ವಚನಚಳುವಳಿಗೆ ಕನ್ನಡ ಸಾಹಿತ್ಯದಲ್ಲಿ ಬಹುದೊಡ್ಡ ಸ್ಥಾನವಿದೆ. ವಚನಗಳಲ್ಲಿ ಆಡಿದ, ಸಾರಿದ, ಸಾಧಿಸಿ ತೋರಿಸಿದ ಮೌಲ್ಯಗಳು ಕೇವಲ ಘೋಷಣೆಗಳಾಗದೆ ನಡೆ ನುಡಿಯಲ್ಲಿ ಒಂದಾಗಿ ಏಕವನ್ನು ಸ್ಥಾಪಿಸಿದ ಕಾರಣದಿಂದ ವಚನಕಾರರು ಈ ನೆಲದಲ್ಲಿ ಮಾನ್ಯ ಮತ್ತು ಮುಖ್ಯರಾಗುತ್ತಾರೆ.
ಅಂಕಣ ಬರಹ ಅಗ್ಘವಣಿಯ ಹಂಪಯ್ಯನ ವಚನವೊಂದರ ಐತಿಹಾಸಿಕ ವಿವೇಚನೆ ಅಗ್ಘವಣಿಯ ಹಂಪಯ್ಯನ ವಚನವೊಂದರ ಐತಿಹಾಸಿಕ ವಿವೇಚನೆ ಹಂಸಪತಿ ಗರುಡಪತಿ ವೃಷಭಪತಿ ರ್ವಜೀವಾಧಿಪತಿ ದೇವರಾಯ ಮಹಾರಾಯನ ಅರಸುತನ ಹೊಸತು ಓಲಗಕ್ಕೆ ಬಾರ; ಸಿಂಹಾಸನದಲ್ಲಿ ಕುಳ್ಳಿರ; ಸ್ತ್ರೀಲಂಪಟನಾಗಿ ಅಂತಃಪುರ ಬಿಟ್ಟು ಹೊರವಡ; ಕಪ್ಪಕಾಣಿಕೆಯನೊಪ್ಪಿಸಿಕೊಂಬವರಿಲ್ಲ. ಗುರುವೆಂಬ ತಳವಾರನಾಜ್ಞೆ ಕೆಟ್ಟಿತ್ತು. ತರೆದ ಬಾಗಿಲ ಮುಚ್ಚುವರಿಲ್ಲ; ಮುಚ್ಚಿದ ಬಾಗಿಲ ತೆರೆವರಿಲ್ಲ; ಹಂಪೆಯ ವಿರುಪಯ್ಯನ ಅರಸುತನ ಕೆಟ್ಟಿತ್ತು ಭಕ್ತರೆಂಬುವವರಿನ್ನು ಬದುಕಲೆಬಾರದು ೧ ಅಗ್ಘವಣಿಯ ಹಂಪಯ್ಯ ವಚನ ಚಳುವಳಿಯ ಕೊನೆಯ ಹಂತದಲ್ಲಿ ಬಂದವನು. ವಿಜಯನಗರದ ದೇವರಾಯ (ಕ್ರಿ.ಶ. […]
ಅಂಕಣ ಬರಹ ರುದ್ರಭೂಮಿಯಲೇ ಜ್ಞಾನೋದಯ ಅಲ್ಲಮಪ್ರಭು ಭಾರತೀಯ ದಾರ್ಶನಿಕ ಚರಿತ್ರೆಯಲ್ಲಿ ಬಹಳ ದೊಡ್ಡ ಹೆಸರು. ಹನ್ನೆರಡನೆಯ ಶತಮಾನದ ಬಹುದೊಡ್ಡ ತಾತ್ವಿಕ ವಚನಕಾರ. ಇವನಷ್ಟು ನಿಖರ, ನೇರ ಮತ್ತು ಸ್ಪಷ್ಟವಾಗಿ ತಾತ್ವಿಕ ಸಂಘರ್ಷಕ್ಕೆ ನಿಲ್ಲುವ ಮತ್ತೊಬ್ಬನನ್ನು ಹುಡುಕಿದರೂ ವಚನಕಾರರಲ್ಲಿ ಸಿಕ್ಕುವುದು ಬಹಳ ಕಷ್ಟ ಮತ್ತು ವಿರಳ. ಸಾಮಾಜಿಕ ಸುಧಾರಣೆಯೇ ಪ್ರಮುಖ ಧ್ಯೇಯವಾಗಿ ನಡೆದ ಚಳುವಳಿಯ ಉಪೋತ್ಪನ್ನವಾಗಿ ಹುಟ್ಟಿದವು ವಚನಗಳು. ಕೊಂಡುಗೊಳಿ ಕೇಶಿರಾಜನಿಂದ ಕೊನೆ ಕೊನೆಯ ವಚನಕಾರನೆಂದು ಕರೆವುದಾದರೆ ಅಗ್ಘವಣಿಯ ಹಂಪಯ್ಯನವರೆಗೂ ಈ ವಚನ ಚಳುವಳಿಯ ಸಾಮಾಜಿಕ, ರಾಜಕೀಯ, […]
ಅಂಕಣ ಬರಹ ವಸಾಹತುವಿನಿಂದ ಬಿಡುಗಡೆಗೆ ಭಾಷೆ ಕೊಟ್ಟವ ( ಬಸವಣ್ಣನವರ ಒಂದು ವಚನದ ಭಾಷಿಕ ವಿವೇಚನೆ ) ಕನ್ನಡ ಸಾಹಿತ್ಯ ಸಂಸ್ಕೃತದ ಪ್ರಭಾವಕ್ಕೆ ಸಿಕ್ಕು ವಸ್ತು, ರೂಪ, ಅಭಿವ್ಯಕ್ತಿಯ ಕ್ರಮದಲ್ಲಿ ಬೆಳವಣಿಗೆ ಹೊಂದಿ ಜನಸಾಮಾನ್ಯರಿಂದ ಬಹುದೂರ ನಿಂತಿದ್ದುದು ಎಲ್ಲಕಾಲದಲ್ಲಿಯೂ ಸತ್ಯವೇ ಸರಿ. ಹನ್ನೆರಡನೆಯ ಶತಮಾನದ ವಚನ ಚಳುವಳಿಯ ಸಾಹಿತ್ಯ ರೂಪ ಮತ್ತು ಅದರೊಳಗಿನ ಸಂವೇದನೆಗಳು ನೆಲದ ಬೇಡಿಕೆ, ಸದ್ಯದ ತುರ್ತಿಗೆ ಸ್ಪಂದಿಸಿ ಜನಸಾಮಾನ್ಯರ ನಾಡಿಮಿಡಿತಕ್ಕೆ ಸ್ಪಂದಿಸಿದ್ದು. ಸಂಸ್ಕೃತದ ಮಾರ್ಗ ಸಂಪ್ರದಾಯಕ್ಕೆ, ಮಹಾಕಾವ್ಯ ಪರಂಪರೆಗೆ ವಿರುದ್ಧವಾಗಿ ತನ್ನದೇ […]
ಅಂಕಣ ಬರಹ ಘೋರಾರಣ್ಯದಲ್ಲಿ ಹಾರುವ ಹಂಸೆ ಸಮಾಜದಲ್ಲಿ ತುಳಿತಕ್ಕೊಳಗಾದ ಜನರ ಪರವಾದ ನಿಲುವನ್ನು ತಾಳಿದ ಸಾಹಿತ್ಯಕ ಮತ್ತು ಧಾರ್ಮಿಕ ಚಳುವಳಿಯೆಂದರೆ ಅದು ವಚನಸಾಹಿತ್ಯ. ಅದರ ಉಗಮಕ್ಕೆ ಕಾರಣವಾದದ್ದು ಬಸವಾದಿ ಪ್ರಮಥರ ಧಾರ್ಮಿಕ ತಾತ್ವಿಕ ಸುಧಾರಣೆಗಳು ಅದರೊಂದಿಗಿನ ಸಾಮಾಜಿಕ ಸುಧಾರಣೆ. ಅವಿದ್ಯಾವಂತರಿಂದ ವಿದ್ಯಾವಂತರವರೆವಿಗೂ ತಮ್ಮದೇಯಾದ ಸಾಮಾಜಿಕ, ಧಾರ್ಮಿಕವಾಗಿ ಜೀವನಕ್ರಮದ ಬಗೆಗಿನ ಕಾಳಜಿಯ ಅಭಿವ್ಯಕ್ತಿಯು ಮುಕ್ತವಾಗಿ ನಡೆದದ್ದಾಗಿದೆ. ಸಮಾಜ ಸುಧಾರಣೆಯು ಮುಖ್ಯ ಆಶಯವಾಗಿ ವಚನಗಳು ರಚನೆಯಾದರೂ ಅದರೊಂದಿಗಿನ ಸಾಹಿತ್ಯಿಕ ಅಂಶಗಳು ಉಪೋತ್ಪನ್ನವಾಗಿ ಹೊಂದಿ ವಚನಗಳು ರಚಿಸಲ್ಪಟ್ಟವು. ಆ ಚಳುವಳಿಯಲ್ಲಿನ ‘ಕಂಭದ […]