ಅಂಕಣ ಬರಹ ಬೆಳೆದು ದೊಡ್ಡವರಾಗುವುದೆಂದರೆ ಬೆಳೆದು ದೊಡ್ಡವರಾಗುವುದೆಂದರೆ ಪ್ರಜ್ಞೆ ಮತ್ತು ಸೂಕ್ಷ್ಮತೆಗಳನ್ನು ಕಳೆದುಕೊಳ್ಳುವುದಲ್ಲ.ಹದಿಹರೆಯದಲ್ಲಿ ಮಕ್ಕಳು ಬೆಳೆಸಿಕೊಳ್ಳುವ ಮನೋಧೋರಣೆಯನ್ನ ನಂತರ ಬದಲಿಸುವುದು ಬಹಳ ಕಷ್ಟ. ಇದೇ ಕಾರಣಕ್ಕೆ ಹದಿಹರೆಯದ ಮಕ್ಕಳ ತಾಯ್ತಂದೆಯರು ಬಹಳ ವ್ಯಥಿತರಾಗುವುದು.ಮಕ್ಕಳು ಹೇಳುವ ಒಂದು ಸಣ್ಣ ಸುಳ್ಳು , ಅವರು ತೋರುವ ಒಂದು ಸಣ್ಣ ನಿರ್ಲಕ್ಷ್ಯ ತಂದೆ ತಾಯಿಗೆ ಬಹಳ ನೋವನ್ನುಂಟುಮಾಡುತ್ತದೆ. ಮಕ್ಕಳೇ ಅವರ ಜಗತ್ತು.ಮಕ್ಕಳಿಗಾಗೇ ಬದುಕು ಸವೆಸುವ ತಾಯ್ತಂದೆಯರನ್ನ ಮಕ್ಕಳು ಅರ್ಥ ಮಾಡಿಕೊಳ್ಳುವಲ್ಲಿ ಬಹಳಷ್ಟು ಸಲ ಎಲ್ಲೋ ಸೋಲುತ್ತಾರೆ. ಹಾಗೊಮ್ಮೆ ಅರ್ಥ ಮಾಡಿಕೊಂಡರೂ ಕಾಲ […]
ಅಂಕಣ ಬರಹ ಕಾಲೆಳೆವ ಕೈಗಳೇ ಮೆಟ್ಟಿಲಾಗಲಿ ಸಾಮಾನ್ಯವಾಗಿ ಕಾಲೆಳುವುದು ಅಥಬಾ ಲೆಗ್ ಪುಲ್ಲಿಂಗ್ ಎಂದರೆ ಕೀಟಲೆ ಮಾಡುವುದು ಅಥವಾ ಇಲ್ಲದ್ದನ್ನು ಇದೆ ಎಂದು ತಮಾಷೆಗಾಗಿ ನಂಬಿಸುವುದು ಎಂದರ್ಥವಿದೆ. ಆದರೆ ಇಲ್ಲಿ ಕಾಲೆಳುವುದೆಂದರೆ ಹಗುರ ಅರ್ಥದಲ್ಲಿ ಇಲ್ಲ. ಮುನ್ನಡೆವವನ ದಾರಿಗೆ ಅಡ್ಡ ಹಾಕುವುದಿ ಎಂಬರ್ಥದಲ್ಲಿ ಬಳಸಲಾಗಿದೆ. ಬಹಳ ಹಿಂದೆ ಕೇಳಿದ್ದ ಕಥೆಯೊಂದು ನೆನಪಾಗುತ್ತಿದೆ. ಒಂದು ಕಾಡಿನಲ್ಲಿ ಒಂದು ಬಾವಿ. ಆ ಬಾವಿಯಲ್ಲಿ ನೂರಾರು ಕಪ್ಪೆಗಳು. ಬಾವಿಯನ್ನೇ ಪ್ರಪಂಚವೆಂದುಕೊಂಡು ನೆಮ್ಮದಿಯಿಂದಿದ್ದವು. ಒಮ್ಮೆ ಅಲ್ಲಿದ್ದ ಒಂದು ಕಪ್ಪೆಗೆ ಯಾಕೋ ಆ […]
ಅಂಕಣ ಬರಹ ಯಾರಿಗೆ ಯಾರುಂಟು ಯಾರಿಗೆ ಯಾರುಂಟು ಎರವಿನ ಸಂಸಾರ ನೀರ ಮೇಲಣ ಗುಳ್ಳೆ ನಿಜವಲ್ಲ ಹರಿಯೆ.. ಶುದ್ಧ ವೈರಾಗ್ಯ ಮೂಡಿಸುವ ಈ ದಾಸರ ಪದವನ್ನು ಬಹುಶಃ ಹಳೆಯ ತಲೆಮಾರಿನವರು ಅದೆಷ್ಟು ಸಲ ಗುಣುಗುಣಿಸಿರಬಹದೋ ಏನೋ.. ನಿಜವೆ ? ಈ ಪ್ರಪಂಚದಲ್ಲಿ ಯಾರಿಗೂ ಇಲ್ಲವೆ? ಲೌಕಿಕ ವ್ಯಾಪಾರಿಗಳಾದ ನಾವುಗಳು ಕಟ್ಟಿಕೊಂಡ ಸಂಸಾರ , ಕೈಕೊಂಡ ವೃತ್ತಿ , ಗೆಳೆಯರು ,ಬಂಧುಗಳು ಇವರೆಲ್ಲ ಏನೂ ಅಲ್ಲವೆ? ನೀರಿನೊಳಗಿದ್ದರೂ ನೀರನ್ನು ಸೋಕಿಸಿಕೊಳ್ಳದ ಕಮಲಪತ್ರದಂತಹ ಬದುಕು ಸಾಮಾನ್ಯರಿಗೆ […]
ಅಂಕಣ ಬರಹ ಮೌನದ ಮಾತು… ಇದನ್ನ ಈ ಮುಂಚೆ ಯಾರಾದರೂ ಹೇಳಿರಬಹುದು ..ನನಗೆ ಗೊತ್ತಿಲ್ಲ… ಈ ಕ್ಷಣ ಹೊಳೆದ ಮಾತುಗಳಿವು. ಬಹಳಷ್ಟು ಸಂದರ್ಭಗಳಲ್ಲಿ ಬಹಳಷ್ಟು ಜನರ ಮೌನವನ್ನು ದೌರ್ಬಲ್ಯ ಎಂದೇ ಪರಿಗಣಿಸಿ ಇನ್ನಷ್ಟು ತುಳಿಯಲು ಸಮಾಜದಲ್ಲಿ , ವ್ಯವಸ್ಥೆಯಲ್ಲಿ ಪ್ರಯತ್ನಗಳು ನಡೆದಿವೆ , ನಡೆಯುತ್ತಲೇ ಇವೆ .. ಮೌನ ಕಾಯುತ್ತಿರುತ್ತದೆ ..ಒಳಗೊಳಗೇ ಮಾಗುತ್ತಿರುತ್ತದೆ ..ಒಡಕು ಪಾತ್ರಗಳೆಲ್ಲ ಸದ್ದು ಮಾಡಿ ಮಾಡಿ ಸೋತು ಸುಮ್ಮನಾದ ನಂತರ ಮೌನ ಮಾತಾಗುತ್ತದೆ.. ನುಡಿದರೆ ಮುತ್ತಿನ ಹಾರದಂತಿರಬೇಕು ಎಂದು […]
ದೇವಯಾನಿ ಅವರ ಹೊಸ ಅಂಕಣ-ದೀಪದ ನುಡಿ-ಯ ಮೊದಲ ಕಂತು……
ಕಾಲಕ್ಕಾವ ಹಂಗಿದೆ? ಅದು ನಿರ್ಲಿಪ್ತ..ಯಾರ ಹಂಗಿಗೂ ಒಳಗಾಗದೆ ತನ್ನಷ್ಟಕ್ಕೆ ತಾನು ಓಡುತ್ತಲೇ ಇರುತ್ತದೆ. ಆಗಾಗ ತನ್ನ ಜೋಳಿಗೆಯಿಂದ ಇತಿಹಾಸದ ಪುಟಗಳಲ್ಲಿನ ಚಿತ್ರಗಳನ್ನ ತೋರಿಸುತ್ತಲೇ ಎಲ್ಲರನ್ನೂ ಎಚ್ಚರಿಸುತ್ತಾ ಮುಂದೆ ಸಾಗುತ್ತದೆ