ಕಾವ್ಯಯಾನ
ಹನಿಮೂನ್ ಗಿರೀಶ ಜಕಾಪುರೆ, ಮೈಂದರ್ಗಿ ಹನಿಮೂನ್ ಈ ಬಿಕನಾಶಿ ಚಂದ್ರನಿಗೆ ಬುದ್ಧಿಯಿಲ್ಲ ಸುರಿಯುತ್ತಾನೆ ವಿರಹದ ಅಗ್ನಿಗೆ ತುಪ್ಪ..! ಲಾಲ್‌ಬಾಗ್‌ಗೆ ಹೊರಟಿದ್ದವು ಎರಡು ಹಕ್ಕಿಗಳು ಹನಿಮೂನ್‌ಗೆಂದು ಸಮುದ್ರತೀರದ ಕಾಂಕ್ರೀಟ್ ಕಾಡಿನಿಂದ, ಒಂದೇಸಮನೆ ಧಾವಿಸುತ್ತಿತ್ತು ಎದೆಯಲ್ಲಿ ನಿಗಿನಿಗಿ ಕೆಂಡವಿರಿಸಿಕೊಂಡು ಉಸಿರಿನಿಂದ ಬಿಸಿಹೊಗೆ ಚಿಮ್ಮುವ ಉಗಿಬಂಡಿ.., ನಾನೋ ಅಲೆಮಾರಿ, ಹತ್ತಿದೆ ರೈಲು ಅವಳು ನನ್ನ ತೊರೆದುಹೋದ ನಿಲ್ದಾಣದಲಿ ಕಾಲಿಡಲೂ ಅವಕಾಶವಿರದಷ್ಟು ರಶ್ಶು ಆದರೂ ನನಗೆ ರೈಲಿನ ಮೇಲೆ ಏನೋ ಕ್ರಶ್ಶು ಅವರು ಇಬ್ಬರು, ಎರಡು ಬರ್ಥಗಳು ನಾನು ಎಂದಿನಂತೆಯೇ ವೇಟಿಂಗ್ ಲಿಸ್ಟು..! […]
ಕಾವ್ಯಯಾನ
ಮೌನ ಮತ್ತು ಕವಿ ಕೊಟ್ರೇಶ್ ಅರಸಿಕೆರೆ ಅದು ಹಾರಾಡುವ ರೀತಿಗೆ, ರೆಕ್ಕೆಗಳಿವೆ ಎಂಬ ಖುಷಿಗೆ , ಮನ ಸೋತಿದ್ದೆ ಆ ಚಿಟ್ಟೆಗೆ! ಇತ್ತೀಚೆಗೆ….. ಯಾಕೋ ಕಿರಿಕಿರಿ ಎನಿಸಿತು ಭಾರೀ ಶಬ್ದ ಎಂದೆನಿಸಿತು; ಮೌನ ನಾಶಮಾಡುತ್ತಿದೆ ಅನಿಸಿತು ಈಗ ಸರಿಯಾಗಿ ನೋಡಲೆತ್ನಿಸಿದೆ ಚಮಕ್ ಬೆಳಕಿಗೆ ಅದು ಆಕರ್ಷಿತ ಆಗುತ್ತಿತ್ತು! ನೋಡಿದೆ…ಪರಿಶೀಲಿಸಿದೆ…ಅಯ್ಯೋ ಅದು ಏರೋಪ್ಲೇನ್ ಚಿಟ್ಟೆ!! ಮೌನ ಅರಿಯದ ಕವಿಯೊಬ್ಬ ಕವಿಯೇ? ವರ್ತಮಾನಕ್ಕೆ ಸ್ಪಂದಿಸುವ ನೆಪ ಎಷ್ಟೆಲ್ಲಾ ಕೂಳತನ! ಹಡೆದವ್ವನ ಝಾಡಿಸಿ ಒದೆಯುವ ದುಷ್ಟತನ!! ಆಗ…. ಕವಿಯೊಬ್ಬ ಹಾಡಿದನೆಂದರೆ ದೇಶವೇ […]
ಕಾವ್ಯಯಾನ
ಹೆರಳನ್ನೊಮ್ಮೆ ಬಿಚ್ಚಿಬಿಡು ವಿಜಯಶ್ರೀ ಹಾಲಾಡಿ ಆ ಬೆಚ್ಚನೆ ರಾತ್ರಿಗಳಲ್ಲಿಈ ತಣ್ಣನೆ ಹಗಲುಗಳಲ್ಲಿನಿನ್ನ ಪಾದಕ್ಕೆ ತಲೆಯೂರಿಮಲಗಿದ ಬೆಕ್ಕನ್ನೊಮ್ಮೆನೋಡು …. ಕರುಣೆಯ ಕತ್ತಲುಹಣ್ಣುತುಂಬಿದ ಮರಹಗುರ ತುಂಬೆ ಹೂ..ಹೆರಳನ್ನೊಮ್ಮೆ ಬಿಚ್ಚಿಬಿಡು ಸುತ್ತುವ ಭೂಮಿಯನ್ನುನಿಲ್ಲಿಸು ಅಥವಾಮತ್ತಷ್ಟು ವೇಗವಾಗಿಸುತ್ತಿಸುಹೊಸ ಹೆಜ್ಜೆಕಚ್ಚಿಕೊಳ್ಳಬೇಕಿದೆ ನಿಹಾರಿಕೆ ಉಲ್ಕೆಗಳುಸಾಗರ ಸುನಾಮಿಗಳುಅಪ್ಪಳಿಸಲಿಇಲ್ಲವೇಬ್ರಹ್ಮಾಂಡದಾಚೆಕರೆದೊಯ್ಯಲಿ …. ಮಧುಶಾಲೆಗೂ ನನಗೂಸಂಬಂಧವಿಲ್ಲನೋವನ್ನೇ ಬಟ್ಟಲಿಗಿಳಿಸಿಗಟಗಟನ ಕುಡಿಯುತ್ತಿದ್ದೇನೆ ………! *******************
ನಿಮ್ಮೊಂದಿಗೆ
ಕವಿ-ಕವಿತೆ ಕುರಿತು ವಿಜಯಶ್ರೀ ಹಾಲಾಡಿ ಗೆಳೆಯರೆ, ಕವಿತೆಗಳಿಗಿದು ಕಾಲವಲ್ಲವೆಂದು ಹೇಳುತ್ತಲೇ ತಮ್ಮ ಕವಿಪಟ್ಟಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತಿರುವ ಪ್ರಭಾವಿಗಳ ಕಾಲದಲ್ಲಿಯೂ ನಮ್ಮ ಹೊಸ ಕವಿಗಳು ಇನ್ನಿರದ ಉತ್ಸಾಹದಿಂದ ಕವಿತೆಗಳನ್ನುಬರೆಯುತ್ತಲೇ ಇದ್ದಾರೆ. ಬಹುಶ: ಮೂರು ವರ್ಷಗಳ ಹಿಂದೆ ನೆಚ್ಚಿನ ಕವಿಯಿತ್ರಿ ವಿಜಯಶ್ರೀ ಹಾಲಾಡಿಯವರು ಬರೆದ ಈ ಪುಟ್ಟ ಟಿಪ್ಪಣಿ ಇವತ್ತಿಗೂ ಪ್ರಸ್ತುತವಾಗಿದೆ ಹೊಸ ಕವಿಗಳು ಯಾವ ಗೊಂದಲವೂ ಇರದೆ ಬರೆಯಲು ಈ ಮಾತುಗಳು ಸ್ಪೂರ್ತಿಯಾಗಬಹುದೆಂದು ನಾನು ನಂಬಿದ್ದೇನೆ.ಅದಕ್ಕಾಗಿ ಹಾಲಾಡಿಯವರ ಈ ಬರಹ ನಿಮ್ಮ ಓದಿಗಾಗಿ. ಕು.ಸ.ಮದುಸೂದನ ಬರೆಹಗಾರರಲ್ಲಿ ೩ ವರ್ಗ. […]