುಗಳ ಉಸಿರನ ಪರಿಮಳ ಬೆರೆತುಬಂದಂತೆ. ಆ ದಿನ ಬೆಳಗ್ಗೆ ನನ್ನಜ್ಜಿ ನನ್ನನ್ನು ಹತ್ತಿರ ಕರೆದು ಕೂರಿಸಿಕೊಂಡಳು “ಬಾಳೀ, ನಿನ್ನ ಶಾಲೆಯಲ್ಲಿ ಇವತ್ತು ಗಮ್ಮತ್ತು ಅಲ್ವಾ. ನೀನು ಕಲಾವಿದೆ. ತಗೋ 100 ರೂಪಾಯಿ. ಇವತ್ತು ಹೊಸ ದಿರಿಸು ತಗೋ. ನಿನ್ನಿಷ್ಟದ್ದು. ಅದನ್ನು ಹಾಕಿಕೊಂಡು ಹೋಗು. ನೋಡು,ನಿನ್ನ ಖುಷಿ  […]

ಅಂಕಣ ಬರಹ ವಸಂತ ಬಂದ! ರಂಗಕ್ಕೆ ರಂಗು ತಂದ!! ವೈಶಾಲಿ ನಗರದ ಬೀದಿ. ವೈಭವದ ಅರಮನೆ. ಅದು ರಾಜನ ಅರಮನೆಯಲ್ಲ. ನಗರದ ಮುಖ್ಯ ನೃತ್ಯಗಾರ್ತಿ,ರಾಜನರ್ತಕಿ ಆಮ್ರಪಾಲಿಯ ಮನೆ. ಆಮ್ರಪಾಲಿ ಚಿಗುರು ಮಾವಿನ ತಳಿರಂತಹವಳು. ಅವಳ ಸೌಂದರ್ಯದ ಕಥನ ಕೇಳಿ ನೆರೆ ಹೊರೆಯ ರಾಜರೂ, ರಾಜಕುಮಾರರೂ ಬಂದಿದ್ದಾರೆ. ಅವಳ ಪ್ರೇಮ ಭಿಕ್ಷೆಗಾಗಿ ಹೊರಬಾಗಿಲಲ್ಲಿ ಸರದಿಯಲ್ಲಿ ಕಾಯುತ್ತಿದ್ದಾರೆ. ಆಕೆ ಒಳಗಡೆ ಇದ್ದಾಳೆ, ಪ್ರಣಯದ ತುರೀಯದ ಅಮಲಲ್ಲಿ. ಆದರೂ ಅದೇನೋ ಬೇಸರ. ಅವಳನ್ನು ಆವರಿಸಿದೆ. ಎಲ್ಲವೂ ಇದ್ದರೂ ಏನೋ ಕೊರತೆ. ತಳಮಳ.  […]

Back To Top