ಅಂಕಣ ಸಂಗಾತಿ ಗಜಲ್ ಲೋಕ ರಜಪೂತರ ಗಜಲ್ ನಾದದಲ್ಲೊಂದು ಸುತ್ತು … ಹಾಯ್…. ಏನು ಯೋಚಿಸ್ತಾ ಇದ್ದೀರಾ, ಇಂದು ಯಾವ ವಾರ ಎಂದೋ…? ನಾನು ಓರ್ವ ಗಜಲ್ ಗೋ ಅವರ ಪರಿಚಯದೊಂದಿಗೆ ಬಂದಿದ್ದೇನೆ ಎಂದರೆ ಇಂದು ‘ಗುರುವಾರ’ ಎಂದಲ್ಲವೇ…!! ಶುಭೋದಯ, ನನ್ನ ಎಲ್ಲ ಕಸ್ತೂರಿ ಕನ್ನಡದ ಹೃದಯಗಳಿಗೆ ಈ ಮಲ್ಲಿನಾಥನ ಮಲ್ಲಿಗೆಯಂತ ನಮಸ್ಕಾರಗಳು. “ಆ ಹೆಜ್ಜೆಗಳ ಸದ್ದನ್ನು ನಾವು ಬಹಳ ಮೊದಲೇ ತಿಳಿಯುತ್ತೇವೆ ಹೇಯ್ ಜೀವನವೇ..ನಾವು ನಿನ್ನನ್ನು ದೂರದಿಂದಲೇ ಗುರುತಿಸುತ್ತೇವೆ” –ಫಿರಾಕ್ ಗೋರಖಪುರಿ ‘ಜೇನು’ […]
ಸುನಂದಾ ಅವರ ಇನಿದನಿ ಆಲಿಸುತ್ತಾ…
“ಹೂವು ಮಾತ್ರವಲ್ಲ ಈಗ ಬಂಡೆಯೂ ಗಜಲ್ ಆಗುವುದು
ಸಮಯದ ಧ್ವನಿ ಇದಾಗಿದೆ ಖಡ್ಗವೂ ಗಜಲ್ ಆಗುವುದು”
-ಕಮಲ್ ಕಿಶೋರ ‘ಭಾವುಕ’
“ಪ್ರಪಂಚದಲ್ಲಿ ಸುಖ-ದುಃಖಗಳೆರಡೂ ಇವೆ
ಸುಖ ಒಬ್ಬನಿಗಿದ್ದರೆ ನಾಲ್ವರಿಗೆ ದುಃಖವಿದೆ”
-ಜೌಕ್
“ನಾವು ನಿಟ್ಟುಸಿರು ಬಿಟ್ಟರು ಕುಖ್ಯಾತರಾಗುತ್ತೇವೆ
ಅವರು ಕೊಂದರೂ ಸಹ ಚರ್ಚೆಯೂ ಆಗುವುದಿಲ್ಲ”
-ಅಕ್ಬರ್ ಇಲಾಹಾಬಾದಿ
“ಒಣರೊಟ್ಟಿ ತಿಂದು
ತಣ್ಣೀರ ಕುಡಿ, ಫರೀದ್
ಇತರರ ತುಪ್ಪ ರೊಟ್ಟಿಯ ಕಡೆ
ನೋಡದಿರು ಹಂಬಲಿಸಿ”
-ಬಾಬಾ ಷೇಖ್ ಫರೀದ್
ಅಂಕಣ ಸಂಗಾತಿ ಗಜಲ್ ಲೋಕ ಸಾಲಿಯವರ ಗಜಲ್ ಉದ್ಯಾನವನ… ನಮಸ್ಕಾರ… ಎಂದಿನಂತೆ ಇಂದೂ ಸಹ ನಾಡಿನ ಖ್ಯಾತ ಗಜಲ್ ಕಾರರೊಬ್ಬರ ಪರಿಚಯದೊಂದಿಗೆ ತಮ್ಮ ಮುಂದೆ ಬಂದಿದ್ದೇನೆ. ಓದಲು ತಾವು ಕಾತುರರಾಗಿದ್ದೀರೆಂದು ಬಲ್ಲೆ. ಸಮಯವನ್ನು ಹಾಳು ಮಾಡದೆ, ನೇರವಾಗಿ ವಿಷಯಕ್ಕೆ ಬರುತ್ತೇನೆ. “ಪ್ರೇಮಿಯ ಕಾರಣ ಇತರ ಎಲ್ಲ ಕಾರಣಗಳಿಂದ ಪ್ರತ್ಯೇಕವಾಗಿದೆ ಪ್ರೀತಿಯು ದೇವರ ರಹಸ್ಯಗಳ ಖಗೋಳ“ –ರೂಮಿ ಉರ್ದು ತುಂಬಾ ಕಾವ್ಯಾತ್ಮಕ ಭಾವದ ಭಾಷೆ. ‘ಕಾವ್ಯಾತ್ಮಕ ಭಾಷೆ’ ಎಂದರೆ ಆ ಭಾಷೆಯೂ ಶಬ್ಧಗಳಿಗಿರುವ ಅರ್ಥಬಾಹುಳ್ಯ ಎಂದರ್ಥ. […]
ಗಜಲ್ ಎಂಬುದು ಆತ್ಮದ ಪಿಸುಮಾತು. ಹೃದಯದ ಮಾತುಗಳು ಜೀವಕಾರುಣ್ಯದಿಂದ ಸ್ನಿಗ್ಧವಾಗಿರುತ್ತವೆ. ಸಕಲ ಜೀವಿಗಳೊಂದಿಗಿನ ಪ್ರೇಮಭಾವದಿಂದ ಮಾಧುರ್ಯವನ್ನು ಪಡೆಯುತ್ತವೆ
“ಬಕ್ಕಳರ ಗಝಲ್ ಗಳು” ಎಂಬ ಸಂಕಲನ ಪ್ರಕಟಿಸುವುದಕ್ಕಿಂತಲೂ ಮುಂಚೆ ‘ಮಣ್ಣ ನೆನಪಿನ ಮೇಲೆ’ ಎಂಬ ಕವನ ಸಂಕಲನದಲ್ಲಿಯೂ ಬಕ್ಕಳ ಅವರು ತಮ್ಮ ಕೆಲವು ಗಜಲ್ ಗಳನ್ನು ಪ್ರಕಟಿಸಿದ್ದಾರೆ.
“ನಾನು ದೇವರನ್ನು ಪ್ರೀತಿಸುವಾಕೆ,
ನನಗಿನಿತೂ ಸಮಯವಿಲ್ಲ
ಸೈತಾನನ ದ್ವೇಷಿಸಲು”
-ರಾಬಿಯಾ