Day: February 22, 2020

ಅನುವಾದ ಸಂಗಾತಿ

“ದುಃಖ” ಮೂಲ ಸುಮನಾ ರಾಯ್(ಇಂಗ್ಲೀಷ್) ಕನ್ನಡಕ್ಕೆ:ಕಮಲಾಕರ ಕಡವೆ “ದುಃಖ” ದುಃಖ ಒಂದು ಬಿಳಿ ಆಕಳ ಮೇಲೆ ಕೂತ ಬಿಳಿ ಕೊಕ್ಕರೆಒಂದು ಮಾತ್ರ ಇನ್ನೊಂದರ ತೂಕ ಸಹಿಸ ಬಲ್ಲದು ದುಃಖ ನದಿತೀರದ ಬಿಳಿ ಮರಳುಅದು ಒದ್ದೆಯಾಗಿದ್ದಾಗಲೂ ಬಿಳಿಯೇ. ದುಃಖ ಬೇಲಿ ಮೇಲಣ ಬಿಳಿ ದಾಸವಾಳಅದಕ್ಕೆ ಬಿಳಿ ಮೊಗ್ಗು, ಬಿಳಿ ಹೆಣ. ದುಃಖ ಮಂಜು-ಮುಸುಕಿದ ಮರ, ಬಿಳಿ ರೆಪ್ಪೆಗೂದಲುಅದರ ಹೆಣೆಗಳು ತಮ್ಮದೇ ತೂಕದಿಂದ ಜೋಲುತ್ತವೆ. ದುಃಖ ಕಾಡಾನೆಯ ದಂತ, ಚೂಪು, ವರ್ಷಾನುವರ್ಷಗಳ ಶೇಖರಣೆಅದರ ಸೌಂದರ್ಯ, ಶೋಭೆ ದೂರದಿಂದ ಮಾತ್ರ. ದುಃಖ […]

ಕಾವ್ಯಯಾನ

ಕೊಡುವುದಾದರೂ ಯಾರಿಗೆ? ವಿಜಯಶ್ರೀ ಹಾಲಾಡಿ ಹೌದು ಈ ಪ್ರೀತಿಯನ್ನು ಮೊಗೆಮೊಗೆದು ಕೊಡುವುದಾದರೂ ಯಾರಿಗೆ ? ನೇರಳೆಮರಕ್ಕೆ ಅಳಿಲಿಗೆ ಬೆಚ್ಚನೆ ಗೂಡಿನ ಹಕ್ಕಿಗೆ ? ಹೆಣ್ತನದ ಪರಿಧಿಗೆ ಎಂದೂ ದಕ್ಕದ ಮುಖ –ಮುಖವಾಡಗಳು … ರಾತ್ರಿ -ಹಗಲುಗಳನ್ನು ಗೆಜ್ಜೆಕಾಲಿನಲ್ಲಿ ನೋಯಿಸಲೆ … ಯಾತನೆಯನ್ನು ನುಂಗುತ್ತಿರುವೆ ಸಂಜೆಯ ಏಕಾಂತಗಳಲ್ಲಿ ಹೆಪ್ಪುಗಟ್ಟಿದ ಇರುಳುಗಳಲ್ಲಿ .. ಬೊಗಸೆಯೊಡ್ಡಿದ್ದೇನೆ ಮಂಡಿಯೂರಿದ್ದೇನೆ ಹಟಮಾರಿ ಕಡಲಾಗಿದ್ದೇನೆ.. ತರ್ಕಕ್ಕೆ ನಿಲುಕದ ಗಳಿಗೆ -ಗಳಲ್ಲಿ ಒಂಟಿಹೂವಂತೆ ನಿಂತುಬಿಟ್ಟಿದ್ದೇನೆ .. ಲೆಕ್ಕವಿಟ್ಟಿಲ್ಲ ಕೋಗಿಲೆ ಹಾಡಿದ ಹಾಡುಗಳನ್ನು… ಉದುರಿಬಿದ್ದ ಗರಿಗಳನ್ನು ಮತ್ತೆ ಹುಟ್ಟಿಸಿಕೊಳ್ಳಲು […]

ಕಾವ್ಯಯಾನ

ತುಮುಲ ಬಿ.ಎಸ್.ಶ್ರೀನಿವಾಸ್ ಬಿಟ್ಟು ಬಿಡಬೇಕು ಬಗ್ಗಡದ ನೀರನ್ನು ತನ್ನಷ್ಟಕ್ಕೆ ತಾನೇ ತಿಳಿಯಾಗಿ ಪ್ರತಿಬಿಂಬ ತೋರಿಸುವವರೆಗೂ ಹರಿಯಬಿಡಬೇಕು  ಯೋಚನೆಗಳ ಕಡಿವಾಣವಿಲ್ಲದ ಕುದುರೆಯನ್ನು ಓಡಲಾಗದೆ ತಾನೇ ನಿಲ್ಲುವವರೆಗೂ ಸುರಿಸಿಬಿಡಬೇಕು ಕಂಬನಿ ಮನದ ಬೇಗುದಿಯೆಲ್ಲ ಕರಗಿ ಶಾಂತಿ ನೆಲೆಸುವವರೆಗೂ ನಡೆದು ಹೋಗಲಿ ಪ್ರಳಯ ಪರಶಿವನ ತಾಂಡವ ನೃತ್ಯ ಭ್ರಮೆಗಳೆಲ್ಲ ಭಸ್ಮವಾಗುವವರೆಗೂ ಕರಗಿದಾ ಕತ್ತಲಲಿ ಬಸವಳಿದ ಮೈಮನಕೆ ಗಾಢನಿದ್ರೆಯು ಆವರಿಸಬೇಕು ಮುಂಜಾನೆ ಹಕ್ಕಿ ಚಿಲಿಪಿಲಿ ಅರುಣೋದಯ ರಾಗದಲಿ ಹೊಸಬೆಳಕು ಮೂಡಬೇಕು ********

Back To Top