Month: May 2020

ಕಾರ್ಮಿಕ ದಿನದ ವಿಶೇಷ ಲೇಖನ

ಕಾರ್ಮಿಕರಿಲ್ಲದ  ಕಾರ್ಮಿಕ ದಿನಾಚರಣೆ ಗಣೇಶ್ ಭಟ್ ಶಿರಸಿ ಕಾರ್ಮಿಕರಿಲ್ಲದ  ಕಾರ್ಮಿಕ ದಿನಾಚರಣೆ              ಕೆಂಪು ಧ್ವಜಗಳ ಹಾರಾಟ,  ಜನರ ಮೆರವಣ ಗೆಗಳಿಲ್ಲದ  ಕಾರ್ಮಿಕ ದಿನಾಚರಣೆ  ನಡೆಯುತ್ತಿದೆ. ಎಂದಿನಂತೆ  ಸರ್ಕಾರ ರಜೆ   ಘೋಷಿಸಿದ್ದರೂ, ರಜೆಯನ್ನು  ಅನುಭವಿಸಲಾರದ ಸ್ಥಿತಿಗೆ ಜಗತ್ತಿನಾದ್ಯಂತ ಕಾರ್ಮಿಕರು ತಲ್ಪಿದ್ದಾರೆ.            ಮೇ 1 ನೇ ತಾರೀಕಿನಂದು ಕಾರ್ಮಿಕ ದಿನ ಆಚರಿಸಲು ಕಾರಣವಾದ  ಘಟನೆ ನಡೆದಿದ್ದು 1886 ರಲ್ಲಿ.  ಅಮೇರಿಕಾವು ಅದಾಗಲೇ ಆರ್ಥಿಕ ಹಿಂಜರಿತದಿಂದ ಜರ್ಝರಿತವಾಗಿತ್ತು. 1882 ರಿಂದಲೂ ಮಂದಗತಿಯಲ್ಲಿದ್ದ  ಆರ್ಥಿಕ ಸ್ಥಿತಿಯಿಂದಾಗಿ ಕಾರ್ಮಿಕರು ಕೆಲಸ ಕಳೆದುಕೊಳ್ಳುತ್ತಿದ್ದರು.  […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾರ್ಮಿಕರ ಕೂಗು ಈರಪ್ಪ ಬಿಜಲಿ ಕಾರ್ಮಿಕರ ಕೂಗು” ಚೋಟುದ್ದದ ಹೊಟ್ಟೆಚೀಲವ ತುಂಬಿಸಲು ಮನುಜ ಮಾಡುವನು ಕೂಲಿ ಕೆಲಸಗಳನು ಕಟ್ಟಡ,ಬಡಗಿತನ,ವೆಲ್ಡಿಂಗ್ ,ಪೈಪ್ಲೈನಗಳು ಪೇಂಟರ್,ಪೌರ,ಸಿಂಪಿಗಕಮ್ಮಾರಿಕೆ,ಅನೇಕ ಕರ್ಮಗಳು।।1।। ನಮ್ಮಿ ಕಾರ್ಮಿಕರಿಗಿಲ್ಲ ಜೀವನದ ಭದ್ರೆತೆ ಅವರ ಜೀವನವಿರುವುದು ಬಲು ವಿಭಿನ್ನತೆ ಬಂಡ್ವಾಳಷಾಹಿ,ಕಾರ್ಮಿಕರಲ್ಲಿನ ತಾರತಮ್ಯತೆ ದೂರಾಗಿ ಮೂಡಿಬರಲಿ ಎರಡೂಗುಂಪಲಿ ಸರಿಸಮಾತೆ।।2।। ಕಾರ್ಮಿಕರ ಕೂಗು ನೊಂದ ಮನಗಳ ಕೂಗು ಕೇಳುತ ಧನಿಕರು ಹಿಗ್ಗಿಸುವರು ತಮ್ಮಯ ಮೂಗು ಹೃದಯಸಿರಿವಂತಿಕೆಲಿ ಕಾರ್ಮಿಕರ ಮನಸ್ಸದು ಮಗು ವೇತನದ ದಿನದಂದು ಇವರ ಮುಖದಲಿ ಕಿಲಕಿಲ ನಗು।।3।। ಜೀವದ ಅಂಗುತೊರೆದು ಅವಿರತ […]

ಕಾರ್ಮಿಕ ದಿನದ ವಿಶೇಷ-ಲೇಖನ

ನಾವು ಬಾಲ ಕಾರ್ಮಿಕರು.  ಗೌರಿ.ಚಂದ್ರಕೇಸರಿ ನಾವು ಬಾಲ ಕಾರ್ಮಿಕರು.  ಹೌದು. ನಾವು ಕೂಲಿ ಮಾಡುವ ಮಕ್ಕಳು. ನಮ್ಮನ್ನು ಬಾಲ ಕಾರ್ಮಿಕರು ಎಂದು ಕರೆಯುತ್ತಾರೆ. ನಮ್ಮೆಲ್ಲರ ಕನಸುಗಳು ಹೆಚ್ಚೂ ಕಮ್ಮಿ ಒಂದೇ ತೆರನಾಗಿರುತ್ತವೆ. ಬೇರೆ ಬೇರೆ ಬಣ್ಣದ ಬಟ್ಟೆ ತೊಟ್ಟಿರುತ್ತವೆ. ಆದರೆ ಕನಸಿನ ಪರಿಧಿ ಭಿನ್ನ. ಅವು ಕೈಗೂಡಲಾರದ ಕನಸುಗಳೆಂದು ನಮಗೆ ಗೊತ್ತು. ಆದರೆ ಕನಸುಕಾಣಲು ಹಣವನ್ನೇನೂ ಕೊಡಬೇಕಿಲ್ಲವಲ್ಲ.ಸೈಕಲ್ ಶಾಪ್ ಒಂದರಲ್ಲಿ ಪಂಕ್ಚರ್ ಹಾಕುತ್ತ ನಾನೊಬ್ಬಸೈಕ್ಲಿಸ್ಟ್ ಆಗಬೇಕೆಂದೋ, ಹೋಟೆಲ್ ಒಂದರಲ್ಲಿ ಎಂಜಲುಹೊದ್ದು ಮಲಗಿದ ಟೇಬಲ್‌ನ್ನು ಶುಚಿಗೊಳಿಸುತ್ತ, ಗ್ರಾಹಕರ ಜೊತೆ […]

ಕಾರ್ಮಿಕ ದಿನದ ವಿಶೇಷ -ಕವಿತೆ

ಕವಿತೆ ಬಿಸಿಲ ಹೂಗಳ ಬದುಕು ಲಕ್ಷ್ಮಿ ಪಾಟೀಲ್ ಬಿಸಿಲ ಹೂಗಳ ಬದುಕು ನನಗೆ ನೆರಳಿಗಿಂತಲೂ ಬಿಸಿಲೇ ಇಷ್ಟ ಒಳಗಿನ ಬೆಂಕಿ ಹೊರಗೆ ನೀರಾಗಿ ಹರಿಯುವ ವಿಸ್ಮಯಕ್ಕೆ ಕಾವುಗಳನ್ನೆಲ್ಲ ಕರಗಿಸಿ ನೀರಾಗುವುದನ್ನು ಕಲಿಸುತ್ತವಲ್ಲ ಅದೆಷ್ಟು ಸಲೀಸು… ಬಿಸಿಲನ್ನು ಹಾಸಿ ಹೊದೆದು, ಶ್ರಮದಲ್ಲಿ ಬೆವರಿಳಿಸಿ ಬಿಸಿಲ ಹಾಡುಗಳನ್ನು ಕಟ್ಟಿ ಜೀವನೋತ್ಸಾಹ ಹೇರಿಕೊಂಡು ಹೊರಟವರನ್ನು ಕಂಡು ನಾನೀಗ ದುಃಖಿಸುವುದಿಲ್ಲ ಭಾವಕೋಶಗಳನು ಅರಳಿಸಿ ಬಿಡುವ ಬಾಡದ ಹೂವಾಗಿ ಉಳಿದು ಬಿಡುವ ಬದುಕಿನರ್ಥಗಳನ್ನು ಹಿಗ್ಗಿಸುವ ಇವರನ್ನು ಕಂಡು ಹಿಗ್ಗುತ್ತೇನೆ ಬೆವೆರಿಳಿಸುವ ಕಸಬಿಗೆ ಜೀವ ತುಂಬುತ್ತೇನೆ… […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಇದ್ದಲ್ಲೆ ಇದ್ದು ಬಿಡಿ. ಜ್ಯೋತಿ ಡಿ.ಬೊಮ್ಮಾ. ಇದ್ದಲ್ಲೆ ಇದ್ದು ಬಿಡಿ. ಇದ್ದಲ್ಲೆ ಇದ್ದು ಬಿಡಿ ನೀವು ಆರಾಮವಾಗಿ ನಿಮ್ಮೂರಿಗೆ ನಿಮ್ಮ ಮನೆಗೆ ಕರೆಸಿಕೊಳ್ಳಲು ಸರ್ಕಾರದ ಬಳಿ ಸೌಲಬ್ಯಗಳಿಲ್ಲ. ವಿದೇಶದಿಂದ ಮರಳುವವರಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿಯುತ್ತಿರುವವರಿಗೆ ಬಸ್ ,ಏರೋಪ್ಲೇನ್ ಗಳೆಲ್ಲ ಮೀಸಲಾಗಿವೆ. ನೀವು ಇದ್ದಲ್ಲೆ ಇದ್ದುಬಿಡಿ ಕಾರು ಜೀಪುಗಳಿದ್ದವರು ಬರಲಿ ಅವರವರ ಊರಿಗೆ ಚೆಕ್ ಪೋಸ್ಟ್ ನಲ್ಲಿರುವವರಿಗೆ ಚಳ್ಳೆಹಣ್ಣು ತಿನ್ನಿಸಿ ಹೊತ್ತು ಹರಿಯುವ ಮೊದಲು. ನೀವು ಇದ್ದಲ್ಲೆ ಇದ್ದು ಬಿಡಿ ಕೆಲಸವಿಲ್ಲ ,ತಿನ್ನಲು ಆಹಾರವಿಲ್ಲದಿದ್ದರೂ ಹಿಡಿ ಅನ್ನಕೊಟ್ಟು […]

ಕಾರ್ಮಿಕ ದಿನದ ವಿಶೇಷ-ಕಥೆ

ಕಾರ್ಮಿಕ ದಿನದ ವಿಶೇಷ-ಕಥೆ ತಿಥಿ ಟಿ. ಎಸ್.‌ ಶ್ರವಣ ಕುಮಾರಿ. ತಿಥಿ “ನಾಗೂ… ಏ ನಾಗೂ… ಇದಿಯನೇ ಒಳಗೆ…” ಅಡುಗೆಮನೆಯನ್ನಿಸಿಕೊಂಡ ಆ ಮನೆಯ ಮೂಲೆಯಲ್ಲಿ ಹೊಗೆಯೊಂದಿಗೆ ಗುದ್ದಾಡುತ್ತಾ ಹುಳಿಗೆ ಹಾಕಲು ಹುಣಿಸೇಹಣ್ಣು ಕಿವುಚುತ್ತಾ ಕುಳಿತಿದ್ದ ನಾಗುವಿಗೆ ಸುಬ್ಬಣ್ಣನ ದನಿ ಕೇಳಿ ʻಯಾಕ್‌ ಬಂದ್ನೋ ಮಾರಾಯ ಈಗ, ಕೆಲಸಿಲ್ದೆ ಈ ದಿಕ್ಕಿಗ್‌ ಕೂಡಾ ತಲೆಯಿಟ್ಟು ಮಲಗೋನಲ್ಲʼ ಎಂದುಕೊಂಡೇ “ಇದೀನೋ ಇಲ್ಲೇ ಒಲೆಮುಂದೆ ಅಡುಗೆಮಾಡ್ತಾ” ಎಂದುತ್ತರಿಸಿದಳು. ಬಿಸಿಲಿನಿಂದ ಒಳಗೆ ಬಂದವನಿಗೆ ಅಡುಗೆಮನೆಯೆಂದು ಮಾಡಿದ್ದ ಅಡ್ಡಗೋಡೆಯ ಒಳಗಿನ ಕತ್ತಲೆ, ಹೊಗೆಯ ಮಧ್ಯೆ […]

ಕಾರ್ಮಿಕದಿನದ ವಿಶೇಷ-ಕವಿತೆ

ಕವಿತೆ ಮೇ ಕವಿತೆ ಲಕ್ಷ್ಮೀ ದೊಡಮನಿ ಮೇ ಕವಿತೆ ನೆನಪಾಗುವಿರಿ ನೀವಿಂದು ಬಂದಿದೆ ಮೇ ಒಂದು ಹೊಗಳುವೆವು ನಾವಿಂದು ಬಂದಿದೆ ಮೇ ಒಂದು ಬಸವರಸರ ತತ್ವದ ತೆರದಿ ಕೈಲಾಸದಲಿ ಇರುವಿರಿ ಬರೆಯಿಸಿಕೊಳ್ಳುವಿರಿ ನೀವಿಂದು ಬಂದಿದೆ ಮೇ ಒಂದು ಕಣ್ಣ ಗಾರೆ,ಬಸವಳಿದ ಮೊಗ,ತನು ಎಲುಬು ಹಂದರ ಅರಿವಿಗೆ ಬರುವಿರಿ ನಮಗಿಂದು ಬಂದಿದೆ ಮೇ ಒಂದು ನಿಮ್ಮನ್ನು ವಿಭಜಿಸಿ ದುಡಿಸಿಕೊಳ್ಳುವ ಧೂರ್ತರಿಂದ ಅಣಗಿಸಿಕೊಳ್ಳುವಿರಿ ನೀವಿಂದುಬಂದಿದೆ ಮೇ ಒಂದು ನಿಮ್ಮಕಾರ್ಯ,ತ್ಯಾಗ,ಬಲಿದಾನಗಳ ಸಂದರ್ಶನ ನಡೆದು ಪ್ರೇರಣೆಯಾಗುವಿರಿ ನಮಗೆಂದು ಬಂದಿದೆ ಮೇ ಒಂದು ಒಂದೇ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾರ್ಮಿಕರ ದಿನದಂದು ಹಾಲು ಉಕ್ಕಿದ್ದು ಅಂಜನಾ ಹೆಗಡೆ ಕಾರ್ಮಿಕರ ದಿನದಂದು ಹಾಲು ಉಕ್ಕಿದ್ದು ವಾಟ್ಸಾಪ್ ಫೇಸ್ ಬುಕ್ ಗಳಲ್ಲಿ ಕಾರ್ಮಿಕ ದಿನದ ಶುಭಾಶಯ! “ಕಾಯಕವೇ ಕೈಲಾಸ” ನೆನಪಾಗಿ ಮೈ ನಡುಗಿತು ಕೈಲಾಸ ಕೈತಪ್ಪಿದ ನೋವು ಬಾಧಿಸಿ ಬಾತ್ ರೂಮನ್ನಾದರೂ ತೊಳೆಯಲಿಕ್ಕೆಂದು ಟೊಂಕಕಟ್ಟಿ ನಿಂತೆ ಎಲ್ಲ ಬ್ರ್ಯಾಂಡ್ ಗಳ ಕ್ಲೀನರುಗಳ ಒಂದುಗೂಡಿಸಿ ಬ್ರಶ್ ಗಳನ್ನೆಲ್ಲ ಗುಡ್ಡೆ ಹಾಕಿ ತಲೆಗೊಂದು ಷವರ್ ಕ್ಯಾಪ್ ಹಾಕಿ ಸೈನಿಕಳಾದೆ ಹೊಳೆವ ಟೈಲ್ಸು ಕಾಮೋಡುಗಳೆಲ್ಲ ಜೈಕಾರ ಕೂಗಿದಂತಾಗಿ ಒಳಗೊಳಗೇ ಸಂಭ್ರಮಿಸಿದೆ ವಾಷಿಂಗ್ ಮಷಿನ್ನಿನ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕಾರ್ಮಿಕನೊಬ್ಬ ಚರಿತ್ರೆಯನ್ನು ಓದುತ್ತಾನೆ. ಮೂಲ: ಬರ್ಟೋಲ್ಟ್ ಬ್ರೆಕ್ಟ್ ಕನ್ನಡಕ್ಕೆ: ಮೇಗರವಳ್ಳಿ ರಮೇಶ್ ಕಾರ್ಮಿಕನೊಬ್ಬ ಚರಿತ್ರೆಯನ್ನು ಓದುತ್ತಾನೆ. ಥೀಬ್ಸ್ ನ ಏಳು ಗೇಟುಗಳನ್ನು ಕಟ್ಟಿದವರಾರು?ಪುಸ್ತಕಗಳ ತು೦ಬಾ ರಾಜರುಗಳ ಹೆಸರುಗಳು.ಬ೦ಡೆಗಲ್ಲುಗಳನ್ನು ತ೦ದು ಜೋಡಿಸಿದವರು ದೊರೆಗಳೆ?ಮತ್ತು ಬ್ಯಾಬಿಲೋನ್ ಅದೆಷ್ಟು ಸಲ ನಾಶವಾಯಿತು!ಮತ್ತೆ ಮತ್ತೆ ಯಾರು ಕಟ್ಟಿದರು ಈ ನಗರವನ್ನು?ಚಿನ್ನದ ಹೊಳಪಿನ ನಗರಿಯಲ್ಲಿ ಅದನ್ನು ಕಟ್ಟಿದವರು ವಾಸವಾಗಿದ್ದರೆ?ಚೀನಾದ ಮಹಾಗೊಡೆಯನ್ನು ಕಟ್ಟಿ ಮುಗಿಸಿದ ಸ೦ಜೆಗಾರೆ ಕೆಲಸದವರು ಎಲ್ಲಿಗೆ ಹೋದರು?ರೋಮ್ ಸಾಮ್ರಾಜ್ಯದ ತು೦ಬಾ ವಿಜಯದ ಸ೦ಕೇತದ ಕಮಾನುಗಳು.ಯಾರು ನಿಲ್ಲಿಸಿದರು ಅವುಗಳನು?ಯಾರ ಮೇಲೆ ಸೀಸರ್ ವಿಜಯ ಸಾಧಿಸಿದ?ಹಾಡಿನಲ್ಲಿ […]

ಕಾರ್ಮಿಕ ದಿನದ ವಿಶೇಷ

ಅರಿವು ಬಹು ಮುಖ್ಯ..! ಕೆ.ಶಿವು ಲಕ್ಕಣ್ಣವರ ಅರಿವು ಬಹು ಮುಖ್ಯ..! ಮೇ 1, ವಿಶ್ವ ಕಾರ್ಮಿಕ ದಿನದ ಅರಿವು ಬಹು ಮುಖ್ಯ..! ಮೇ 1, ವಿಶ್ವ ಕಾರ್ಮಿಕರ ದಿನಾಚರಣೆಯ ದಿನ. ಇದು ಮಹತ್ವದ ದಿವಾಗಿದೆ. ಮೇ ದಿನ ಅಥವಾ ವಿಶ್ವ ಕಾರ್ಮಿಕರ ದಿನಾಚರಣೆ ದಿನಕ್ಕೆಂಟು ಗಂಟೆಗಳ ನಿಗದಿತ ಕೆಲಸಕ್ಕಾಗಿ ಆರಂಭವಾದ ಹೋರಾಟವನ್ನು ಸ್ಮರಿಸುವ ಈ ದಿನವನ್ನು ಕಾರ್ಮಿಕರು ಇಡೀ ಜಗತ್ತಿನಾದ್ಯಂತ ತಮ್ಮ ಹಕ್ಕುಗಳಿಗಾಗಿ ನಡೆಸುವ ಹೋರಾಟದ ದಿನವನ್ನಾಗಿ ಆಚರಿಸುತ್ತಾರೆ. ಈ ಆಚರಣೆಗೆ ಒಂದು ಶತಮಾನಕ್ಕೂ ಮೀರಿದ ಸುದೀರ್ಘ […]

Back To Top