ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….4 ” ಪರಾವಲಂಬನೆಯ ಕಠಿಣ ದಿನಗಳು…” “ಆತ್ಮಾನುಸಂಧಾನ “ ಸಾಣೆಕಟ್ಟೆಯಲ್ಲಿ ದೊಡ್ಡಮ್ಮನ ಆಶ್ರಯ ಗಣಪುವಿನ ಎರಡು ಹೊತ್ತಿನ ಊಟ ತಿಂಡಿಯ ಚಿಂತೆ ಬಗೆಹರಿಸಿತು. ಆದರೆ ಗಣಪು ಬಯಸಿದ್ದು ಅಕ್ಷರಾಭ್ಯಾಸ. ಆಕಸ್ಮಿಕವಾಗಿ ಸಾಣೆಕಟ್ಟೆಗೆ ಬಂದ ನಾಡುಮಾಸ್ಕೇರಿಯ ಬೇಲೆ ಹಿತ್ತಲ ರಾಕು ಎಂಬ ತರುಣ ಹಮ್ಮಜ್ಜಿಯ ಮನೆಯಲ್ಲಿದ್ದ ಗಣಪುವಿನ ಯೋಗಕ್ಷೇಮ ವಿಚಾರಿಸುತ್ತ ಆತನ ಕಲಿಯುವ ಆಸೆಯನ್ನು ಗ್ರಹಿಸಿದ. ಊರಿಗೆ ಮರಳಿದವನು ಗಣಪುವಿಗೆ ಮತ್ತೆ ಹನೇಹಳ್ಳಿ ಹಾಸ್ಟೇಲಿನಲ್ಲಿ ಅವಕಾಶ ದೊರೆಯುವಂತೆ […]
ಅಂಕಣ ಬರಹ ರಾಮಕೃಷ್ಣ ಗುಂದಿ ಆತ್ಮಕತೆ–03 ಅಕ್ಷರ ಬೀಜದ ಬೆಳಕಿನತ್ತ….. ಗುಂದಿ ಹಿತ್ತಲಿನ ಎರಡೂ ಕುಟುಂಬಗಳು ಗೇಯ್ದು ಉಣ್ಣುವ’ ಬದುಕಿನಲ್ಲಿ ಸಂತೃಪ್ತಿ ಕಂಡಿದ್ದವು. ಅಕ್ಷರ ದಾರಿದ್ರö್ಯದ ದಟ್ಟ ಬಡತನವೊಂದು ಅವರಿಗೆ ಬಡತನವೇ ಅನ್ನಿಸಿರಲಿಲ್ಲ. ಅಂಥ ಕುಟುಂಬಗಳಲ್ಲಿ ಗಣಪು ಎಂಬ ಹುಡುಗನೊಬ್ಬ ಹೇಗೋ ಅಕ್ಷರ ಕಲಿಕೆಗೆ ಆಸೆಪಟ್ಟು ಅಕ್ಷರ ಬೀಜದ ಬೆಳಕಿನ ಬೆನ್ನು ಹತ್ತಿದ. ಸಮೀಪದ ಹೆಗ್ರೆ ಶಾಲೆಯಲ್ಲಿ ಅ, ಆ ಕಲಿಕೆಯ ಹಂತದಲ್ಲೆ ತಾಯಿ ತೀರಿಕೊಂಡಳು. ಶಾಲೆ ಕಲಿಯುವ ಹಂಬಲಕ್ಕೆ ಮತ್ತುಷ್ಟು ತೊಡಕುಗಳಾದವು. ಮತ್ತೆ ಕೆಲವು ದಿನಗಳ […]
ರಾಮಕೃಷ್ಣ ಗುಂದಿ ಆತ್ಮಕತೆ–02 ಗುಂದಿ ಹಿತ್ತಲದಲ್ಲಿ ಕಡ್ಲೆ ಬೇಸಾಯ ಗಂಗಾವಳಿ ನದಿಯ ದಕ್ಷಿಣ ತೀರದಿಂದ ನದಿಯ ಶಾಖೆಯಾಗಿ ಚಿಕ್ಕ ಹಳ್ಳವೊಂದು ಅಗ್ಗರಗೋಣ ಗ್ರಾಮದ ಅಂಚಿನಿಂದ ಹೆಗ್ರೆ ಗ್ರಾಮದವರೆಗೆ ಹರಿದು ಅಗ್ರಗೋಣ ಮತ್ತು ನಾಡುಮಾಸ್ಕೇರಿ ಗ್ರಾಮಗಳ ನಡುವೆ ಗಡಿರೇಖೆಯೊಂದನ್ನು ನಿರ್ಮಿಸಿದೆ. ಹಳ್ಳದ ಇಕ್ಕೆಲದಲ್ಲೂ ವಿಸ್ತಾರವಾದ ಗದ್ದೆಬಯಲು ಹನೇಹಳ್ಳಿಯ ಅಂಚಿನವರೆಗೂ ವ್ಯಾಪಿಸಿದೆ. ಹಳ್ಳದ ಪೂರ್ವ ದಂಡೆಯ ಅಗ್ಗರಗೋಣ ಗ್ರಾಮ ವ್ಯಾಪ್ತಿಯ ಬಯಲಲ್ಲಿ ಒಂದು ಪುಟ್ಟ ದಿನ್ನೆಯಿದೆ. ಹಳ್ಳಕ್ಕೆ ಹತ್ತಿರವಾಗಿ ಎರಡು-ಮೂರು ಗುಂಟೆಯ ಅಳತೆಯಲ್ಲಿ ವಿಸ್ತರಿಸಿಕೊಂಡಿರುವ ಈ ಗುಂದವನ್ನು ಜನರು ವಾಡಿಕೆಯಲ್ಲಿ […]
ಅಂಕಣ ಬರಹ-01 ಆತ್ಮಕತೆಯ ಮೊದಲ ಕಂತು.. ಅಸ್ತಿತ್ವವಿಲ್ಲದ ಅವ್ವನ ಹೆಜ್ಜೆಗಳು ಅಕ್ಟೋಬರ್, ೧, ೨೦೦೮ ಕಾರವಾರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲನಾಗಿ ಕರ್ತವ್ಯಕ್ಕೆ ಹಾಜರಾದೆ. ಕಳೆದ ಮೂವತ್ಮೂರು ವರ್ಷಗಳ ಸುದೀರ್ಘ ಅವಧಿಯಲ್ಲಿ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕನಾಗಿ ಸೇವೆ ಸಲ್ಲಿಸುತ್ತಿರುವಾಗಿನ ಸಿಹಿ ಕಹಿ ನೆನಪುಗಳ ಚಿಪ್ಪಿನಿಂದ ಪೂರ್ತಿಯಾಗಿ ಹೊರಬರುವುದು ಇನ್ನೂ ಸಾಧ್ಯವಾಗಿರಲಿಲ್ಲ. ಮುಂದಿನ ವೃತ್ತಿನಿರತ ಬದುಕಿನ ನಾಲ್ಕು ವರ್ಷಗಳನ್ನು ಕಾರವಾರದ ಹೊಸ ಪರಿಸರದಲ್ಲಿ ಹೇಗೆ ಹೊಂದಿಸಿಕೊಳ್ಳಬೇಕೆಂಬ ಆಲೋಚನೆ ಒಂದುಕಡೆ ಮನಸ್ಸನ್ನು ಕೊರೆಯುತ್ತಿತ್ತು. ಕಾಲೇಜ್ […]