ಅಂಕಣ ಬರಹ ಮರಿಕಪ್ಪೆ ಹಾರಿತು ಬಾವಿಯ ಹೊರಗೆ ಚಾವಣಿಯ ಹೊರೆ ಕಳೆದು ಶಿಥಿಲವಾದರೂ ನಿಂತೇ ಇದ್ದ ಗೋಡೆಯದು. ಆ ಮೋಟುಗೋಡೆಯ ಮಗ್ಗುಲಲ್ಲಿ ಕಪ್ಪೆಯಂತೆ ಹಾರಿ ಆ ಬದಿಯ ಕಿಟಕಿಯ ಚೌಕಟ್ಟಿಗೆ ಒಂದು ಕಾಲುಕೊಟ್ಟು ಬಲಗೈಯಿಂದ ಕಿಟಕಿಯ ಸರಳು ಹಿಡಿದು ಮೇಲೇರಿ ಎಡಗಾಲು ಎತ್ತಿ ಆ ಅರ್ಧಗೋಡೆಯ ಮೇಲೆ ಇಟ್ಟು ದೇಹವನ್ನು ನಿಯಂತ್ರಣಕ್ಕೆ ತಂದುಕೊಳ್ಳುತ್ತ ಕೈಗಳನ್ನೂ ಗೋಡೆಯ ಬೋಳುತಲೆ ಮೇಲೆ ಊರಿ ಪುಟ್ಟ ಲಗಾಟೆ ಹೊಡೆದು ಗೋಡೆ ಏರಿ ಕುಳಿತುಕೊಳ್ಳುತ್ತಿದ್ದೆವು. ನಮ್ಮ ಸಿಂಹಾಸನವದು. ಏರಿ ಕೂತವಳು ಮಹಾರಾಣಿ. ಉಳಿದವರು […]
ಅಂಕಣಬರಹ ಗೊಂಬೆಗೆ ತೊಡಿಸಿದ ಬಣ್ಣದ ಅಂಗಿ ಅಳು ತಡೆಯದಾದಾಗ ಆಸರೆಯಾಗುತ್ತಿದ್ದದ್ದು ಒಂದೋ ಅಜ್ಜಿಯ ಮಡಿಲು, ಇಲ್ಲವಾದರೆ ಆ ತಾಯಿಯಂತಹ ಮರದ ತಣಿಲು. ದಪ್ಪದಪ್ಪದ ಎರಡು ಕಾಂಡಗಳು ಬುಡವೊಂದೇ,ಹೆಗಲೆರಡು ಎಂಬ ಹಾಗೆ ನಿಂತಿದ್ದ ಆಲದ ಮರ. ಅದನ್ನು ಅಪ್ಪಿ ಹಿಡಿದು ನಿಂತರೆ ಎಂತಹಾ ದುಗುಡ,ಭಯ,ದುಃಖವನ್ನೂ ಅದು ಹೀರಿ ನಾನು ಹಗುರವಾಗುತ್ತಿದ್ದೆ. ಯಾವುದೋ ಜನ್ಮಾಂತರದ ಬಂಧದ ಸಾಕ್ಷಿಯೇನೋ ಎಂಬಂತೆ ಮುಖ್ಯ ರಸ್ತೆಯ ಒಂದು ಬದಿಗೆ ಉದ್ದದ ನೆರಳು ಹಾಸಿ ನಿಂತ ಆಲದ ಮರವದು. ಅದರ ಪಕ್ಕದಲ್ಲೇ ತುಸು ಅಂತರ ಕಾಪಾಡಿಕೊಂಡು […]
ಅಂಕಣ ಬರಹ ಶಾಲಾರಂಗದೊಳಗೊಂದು ಕೋಲಾಟ ಠಣ್…ಠಣ್… ಠಣ್.. ಗಂಟೆಯ ಸದ್ದು ಒಂಭತ್ತು ಸಾರಿ ಕೇಳಿಸಿತಾ! ಹಾಂ!! ಅದು ನಮ್ಮ ಶಾಲೆಯ ಬೆಳಗಿನ ಗಂಟೆ. ನನ್ನಜ್ಜಿಯ ಹಣೆಯ ನಡುವಿನ ಕುಂಕುಮದ ಬೊಟ್ಟಿನಂತೆ ನಮ್ಮ ಊರಿನ ಕೇಂದ್ರ ಭಾಗದಲ್ಲಿ ಆಧಾರ ಸ್ತಂಭದಂತೆ ಕೂತಿತ್ತು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಹೌದು ಅದು ನಮ್ಮ ಶಾಲೆ. ನಮ್ಮ ಹಳ್ಳಿಯ ಶಾಲೆ. ಬಲಗಾಲಿಟ್ಟು ಒಳಗೆ ಬರಬೇಕು. ಮೊದಲು ಕಾಣಿಸುವುದೇ ಬಿಳೀ ಕಂಬದ ಧ್ವಜಸ್ತಂಭ. ಅದರ ಬುಡದಲ್ಲಿ ಕಟ್ಟೆ . ಅದರ ಹಿಂದೆ, […]
ಅಂಕಣ ಬರಹ ರಂಗ ರಂಗೋಲಿ-06 ಅಜ್ಜಿಯ ಗೂಡಲಿ ಹಾರಲು ಕಲಿತ ಗುಬ್ಬಿ ಮರಿ ಆ ಹಳೇ ಮನೆಯಲ್ಲಿ ತೆಂಗಿನ ಹಸಿ ಮಡಲಿನಿಂದ ಒಂದೊಂದು ಒಲಿಯನ್ನು ತನ್ನ ಚಿಕ್ಕಕತ್ತಿಯಿಂದ ಸರ್ರೆಂದು ಎಳೆದು ನನ್ನ ಆಟಕ್ಕೆ ಹಾವು ,ಬುಟ್ಟಿ, ವಾಚ್,ಕಾಲ್ಗೆಜ್ಜೆ, ಕನ್ನಡಕ ಎಷ್ಟು ಪರಿಕರಗಳು ತಯಾರಾಗುತ್ತಿದ್ದವು. ಮಿದುಳಲ್ಲಿ ಚಿತ್ರವಾದ ಕಲ್ಪನೆಗಳೆಲ್ಲಾ, ಅದ್ಭುತ ಆಟಿಗೆಯಾಗಿ, ಕಲಾಪರಿಕರಗಳಾಗಿ ತಯಾರಾಗುವ ಕಲೆಯ ಕುಲುಮೆಯೇ ಅವರಾಗಿದ್ದರು. ಕಾಡಿಗೆ ಹೋಗಿ ಅದೆಂತದೋ ಕಡ್ಡಿಯಂತಹ ಬಳ್ಳಿ ಎಳಕೊಂಡು ಬರುತ್ತಿದ್ದಳು. ಅದರ ಸಿಪ್ಪೆ ತೆಗೆದು ಹೂ ಬುಟ್ಟಿ,ಅನ್ನ ಬಸಿಯುವ ತಟ್ಟೆ, […]
ಅಂಕಣ ಬರಹ ರಂಗರಂಗೋಲಿ-5 ಪಾತ್ರೆ ತುಂಬಿದ ಇನ್ನೆರಡು ಪಾತ್ರಗಳು ಪೂರ್ಣ… ಪೂ..ರ್ಣ.. ಅವರು ಕರೆಯುತ್ತಿದ್ದಾರೆ!. ತೆಳ್ಳಗಿನ ಸ್ವರವದು. ಉದ್ದ ಜಗಲಿಯನ್ನು ಹಂಚಿಕೊಂಡ ಮೂರನೆಯ ಹೊಸ್ತಿಲಿನ ಕೊನೆಯ ಕೋಣೆಯದು. ಮುಸ್ಸಂಜೆ ಸಮಯ, ಒಬ್ಬರೇ ಆ ಮರದ ಕಿಟಕಿಯ ಬಳಿ ಕೂತು ತಿನ್ನುತ್ತಿದ್ದದ್ದು ಒಂದು ಆಮ್ಲೇಟ್. ಅದೂ ಚಿಕ್ಕದು. ಅದಕ್ಕೆ ಬಹಳ ಹೊತ್ತು ತೆಗೆದುಕೊಳ್ಳುತ್ತಿದ್ದರು. ಆ ಸಮಯ ಮಾತ್ರ ಅವರು ನನ್ನ ಹೆಸರು ಕೂಗುತ್ತಿದ್ದರು. ಮನೆಯ ಹಿಂಬದಿಗೆ ಆ ಕಿಟಕಿಯ ಅರೆ ಕತ್ತಲಿಗೆ ನಾನು ಓಡುತ್ತಿದ್ದೆ. ಕಡ್ಡಿಯಂತಹ ಬಿಳೀ ಬೆರಳುಗಳು. […]
ಅಂಕಣ ಬರಹ ರಂಗ ರಂಗೋಲಿ – ೪ ಚಾವಡಿಯಲ್ಲಿ ರಂಗ ಗೀತೆ ಎಂಟನೇ ತರಗತಿಯ ಕ್ಲಾಸಿನಲ್ಲಿ ಪುಟ್ಟ ಗುಬ್ಬಚ್ಚಿ ದೇಹದ ನಾನು ಮೊದಲನೇ ಬೆಂಚಿನಲ್ಲಿ ಮುದುಡಿ ಕುಳಿತಿದ್ದೆ. ” ದೇವದಾಸಿ ಪದ್ದತಿ,ಬಸವಿ ಪದ್ದತಿ,ಗೆಜ್ಜೆಪೂಜೆ ನಿಷೇಧಿಸಿದರು” ತರಗತಿಯಲ್ಲಿ ಕನ್ನಡದ ಬಾಲಕೃಷ್ಣ ಮೇಷ್ಟ್ರು ಕರ್ನಾಟಕದ ಇತಿಹಾಸದ ಬಗ್ಗೆ ಬಿಡುವಿನಲ್ಲಿ ಕಥೆಯ ರೂಪದಲ್ಲಿ ಹೇಳುತ್ತಿದ್ದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿ ಮೈಸೂರಿನ ಕರ್ತೃ. ಜಾರಿಗೆ ತಂದ ಈ ಕಾನೂನುಗಳು ಹೊಸದಾದ ಮನ್ವಂತರಕ್ಕೆ ನಾಂದಿ ಹಾಡಿತ್ತು. ಥಟ್ಟನೆ ನನ್ನ ಕಣ್ಣೆದುರು, ಆ ದೊಡ್ಡ […]
ಅಂಕಣ ಬರಹ ರಂಗ ರಂಗೋಲಿ-03 ಜಾತ್ರೆಯ ಲೋಕ ಕಲಾವಿದಳೆನಿಸಿಕೊಳ್ಳುವ ಹಂಬಲಿಕೆಗೆ,ಒಲವಿಗೆ ಬಾಲ್ಯದ ಅನುಭವಸ್ವನಗಳು ಓಂ ಕಾರಗಳಾಗಿ ಮೂಡಿರಬೇಕು. ಹಲವು ಕಥೆಗಳು,ಹಲವು ಪಾತ್ರಗಳು,ಆ ಪಾತ್ರಗಳ ಅಭಿನಯ..ಎದುರಿಗೊಬ್ಬ ಕಾಣದ ನಿರ್ದೇಶಕ. ಅವನಿಗೆ ಶರಣಾಗಿ ಬದುಕಿನ ರಂಗಭೂಮಿಯಲ್ಲಿ ಬಗೆಬಗೆಯ ಪಾತ್ರ ಕಥೆ ಅನಾವರಣಗೊಳ್ಳುತ್ತಿತ್ತು. ಈ ‘ಸಿರಿ’ ನೋಟ ಒಬ್ಬ ಕಲಾವಿದೆಯ ಒಳಗನ್ನು..ಅಥವಾ ಕಲೆಯ ಬಗ್ಗೆ ಅತೀವ ಪ್ರೀತಿಭಾವವನ್ನು ಚಿಲುಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಊರ ಉತ್ಸವ ಮುಗಿದರೂ ಅದೇ ಮಂಪರು. ನಾಲ್ಕು ದಿನದ ಜಾತ್ರೆ ರಥೋತ್ಸವದೊಂದಿಗೆ ಸಂಪನ್ನಗೊಳ್ಳುತ್ತಿತ್ತು. ಮರುದಿನವೂ ಹಗಲಿಗೆ ಬೆಳಗಾದಾಗ […]
ಅಂಕಣ ಬರಹ ರಂಗ ರಂಗೋಲಿ -೨ ‘ಸಿರಿ’ ತುಂಬಿದ ಬಾಲ್ಯ ಒಂದು ಭಾವನಾ ಲೋಕದ ಹೊಸಿಲಿನ ಒಳಗೆ ರಂಗು ರಂಗಾದ ಕಲ್ಪನಾಲೋಕ ಶೃಂಗಾರಗೊಂಡು ಕೂತಿತ್ತು. ಅಲ್ಲಿ ನಿತ್ಯ ನರ್ತನ ವಿಲಾಸ. ನನ್ನಲೊಳಗೆ ” ಸಿರಿ” ಎಂಬ ಪ್ರೀತಿ ಅರಳಿದ ಪ್ರಕ್ರಿಯೆಗೆ ಮೂಲ ಬಿತ್ತನೆಯಿದು. ಹಾಂ..ಸಿರಿ!. ಹೌದು..ಸ್ತ್ರೀ ಕುಲಕ್ಕೆ ಪ್ರತಿಭಟನೆಯ ದಾರಿಯನ್ನು ತೋರಿಸಿಕೊಟ್ಟ, ಪುರುಷ ಪ್ರಧಾನ ಸಮಾಜದ ವಿರುದ್ಧ ಬಂಡಾಯ ಸಾರಿದ ಹಳ್ಳಿಯ ಹೆಣ್ಣಿನ ಆತ್ಮವಿಶ್ವಾಸದ ಪ್ರತೀಕ. ಸ್ತ್ರೀತ್ವವನ್ನು ಅರಿವಿನ ನೆಲೆಯಲ್ಲಿ ಗ್ರಹಿಸಬೇಕಾದ ಒತ್ತಾಯವನ್ನು ತಿಳಿಸಿದ ಇಲ್ಲಿನ ಮಣ್ಣಿನಲ್ಲಿ […]
ಅಂಕಣ ಬರಹ-01 ನಾಂದಿ ಪದ್ಯ ತೆಂಗಿನ ಮಡಲಿನಿಂದ ನೇಯ್ದ ತಟ್ಟಿ ಆ ಮನೆಯ ಹೊರ ಆವರಣದ ತಡೆ ಗೋಡೆ. ಮಣ್ಣಿನ ನೆಲಕ್ಕೆ ಮಣ್ಣಿನದ್ದೇ ಪರಿಮಳ. ಮಳೆಗಾಲದಲ್ಲಿ ಆ ಮನೆಯ ನೆಲವು ನೀರ ಒಸರಿಗೆ ಹಸಿ ಹಸಿಯಾಗುತ್ತದೆ. ಹೊರಗೆ ಧೋ ಎನ್ನುವ, ಹನಿಹನಿ ಟಪಟಪ ಹನಿಸಿ ಮರ್ಮರಿಸುವ, ಗುನುಗುವ, ಆರ್ಭಟಿಸುವ ಹಠಮಾರಿ ಮಳೆ. ಚಾಪೆಯಂತೆ ಹೆಣೆದ ಆ ತಟ್ಟಿಯನ್ನು ನನ್ನ ಪುಟ್ಟ ಬೆರಳಿನಲ್ಲಿ ಅಗಲಿಸಿ ಒಂದು ಕಣ್ಣನ್ನು ಆ ಖಾಲಿಗೆ ಹೊಂದಿಸಿ..ಇನ್ನೊಂದು ಕಣ್ಣ ಮುಚ್ಚಿ ಹೊರಗೆ ಸುಯ್ಯುತ್ತಿದ್ದ ಮಳೆಯೊಂದಿಗೆ […]