Month: December 2019

ಕಾವ್ಯಯಾನ

ಅರಿವು ಬಿ.ಎಸ್.ಶ್ರೀನಿವಾಸ್ ಹೊತ್ತಾಯಿತು ಗೊತ್ತಾಯಿತು ಪಯಣ ಮುಗಿಯಲಿದೆಯೆಂದು ರವಿಯು ಮುಳುಗಿ ತಾರೆ ಮಿನುಗಿ ಶಶಿ ಆಗಸ ಬೆಳಗುವನೆಂದು ಹೊತ್ತಾಯಿತು ಗೊತ್ತಾಯಿತು ಗಳಿಸಿದ್ದು ಉಳಿಸಿದ್ದು ಚಿಟಿಕೆಯಷ್ಟೇ ಎಂದು ಅರಿಯುವುದು ಅಳಿಸುವುದು ಬೆಟ್ಟದಷ್ಟಿದೆಯೆಂದು ಹೊತ್ತಾಯಿತು ಗೊತ್ತಾಯಿತು ಬಾಳಲೆಕ್ಕಾಚಾರದಲಿ ಒಂದನೊಂದು ಕೂಡಿದರೆ ಎರಡೇ ಆಗಬೇಕಿಲ್ಲವೆಂದು ಶೂನ್ಯವೂ ಮೂಡಬಹುದೆಂದು ಹೊತ್ತಾಯಿತು ಗೊತ್ತಾಯಿತು ಭರದಿ ಹರಿದ ನದಿಯು ಧುಮುಕಿ ಕಡಲ ಸೇರಲಿದೆಯೆಂದು ತನ್ನತನವ ಕಳೆದುಕೊಂಡು ಅಲೆಅಲೆಯಲಿ ಸುಳಿಯುವುದೆಂದು ಹೊತ್ತಾಯಿತು ಗೊತ್ತಾಯಿತು ನನ್ನದೆಂಬುದೆಲ್ಲ ನನ್ನದೇ ಆಗಿರಬೇಕಿಲ್ಲವೆಂದು ಋಣಸಂದಾಯವಾಗದೆ ಬಿಡುಗಡೆಯು ಸಾಧ್ಯವೇ ಇಲ್ಲವೆಂದು ಕಿರುಪರಿಚಯ: ಹವ್ಯಾಸಿ ಬರಹಗಾರರು, […]

‘ಸ್ವಾತ್ಮಗತ’

ಕೆ.ಶಿವು.ಲಕ್ಕಣ್ಣವರ ಅಜರಾಮರವಾದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳ ಮಹತ್ ಸಾಧನೆ..! ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ಮಾನವೀಯ ಮತ್ತು ಶಿಕ್ಷಣತಜ್ಞ.ಅವರು ಹಿಂದೂ ಲಿಂಗಾಯತ ಧಾರ್ಮಿಕ ವ್ಯಕ್ತಿಯಾಗಿದ್ದರು ಮತ್ತು ಕರ್ನಾಟಕದ ಸಿದ್ದಗಂಗಾ ಮಠದ  ಮಠಾಧಿಪತಿಗಳಾಗಿದ್ದರು. ಅವರು ಶ್ರೀ ಸಿದ್ದಗಂಗ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು. ಹಿಂದೂ ಧರ್ಮದ ಲಿಂಗಾಯತ ಸಂಪ್ರದಾಯದ ಅತ್ಯಂತ ಗೌರವಾನ್ವಿತ ಅನುಯಾಯಿಯಾಗಿದ್ದರು. ಅವರನ್ನು ರಾಜ್ಯದಲ್ಲಿ ನಡೆದಾಡುವ  ದೇವರು ಎಂದು ಕೂಡ ಜನರು ಕರೆಯುತ್ತಿದ್ದರು. ‌ಭಾರತದಲ್ಲಿ ವಾಸಿಸುತ್ತಿದ್ದ ಅತಿ ಪುರಾತನ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು ಅವರು. ಅವರಿಗೆ ಭಾರತ ಸರ್ಕಾರವು […]

ಕಾವ್ಯಯಾನ

ಡಾ.ಗೋವಿಂದ ಹೆಗಡೆಯವರ ಎರಡು ಪದ್ಯಗಳು ನಕ್ಕು ಬಿಡು. ಉಂಡ ಕಹಿಗುಳಿಗೆಗಳ ತಪಸೀಲು ಬೇಕಿಲ್ಲ ಸವೆಸಿದ ಕೊರಕಲು ದಿಣ್ಣೆ ದಾರಿಗಳಿಗೆ ಎಡವಿದ ಗಾಯ ನಟ್ಟ ಮುಳ್ಳುಗಳಿಗೆ ಪುರಾವೆಯಿಲ್ಲ ಹನಿಗೂಡಿದ ಕಣ್ಣುಗಳಲ್ಲಿ ತಿರುಗಿ ನೋಡಿ ಒಮ್ಮೆ ನಕ್ಕು ಬಿಡು, ಗೆಳತಿ! ಕೂಡಿ ನಡೆದ ದಾರಿಗಳು ಬೇರಾದ ಹೆಜ್ಜೆಗಳು ಏರು ದಾರಿಯ ಕುಂಟುನಡೆ-ಗೆ ಒದಗದ ಊರುಗೋಲುಗಳು ಬೆನ್ನಿಗೆರಗಿದ ಬಾರುಕೋಲುಗಳು ಎಲ್ಲ ಅನುಭವ ಸಂತೆಯಲ್ಲೊಮ್ಮೆ ನಿಂತು ಗೆಳತೀ, ನಕ್ಕುಬಿಡು ದಾರಿ ಹೂವಿನದಲ್ಲ ನೆರಳು- ನೀರು ಸಿಗುವ ಖಾತರಿಯಿಲ್ಲ ಮುಗಿವ ಮುನ್ನ ಹಗಲು ಸೇರುವುದು […]

ಕಾವ್ಯಯಾನ

ಮೌನದ ಮಡುವಿನೊಳಗೆ ಸಂತೆಬೆನ್ನೂರು ಫೈಜ್ನಾಟ್ರಾಜ್ ಮನಸ್ಸು ನೀರಿಂದ ಹೊರಬಂದ ಮೀನು ಇಂದಿನಿಂದ ಅಲ್ಲ ಅಂದಿನಿಂದಲೂ…! ಕಾರಣವಲ್ಲದ ಕಾರಣಕ್ಕೆ ಸುಖಾ ಸುಮ್ಮನೆ ಮಾತಿಗೆ ಮಾತು ಬೆಳೆದು’ಮೌನ’ ತಾಳಿ ತಿಂಗಳ ಮೇಲೆ ಹನ್ನರೆಡು ದಿನಗಳಾದವು! ದಾಂಪತ್ಯ ಆದಾಗ್ಯೂ ನೂರಾರು ಕ್ಷಣಗಳನ್ನು ಹೇಗೆಂದರೆ ಹಾಗೆ ಎಲ್ಲೆಂದರೆ ಅಲ್ಲಿ ಸರಸದಿ ಹಾಡು ಹಳೆಯದಾದರೇನು ಎಂಬಂತೆ  ಕಳೆದಿದ್ದೂ ಒಂದು ‘ಮಾತು’ ನೂರು ಸುಖಗಳನ್ನು ಕೊಲ್ಲುತ್ತೆ ಅನ್ನೋದೆಷ್ಟು ಘಾಟು ಅಲ್ವಾ? ಜಗಳ ಆಡೋದು ಇಬ್ಬರಿಗೂ ಚಟ ಅಲ್ಲ, ಚಾಳೀನೂ ಇಲ್ಲ. ಒಣ ಅಹಂ ಇಷ್ಟು ಅಂತರ […]

ಮಾನವ ಹಕ್ಕುಗಳು

ಡಿಸೆಂಬರ್ – 10 ಮಾನವ ಹಕ್ಕುಗಳ ರಕ್ಷಣಾ ದಿನ. ಈ ಹಕ್ಕುಗಳ ರಕ್ಷಣೆ ಅರ್ಥಪೂರ್ಣವಾಗಿ ಸಾಕಾರಗೊಳುತ್ತಿದೆಯೇ..? ಅಲ್ಲದೇ ಭಾರತದಲ್ಲಿ ‘ಮಾನವ ಹಕ್ಕು’ಗಳ ಸ್ಥಿತಿ‌ ಹೇಗಿದೆ..!? ಕೆ.ಶಿವು.ಲಕ್ಕಣ್ಣವರ ಇದೇ ಡಿಸೆಂಬರ್ 10ರಂದೇ ಈ ಮಾನವ ಹಕ್ಕುಗಳ ರಕ್ಷಣಾ ದಿನದ ಈ ಲೇಖನ ಬರೆಯಬೇಕಾಗಿತ್ತು ನಾನು. ಅಲ್ಲದೇ ಇನ್ನೂ ಒಂದಿಷ್ಟು ಸಾಂದರ್ಭಿಕ ಲೇಖನಗಳನ್ನೂ ಬರೆಯಬೇಕಾಗಿತ್ತು. ಆದರೆ ಈ ಯಾವುದೋ ಲೇಖನಗಳ ಮಾಹಿತಿ ಸಂಗ್ರಹಕ್ಕಾಗಿ ಹೀಗೆಯೇ ಸಿರಿಗೆರೆ ಹೋಗಿದ್ದೆ. ಹಾಗಾಗಿ ಈ ಡಿಸೆಂಬರ್ ‌10ರ ಈ ಮಾನವ ಹಕ್ಕುಗಳ ರಕ್ಷಣಾ ದಿನದ […]

ಕಾವ್ಯ ಪರಂಪರೆ

ಬನ್ನಿ ನಮ್ಮ ಜೊತೆಗೂಡಿ…….. ಪ್ರತಿ ತಿಂಗಳ ಕಾರ್ಯಕ್ರಮ ಹಳಗನ್ನಡ ವಾಚನ ಮತ್ತು ವ್ಯಾಖ್ಯಾನ ದಿನಾಂಕ:15/12/2019 ಭಾನುವಾರ ಬೆಳಿಗ್ಗೆ 11ಕ್ಕೆ. ಮಹಿಳಾ ವಿಶ್ರಾಂತಿ ಕೊಠಡಿ ರವೀಂದ್ರ ಕಲಾಕ್ಷೇತ್ರ, ಬೆಂಗಳೂರು. ಬನ್ನಿ ನಮ್ಮ ಜೊತೆಗೂಡಿ……..

ಕಾವ್ಯಯಾನ

ಆರ್ಭಟ ಅವ್ಯಕ್ತ ದಿನಕರನ ಉದಯ, ಅಳಿವಿಲ್ಲದ ಅಂಧಾಕಾರವಾಗಿದೆ, ಶಶಿಧರನ ತಂಪು, ಕೋಲ್ಮಿಂಚಿನ ಧಗೆಯಾಗಿದೆ. ನೀಲಿ ಗಗನದಲಿ ಕಾರ್ಮೋಡ ಕವಿದು ನಿಂತಿದೆ, ತಂಪು ಗಾಳಿಯಲಿ ದುರ್ಗಂಧ ಪಸರುತ್ತಿದೆ, ತಿಳಿ ನೀರಿನಲಿ ವಿಷದ ತೊಟ್ಟೊಂದು ಸೇರಿದೆ, ಹಸಿರು ತುಂಬಿರಬೇಕಾದ ನೆಲ ಬಂಜರಾಗಿ ಹೋಗಿದೆ… ಸ್ತಬ್ಧ ಶಿಲೆಗಳ ಕಣ್ಣಂಚಿನಲ್ಲಿ ಒಂದು ಹನಿ ನೀರಿಲ್ಲ, ಯಾವ ರೋಧನೆಗೂ ಕಿವಿಯೊಂದು ಒಡೆಯಲಿಲ್ಲ, ಮಿಡಿವ ಕಲ್ಲು ಚೂರಾದರೂ ಮನಕೆ ನಾಟಲಿಲ್ಲ, ದೈತ್ಯಾಕಾರದ ಭುಜಗಳಿಗೆ ವ್ಯಾಘ್ರತ್ವದ ಅರಿವಿಲ್ಲ, ಆ ಭಯಂಕರ ಆಕ್ರಂದ! ಯಾವ ಪಾಪದ ಶಿಕ್ಷೆಯೋ ಇದು, […]

ಅವ್ಯಕ್ತಳ ಅಂಗಳದಿಂದ

ಅವ್ಯಕ್ತ ನನಗೊಂದು ಹವ್ಯಾಸ. ಪ್ರತಿವರ್ಷ ಮೊದಲನೆಯ ದಿನವೇ ಮಕ್ಕಳಲ್ಲಿ ನನ್ನ ಬಗ್ಗೆ ನನಗಿಷ್ಟ ಬರುವ ರೀತಿಯಲ್ಲಿ ಚಾಪು ಮೂಡಿಸುವುದು.ಈ ಬಾರಿ ನಾನು ತುಂಬ ಜೋರು ಎಂಬ ಭಯ ಹುಟ್ಟಿಸೋದು ನನ್ನ ಗುರಿಯಾಗಿತ್ತು. ಕ್ಲಾಸಿನೊಳಗೆ ಬೆಂಕಿಯಂತೆ ನುಗ್ಗಿದೆ. Quiiiiiiiiete! Which category of animals do you belong ? Shameless fellows…what are you looking at? Atleast have the courtesy of wishing! What? should I teach you that  too!!!ಫುಲ್ಲು ಸಿಟ್ಟು […]

ಕಾವ್ಯಯಾನ

ನನಗಿಷ್ಟವಾದ ಕವಿತೆ ಕುರಿತು. ಕವಿತೆ ಕವಿಯಿತ್ರಿ-ಪ್ರೊ. ಗೀತಾ ವಸಂತ ಯೂಸ್ ಆಂಡ್ ಥ್ರೋ ಪೆನ್ನು ಬಂದಾಗ ಸಕತ್ತು ಸಂಭ್ರಮ. ಇಂಕು ತುಂಬುವ ರೇಜಿಗೆಯಿಲ್ಲ ನಿಬ್ಬು ಕೊರೆಯುವುದಿಲ್ಲ ಬಳಸು ಬಿಸಾಕು. ಬದುಕು ಎಷ್ಟು ಸರಾಗ.. ಆಮೇಲೆ ಬಂದೇ ಬಂದವು ಯೂಸ್ ಆಂಡ್ ಥ್ರೋ ಲೋಟ ತಟ್ಟೆ ಸಿರಿಂಜು ಹೆಂಡದ ಬಾಟಲು ಸ್ಯಾನಿಟರಿ ಪ್ಯಾಡು ಕಾಂಡೋಮು ಒಳಗೊಳಗೇ ಕೊಳೆತ ಸಂಬಂಧಗಳು ಬಣ್ಣ ಬಣ್ಣದ ರ್ಯಾಪರ್ ಹೊತ್ತವು.. ಪ್ರೇಮದ ನಶೆಯೇರಿಸಿದ್ದ ಅದೇ ಪೆನ್ನು ಲೆಕ್ಕವಿಲ್ಲದಷ್ಟು ಕವಿತೆಗಳ ತಿದ್ದಿ ತೀಡಿ ತಬ್ಬಿಕೊಂಡಾಗ ಎದೆಗೊದ್ದು […]

ಗಝಲ್

ಶಾಂತ ಜೆ ಅಳದಂಗಡಿ ನೀಡೆನಗೆ ನನ್ನೊಡೆಯ ನಿನ್ನೊಲುಮೆ ಬಾಳ ಪಥದಲಿ ಆಗಲೆನಗದು ಹಿರಿಮೆ ನಿನಗಾಗಿ ಮಿಡಿಯುತಿದೆ ಸಂತಸದೆ ನಾಡಿ ಬಾಳದಾರಿಯಲಿ ಅನುಕ್ಷಣ ಸಂತಸ ದೇವನಿತ್ತ ವರದೊಲುಮೆ ಬದುಕ ದಾರಿಯಲಿ ನೀ ಮಾರ್ಗಸೂಚಿ ಸಪ್ತನಾಡಿಗಳೂ ಅರಸುತಿವೆ ದಾರಿ ದೊರೆತರದುವೆ ಮನಕೆ ಸಂತಸ ನಿನ್ನೊಲವು ಜೀವಕದು ಗರಿಮೆ ಆಸೆ ಒಲೆ ಹೂಡಿ ಹಿಡಿದು ಅಗ್ನಿ ನಾಡಿ ಪ್ರೇಮ ಪ್ರೀತಿಯ ಪಾಕ ನಿನಗಾಗಿ ಅಟ್ಟಡಿಗೆ ಉಂಡರದುವೆನಗೆ ಸಂತಸ ಗಮ್ಯ ಸೇರಲು ಇದೆ ಪಯಣವೊಮ್ಮೆ ನಡೆವ ದಾರಿಗೆ ಚೆಲ್ಲುವೆ ಮಲ್ಲಿಗೆ ನಿನಗಾಗಿ ದೃಷ್ಟಿ […]

Back To Top