ಕಾವ್ಯಯಾನ
ದೇವರ ದೇವ ಅಂಜನಾ ಹೆಗಡೆ ಕಾಲ ಎಲ್ಲವನ್ನೂ ಮರೆಸುತ್ತದೆ ಎಂದವ ಕಾಲಕ್ಕೆ ಕಿವುಡಾಗಿ ಕಣ್ಣುಮುಚ್ಚಿ ಉಟ್ಟಬಟ್ಟೆಯಲ್ಲೇ ಧ್ಯಾನಕ್ಕೆ ಕುಳಿತಿದ್ದಾನೆ ತಂಬೂರಿ ಹಿಡಿದು ತಂತಿಗಳ ಮೇಲೆ ಬೆರಳಾಡಿಸುತ್ತ ಶ್ರುತಿ ಹಿಡಿಯುತ್ತಾನೆ ಬೆರಳಲ್ಲಿ ಹುಟ್ಟಿದ ಬೆಳಕಿನ ಕಿರಣವೊಂದು ನರಗಳಗುಂಟ ಹರಿದು ಬೆಂಕಿಯಾಗಿ ಮೈಗೇರಿದೆ ಉಸಿರೆಳೆದುಕೊಳ್ಳುತ್ತಾನೆ ದೇವರ ಗೆಟಪ್ಪಿನಲ್ಲಿ ಕಾಲಮೇಲೆ ಕೈಯೂರಿದ್ದಾನೆ ಕಪ್ಪು ಫ್ರೆಮಿನ ದಪ್ಪಗಾಜಿನ ಕನ್ನಡಕ ರೂಪಕವಾಗಿ ಮುಚ್ಚಿದ ಕಿವಿಯ ಮೇಲೆ ಬೆಚ್ಚಗೆ ಕೂತಿದೆ ಕೈಗೆ ಸಿಗದ ಕಣ್ಣಿಗೆ ಕಾಣಿಸದ ಶಬ್ದ ಹಿಡಿಯಲು ಕುಳಿತವನ ಮೈಯೆಲ್ಲ ಕಣ್ಣು…. ಮುಚ್ಚಿದ ಕಣ್ಣೊಳಗೊಂದು […]
ಕಾವ್ಯಯಾನ
ಷರಾ ಬರೆಯದ ಕವಿತೆ ಡಾ.ಗೋವಿಂದ ಹೆಗಡೆ ಇಂದು ಅವ ತೀರಿದನಂತೆ ತುಂಬ ದಿನಗಳಿಂದ ಅವ ಬದುಕಿದ್ದೇ ಗೊತ್ತಿರಲಿಲ್ಲ ಒಂದು ಕಾಲದಲ್ಲಿ ನೆಲ ನಡುಗಿಸುವ ಹೆಜ್ಜೆಯ ಭಾರಿ ಮೀಸೆಯ ಹುಲಿ ಕಣ್ಣುಗಳ ಅವ ನಡೆಯುತ್ತಿದ್ದರೆ ನನಗೆ ಮಂಚದ ಕೆಳಗೆ ಅವಿತು ಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಆಗ ಕವಿತೆ ಕನಸಲ್ಲೂ ಸುಳಿಯುತ್ತಿರಲಿಲ್ಲ ಮತ್ತೆ ಯಾವಾಗಲೋ “ಅವನಾ? ತುಂಬಾ ಕುಡೀತಾನೆ ರೈಲಿನ ಎಂಜಿನ್ ಹಾಗೆ ಸದಾ ಹೊಗೆ ಬಿಡ್ತಾನೆ” ಹೊಟ್ಟೆ ಊದಿ ಕಣ್ಣು ಹಳದಿಗೆ ತಿರುಗಿ ಲಿವರ್ ಫೇಲ್ಯೂರ್ ನ […]
ಲಂಕೇಶರನ್ನು ಏಕೆ ಓದಬೇಕು?
ನಾನೇಕೆ ಲಂಕೇಶರನ್ನು ಓದುತ್ತೇನೆ ಬ ಬಸವರಾಜ ಕಹಳೆ ನೀಲವ್ವ ಓದಿದಷ್ಟು ವಿಸ್ತಾರ ಜನಸಾಮಾನ್ಯನ ಮೂಕ ಅಳಲಿನಲ್ಲಿ ಸಾಮ್ರಾಜ್ಯಗಳ ಬೀಳಿಸುವ ತಪಃಶಕ್ತಿ ಇದೆ ತಿಣುಕಾಡಿ ಬರೆದ ಕಗ್ಗಾವ್ಯಗಳ ಮಧ್ಯೆ ಮುದ್ದೆ ಮುರಿದಷ್ಟು ಸಲೀಸಾಗಿ ಓದಿಸಿಕೊಂಡು, ಕೆಲ ಕ್ಷಣಗಳಲ್ಲೇ ಮಿಂಚುವ ಮಿಂಚು ಹುಳುವಿನಂತಹ ಜೀವನದ ಹೊಳವುಗಳಿಗಾಗಿ ರಾವಣ ಪ್ರತಿಭೆಯನ್ನು ಓದಬೇಕು. ಈ ನೀಲಿ ಒಮ್ಮೊಮ್ಮೆ ಹುಳಿಮಾವಿನಮರದಂತೆಯೇ ಬಯಕೆ ಹುಟ್ಟಿಸುವ ಪ್ರೇಯಸಿ. ಆಲದಮರದಂತೆಯೇ ದಾರಿ ತೋರುವ ಗೆಳತಿ. ಥಟ್ಟನೆ ಇಷ್ಟವಾಗಿಬಿಡಬಲ್ಲ ಪಕ್ಕದ ಮನೆ ಹುಡುಗಿ. ಬದುಕುವ ಆಸೆಯಿಲ್ಲದವನಿಗೆ ಜೀವನೋತ್ಸಾಹವನ್ನು ತುಂಬುವಂತವಳು. ಆಗಸದ […]