ಕಾವ್ಯಯಾನ
ಸಖಿ ಸತ್ಯಮಂಗಲ ಮಹಾದೇವ ಈ ಬೆಳಗಿನ ಏಕಾಂತ ಅದೇಕೊ ಮುದ ನೀಡಲಿಲ್ಲ ಸಖಿ ನಟ್ಟನಡುರಾತ್ರಿಯ ಕಡುಕತ್ತಲಲ್ಲಿ ನಿನ್ನ ಮೊಗವೊಂದೆ ಸಾಕು ಬೆಳದಿಂಗಳಂತೆ ಯಮುನಾ ತೀರದಲಲೆಯುತ ಒಂಟಿ ನಡಿಗೆಯ ಪ್ರಯಾಣ ಅದೆಷ್ಟು ನೀರಸ ಸಖಿ ಮಧುರ ಮಂಜುಳ ನಾದವೂ ಸಪ್ಪೆ ತೆರೆಯೇರಿ ಬೀಸುವ ತಂಗಾಳಿಯೂ ರುಚಿಯಿಲ್ಲ ಮೈಗೆ ನಿನ್ನ ಹೆಸರೊಂದೇ ಸಾಕು ಅದೆಷ್ಟೋ ದೂರದ ನಿನ್ನ ಸನಿಹದಂತಿರಿಸುವುದು ಪದವನರಿತ ಮನಸ್ಸಿಗೆ ಪರಿಚಯ ಬೇಕೆ ಬಣ್ಣವಾಗುವ ಕನಸುಗಳಿಗೆ ರೆಕ್ಕೆಗಳ ಬಿಡಿಸಿ ಹಾರುವುದ ಕಲಿಸಬೇಕೆ ಸಖಿ ನಿನ್ನ ಉಸಿರ ಜಾಡು ಕಣ್ಣಳತೆಯಲಿ […]
ಮಕ್ಕಳು ಮತ್ತು ಸಾಹಿತ್ಯ
ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಬೆಳೆಸುವುದು. ಎನ್.ಶೈಲಜಾ ಹಾಸನ ಅಮ್ಮ ತನ್ನ ಮಗುವನ್ನು ಮಲಗಿಸುವಾಗ ತೊಟ್ಟಿಲು ತೂಗುತ್ತಾ ಹಾಡು ಹೇಳಿ ಮಗುವನ್ನು ಮಲಗಿಸಲು ಅನುವಾಗುತ್ತಾಳೆ. ” ಅತ್ತಿತ್ತ ನೋಡಿದಿರು, ಅತ್ತು ಹೊರಳಾಡದಿರು, ಕದ್ದು ಬರುವದು ನಿದ್ದೆ, ಮಲಗು ಮಗುವೇ, ಜೋ ಜೋಜೋ ” ಅಂತ ಲಾಲಿ ಹಾಡು ಹೇಳಿ ಮಲಗಿಸುತ್ತಾಳೆ. ಸಾಮಾನ್ಯವಾಗಿ ಎಲ್ಲಾ ಮಕ್ಕಳೂ ಅಮ್ಮನ ಲಾಲಿ ಹಾಡು ಕೇಳುತ್ತಲೇ ಬೆಳೆದಿರುತ್ತಾರೆ. ಅಮ್ಮನ ಲಾಲಿ ಹಾಡು ಕೇಳುತ್ತಾ ಕೇಳುತ್ತಾ ಹಾಡು, ಕವಿತೆ ಬಗ್ಗೆ ಮಕ್ಕಳಿಗೆ ಚಿಕ್ಕಂದಿನಿಂದಲೇ ಆಸಕ್ತಿ ಬೆಳೆದು ಬಂದಿರುತ್ತದೆ. […]
ಕವಿತೆ ಕಾರ್ನರ್
ರಕ್ತ ಒಸರುವ ಗತದ ಗಾಯ
ಮುಲಾಮುಗಳಿಗೆಲ್ಲ ಮಾಯುವುದಿಲ್ಲ
ಬಾಂಡಲಿಯ ಕುದಿಯುವ ಎಣ್ಣೆಯೊಳಗೆ ಬೇಯಿಸುವ
ನರಕದ ಭಯ ಯಾರಿಗಿದೆ ಇಲ್ಲೀಗ?
ಚರ್ಚೆ
ನಿನ್ನೆ ಸಂಪಾದಕರು ಬರೆದ ‘ಜನರನ್ನತಲುಪುವ ಮಾರ್ಗ’ ಬರಹಕ್ಕೆಕವಿಮಿತ್ರರಾದ ಡಿ.ಎಸ್.ರಾಮಸ್ವಾಮಿಯವರು ನೀಡಿರುವ ಉತ್ತರ ಇಲ್ಲಿದೆ. ಈ ಚರ್ಚೆಯಲ್ಲಿ ನೀವೂ ಪಾಲ್ಗೊಳ್ಳಬಹುದು ಡಿ.ಎಸ್.ರಾಮಸ್ವಾಮಿ ಇವತ್ತಿನ ನಿಮ್ಮ ಬರಹ ನೋಡಿದೆ. ಸಾಹಿತ್ಯ ಪತ್ರಿಕೆಗಳು ಏಕೆ ನಿಲ್ಲಲಾರದೇ ಸೋಲುತ್ತಿವೆ ಎಂದು ಹೇಳ ಹೊರಟ ಬರಹ ಕಡೆಗೆ ಹತ್ತು ರೂಪಾಯಿಗೆ ಮುದ್ರಿಸಿ ಹಂಚುವ “ಜನಪ್ರಿಯ ಸಾಹಿತ್ಯ” ಪ್ರಸರಣದ ಲಾಭದವರೆಗೆ ಬಂದು ನಿಂತಿದೆ. ಕೆಲವು ವರ್ಷಗಳ ಕಾಲ ಎಡವೂ ಅಲ್ಲದ ಬಲಕ್ಕೂ ವಾಲದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಗತಿಗಳಿಗಳಿಗೆ ಮೀಸಲಾದ ಖಾಸಗೀ ಪ್ರಸಾರದ ಪತ್ರಿಕೆಯೊಂದರ ಜೊತೆ […]