ಬಾಲ್ಯದ ನೆನಪುಗಳೆಂದರೆ ಹಾಗೇ……. ತುಂತುರು ಮಳೆಗೆ ಮುಖವೊಡ್ಡಿದ ಹಾಗಿನ ಅಪ್ಯಾಯತೆ .ಮಗು ಚಾಕಲೇಟನ್ನು ಕಾದಿಟ್ಟುಕೊಂಡು ತುಣುಕು ತುಣುಕಾಗಿ ಸವಿಯುವಂತೆ . ಈ ಚಿಕ್ಕಂದಿನ ನೆನಪುಗಳು ನೆನೆಸಿಕೊಳ್ಳಲು ಬರೆಯಲು ವಿಶೇಷ ಸಂದರ್ಭಗಳ ನೆವ ಅಷ್ಟೇ …
ನಿಮಗೆಲ್ಲಾ ಖಂಡಿತ ಗೊತ್ತಾಗಿದೆ ಅನ್ಕೋತೀನಿ. ಕರೆಕ್ಟ್ ಅದೇ ರೀ ನಮ್ಮ ಬೀಸುವಕಲ್ಲು!
ಈಗಿನ ಮಕ್ಕಳಿಗೆ ಒಗಟಿಗೆ ಉತ್ತರ ಇರಲಿ ಬೀಸುವ ಕಲ್ಲುಅಂದರೆ ಏನೂ ಅಂತಲೇ ಗೊತ್ತಿಲ್ಲ
ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ
ಅಂಕಣ ಸಂಗಾತಿ ನೆನಪಿನದೋಣಿಯಲಿ ದಸರಾ ಮೈಸೂರು ದಸರಾ ಎಷ್ಟೊಂದು ಸುಂದರಾ ಚೆಲ್ಲಿದೆ ನಗೆಯಾ ಪನ್ನೀರ ಎಲ್ಲೆಲ್ಲೂ ನಗೆಯಾ ಪನ್ನೀರ ಬಾಲ್ಯ ಎಂದರೆ ಹಬ್ಬಗಳ ಆಚರಣೆ ಮನದಲ್ಲಿ ಎಂದಿಗೂ ಹಸಿರು . ಅದರಲ್ಲೂ ಮೈಸೂರಿನಲ್ಲಿ ಹುಟ್ಟಿ ಬೆಳೆದ ನನಗೆ ದಸರಾ ಎಂದರೆ ಜೀವನದ ಒಂದು ಅವಿಭಾಜ್ಯ ಅಂಗದಂತೆ. ದಸರೆಯನ್ನು ನೆನಪು ಮಾಡಿಕೊಳ್ಳದ ನೆನಪಿನ ದೋಣಿಯ ಪಯಣ ಅರ್ಥಹೀನ ಅನ್ನಿಸಿಬಿಡುತ್ತದೆ. ಹಾಗಾಗಿಯೇ ಇಂದಿನ ನೆನಪಿನ ದೋಣಿಯ ಯಾನವಿಡೀ ದಸರೆಯ ಸ್ಮರಣೆ. ನವರಾತ್ರಿ ದಸರಾ ಎಂದರೆ ಧಾರ್ಮಿಕ ಆಧ್ಯಾತ್ಮಿಕ ಸಾಂಸ್ಕೃತಿಕ […]
ಅಂಕಣ ಸಂಗಾತಿ ನೆನಪಿನದೋಣಿಯಲಿ ವರ್ತನೆಯವರು ಪ್ರಲಾಪಿಸಬೇಡ ನೆನೆದು ಹಪಹಪಿಸಿ ಕಳೆದುಹೋದದ್ದನ್ನ ಕಾಲ ಏಕಾಏಕಿ ಬಂದು ಮೇದದ್ದನ್ನ ನೆನೆ ಇದನು ಮರೆಯದೆ ಲುಕ್ಸಾನಿಗೆದೆ ಮರುಗದೆ ಕಳೆದುಕೊಂಡದ್ದು ನಿನ್ನೊಡನೆ ಇದ್ದಷ್ಟು ದಿನ ಹಿಗ್ಗ ನೀಡಿದ್ದನ್ನ ಕೆ ಎಸ್ ನಿಸಾರ್ ಅಹ್ಮದ್ ಅಂದು ವಾಯುವಿಹಾರ ಮುಗಿಸಿ ಬಂದ ರವೀಶ್ “ನೋಡು ದಿನಾ ಹಾಲಿನ ಪ್ಯಾಕೆಟ್ ತೊಗೋತಿದ್ನಲ್ಲ ಪಾಪ ಆ ವ್ಯಕ್ತಿ ಕರೋನಾ ಬಂದು ಹೋಗಿ ಬಿಟ್ನಂತೆ ಪಾಪ” ಎಂದು ಪೇಚಾಡಿಕೊಂಡರು. ಯಾಕೋ ನನಗೆ ಥಟ್ಟಂತ ನನ್ನ ಬಾಲ್ಯ ನೆನಪಾಯಿತು. ಅಂದು ನನ್ನ […]
ಪತ್ರ ಪುರಾಣ
ಅಂಕಣ ಸಂಗಾತಿ ನೆನಪಿನದೋಣಿಯಲಿ ಜಟಕಾ ವಿಧಿಯೆಂಬ ಚಾಲಕನು ಓಡಿಸುತಿಹ ಬಂಡಿಯಲಿ ಕುಳಿತು ನಡೆದಿದೆ ಬಾಳಪಯಣ. ಅಲ್ಲಿಷ್ಟು ಇಲ್ಲಿಷ್ಟು ಒಂದಷ್ಟು ನೆನಪುಗಳ ಬುತ್ತಿ ಔತಣ . ** ಕಾಲನ ನಾಗಾಲೋಟದ ಪಯಣವು ಗಾಡಿಗೆ ಕಟ್ಟಿದ ಕುದುರೆಗಳು ನಾವು ವಿಧಿಯ ಕಡಿವಾಣದ ಬಿಗಿ ಅಂಕೆ ನಡೆದಿಹೆವು ಆಮಿಷಕೆ , ಚಾಟಿಯಾ ಭಯಕೆ “ಹಾಯ್ ಹಾಯ್ ಬಾಜೂ ಬಾಜೂ” ಟಕ್ ಟಕ್ ಅನ್ನುವ ಕುದುರೆಗಳ ಖರಪುಟದ ಶಬ್ದದೊಂದಿಗೆ ಈ ಪದಗಳು ಕಿವಿಗೆ ಬಿತ್ತೆಂದರೆ ರಸ್ತೆಯಲ್ಲಿ ಆಡುತ್ತಿದ್ದ ಮಕ್ಕಳೆಲ್ಲ ಬದಿಗೆ ಸರಿದು ಗೌರವ […]